Site icon Vistara News

Drowned in water : ಕೆರೆಯಲ್ಲಿ ಈಜುವ ಸವಾಲು; ಜೋಶ್‌ನಲ್ಲಿ ನೀರಿಗೆ ಇಳಿದ ಟೆಕ್ಕಿ ಮೃತ್ಯು

Drowned in water

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಾಟದಹೊಸಳ್ಳಿ ಕೆರೆಯಲ್ಲಿ ಈಜಲು ಹೋದ ಟೆಕ್ಕಿ ನೀರಲ್ಲಿ (Drowned in water) ಮುಳುಗಿ ಮೃತಪಟ್ಟಿದ್ದಾರೆ. ನಿನ್ನೆ ಶನಿವಾರ ಮಧ್ಯಾಹ್ನ ನೀರಿನಲ್ಲಿ ಮುಳುಗಿ ವಿನಯ್ ರಮೇಶ್ (42) ಎಂಬುವವರು ಮೃತಪಟ್ಟಿದ್ದರು. ಅಗ್ನಿಶಾಮಕ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಿ ಭಾನುವಾರ ಟೆಕ್ಕಿ ಮೃತದೇಹವು ಪತ್ತೆಯಾಗಿದೆ.

ಬೆಂಗಳೂರಿನ ಇಂದಿರಾನಗರ ನಿವಾಸಿಯಾದ ವಿನಯ್ ರಮೇಶ್, ಐದು ಜನ ಸ್ನೇಹಿತರೊಟ್ಟಿಗೆ ಕೆರೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಕೆಲವರು ಈ ದಡದಿಂದ ಆ ದಡಕ್ಕೆ ಯಾರು ಮೊದಲು ಈಜಿಕೊಂಡು ಬರುತ್ತಾರೆ ನೋಡೋಣಾ ಎಂದು ಸವಾಲು ಹಾಕಿಕೊಂಡಿದ್ದಾರೆ. ಈ ಚಾಲೆಂಜ್‌ ಅನ್ನು ಸ್ವೀಕರಿಸಿದ ರಮೇಶ್‌ ಜೋಶ್‌ನಲ್ಲಿ ನೀರಿಗೆ ಇಳಿದಿದ್ದಾರೆ. ಆದರೆ ವಿನಯ್ ರಮೇಶ್ ವಾಪಸ್ ಬಂದಿರಲಿಲ್ಲ.

Drowned in water

ಹೀಗಾಗಿ ಜತೆಗೆ ಇದ್ದ ಸ್ನೇಹಿತರು ಗಾಬರಿಯಾಗಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ವಿನಯ್‌ ರಮೇಶ್‌ ವಿಮಾನದಲ್ಲಿ ಚೆನ್ನೈ ನಿಂದ ಬೆಂಗಳೂರಿಗೆ ಬಂದು ಅಲ್ಲಿಂದ ನೇರವಾಗಿ ಸ್ನೇಹಿತರೊಟ್ಟಿಗೆ ಚಿಕ್ಕಬಳ್ಳಾಪುರಕ್ಕೆ ಬಂದಿದ್ದರು. ನಿರಂತರ ಪ್ರಯಾಣದಿಂದ ಬಳಲಿದ್ದ ವಿನಯ್ ಈಜಲು ಕೆರೆಗೆ ಇಳಿದಾಗ ಸುಸ್ತಾಗಿ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಈಜುವ ಚಾಲೆಂಜ್ ವಿನಯ್ ರಮೇಶ್‌ಗೆ ಮುಳುವಾಯ್ತಾ ಎಂಬ ಪ್ರಶ್ನೆ ಕಾಡುತ್ತಿದೆ. 24 ಗಂಟೆ ಕಾರ್ಯಾಚರಣೆ ನಡೆಸಿ ಮೃತ ದೇಹವನ್ನು ಕೆರೆಯಿಂದ ಹೊರಗೆ ತಂದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Road Accident : ತಂದೆ ಜತೆಗೆ ಕಾರ್‌ ವಾಶ್‌ ಮಾಡುವಾಗ ಎಕ್ಸಿಲೇಟರ್‌ ತುಳಿದ ಬಾಲಕ; ಆಟವಾಡುತ್ತಿದ್ದ ಮಗು ಅಪ್ಪಚ್ಚಿ

Drowned in water

ಸಮುದ್ರದಲ್ಲಿ ಮುಳುಗುತ್ತಿದ್ದ ಕಾರ್ಮಿಕನ ರಕ್ಷಣೆ

ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ರವೀಂದ್ರನಾಥ ಠಾಗೋರ್ ಕಡಲತೀರದಲ್ಲಿ ನೀರಿನಲ್ಲಿ ಮುಳುಗುತ್ತಿದ್ದ ಕಾರ್ಮಿಕನ ರಕ್ಷಣೆ ಮಾಡಲಾಗಿದೆ. ಬಬ್ಲು ಶೇನ್ (34) ರಕ್ಷಣೆಗೊಳಗಾದ ಕಾರ್ಮಿಕ.

ಪಶ್ಚಿಮ ಬಂಗಾಳ ಮೂಲದ ಬಬ್ಲು ಶೇನ್ ಕಾರವಾರದ ಇಂಡಸ್ಟ್ರಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ರಜಾ ದಿನವಾದ ಹಿನ್ನೆಲೆಯಲ್ಲಿ ಈಜಲು ಕಡಲತೀರಕ್ಕೆ ಬಂದಿದ್ದ. ಈಜುತ್ತಿದ್ದ ವೇಳೆ ನಿತ್ರಾಣಗೊಂಡು ಮುಳುಗುತ್ತಿದ್ದಾಗ, ಲೈಫ್‌ಗಾರ್ಡ್ ಹಾಗೂ ವಾಟರ್‌ಸ್ಪೋರ್ಟ್ಸ್ ಸಿಬ್ಬಂದಿ ಕಾರ್ಮಿಕ ಬಬ್ಲುನನ್ನು ರಕ್ಷಣೆ ಮಾಡಿದ್ದಾರೆ. ಜೆಟ್‌ಸ್ಕೀ ಮೂಲಕ ತೆರಳಿ ಕಾರ್ಮಿಕನನ್ನ ರಕ್ಷಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version