Site icon Vistara News

Vistara news polling booth: ಚಿಕ್ಕಬಳ್ಳಾಪುರ ಲೋಕಸಭೆಯಲ್ಲಿ ಬಿಜೆಪಿಗೆ ಜೈ ಎಂದ ಮತದಾರ; 2ನೇ ಸ್ಥಾನದಲ್ಲಿ ಕಾಂಗ್ರೆಸ್‌!

Vistara News polling booth Voter hails BJP in Kolar Lok Sabha constituency Congress is in second place

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ವಿಸ್ತಾರ ನ್ಯೂಸ್‌ (Vistara News) ಶುಕ್ರವಾರ (ಮಾ. 15) ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನಡೆಸಿದ ಪೋಲಿಂಗ್‌ ಬೂತ್‌ನಲ್ಲಿ (Vistara news polling booth) ಬಿಜೆಪಿಯನ್ನು (BJP Karnataka) ನಾಗರಿಕರು ಬೆಂಬಲಿಸಿದ್ದಾರೆ. ಸಾವಿರಾರು ಕರೆಗಳು ಬಂದಿದ್ದು, ಅವುಗಳಲ್ಲಿ ಒಟ್ಟು 6192 ಕರೆಗಳನ್ನು ಸ್ವೀಕಾರ ಮಾಡಲಾಗಿದೆ. ಇದರಲ್ಲಿ ಶೇ. 56ರಷ್ಟು ಮಂದಿ ಬಿಜೆಪಿಯನ್ನು ಬೆಂಬಲಿಸಿದ್ದರೆ, ಶೇಕಡಾ 43ರಷ್ಟು ಮಂದಿ ಕಾಂಗ್ರೆಸ್‌ (Congress Karnataka) ಪಕ್ಷವನ್ನು ಬೆಂಬಲಿಸಿದ್ದಾರೆ.

ವಿಸ್ತಾರ ಪೋಲಿಂಗ್‌ ಬೂತ್‌ನಲ್ಲಿ ನಡೆಸಿದ ಜನಾಭಿಪ್ರಾಯ ಸಂಗ್ರಹದ ಅನುಸಾರ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ – ಕಾಂಗ್ರೆಸ್ ನಡುವೆ ಬಿಗ್ ಫೈಟ್‌ ಏರ್ಪಟ್ಟಿದೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗೆ 3468 ವೋಟ್ ನೀಡಿದ ಮತದಾರರು
ಕಾಂಗ್ರೆಸ್‌ಗೆ 2662 ಮತಗಳನ್ನು ಚಲಾಯಿಸಿದ್ದಾರೆ. ಈ ವೇಳೆ ಇತರರಿಗೆ 62 ಮತಗಳು ಬಿದ್ದಿವೆ. ಹೀಗಾಗಿ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ – ಜೆಡಿಎಸ್‌ ಮೈತ್ರಿಗೆ ಮತದಾರರು ಜೈ ಎಂದಿದ್ದಾರೆ.

ಕರೆಗಳ ಶೇಕಡಾವಾರು ವಿವರ

ಇದರ ಅನುಸಾರ ಬಿಜೆಪಿ ಅಭ್ಯರ್ಥಿಯ ಪರ ಹೆಚ್ಚಿನ ಜನರು ಒಲುವು ತೋರಿದ್ದಾರೆ. ಅಲ್ಲದೆ, ಹಾಲಿ ಸಂಸದರಾಗಿ ಬಿ.ಎನ್.‌ ಬಚ್ಚೇಗೌಡ ಅವರು ಚಿಕ್ಕಬಳ್ಳಾಪುರದಿಂದ ರಾಜಕೀಯ ನಿವೃತ್ತಿಯನ್ನು ಪಡೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಇಲ್ಲೀಗ ಟಿಕೆಟ್‌ಗೆ ಫೈಟ್‌ ನಡೆಯುತ್ತಿದೆ. ಮಾಜಿ ಸಚಿವ ಡಾ. ಕೆ. ಸುಧಾಕರ್‌ ಹಾಗೂ ಅಲೋಕ್ ವಿಶ್ವನಾಥ್ ನಡುವೆ ಟಿಕೆಟ್‌ಗಾಗಿ ಪೈಪೋಟಿ ನಡೆದಿದೆ. ಆದರೆ, ಮತದಾರ ಮಾತ್ರ ಬಿಜೆಪಿಯ ಪರ ಒಲವು ತೋರಿರುವುದು ಗೊತ್ತಾಗುತ್ತದೆ.

ಏನಿದು ಪೋಲಿಂಗ್‌ ಬೂತ್‌?

ಬೆಂಗಳೂರಿನಲ್ಲಿರುವ ವಿಸ್ತಾರ ನ್ಯೂಸ್‌ ಮುಖ್ಯ ಕಚೇರಿಯಲ್ಲಿ ತೆರೆಯಲಾಗಿರುವ ಪೋಲಿಂಗ್‌ ಬೂತ್‌ಗೆ ಸಾರ್ವಜನಿಕರು ನಿಗದಿತ ಸಮಯದಲ್ಲಿ ಪೋನ್‌ ಮಾಡುವ ಮೂಲಕ ತಮ್ಮ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಯಾರಾಗಬೇಕು, ಯಾವ ಪಕ್ಷ ಈ ಬಾರಿ ಗೆಲ್ಲಬೇಕು ಎಂದು ತಿಳಿಸಬಹುದು.

ಇದನ್ನೂ ಓದಿ: Vistara news polling booth: ಕೋಲಾರದಲ್ಲಿ ಮೈತ್ರಿಗೆ ಮಹಾ ಬಲ; ಕಾಂಗ್ರೆಸ್‌ ಆಗಲಿದೆಯೇ ಸಬಲ?

ಪೋಲಿಂಗ್‌ ಬೂತ್‌ನಲ್ಲಿ ಮಾಹಿತಿ ಸಂಗ್ರಹ ಹೇಗೆ?

ವಿಸ್ತಾರ ನ್ಯೂಸ್‌ ಪೋಲಿಂಗ್‌ ಬೂತ್‌ಗೆ ಒಂದೇ ದೂರವಾಣಿ ಸಂಖ್ಯೆಯನ್ನು ನೀಡಲಾಗಿದೆ. ಆದರೆ, ಈ ಒಂದೇ ದೂರವಾಣಿ ಸಂಖ್ಯೆ ಸುಮಾರು 20ಕ್ಕೂ ಅಧಿಕ ಫೋನ್‌ಗಳಿಗೆ ಕನೆಕ್ಟ್‌ ಆಗುತ್ತದೆ. ಏಕಕಾಲದಲ್ಲಿ 20ಕ್ಕೂ ಅಧಿಕ ಮಂದಿ ಕರೆಯನ್ನು ಸ್ವೀಕರಿಸಿ ಮಾಹಿತಿಯನ್ನು ಸಂಗ್ರಹ ಮಾಡಲಾಗುತ್ತದೆ. ಯಾರು ಅಭ್ಯರ್ಥಿಯಾಗಬೇಕು? ಯಾರು ಗೆಲ್ಲಬೇಕು? ಯಾರಿಗೆ ಮತ ಎಂಬಿತ್ಯಾದಿ ಮಾಹಿತಿಗಳನ್ನು ಈ ವೇಳೆ ದಾಖಲಿಸಿಕೊಳ್ಳಲಾಗುತ್ತದೆ. ಬಳಿಕ ಅವುಗಳನ್ನು ಸಮೀಕರಿಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.

ಈಗಾಗಲೇ ಮಂಡ್ಯ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಬೆಂಗಳೂರು ಉತ್ತರ, ಬಳ್ಳಾರಿ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ಸಮೀಕ್ಷೆ ಮುಕ್ತಾಯಗೊಂಡಿವೆ.

ನೀವು ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ: 080-69554488

Exit mobile version