ಚಿಕ್ಕಬಳ್ಳಾಪುರ: ನಗರದ ಜಿಲ್ಲಾಡಳಿತ ಭವನದಲ್ಲಿ ನೂತನ ಜಿಲ್ಲಾಧಿಕಾರಿ ಎಂ.ಎನ್.ನಾಗರಾಜು ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಆರ್.ಲತಾ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ. ಅವರ ಸ್ಥಾನಕ್ಕೆ ಎಂ.ಎನ್.ನಾಗರಾಜು ಅವರನ್ನು ನೇಮಕ ಮಾಡಲಾಗಿದೆ.
ಅಧಿಕಾರ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಎಂ.ಎನ್.ನಾಗರಾಜು, ಸರ್ಕಾರದ ನೀತಿ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಿ ಚಿಕ್ಕಬಳ್ಳಾಪುರ ಜಿಲ್ಲೆ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಶ್ರಮಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ | ಅಕ್ರಮ ಮರಳು ದಂಧೆ ಮಾಹಿತಿ ಕೊಟ್ಟ ವಿದ್ಯಾರ್ಥಿಗೆ ಚಿತ್ರಹಿಂಸೆ, ಜಿಲ್ಲಾಧಿಕಾರಿಗೆ ದೂರು