ಚಿಕ್ಕಬಳ್ಳಾಪುರ: ಕೃಷಿ ಹೊಂಡದಲ್ಲಿ ಬಿದ್ದ ಮೊಮ್ಮಗನನ್ನು ಕಾಪಾಡಲು ಹೋಗಿ ತಂದೆ ತಾತ ಇಬ್ಬರೂ ಮುಳುಗಿ (drowned) ಸಾವಿಗೀಡಾಗಿದ್ದಾರೆ. ಅದೃಷ್ಟವಶಾತ್ ಮೊಮ್ಮಗ ಬದುಕಿದ್ದಾನೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಅಂಕಾಲಮೊಡುಗು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮೊಮ್ಮಗ ಸಂಜಯ್ ರೆಡ್ಡಿ ಜಮೀನಿನಲ್ಲಿ ಇದ್ದ ಕೃಷಿ ಹೊಂಡಕ್ಕೆ ಕಾಲು ಜಾರಿ ಬಿದ್ದಿದ್ದಾನೆ. ಈ ಸಂದರ್ಭದಲ್ಲಿ ಮಗನನ್ನು ರಕ್ಷಿಸಲು ಹೋದ ಅಪ್ಪ ಚೌಡರೆಡ್ಡಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಮುಳುಗುತ್ತಿರುವ ಮಗನನ್ನು ರಕ್ಷಿಸಲು ಹೋದ ತಾತ ವೆಂಕರಾಯಪ್ಪ ಕೂಡ ಮುಳುಗಿ ಸಾವನ್ನಪ್ಪಿದ್ದಾರೆ.
ಮೊಮ್ಮಗ ಸಂಜಯ್ ರೆಡ್ಡಿ ಸಾವಿನ ದವಡೆಯಿಂದ ಪಾರಾಗಿದ್ದು, ಈತನಿಗೆ ಚಿಂತಾಮಣಿ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಬಟ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು
ಯಾದಗಿರಿ: ಮರಳು ಸಾಗಿಸುತ್ತಿದ್ದ ಟಿಪ್ಪರ್ ಬೈಕ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವಿಗೀಡಾಗಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ಈ ಅಪಘಾತ ನಡೆದಿದೆ.
ಟಿಪ್ಪರ್ ಚಾಲಕ ವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬಂದಿದ್ದು, ಬೈಕ್‌ಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದ್ದಾನೆ. ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೈಕ್ ಸವಾರ ಹುಣಸಗಿ ಪಟ್ಟಣದ ನಿವಾಸಿ ಮುದುಕಪ್ಪ ಎಂದು ಗುರುತಿಸಲಾಗಿದೆ. ಬೈಕ್ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿಯಾದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಘಾತದ ಸ್ಥಳದಿಂದ ತುಸು ದೂರದಲ್ಲಿ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಹುಣಸಗಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: Road Accident: ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಮತ್ತೆ ಅಪಘಾತ; ಇಬ್ಬರ ಸಾವು