Site icon Vistara News

Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!

Assault case

ಚಿಕ್ಕಬಳ್ಳಾಪುರ: ಇಲ್ಲಿನ ಚಿಂತಾಮಣಿ ತಾಲೂಕಿನ ಗಂಡ್ರಗಾನಹಳ್ಳಿ ಗ್ರಾಮದಲ್ಲಿ ರಸ್ತೆ ವಿಚಾರಕ್ಕೆ ಗಲಾಟೆ (Assault Case) ನಡೆದಿದೆ. ರೊಚ್ಚಿಗೆದ್ದ ಗ್ರಾಮಸ್ಥರು ವಕೀಲನನ್ನು ಹಿಡಿದು ಎಳೆದಾಡಿ ಹಲ್ಲೆ ಮಾಡಿದ್ದಾರೆ.

ವಕೀಲ ಭಾಸ್ಕರ್ ರೆಡ್ಡಿ ಹಲ್ಲೆಗೊಳಗಾದವರು. ಶ್ರೀರಾಮರೆಡ್ಡಿ, ಸತೀಶ್ ರೆಡ್ಡಿ, ಲಕ್ಷ್ಮಣರೆಡ್ಡಿ ಎಂಬುವವರು ಹಲ್ಲೆ ನಡೆಸಿದ್ದಾರೆ. ರಸ್ತೆ ವಿಚಾರಕ್ಕೆ ಹಲವು ದಿನಗಳಿಂದ ವಕೀಲ ಭಾಸ್ಕರ್‌ ರೆಡ್ಡಿಗೂ ಗ್ರಾಮಸ್ಥರ ನಡುವೆ ಗಲಾಟೆ ನಡೆಯುತ್ತಿತ್ತು. ಮಂಗಳವಾರ ಗಲಾಟೆ ತಾರಕಕ್ಕೇರಿ ಕೈ ಕೈ ಮಿಲಾಯಿಸಿದ್ದಾರೆ.

ಎರಡು ಗುಂಪುಗಳ ನಡುವೆ ಮಾರಾಮಾರಿ ವಿಡಿಯೊ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಪೊಲೀಸರು ಇದ್ದಾಗಲೇ ವಕೀಲನಿಗೆ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ. ಗಲಾಟೆ ಬಿಡಿಸಲು ಹೋದರೂ ಬಿಡದೆ ಥಳಿಸಿದ್ದಾರೆ. ಗಲಾಟೆಯಲ್ಲಿ ವಕೀಲ ಭಾಸ್ಕರ್ ರೆಡ್ಡಿ ಗಾಯಗೊಂಡಿದ್ದು, ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಸಂಬಂಧ ವಕೀಲ ಭಾಸ್ಕರ್‌ ರೆಡ್ಡಿ ಹಲ್ಲೆ ನಡೆಸಿದವರ ವಿರುದ್ಧ ದೂರು ನೀಡಿದ್ದಾರೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣವು ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version