Site icon Vistara News

Physical Abuse: 7ನೇ ಕ್ಲಾಸ್‌ ಹುಡುಗಿ 3 ತಿಂಗಳ ಗರ್ಭಿಣಿ! ಅತ್ಯಾಚಾರವೆಸಗಿದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಅರೆಸ್ಟ್‌

Physical Abuse

ಚಿಕ್ಕಬಳ್ಳಾಪುರ: ಗುರುವನ್ನು ಸಾಕ್ಷತ್‌ ಪರಬ್ರಹ್ಮನಿಗೆ ಹೋಲಿಕೆ ಮಾಡಲಾಗುತ್ತದೆ. ಮಕ್ಕಳಿಗೆ ದಾರಿ ತೋರಿಸಬೇಕಾದ ಗುರುವೇ ದಾರಿ (Physical Abuse) ತಪ್ಪಿದ್ದಾನೆ. ಚಿಕ್ಕಬಳ್ಳಾಪುರದಲ್ಲಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ (Physical relationship) ಎಸಗಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ 7ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಮುಖ್ಯ ಶಿಕ್ಷಕನೇ (Physical assault) ಅತ್ಯಾಚಾರವೆಸಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ವೆಂಕಟೇಶ ಎಂಬಾತನನ್ನು ಬಂಧಿಸಲಾಗಿದೆ.

ವೆಂಕಟೇಶ್‌ 7ನೇ ತರಗತಿಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದು, ಆಕೆ 3 ತಿಂಗಳ ಗರ್ಭಿಣಿ ಆದಾಗಲೇ ಪ್ರಕರಣ ಬೆಳಕಿಗೆ ಬಂದಿದೆ. ಮಗಳು ಗರ್ಭಿಣಿಯಾಗಿದ್ದು ತಿಳಿದು ಪಾಲಕರು ಕಂಗಾಲಾಗಿ ದೂರು ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆಯಿಂದ ವಿದ್ಯಾರ್ಥಿನಿಯನ್ನು ರಕ್ಷಿಸಿ ಆಪ್ತ ಸಮಾಲೋಚನೆ ಮಾಡಲಾಗುತ್ತಿದೆ.

ಇದನ್ನೂ ಓದಿ: Suspicious Death : ಕೊಪ್ಪಳದಲ್ಲಿ ತಾಯಿ, ಮಗಳು, ಮೊಮ್ಮಗನ ಅನುಮಾನಾಸ್ಪದ ಸಾವು

ಬಾಲಕಿ ನೀಡಿರುವ ಹೇಳಿಕೆ ಮೇರೆಗೆ ಆರೋಪಿ ಶಿಕ್ಷಕನ ವಿರುದ್ಧ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದನಾಯಕನಹಳ್ಳಿ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರಾದ ವೆಂಕಟೇಶ ಸಂತ್ರಸ್ತೆಗೆ ಒಂದು ವರ್ಷದಿಂದ ಲೈಂಗಿಕ ಕಿರುಕುಳ ನೀಡಿದ್ದಾನೆ.

ಬಾಲಕಿಯ ಮೈ-ಕೈ, ಎದೆ ಭಾಗವನ್ನು ಮುಟ್ಟಿ ಮಾತನಾಡುತ್ತಿದ್ದನಂತೆ. ಇದಕ್ಕೆ ಬಾಲಕಿ ವಿರೋಧ ವ್ಯಕ್ತಪಡಿಸಿದಾಗ, ಏನು ತೊಂದರೆ ಆಗುವುದಿಲ್ಲ ಎಂದೇಳಿ ಆಫೀಸ್‌ ರೂಮಿನೊಳಗೆ ಕರೆದುಕೊಂಡು ಅತ್ಯಾಚಾರವೆಸಗಿದ್ದಾನೆ. ನಂತರ ನಡೆದ ಯಾವ ವಿಚಾರವನ್ನು ಯಾರ ಜತೆಗೂ ಹೇಳದಂತೆ ಷರತ್ತು ಹಾಕಿದ್ದಾನೆ.

ಕಳೆದ ಐದು ತಿಂಗಳಿಂದ ಮುಟ್ಟಾಗದೇ ಇರುವುದರಿಂದ ಆತಂಕಗೊಂಡ ಬಾಲಕಿ ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು ಗರ್ಭಿಣಿಯಾಗಿರುವುದಾಗಿ ತಿಳಿಸಿದ್ದಾರೆ. ಸದ್ಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಶಿಕ್ಷಕ ವೆಂಕಟೇಶ್‌ ವಿರುದ್ಧ ಪೋಕ್ಸೋ 376 ಅಡಿ ಅತ್ಯಾಚಾರ ಪ್ರಕರಣ ದಾಖಲಿಸಿ ತನಿಖೆಯನ್ನು ಮುಂದುವರಿಸಿದ್ದಾರೆ.

ಚಿಕ್ಕಬಳ್ಳಾಪುರ ಅಪ್ರಾಪ್ತೆ ಮೇಲೆ ಶಿಕ್ಷಕನಿಂದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗಿನಲ್ಲಿ ಶಿಕ್ಷಣ ಸಚಿವ ಮಧುಬಂಗಾರಪ್ಪ ಪ್ರತಿಕ್ರಿಯಿಸಿದ್ದಾರೆ. ಇಂತಹ ವಿಚಾರ ಬಂದಾಗ ಕಾನೂನು ರೀತಿಯ ಶಿಕ್ಷೆಗೆ ಒಳಪಡಿಸಲಾಗುತ್ತದೆ.
ಎಸ್.ಡಿ.ಎಂ.ಸಿ‌ ಹಾಗೂ ಸರ್ಕಾರ ಹೊಂದಾಣಿಕೆ ಮಾಡಿಕೊಂಡು ಎಚ್ಚರ ವಹಿಸುತ್ತೇವೆ. ಯಾವುದೇ ವಿಚಾರ ಬಂದರೂ ನಮ್ಮ‌ ಸರ್ಕಾರ ತಕ್ಷಣವೇ ಕ್ರಮ ತೆಗೆದುಕೊಳ್ಳುತ್ತದೆ. ಕಾನೂನು ಪ್ರಕಾರ ಆರೋಪಿಗೆ ತಕ್ಕ ಶಿಕ್ಷೆ ಆಗಲಿದೆ ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version