Site icon Vistara News

Narendra Modi: ನಾಳೆ ಮೋದಿ ಭೇಟಿ, ಇಂದಿನಿಂದಲೇ ನಂದಿ ಗಿರಿಧಾಮಕ್ಕೆ ಸಾರ್ವಜನಿಕರಿಗೆ ನಿರ್ಬಂಧ

modi

ಚಿಕ್ಕಬಳ್ಳಾಪುರ: ಮಾರ್ಚ್ 25ರಂದು ಬೆಳಗ್ಗೆ ಮುದ್ದೇನಹಳ್ಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಪ್ರವಾಸಿ ತಾಣ ನಂದಿ ಗಿರಿಧಾಮಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಮಾರ್ಚ್ 24ರಂದು ಬೆಳಿಗ್ಗೆ 10 ಗಂಟೆಯಿಂದ ಮಾರ್ಚ್ 25ರ ಮಧ್ಯಾಹ್ನ 2 ಗಂಟೆವರೆಗೂ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಆದೇಶ ಹೊರಡಿಸಿದ್ದಾರೆ. ನಂದಿಗಿರಿಧಾಮದ ಅತಿಥಿ ಗೃಹದಲ್ಲಿ ಪೊಲೀಸ್ ಅಧಿಕಾರಿಗಳು, ಎಸ್ಪಿಜಿ ಅಧಿಕಾರಿಗಳು ಹಾಗೂ ಪ್ರಧಾನಿಯವರ ಭದ್ರತಾ ಸಿಬ್ಬಂದಿಗಳು ತಂಗಿದ್ದಾರೆ. ಅಧಿಕಾರಿಗಳ ತುರ್ತು ಸಂಚಾರಕ್ಕೆ ಅನುಕೂಲ ಕಲ್ಪಿಸಿ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.

ಎಲ್ಲ ಕಳ್ಳರ ಸರ್​​ನೇಮ್​ ಮೋದಿ ಎಂದೇ ಇರುತ್ತದಲ್ಲ ಎಂದು ಹೇಳಿದ್ದು ಯಾವುದೇ ಕೆಟ್ಟ ಆಶಯದಿಂದ ಅಲ್ಲ: ರಾಹುಲ್ ಗಾಂಧಿಇದನ್ನೂ ಓದಿ:

Exit mobile version