Site icon Vistara News

Girl found dead: ಶಾಲೆಗೆ ಹೋಗಿದ್ದ 16 ವರ್ಷದ ಬಾಲಕಿ ಕೆರೆಯಲ್ಲಿ ಶವವಾಗಿ ಪತ್ತೆ

Girl found dead in Chikkaballapura

ಚಿಕ್ಕಬಳ್ಳಾಪುರ: ಶಾಲೆಗೆ ಹೋಗಿದ್ದ ಬಾಲಕಿಯೊಬ್ಬಳು ಶನಿವಾರ ಸಂಜೆ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ (Girl jumps into pond). ಆಕೆಯ ಸಾವಿನ ಬಗ್ಗೆ ಅನುಮಾನಗಳು (Girl found dead) ಹುಟ್ಟಿಕೊಂಡಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಚಿಕ್ಕಬಳ್ಳಾಪುರ ತಾಲ್ಲೂಕಿನ (Chikkaballapura News) ಈರೇನಹಳ್ಳಿ ಗ್ರಾಮದ ಶಂಕರಪ್ಪ ಎಂಬವರ ಪುತ್ರಿ ನಯನಾ ಎಂಬ 16 ವರ್ಷದ ಬಾಲಕಿಯೇ (16 year old girl) ಮೃತಪಟ್ಟವಳು. ಈಕೆಯ ಶವ ಬಾಗೇಪಲ್ಲಿ ತಾಲ್ಲೂಕಿನ ಗೊಂಡ್ಲವಾರಪಲ್ಲಿ ಗ್ರಾಮದ ಕೆರೆಯಲ್ಲಿ ಪತ್ತೆಯಾಗಿದೆ.

10ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿ ಮಧ್ಯಾಹ್ನ ಶಾಲೆ ಬಿಟ್ಟ ಬಳಿಕ ಮನೆಗೆ ಮರಳಿರಲಿಲ್ಲ. ಹೀಗಾಗಿ ಮನೆಯವರು ಹುಡುಕಾಟ ಆರಂಭಿಸಿದರು. ಅಂತಿಮವಾಗಿ ಗೊಂಡ್ಲವಾರಪಲ್ಲಿ ಕೆರೆಯ ಸಮೀಪ ದಡದಲ್ಲಿ ಶಾಲೆ ಬ್ಯಾಗ್, ಆಧಾರ್ ಕಾರ್ಡ್ ಮತ್ತು ಚಪ್ಪಲಿಗಳು ಪತ್ತೆಯಾದವು. ಇವುಗಳ ಆಧಾರದಲ್ಲಿ ನಯನಾ ನೀರಿಗೆ ಬಿದ್ದು ಮೃತಪಟ್ಟಿದ್ದಾಳೆ ಎಂದು ಅಂದಾಜಿಸಲಾಯಿತು. ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆರೆಯಲ್ಲಿ ಪರಿಶೀಲಿಸಿದಾಗ ಆಕೆಯ ಬಟ್ಟೆಗಳು ಕಂಡುಬಂದವು. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಆಕೆಯ ಶವವನ್ನು ಮೇಲೆತ್ತಿದರು. ಆಕೆಯ ಆತ್ಮಹತ್ಯೆಗೆ ಕಾರಣ ಏನು ಎನ್ನುವುದು ತಿಳಿದುಬಂದಿಲ್ಲ.

ಇದನ್ನೂ ಓದಿ: Younster drowned : ಕೇರಳಕ್ಕೆ ಪ್ರವಾಸ ತೆರಳಿದ್ದ ಪುತ್ತೂರಿನ ಯುವಕ ನೀರಲ್ಲಿ ಮುಳುಗಿ ಸಾವು

ಹೊಟ್ಟೆ ನೋವು ತಾಳಲಾರದೆ 17 ವರ್ಷದ ವಿದ್ಯಾರ್ಥಿನಿ ನೇಣಿಗೆ ಶರಣು

ಮೈಸೂರು: 17 ವರ್ಷದ ಬಾಲಕಿಯೊಬ್ಬಳು (17 Year old Girl) ಹೊಟ್ಟೆ ನೋವು ತಾಳಲಾರದೆ (Unbearable stomach ache) ನೇಣು ಬಿಗಿದುಕೊಂಡು ಆತ್ಮಹತ್ಯೆ (Ends life by Hanging) ಮಾಡಿಕೊಂಡ ದಾರುಣ ಘಟನೆ ನಂಜನಗೂಡು ತಾಲೂಕಿನ (Nanjanagudu taluk) ಗೋಳೂರು ಗ್ರಾಮದಲ್ಲಿ ನಡೆದಿದೆ.

ನಂಜನಗೂಡು ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ (First PU Student) ಯಾಗಿರುವ, ಮಹದೇವು ಎಂಬುವವರ ಪುತ್ರಿ ರೇಣುಕಾ(17) ಮೃತಪಟ್ಟವಳು.

ಈಕೆಗೆ ಆಗಾಗ್ಗೆ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತು ಎನ್ನಲಾಗಿದೆ. ಶುಕ್ರವಾರ ಆಕೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾಳೆ.

ಆಕೆಯ ಆತ್ಮಹತ್ಯೆ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಶಿವನಂಜಶೆಟ್ಟಿ, ಪಿಎಸ್ಐ ರಾಮಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version