ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಅಮಿಟಗಾನಹಳ್ಳಿ ಗೇಟ್ ಬಳಿ ಖಾಸಗಿ ಬಸ್ ಪಲ್ಟಿಯಾಗಿ ೪೦ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಈ ಪೈಕಿ ಐದಾರು ಮಂದಿಯ ಸ್ಥಿತಿ ಗಂಭೀರವಾಗಿದೆ. ಹಿಂದೂಪುರ-ತಿರುಪತಿ ಮಾರ್ಗದಲ್ಲಿ ಶನಿವಾರ ರಾತ್ರಿ ತೆರಳುತ್ತಿದ್ದ ಭಾರತಿ ಬಸ್, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಕಾಲುವೆಗೆ ಉರುಳಿದ್ದರಿಂದ ಅಪಘಾತ ಸಂಭವಿಸಿದೆ. ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಹತ್ತಾರು ಆಂಬ್ಯುಲೆನ್ಸ್‌ಗಳ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಯಿತು.
ಇದನ್ನೂ ಓದಿ | Auto Rickshaw Blast | ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಫೋಟ; ಇಬ್ಬರಿಗೆ ಗಾಯ