Site icon Vistara News

Crime News: ಮನೆ ಕಂಪೌಂಡ್‌ನಲ್ಲಿ ಅಕ್ರಮ ಗಾಂಜಾ ಬೆಳೆದ ಮಹಿಳೆ ಪೊಲೀಸರ ವಶಕ್ಕೆ

ganja production

ಚಿಕ್ಕಬಳ್ಳಾಪುರ: ಮನೆ ಕಾಂಪೌಂಡ್‌ನಲ್ಲಿ ಅಕ್ರಮವಾಗಿ ಗಾಂಜಾ (ganja production) ಬೆಳೆದಿದ್ದ ಮಹಿಳೆ‌ಯನ್ನು ಬಂಧಿಸಲಾಗಿದೆ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ (crime news).

ಚಿಂತಾಮಣಿ ತಾಲ್ಲೂಕಿನ ಮುರುಗಮಲ್ಲ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಪ್ರಮೀಳಮ್ಮ ಗಾಂಜಾ ಬೆಳೆದಿದ್ದ ಮಹಿಳೆ. ತಮ್ಮ ಮನೆಯ ಕಾಂಪೌಂಡ್‌ನಲ್ಲಿ ಈಕೆ ಅಕ್ರಮವಾಗಿ ಗಾಂಜಾ ಬೆಳೆದಿದ್ದರು. ಗಾಂಜಾ ಬೆಳೆದು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಕೆಂಚಾರ್ಲಹಳ್ಳಿ ಪೊಲೀಸರು ದಾಳಿ ನಡೆಸಿದ್ದರು. ಮಹಿಳೆಯಿಂದ ಪೊಲೀಸರು ಸುಮಾರು 60 ಸಾವಿರ ಬೆಲೆ ಬಾಳುವ 11 ಕೆಜಿ 600 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ. ಆರೋಪಿ ಪ್ರಮೀಳಮ್ಮನನ್ನು ವಶಕ್ಕೆ ಪಡೆದು ದೂರು ದಾಖಲಿಸಿದ್ದಾರೆ.

ವಿದ್ಯಾರ್ಥಿಗಳ ಮಾರಾಮಾರಿ, ಮೂವರಿಗೆ ಗಾಯ

ಯಾದಗಿರಿ: ಕ್ಷುಲ್ಲಕ ಕಾರಣಕ್ಕಾಗಿ ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಮಾರಾಮಾರಿ (students fight) ನಡೆದು ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ. ಯಾದಗಿರಿ ಜಿಲ್ಲೆಯ ಸೈದಾಪುರ ಪಟ್ಟಣದ ಸರ್ಕಾರಿ ಕೈಗಾರಿಕಾ ಉಪಕರಣಾಗಾರ ಕಾಲೇಜಿನಲ್ಲಿ ನಡೆದ ಘಟನೆಯಿದು.

ಬಸವರಾಜ, ಮಹೇಶ್ ಮತ್ತು ಚಂದ್ರಕಾಂತ್ ಎಂಬ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು, ಗಾಯಾಳು ವಿದ್ಯಾರ್ಥಿಗಳು ರಾಯಚೂರು ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಎರಡು ಕೋಮಿನ ವಿದ್ಯಾರ್ಥಿಗಳ ಮಧ್ಯೆ ವಾಗ್ವಾದ ನಡೆದಿತ್ತು. ಎರಡೂ ಗುಂಪಿನ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರು ಕರೆಸಿ ಬುದ್ಧಿವಾದ ಹೇಳಿದ್ದರು. ನಿನ್ನೆ ಮತ್ತೆ ಕಾಲೇಜು ಅವಧಿ‌ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಎರಡು ಕೋಮಿನ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ. ಘಟನೆ ಕುರಿತು ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.

ಇದನ್ನೂ ಓದಿ: Crime News : ರಾತ್ರಿ ಕಾಣೆಯಾದವಳು ಬೆಳಗ್ಗೆ ಮನೆ ಮುಂದೆ ಶವವಾಗಿ ಪತ್ತೆ!

Exit mobile version