Site icon Vistara News

ಸಮಸ್ಯೆಗಿಂತ ಸನ್ಮಾನವೇ ದೊಡ್ಡದಾಯ್ತು; ಚಿಕ್ಕದಾಸರಹಳ್ಳಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳ ಗಲಾಟೆ ಜೋರಾಯ್ತು

ಆನೇಕಲ್‌: ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಬೇಕಾದ ಕಾರ್ಯಕ್ರಮದಲ್ಲಿ ಸನ್ಮಾನದ ವಿಷಯಕ್ಕೆ ಜನಪ್ರತಿನಿಧಿಗಳು ಗಲಾಟೆ ಮಾಡಿಕೊಂಡಿದ್ದಾರೆ. ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಚಿಕ್ಕದಾಸರಹಳ್ಳಿ ಗ್ರಾಮದಲ್ಲಿ ಶನಿವಾರದಂದು, ನೆರೆಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕದಾಸರಹಳ್ಳಿಯಲ್ಲಿ ಜಿಲ್ಲಾಧಿಕಾರಿ ನಡೆ-ಹಳ್ಳಿ ಕಡೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಈ ವೇಳೆ ನಮ್ಮನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಕಡೆಗಣನೆ ಮಾಡಲಾಗಿದೆ ಎಂದು ಕಾಂಗ್ರೆಸ್ ಬೆಂಬಲಿತ ಸದಸ್ಯ ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷರಿಂದ ಸನ್ಮಾನ ಕಾರ್ಯಕ್ರಮದ ವೇಳೆ ಪರಸ್ಪರ ಮಾತಿನ ಚಕಮಕಿ ನಡೆಯಿತು. ಸ್ಥಳದಲ್ಲಿದ್ದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಲು ಹರಸಾಹಸ ಪಡಬೇಕಾಯಿತು.

ಇದನ್ನೂ ಓದಿ: Wild Animals Attack: ತುಮಕೂರಿನ ಈರಣ್ಣನ ಬೆಟ್ಟದಲ್ಲಿ ಕರಡಿಗಳ ಹಿಂಡು; ರಾಮನಗರದ ಕಣ್ವ ಹೊಳೆಯಲ್ಲಿ ಕಾಡಾನೆಗಳ ದಂಡು

ಜನರ ಸಮಸ್ಯೆಗಳ ಪರಿಹಾರಕ್ಕೆ ವೇದಿಕೆಯಾಗಬೇಕಿದ್ದ ಕಾರ್ಯಕ್ರಮವು ಸ್ಥಳೀಯ ಜನಪ್ರತಿನಿಧಿಗಳ ಪ್ರತಿಷ್ಠೆಯ ಕಣವಾಗಿ ಬದಲಾಗಿದ್ದು ಗ್ರಾಮಸ್ಥರಲ್ಲಿ ಬೇಸರ ಮೂಡಿಸಿತು. ಜನಸಾಮಾನ್ಯರ ಕಷ್ಟಗಳನ್ನು ಕೇಳಬೇಕಿದ್ದ ಜನಪ್ರತಿನಿಧಿಗಳು ತಮಗೆ ಸನ್ಮಾನ ಮಾಡುವಲ್ಲಿ ತಾರತಮ್ಯ ಆಗಿದೆ ಎಂದು ಕಿತ್ತಾಡಿಕೊಂಡಿದ್ದು ವಿರ್ಪಯಾಸವೇ ಸರಿ. ಇತ್ತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸ್ಥಳೀಯ ಶಾಸಕ ಬಿ ಶಿವಣ್ಣ, ತಹಸೀಲ್ದಾರ್‌ ಶಿವಪ್ಪ ಲಮಾಣಿ ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳು ಮೌನಕ್ಕೆ ಜಾರಿದ್ದರು.

Exit mobile version