ಯಲಹಂಕ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ. ಕೆ.ಸುಧಾಕರ್, ಯಲಹಂಕ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಶಾಸಕ ಎಸ್.ಆರ್. ವಿಶ್ವನಾಥ್ ಅವರೊಂದಿಗೆ ಶುಕ್ರವಾರ ಚುನಾವಣಾ (Lok Sabha Election 2024) ಪ್ರಚಾರ ಕೈಗೊಂಡು, ಮತಯಾಚನೆ ಮಾಡಿದರು.
ಯಲಹಂಕ ವಿಧಾನಸಭಾ ಕ್ಷೇತ್ರದ ತೋಟದಗುಡ್ಡಹಳ್ಳಿ, ಅಂಚೇಪಾಳ್ಯ ಸೇರಿದಂತೆ ವಿವಿಧ ಕಡೆಗಳಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್ ಅವರೊಂದಿಗೆ ಚುನಾವಣಾ ಪ್ರಚಾರ ಮತ್ತು ಸಭೆ ನಡೆಸಿ, ಮತಯಾಚನೆ ಮಾಡಿದರು.
ಇದನ್ನೂ ಓದಿ: Maldives Tourism: ಪರಿಣಾಮ ಬೀರಿದ ಮಾಲ್ಡೀವ್ಸ್ ಬಹಿಷ್ಕಾರದ ಕೂಗು; ಭೇಟಿ ನೀಡುವ ಭಾರತೀಯರ ಸಂಖ್ಯೆಯಲ್ಲಿ ಭಾರೀ ಕುಸಿತ
ಈ ವೇಳೆ ಮಾತನಾಡಿದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ. ಸುಧಾಕರ್, ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಂದಾದ ಬಳಿಕ ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬ ಪರಿಸ್ಥಿತಿ ಉಂಟಾಗಿದೆ ಎಂದು ತಿಳಿಸಿದ ಅವರು, ಈ ಬಾರಿಯ ಚುನಾವಣೆಯಲ್ಲಿ ತಮಗೆ ಮತ ನೀಡಿ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.
ಶಾಸಕ ಎಸ್.ಆರ್. ವಿಶ್ವನಾಥ್ ಮಾತನಾಡಿ, ಕಳೆದ ಬಾರಿ 2019ರಲ್ಲಿ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜಿಪಿಗೆ 45,000 ಮತಗಳ ಲೀಡ್ ದೊರೆತಿತ್ತು, ಈ ಬಾರಿ ಎನ್‌ಡಿಎಗೆ 1 ಲಕ್ಷಕ್ಕೂ ಹೆಚ್ಚು ಮತಗಳ ಲೀಡ್ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: CET 2024 Exam: ಸಿಇಟಿ ಪರೀಕ್ಷೆಯ 2ನೇ ದಿನವೂ 26 ಔಟ್ ಆಫ್ ಸಿಲಬಸ್ ಪ್ರಶ್ನೆ! ಏ.27ರೊಳಗೆ ಆಕ್ಷೇಪಣೆ ಸಲ್ಲಿಸಲು KEA ಸೂಚನೆ
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.