ಚಿಕ್ಕಬಳ್ಳಾಪುರ: ನೇಣು ಬಿಗಿದುಕೊಂಡು ಪೊಲೀಸ್ ಹೆಡ್ ಕಾನ್ಸ್‌ಟೇಬಲ್ (Police Head Constable) ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ (Chikkbalapura News) ನಗರದ ಪೊಲೀಸ್ ಕ್ವಾಟ್ರಸ್‌ನಲ್ಲಿ (Police Quarters) ಘಟನೆ ನಡೆದಿದೆ. ನಾಗರಾಜ್ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಆಗಿದ್ದಾರೆ.
ಡಿ.ಎ.ಆರ್‌ನಲ್ಲಿ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜ್, ಅವರು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾರೆ.
ಕೌಟುಂಬಿಕ ಕಲಹಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ಇನ್ನೂ ನಾಗರಾಜ್ ಬರೆದಿದ್ದ ಡೆತ್ ನೋಟ್ ಸಿಕ್ಕಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಇದನ್ನೂ ಓದಿ: Drowned in River : ಕಾವೇರಿ ನದಿಯಲ್ಲಿ ಈಜಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು
ನಾಯಂಡಹಳ್ಳಿ ಫ್ಲೈಓವರ್‌ನಿಂದ ಜಿಗಿದು ನವವಿವಾಹಿತ ಆತ್ಮಹತ್ಯೆ
ಬೆಂಗಳೂರು: ನವವಿವಾಹಿತನೊಬ್ಬ ನಾಯಂಡಹಳ್ಳಿ ಫ್ಲೈ ಓವರ್ (Nayandahalli Flyover) ಮೇಲಿಂದ ಜಿಗಿದು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ. ಈತ ನಾಲ್ಕು ತಿಂಗಳ ಹಿಂದೆ ಮದುವೆಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಮೃತನನ್ನು ಯಲಹಂಕ ಮೂಲದ ನವೀನ್ ಎಂದು ಗುರುತಿಸಲಾಗಿದೆ. ನವೀನ್ ಸ್ಕೂಟರ್ ಅನ್ನು ಫ್ಲೈಓವರ್ ಮೇಲೆ ಪಾರ್ಕಿಂಗ್ ಮಾಡಿ ಏಕಾಏಕಿ ಕೆಳಗೆ ಜಿಗಿದಿದ್ದಾನೆ. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ದೌಡಾಯಿಸಿದ್ದು, ಹೆಚ್ಚಿನ ವಿವರ ಕಲೆಹಾಕುತ್ತಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತಿದೆ.
ನವೀನ್ ಕರ್ನಾಕ ವಿದ್ಯುತ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ. ನಾಲ್ಕು ತಿಂಗಳ ಹಿಂದೆಯಷ್ಟೆ ಈತ ಮದುವೆಯಾಗಿದ್ದ. ಎರಡು ತಿಂಗಳಿನಿಂದ ಕಾಂಟ್ರಾಕ್ಟ್ ಬೇಸ್ ಮೇಲೆ ಕವಿಕದಲ್ಲಿ ಡಿ ಗ್ರೂಪ್ ಕೆಲಸ ಮಾಡುತ್ತಿದ್ದ. ಶುಕ್ರವಾರ ಬೆಳಗ್ಗೆ ಡ್ಯೂಟಿಗೆ ಹೋಗುತ್ತೇನೆ ಎಂದು ಮನೆಯಿಂದ ಹೊರಟಿದ್ದ ನವೀನ್ ನಾಯಂಡಹಳ್ಳಿ ಫ್ಲೈಓವರ್ ಮೇಲಿಂದ ಕೆಳಗೆ ಜಿಗಿದಿದ್ದಾನೆ.
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಆತ್ಮಹತ್ಯೆ
ಕೋಲಾರ: ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದ ಮಹಿಳೆ ಆತ್ಮಹತ್ಯೆ. ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿತ್ತು. ಆಸ್ಪತ್ರೆಯ ಶೌಚಾಲಯದಲ್ಲಿ ಮಹಿಳೆ ನೇಣಿಗೆ ಶರಣಾಗಿದ್ದರು. ಮಾಲೂರು ಮೂಲದ ರತ್ಮಮ್ಮ (45) ಆತ್ಮಹತ್ಯೆಗೆ ಶರಣಾದ ಮಹಿಳೆ. ಕಿಡ್ನಿ ವೈಫಲ್ಯದಿಂದ ಕಳೆದ ಐದು ದಿನದ ಹಿಂದೆ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಮಂಗಳವಾರ ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದರು.
ಬೆಂಗಳೂರಿನಲ್ಲಿ 19ನೇ ಮಹಡಿ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ
ಬೆಂಗಳೂರು: 19ನೇ ಮಹಡಿಯಿಂದ ಜಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ನಡೆದಿತ್ತು. ಬೆಂಗಳೂರಿನ (Bengaluru News) ರೇಸ್ ಕೋರ್ಸ್ ರಸ್ತೆಯ (Race course) ಖಾಸಗಿ ಹೋಟೆಲ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ತಮಿಳುನಾಡು ಮೂಲದ ಶರಣ್ (28) ಮೃತ ದುರ್ದೈವಿ.
ನಿನ್ನೆ ಭಾನುವಾರ ಬಂದು ಹೋಟೆಲ್‌ನಲ್ಲಿ ರೂಂ ಬುಕ್ ಮಾಡಿದ್ದ. ಮತ್ತೆ ಎರಡು ದಿನ ರೂಂ ಹೆಚ್ಚುವರಿ ಬುಕ್ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಮುನ್ನ ಶರಣ್ ಅರ್ಧ ಗಂಟೆಗೂ ಅಧಿಕ ಸಮಯದಿಂದ ಬಾಲ್ಕನಿಯಲ್ಲಿ ಓಡಾಡುತ್ತಿದ್ದ. ಆತನ ನಡವಳಿಕೆಯನ್ನು ಗಮನಿಸಿದ ಭದ್ರತಾ ಸಿಬ್ಬಂದಿ ಅನುಮಾನಗೊಂಡು ತೆರಳುವಷ್ಟರಲ್ಲಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ.
ಕೂಡಲೇ ಹೋಟೆಲ್ ಸಿಬ್ಬಂದಿ ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದರು. ಸ್ಥಳಕ್ಕೆ ಹೈಗ್ರೌಂಡ್ಸ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆತ ತಂಗಿದ್ದ ರೂಮಿನಲ್ಲಿ ಡೆತ್‌ನೋಟ್ ಏನಾದರೂ ಸಿಗಬಹುದಾ ಎಂದು ಪೊಲೀಸರು ತನಿಖೆಗೆ ಮುಂದಾಗಿದ್ದರು. ಶರಣ್ ಭೇಟಿ ಮಾಡಲು ಯಾರಾದರೂ ಬಂದಿದ್ದರಾ? ರೂಮಿನಲ್ಲೇ ಒಬ್ಬನೇ ಇದ್ದನ್ನಾ ಎಂದು ಪೊಲೀಸರು ಹೋಟೆಲ್ ಸಿಬ್ಬಂದಿಯ ವಿಚಾರಣೆಯನ್ನು ನಡೆಸುತ್ತಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ