ಕರ್ನಾಟಕ
Chikkamagaluru News: 30 ಅಡಿ ಆಳದ ತೆರೆದ ಬಾವಿಗೆ ಬಿದ್ದ ಬೆಕ್ಕಿನ ಮರಿ; ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಬಾವಿಗಿಳಿದು ರಕ್ಷಣೆ
Chikkamagaluru News: ತೆರೆದ ಬಾವಿ ಇರುವುದನ್ನು ಕಾಣದೆ ಬೆಕ್ಕಿನ ಮರಿಯೊಂದು 30 ಅಡಿ ಆಳದ ಬಾವಿಗೆ ಬಿದ್ದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಬಾವಿಯಿಂದ ಮೇಲೆ ಬರಲು ಆಗದೆ ನರಳಾಡುತ್ತಿದ್ದ ಈ ಬೆಕ್ಕನ್ನು ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ಚಿಕ್ಕಮಗಳೂರು: ತೆರೆದ ಬಾವಿಗೆ ಬಿದ್ದಿದ್ದ ಬೆಕ್ಕಿನ ಮರಿಯೊಂದನ್ನು ಅಗ್ನಿಶಾಮಕದಳ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಚಿಕ್ಕಮಗಳೂರು ನಗರದ ಎಂ.ಜಿ. ರಸ್ತೆ ಸಮೀಪದಲ್ಲಿದ್ದ ತೆರೆದ ಬಾವಿ (Chikkamagaluru News) ಇರುವುದನ್ನು ಕಾಣದ ಬೆಕ್ಕಿನ ಮರಿಯೊಂದು ಸುಮಾರು 30 ಅಡಿ ಆಳದ ಬಾವಿಗೆ ಬಿದ್ದಿತ್ತು. ಬಾವಿಯಲ್ಲಿ ನೀರು ಇದ್ದರಿಂದ ಮೇಲಿಂದ ಹೊರಗೆ ಬರಲು ಆಗದೆ ಬೆಕ್ಕಿನ ಮರಿಯು ಒಮ್ಮೆಲೆ ಚೀರಾಡುತ್ತಿತ್ತು.
ಬೆಕ್ಕಿನ ಮರಿಯ ಚೀರಾಟ ನರಳಾಟ ಗಮನಿಸಿದ ಸ್ಥಳೀಯರು ಬಂದು ನೋಡಿದಾಗ, ತೆರೆದ ಬಾವಿಗೆ ಬಿದ್ದಿರುವುದು ತಿಳಿದು ಬಂದಿದೆ. ಕೂಡಲೆ ಅಗ್ನಿ ಶಾಮಕದಳಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸ್ಥಳಾಕ್ಕಾಮಿಸಿದ ಅಗ್ನಿಶಾಮಕ ದಳವರು ಮೂವತ್ತು ಅಡಿ ಅಳದ ತೆರೆದ ಬಾವಿಗೆ ಬಿದ್ದಿದ್ದ ಬೆಕ್ಕಿನ ಮರಿಯನ್ನು ರಕ್ಷಣೆ ಮಾಡಿದ್ದಾರೆ.
ಮೊದಲಿಗೆ ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಅಗ್ನಿಶಾಮಕ ಸಿಬ್ಬಂದಿ ಬಾವಿಗೆ ಇಳಿದಿದ್ದಾರೆ. ಬಳಿಕ ಬುಟ್ಟಿಯನ್ನು ಬಾವಿಗೆ ಬಿಟ್ಟು ಅದರ ಸಹಾಯದಿಂದ ಬೆಕ್ಕಿನ ಮರಿಯನ್ನು ಅದರೊಳಗೆ ಇಟ್ಟು, ಮೇಲಕ್ಕೆ ಸುರಕ್ಷಿತವಾಗಿ ತಂದಿದ್ದಾರೆ. ನೀರಲ್ಲಿ ಒದ್ದಾಡಿ ಸುಸ್ತಾಗಿದ್ದ ಬೆಕ್ಕಿನ ಮರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಟವೆಲ್‌ನಿಂದ ಮೈ ಒರೆಸಲಾಗಿದೆ. ಸಿಬ್ಬಂದಿಯ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಬೆಕ್ಕಿನ ಮರಿಯನ್ನು ರಕ್ಷಿಸಿದ ಖುಷಿ ಸಿಬ್ಬಂದಿಯ ಮೊಗದಲ್ಲಿ ಕಾಣುತ್ತಿತ್ತು.
ರಾಜ್ಯದ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಕರ್ನಾಟಕ
Road accident : ಸವದತ್ತಿ ಪಟ್ಟಣದಲ್ಲಿ ಲಾರಿ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರು ಮೃತ್ಯು
ಬೆಳಗಾವಿಯ ಸವದತ್ತಿ ಪಟ್ಟಣದಲ್ಲಿ ಮಂಗಳವಾರ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಲಾರಿಯೊಂದು ಬೈಕ್, ಕಾರು ಮತ್ತು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ.
ಬೆಳಗಾವಿ: ಜಿಲ್ಲೆಯ ಸವದತ್ತಿ ಪಟ್ಟಣದ ಎಪಿಎಂಸಿ ಆವರಣದ ಎದುರು ಲಾರಿ, ಬೈಕ್, ಕಾರು, ಆಟೋ ಮಧ್ಯೆ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮಂಗಳವಾರ ಸಂಜೆ ಈ ಅವಘಡ ಸಂಭವಿಸಿದೆ.
ಬೈಕ್ ಸವಾರ, ಸವದತ್ತಿ ತಾಲೂಕಿನ ಕುರವಿನಕೊಪ್ಪ ಗ್ರಾಮದ ಸೋಮಲಿಂಗ ಹೂಗಾರ (33) ಮತ್ತು ಸವದತ್ತಿ ತಾಲೂಕಿನ ಮದಿಗೇರಿ ಗ್ರಾಮದ ಕಾರ್ತಿಕ್ ಕುರಬಗಟ್ಟಿ (9) ಮೃತಪಟ್ಟ ದುರ್ದೈವಿಗಳು. ಬೈಕ್ ಮೇಲಿದ್ದ ಇನ್ನಿಬ್ಬರಾದ ಮಂಜುಳಾ ಕುರಬಗಟ್ಟಿ (36), ಮಲ್ಲವ್ವ ಕುರಬಗಟ್ಟಿ (11) ಅವರಿಗೆ ಗಂಭೀರ ಗಾಯಗಳಾಗಿವೆ.
ಧಾರವಾಡದಿಂದ ಸವದತ್ತಿ ಕಡೆಗೆ ಬರುತ್ತಿದ್ದ ಲಾರಿ ಬ್ರೇಕ್ ಫೇಲ್ ಆಗಿದ್ದೇ ದುರಂತಕ್ಕೆ ಕಾರಣ ಎನ್ನಲಾಗಿದೆ. ಬ್ರೇಕ್ ಫೇಲ್ ಆದ ಲಾರಿ ಮೊದಲು ಸವದತ್ತಿ ಪಟ್ಟಣದ ಕಡೆಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ನಂತರ ರಸ್ತೆ ಪಕ್ಕ ನಿಂತಿದ್ದ ಕಾರು ಮತ್ತು ಆಟೋ ರಿಕ್ಷಾಗೂ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆ ಎಷ್ಟಿತ್ತು ಎಂದರೆ ಬೈಕ್ ಸವಾರನ ಮೃತದೇಹ ಲಾರಿ ಚಕ್ರದ ಕೆಳಗೆ ಸಿಲುಕಿತ್ತು. ಸ್ಥಳೀಯರು ಗಾಯಾಳುಗಳ ರಕ್ಷಣೆ ಮಾಡಿದರು. ಸ್ಥಳಕ್ಕೆ ಸವದತ್ತಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕ
Basavaraj Bommai: ವಿಜಯಪುರದಲ್ಲಿ 4.64 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸುವ ಗುರಿ; ಬೊಮ್ಮಾಯಿ
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳತ್ತ ರಾಜ್ಯ ಸರ್ಕಾರ ಮುಂದಾಗುತ್ತಿದೆ. ಮಂಗಳವಾರ ವಿಜಯಪುರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ.
ವಿಜಯಪುರ: ಜಿಲ್ಲೆಯಲ್ಲಿ 4.64 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸುವ ಗುರಿಯಿದ್ದು, ಈಗಾಗಲೇ 2.87 ಸಾವಿರ ಮನೆಗಳಿಗೆ ನೀರು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.
ಜಿಲ್ಲಾಡಳಿತ ವಿಜಯಪುರ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಮುದ್ದೇಬಿಹಾಳದ ನಾಲತಾವಾಡ ಪಟ್ಟಣದಲ್ಲಿ ಆಯೋಜಿಸಿದ್ದ ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನಾ ಕಾರ್ಯವನ್ನು ಹಾಗೂ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ನೆರವೇರಿಸಿ ಮಾತನಾಡಿದರು.
ಜಲ ಜೀವನ್ ಮಿಷನ್ ಅಡಿಯಲ್ಲಿ ದೇಶದಲ್ಲಿ 12 ಕೋಟಿ ಮನೆಗಳಿಗೆ ನೀರು ಒದಗಿಸಲಾಗಿದೆ. ಮೂರು ವರ್ಷಗಳಲ್ಲಿ 40 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಒದಗಿಸಲಾಗಿದೆ. ಮುಂದಿನ ವರ್ಷ 25 ಲಕ್ಷ ಮನೆಗಳಿಗೆ ನೀರು ಒದಗಿಸಲಾಗುತ್ತಿದೆ. ಜಲಧಾರೆಯಲ್ಲಿ ನಗರ ಪ್ರದೇಶಗಳಲ್ಲಿ3000 ಕೋಟಿ ರೂ.ಗಳನ್ನು ಒದಗಿಸಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಪ್ರದೇಶಗಳಲ್ಲಿ ನೀರು ಒದಗಿಸುವ ಚಿಂತನೆ ಇದೆ ಎಂದರು.
4 ಸಾವಿರ ಕೋಟಿ ರೂ. ಗಳಿಂತ ಹೆಚ್ಚು ಮೌಲ್ಯದ ಅಭಿವೃದ್ಧಿ
1,600 ಕೋಟಿ ರೂ.ಗಳ ಮೌಲ್ಯದ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿದೆ. ಈ ಮೊದಲು 2500 ಕೋಟಿ ರೂ.ಗಳ ವೆಚ್ಚದ ಅಭಿವೃದ್ಧಿಯನ್ನು ಶಾಸಕ ನಡಹಳ್ಳಿ ಮಾಡಿದ್ದಾರೆ. ಒಂದು ಅವಧಿಯಲ್ಲಿ ನಾಲ್ಕು ಸಾವಿರ ಕೋಟಿ ರೂ.ಗಳಿಂತ ಹೆಚ್ಚು ಮೌಲ್ಯದ ಅಭಿವೃದ್ಧಿ ಮಾಡಲಾಗಿರುವುದು ಒಂದು ದಾಖಲೆಯಾಗಿದೆ. ಉತ್ತರ ಕರ್ನಾಟಕದ, ಹಿಂದುಳಿದ ವರ್ಗಗಳ ಅಭಿವೃದ್ಧಿಯಾಗಬೇಕು ಎಂದು ಹೇಳಿದರು.
ನಂಜುಂಡಪ್ಪ ವರದಿಯಿಂದ ಹಿಡಿದು ಬಹಳಷ್ಟು ವರದಿಗಳಿವೆ. ನಂಜುಂಡಪ್ಪ ವರದಿಯ ಅನುಷ್ಠಾನವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾಡಿದ್ದು. ಈ ಭಾಗದಲ್ಲಿ ವಿಶೇಷವಾಗಿ ನೀರಾವರಿಗೆ ಮೂಲಭೂತ ಸೌಕರ್ಯ, ಕುಡಿಯುವ ನೀರು, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಿರುವ ಪರಿಣಾಮ ಇಷ್ಟು ದೊಡ್ಡ ಪ್ರಮಾಣದಲ್ಲಿ ಈ ಕ್ಷೇತ್ರದ ಅಭಿವೃದ್ಧಿ ಮಾಡಲು ಸಾಧ್ಯವಾಗಿದೆ ಎಂದರು.
ಕೆಲಸಗಳೇ ನಮ್ಮ ಗ್ಯಾರಂಟಿ, ಆಶ್ವಾಸನೆಗಳಲ್ಲ
ಕಿಸಾನ್ ಸಮ್ಮಾನ್ ಯೋಜನೆಯಡಿ 16 ಸಾವಿರ ಕೋಟಿ ವೆಚ್ಚದಲ್ಲಿ 54 ಲಕ್ಷ ರೈತರಿಗೆ ಅನುಕೂಲ ಕಲ್ಪಿಸಲಾಗಿದ್ದು ನಮ್ಮದು ರೈತಪರ ಸರ್ಕಾರ. ಮುಧೋಳದಲ್ಲಿ 975 ಕೋಟಿ ರೂ.ಗಳ ಅನುದಾನವನ್ನು 47 ಲಕ್ಷ ರೈತರಿಗೆ ಬಿಡುಗಡೆ ಮಾಡಲಾಗುತ್ತಿದೆ. ನಾವು ಮಾತಿಗಿಂತ ಮಾಡಿ ತೋರಿಸುತ್ತೇವೆ. ನಮ್ಮ ಕೆಲಸಗಳೇ ನಮ್ಮ ಗ್ಯಾರಂಟಿ. ಆಶ್ವಾಸನೆಗಳು ನಮ್ಮ ಗ್ಯಾರಂಟಿ ಅಲ್ಲ ಸಿಎಂ ಬೊಮ್ಮಾಯಿ ವಿರೋಧ ಪಕ್ಷಗಳಿಗೆ ತಿವಿದರು.
ರೈತ ವಿದ್ಯಾನಿಧಿ ಯೋಜನೆ, ರೈತಶಕ್ತಿ ಯೋಜನೆಯಡಿ 386 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಈ ವರ್ಷ ಭೂ ಶಕ್ತಿ ಯೋಜನೆಯಡಿ ಬೀಜಗೊಬ್ಬರಕ್ಕೆ 10 ಸಾವಿರ ರೂ.ಗಳನ್ನು ನೀಡಲಾಗುವುದು. ರೈತರಿಗೆ ಜೀವ ವಿಮೆಗಾಗಿ 180 ಕೋಟಿ ಮೀಸಲಿಡಲಾಗಿದೆ. 53 ಲಕ್ಷ ಜನರಿಗೆ ಇದರ ಪ್ರಯೋಜನವಾಗಲಿದೆ. ಶೂನ್ಯ ಬಡ್ಡಿದರದಲ್ಲಿ 5 ಲಕ್ಷದವರೆಗೆ ಸಾಲದ ವ್ಯವಸ್ಥೆ, 3500 ಕೋಟಿ ರೂ.ಗಳ ಆವರ್ತ ನಿಧಿಯಡಿ ಮೀಸಲಿಡಲಾಗಿದೆ. ಸಿರಿಧಾನ್ಯ ಬೆಳೆದವರಿಗೆ 1 ಹೆಕ್ಟೇರ್‌ಗೆ 10 ಸಾವಿರ ರೂ.ಗಳ ವ್ಯವಸ್ಥೆ ಮಾಡಲಾಗಿದೆ ಎಂದರು.
ಸ್ವಯಂ ಉದ್ಯೋಗ ಮಹತ್ವ
ಸ್ತ್ರೀ ಶಕ್ತಿ ಸಂಘಗಳಿಗೆ ಸ್ವಯಂ ಉದ್ಯೋಗಕ್ಕಾಗಿ 20 ಸಾವಿರ ಹಣ ಬಿಡುಗಡೆ ಮಾಡಲಾಗುತ್ತಿದೆ. ಸ್ವಾಮಿ ವಿವೇಕಾನಂದ ಯೋಜನೆಯನ್ನು 23 ರಂದು 13 ಸಾವಿರ ಯುವಶಕ್ತಿ ಕೇಂದ್ರಗಳಿಗೆ ಅನುದಾನ ಬಿಡುಗಡೆ ಮಾಡಲಾಗುವುದು. ಈ ಮೂಲಕ ಕಾಯಕ ಕ್ರಾಂತಿ ಮಾಡಬೇಕು ಎಂದರು. ಎಸ್‌ಸಿ, ಎಸ್‌ಟಿಗಳಿಗೆ ಮೀಸಲಾತಿ ಹೆಚ್ಚಿಸಿ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಾಗಿದೆ. ಎಲ್ಲ ವರ್ಗಕ್ಕೆ ನ್ಯಾಯ ನೀಡುವ ಕೆಲಸ ಮಾಡಿದ್ದೇವೆ. ಮುದ್ದೇಬಿಹಾಳ ಮಾದರಿಯಾಗುವಂತೆ ಕೆಲಸ ಮಾಡಲಾಗಿದೆ ಎಂದು ಸಿಎಂ ಹೇಳುವ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದರು.
ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಕಟಿ ಬದ್ದ
ನಮ್ಮ ಸರ್ಕಾರ ಕೆರೆ ತುಂಬಿಸುವ ಯೋಜನೆಗಳನ್ನು ಸಂಪೂರ್ಣಗೊಳಿಸಲಾಗುತ್ತಿದೆ. ರೇವಣಸಿದ್ದೇಶ್ವರ ಏತ ನೀರಾವರಿಗೆ ಅಡಿಗಲ್ಲು ಹಾಕಲಾಗಿದೆ. ನಮ್ಮ ಪಾಲಿನ ನೀರನ್ನು ಸದ್ಬಳಕೆ ಮಾಡಲು ನಮ್ಮ ಸರ್ಕಾರ ಆದ್ಯತೆ ನೀಡಿದೆ. ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಈ ಬಾರಿ ಕಿತ್ತೂರು ಅಭಿವೃದ್ಧಿ ಮಂಡಳಿ ರಚನೆ ಮಾಡಲಾಗಿದೆ. ಅದಕ್ಕೆ ಅನುದಾನ ನೀಡಿ, ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಕಟಿಬದ್ಧರಾಗಿ ಕೆಲಸ ಮಾಡುವುದಾಗಿ ತಿಳಿಸಿದರು.
ಇದನ್ನೂ ಓದಿ: Murder Case: ಅವಳದ್ದು ಮೋಹ, ಇವನಿಗೆ ಮಧುಮೇಹ; ಕೊಲೆಯಲ್ಲಿ ಅಂತ್ಯವಾಯ್ತು ಕಾಳಜಿ ಕಲಹ
ವಿಜಯಪುರ ಜಿಲ್ಲೆಗೆ ಐದು ನದಿಗಳು ಹರಿದರೂ ಬರ ತಪ್ಪಲಿಲ್ಲ. ವಿಜಯಪುರ ಜಿಲ್ಲೆಯ ಎಲ್ಲ ಕ್ಷೇತ್ರಗಳ ನೀರಾವರಿಯಾಗುವವರೆಗೂ ಸುಮಾರು 5 ಲಕ್ಷ ಹೆಕ್ಟೇರ್‌ಗೆ ನೀರಾವರಿಯಾಗುವವರೆಗೂ ನಾವು ವಿಶ್ರಮಿಸುವುದಿಲ್ಲ. ಮುದ್ದೇಬಿಹಾಳ ಕ್ಷೇತ್ರ ಎಲ್ಲಾ ರೀತಿಯಲ್ಲೂ ಅಭಿವೃದ್ಧಿಯಾದಂತೆ ಕರ್ನಾಟಕದ ಎಲ್ಲ ಕ್ಷೇತ್ರಗಳೂ ಅಭಿವೃದ್ಧಿಪಡಿಸಲು ಶ್ರಮವಹಿಸುತ್ತಿವೆ. ಕಳೆದ 3 ವರ್ಷಗಳಲ್ಲಿ 2 ಲಕ್ಷ ಕೋಟಿ ರೂ.ಗಳ ಅಭಿವೃದ್ಧಿ ಮಾಡಲಾಗಿದೆ. ಇದೊಂದು ದಾಖಲೆ ಎಂದರು.
ರಾಜ್ಯದ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಕರ್ನಾಟಕ
Karnataka Election: ಸಿಎಂ ಬೊಮ್ಮಾಯಿಗೇ ಟಿಕೆಟ್ ಸಿಗುವುದು ಡೌಟು ಎಂದ ಕಾಂಗ್ರೆಸ್
ನಿರುದ್ಯೋಗಿ ಯುವಕರಿಗೆ ಮಾಸಿಕೆ ಭತ್ಯೆ ನೀಡುವ ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಮೊದಲಿಗೆ ರಾಹುಲ್ ಗಾಂಧಿಯವರಿಂದಲೇ ಆರಂಭಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದ್ದರು.
ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯುವಕರಿಗೆ ಮಾಸಿಕ ನುರುದ್ಯೋಗ ಭತ್ಯೆ ನೀಡುವ ಗ್ಯಾರಂಟಿ ಯೋಜನೆಯನ್ನು ಟೀಕಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೇ ಚುನಾವಣೆ ಟಿಕೆಟ್ ಸಿಗುವುದು ಅನುಮಾನ ಎಂದು ಕಾಂಗ್ರೆಸ್ ಹೇಳಿದೆ.
ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ಮೂರು ಸಾವಿರ ರೂ., ಡಿಪ್ಲೊಮಾ ಪದವೀಧರರಿಗೆ ಮಾಸಿಕ ಒಂದೂವರೆ ಸಾವಿರ ರೂ. ನೀಡುವುದಾಗಿ ಬೆಳಗಾವಿಯಲ್ಲಿ ನಡೆದ ಸಮಾವೇಶದಲ್ಲಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದರು. ಈ ಕುರಿತು ಬಾಗಲಕೋಟೆಯಲ್ಲಿ ಮಂಗಳವಾರ ಪ್ರತಿಕ್ರಿಯಿಸಿದ್ದ ಬೊಮ್ಮಾಯಿ, ಈ ಯೋಜನೆಯನ್ನು ಮೊದಲಿಗೆ ರಾಹುಲ್ ಗಾಂಧಿಯವರಿಂದಲೇ ಆರಂಭಿಸಬೇಕು. ನಿರುದ್ಯೋಗಿಗಳಿಗೆ ಭತ್ಯೆ ಬಗ್ಗೆ ರಾಜಸ್ಥಾನ, ಛತ್ತೀಸ್‌ಗಢದಲ್ಲಿಯೂ ಹೇಳಿದ್ದರು. ಆದರೆ ಅನುಷ್ಠಾನವಾಗಿಲ್ಲ. ಅವರು ಹತಾಶರಾಗಿದ್ದಾರೆ. ಅವರಿಗೆ ಆಂತರಿಕ ಸಮೀಕ್ಷೆಯಲ್ಲಿ ಗೆಲ್ಲುವುದಿಲ್ಲ ಎಂದು ತಿಳಿದಿದೆ. ಶೇ 3-4 ರಷ್ಟು ಮತ ಗೆಲ್ಲಲು ಈ ರೀತಿಯ ಆಗಲಾರದ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಕರ್ನಾಟಕ ರಾಜಸ್ಥಾನ ಅಥವಾ ಛತ್ತೀಸ್‌ಗಢ ಅಲ್ಲ. ಕರ್ನಾಟಕದ ಜನ ಬಹಳ ಪ್ರಬುದ್ಧರಿದ್ದಾರೆ. ಯಾರು ಯಾಕೆ ಮಾತನಾಡುತ್ತಿದ್ದಾರೆ ಎಂದು ಅರ್ಥ ಮಾಡಿಕೊಳ್ಳಬೇಕು ಎಂದಿದ್ದರು.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, “ಸ್ವತಃ ತಮಗೇ ಬಿಜೆಪಿಯ ಟಿಕೆಟ್ ಸಿಗುವ ಭರವಸೆ ಇಲ್ಲದ, ಟಿಕೆಟ್ ಸಿಕ್ಕರೂ ಗೆಲ್ಲುವ ಭರವಸೆ ಇಲ್ಲದ, ಗೆದ್ದರೂ ತಾವೇ ಸಿಎಂ ಹುರಿಯಾಳು ಎಂಬ ಭರವಸೆ ಇಲ್ಲದ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ನೀಡಿದ ಯುವನಿಧೀ ಯೋಜನೆಯ ಭರವಸೆಯನ್ನು ಟೀಕಿಸುವುದು ಹಾಸ್ಯಾಸ್ಪದ. ಬೊಮ್ಮಾಯಿಯವರೇ, ನೀವು ಕೈಲಾಗದವರಿರಬಹುದು, ಕಾಂಗ್ರೆಸ್‌ಗೆ ಎಲ್ಲವೂ ಸಾಧ್ಯ” ಎಂದಿದೆ.
ಕರ್ನಾಟಕ
Karnataka Elections : ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಕಟ್ಟಿ ಹಾಕಲು ಹೊರಟ ಕಾಂಗ್ರೆಸ್‌ಗೆ ಈಗ ಖಾದ್ರಿ ಸಂಕಟ!
ಸಿಎಂ ಬೊಮ್ಮಾಯಿ ಅವರನ್ನು ಸೋಲಿಸುವ ಉದ್ದೇಶದಿಂದ ಕಾಂಗ್ರೆಸ್ ರೂಪಿಸಿರುವ ಪ್ಲ್ಯಾನ್ ತಿರುಗುಬಾಣವಾಗುವ ಅಪಾಯವಿದೆ. ಅಜ್ಜಂಪೀರ್ ಖಾದ್ರಿ ಅವರೇ ಇಲ್ಲೀಗ ನಿರ್ಣಾಯಕ
ಹಾವೇರಿ: ಜಿಲ್ಲೆಯ ಶಿಗ್ಗಾಂವಿ ಮತ ಕ್ಷೇತ್ರದಲ್ಲಿ ಕಳೆದ ಮೂರು ಅವಧಿಗಳಿಂದ ಗೆಲ್ಲುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja Bommai) ಅವರಿಗೆ ಚಮಕ್ ನೀಡಲು ಮುಂದಾಗಿರುವ ಪ್ಲ್ಯಾನ್ ಈಗ ಕಾಂಗ್ರೆಸ್‌ಗೇ ತಿರುಗುಬಾಣವಾಗುವ ಪರಿಸ್ಥಿತಿ ಎದುರಾಗಿದೆ.
ಶಿಗ್ಗಾಂವಿಯಲ್ಲಿ ಖಡಾಖಡಿ ಹೋರಾಟವನ್ನು ನೀಡುವ ಮೂಲಕ ಬೊಮ್ಮಾಯಿ ಅವರನ್ನು ಅವರ ಕ್ಷೇತ್ರದಿಂದ ಹೊರಬರದಂತೆ ಕಟ್ಟಿಹಾಕುವ ಪ್ರಯತ್ನವನ್ನು ಬಿಜೆಪಿ ನಡೆಸಿದೆ. ಬೊಮ್ಮಾಯಿಗೆ ಕಠಿಣ ಸ್ಪರ್ಧೆ ನೀಡಲು ಮಾಜಿ ಸಚಿವ ವಿನಯ ಕುಲಕರ್ಣಿ ಅವರೇ ಸೂಕ್ತ ಎಂಬ ತೀರ್ಮಾನಕ್ಕೆ ಬಂದಿರುವ ನಾಯಕರು ಅವರನ್ನು ಹೇಗೋ ಮನವೊಲಿಸಿ ಒಪ್ಪಿಸಿದ್ದಾರೆ. ಆದರೆ, ಈಗ ಶಿಗ್ಗಾಂವಿಯಲ್ಲಿ ಇದುವರೆಗೂ ಕಾಂಗ್ರೆಸ್ ಅಭ್ಯರ್ಥಿಯಾಗುತ್ತಿರುವ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಅವರು ತಿರುಗಿಬಿದ್ದಿದ್ದಾರೆ. ತನಗೆ ಟಿಕೆಟ್ ನೀಡದೆ ಹೋದರೆ ಪಕ್ಷೇತರನಾಗಿ ಕಣಕ್ಕಿಳಿಯುವುದಾಗಿ ಖಾದ್ರಿ ಹೇಳಿರುವುದು ಕಾಂಗ್ರೆಸ್‌ಗೆ ಬಿಸಿ ತುಪ್ಪವಾದಂತಾಗಿದೆ.
ಶಿಗ್ಗಾವಿ ಕ್ಷೇತ್ರದಿಂದ ಕಾಂಗ್ರೇಸ್ ಟಿಕೆಟ್ ಬಯಸಿ 14 ಜನರು ಅರ್ಜಿ ಸಲ್ಲಿಕೆ ಮಾಡಿದ್ದರು. ಅಲ್ಪಸಂಖ್ಯಾತ ಕೋಟಾದಡಿ ಸತತ ಮೂರು ಸಲ ಟಿಕೆಟ್ ಪಡೆದು ಬೊಮ್ಮಾಯಿ ವಿರುದ್ಧ ಸೋತಿದ್ದ ಮಾಜಿ ಶಾಸಕ ಅಜ್ಜಂ ಪೀರ್ ಖಾದ್ರಿ ಈ ಸಲವೂ ಟಿಕೆಟ್‌ಗಾಗಿ ಕಸರತ್ತು ನಡೆಸಿದ್ದಾರೆ.
ಆದರೆ, ಈ ಬಾರಿ ಅಲ್ಪಸಂಖ್ಯಾತ ಅಸ್ತ್ರದ ಬದಲು ಪಂಚಮಸಾಲಿ ಅಸ್ತ್ರ ಪ್ರಯೋಗಕ್ಕೆ ಕಾಂಗ್ರೆಸ್ ಮುಂದಾಗಿದೆ. ಅಲ್ಪಸಂಖ್ಯಾತರು ಹೇಗಿದ್ದರೂ ಕಾಂಗ್ರೆಸ್‌ಗೆ ಮತ ಹಾಕುತ್ತಾರೆ. ಅವರ ಜತೆ ಪಂಚಮಸಾಲಿಗಳ ಮತವೂ ಸೇರಿದರೆ ಬೊಮ್ಮಾಯಿ ಅವರನ್ನು ಸೋಲಿಸಬಹುದು ಎನ್ನುವುದು ಕಾಂಗ್ರೆಸ್ ಲೆಕ್ಕಾಚಾರ. ಹೀಗಾಗಿ ಪಂಚಮಸಾಲಿ ಸಮುದಾಯಕ್ಕೆ ಸೇರಿದ ಪ್ರಬಲ ನಾಯಕ ವಿನಯ ಕುಲಕರ್ಣಿ ಅವರನ್ನು ಶಿಗ್ಗಾಂವಿ ಕ್ಷೇತ್ರದಿಂದ ಕಣಕ್ಕಿಳಿಸಲು ಮನವಿ ಒಲಿಸಿದೆ. ಕೆಲವು ದಿನಗಲ ಹಿಂದೆ ದೆಹಲಿಯಲ್ಲಿ ನಡೆದ ಸಭೆಯಲ್ಲಿಯ ವಿನಯ ಕುಲಕರ್ನಿ ಜೊತೆ ಕೈ ನಾಯಕರು ಮಾತುಕತೆ ನಡೆಸಿದ್ದರು.
ವಿನಯ ಕುಲಕರ್ಣಿ ಅವರ ಹೆಸರು ಮುನ್ನಲೆಗೆ ಬರುತ್ತಿದ್ದಂತೆ ಮಾಜಿ ಶಾಸಕ ಅಜ್ಜಂ ಪೀರ್ ಖಾದ್ರಿ ಕೈ ನಾಯಕರಿಗೆ ಶಾಕ್ ನೀಡಿದ್ದಾರೆ. ಶಿಗ್ಗಾಂವಿಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿದ್ದಾರೆ.
ಈ ನಡುವೆ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ತಡರಾತ್ರಿಯವರೆಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಮತ್ತು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಸಭೆ ನಡೆಸಿ ಮನ ಒಲಿಸಲು ಕಸರತ್ತು ನಡೆಸಿದರಾದರೂ ಅದರಲ್ಲಿ ಸಫಲರಾಗಿಲ್ಲ. ಖಾದ್ರಿ ಅವರು ಸಿದ್ದರಾಮಯ್ಯ ಬೆಂಬಲಿಗರಾಗಿರುವುದರಿಂದ ಜಮೀರ್ ಅಹ್ಮದ್ ಅವರಿಗೆ ಮನವೊಲಿಕೆ ಜವಾಬ್ದಾರಿಯನ್ನು ನೀಡಲಾಗಿದೆ.
ಖಾದ್ರಿ ಅವರು ಕಳೆದ ಮೂರು ಚುನಾವಣೆಗಳಲ್ಲಿ ಬೊಮ್ಮಾಯಿ ವಿರುದ್ಧ ಸೋಲು ಕಾಣುತ್ತಿದ್ದಾರೆ. ಇಲ್ಲಿ ಕಾಂಗ್ರೆಸ್ ಕೊನೆಯ ಬಾರಿಗೆ ಗೆದ್ದಿದ್ದು 1994ರಲ್ಲಿ. ಮಂಜುನಾಥ ಕೊನ್ನೂರು ಅವರು ಆಗ ಶಾಸಕರಾಗಿದ್ದರು.
ಖಾದ್ರಿ ಅವರು 1998ರಲ್ಲಿ ಜನತಾದಳದ ಅಭ್ಯರ್ಥಿಯಾಗಿ ಗೆದ್ದಿದ್ದರು. 2004ರಲ್ಲಿ ಸಿಂಧೂರ ರಾಜಶೇಖರ್ ಇಲ್ಲಿಗೆ ಪಕ್ಷೇತರರಾಗಿ ಗೆಲುವು ಪಡೆದಿದ್ದರು. ಬಳಿಕ ಗೆದ್ದಿದ್ದೆಲ್ಲ ಬೊಮ್ಮಾಯಿ ಅವರೇ.
ಇಲ್ಲಿನ ಒಟ್ಟಾರೆ ಲೆಕ್ಕಾಚಾರ ಗಮನಿಸಿದರೆ ಕಾಂಗ್ರೆಸ್ ಕೇವಲ ಮುಸ್ಲಿಂ ಮತಗಳನ್ನು ನೆಚ್ಚಿಕೊಂಡರೆ ಗೆಲ್ಲುವುದು ಕಷ್ಟ. ಹಾಗಾಗಿ ಅದು ಬೇರೆ ಲೆಕ್ಕಾಚಾರಕ್ಕೆ ಮುಂದಾಗಿದ್ದಾರೆ. ಆದರೆ, ಮುಸ್ಲಿಂ ಮತಗಳನ್ನು ಬಿಟ್ಟರೂ ಗೆಲುವು ಸುಲಭವಲ್ಲ. ಹೀಗಾಗಿ ಖಾದ್ರಿ ಅವರು ಪಕ್ಷೇತರರಾಗಿ ನಿಂತರೆ ಮುಸ್ಲಿಂ ಮತಗಳು ಒಡೆಯುವುದು ನಿಶ್ಚಿತ. ಹೀಗಾಗಿ ಅತ್ಯಂತ ಜಾಗರೂಕತೆಯಿಂದ ಪರಿಸ್ಥಿತಿ ನಿಭಾಯಿಸಬೇಕಾದ ಅಗತ್ಯ ಕಾಂಗ್ರೆಸ್‌ಗಿದೆ. ಖಾದ್ರಿ ಅವರು ಕಾಂಗ್ರೆಸ್ ಮನವೊಲಿಕೆಗೆ ಒಲಿಯುತ್ತಾರಾ ಎಂದು ಕಾದು ನೋಡಬೇಕು.
ಇದನ್ನೂ ಓದಿ : Basavaraj Bommai: ಎರಡು ತಿಂಗಳಲ್ಲಿ 13 ಬಾರಿ ತವರು ಕ್ಷೇತ್ರಕ್ಕೆ ತೆರಳಿರುವ ಸಿಎಂ ಬಸವರಾಜ ಬೊಮ್ಮಾಯಿ: ಶಿಗ್ಗಾಂವಿಯಲ್ಲಿ ಪ್ರಬಲ ಸ್ಪರ್ಧೆ
-
ಸುವಚನ15 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಪ್ರಮುಖ ಸುದ್ದಿ20 hours ago
ವಿಸ್ತಾರ ಸಂಪಾದಕೀಯ: ಪಬ್ಲಿಕ್ ಪರೀಕ್ಷೆ ಗೊಂದಲ; ವಿದ್ಯಾರ್ಥಿಗಳು, ಪೋಷಕರ ಮೇಲೆ ಮಾನಸಿಕ ಒತ್ತಡ
-
ಕರ್ನಾಟಕ24 hours ago
Life changing story : ನಿಂದನೆಯೇ ವರವಾಯಿತು, ಹಠ ತೊಟ್ಟು ವಕೀಲನಾಗಿ ಕರಿಕೋಟು ಧರಿಸಿ ವಾದಿಸಿ ಗೆದ್ದ ಯುವಕ!
-
ಆಟೋಮೊಬೈಲ್21 hours ago
Oscar 2023 : ನಾಟು ನಾಟು ಹಾಡಿಗೆ ಡಾನ್ಸ್ಮಾಡಿದ ಟೆಸ್ಲಾ ಕಾರುಗಳು! ಇಲ್ಲಿದೆ ನೋಡಿ ವಿಡಿಯೊ
-
ಕ್ರಿಕೆಟ್5 hours ago
IND VS AUS: ಭಾರತ-ಆಸ್ಟ್ರೇಲಿಯಾ ಅಂತಿಮ ಏಕದಿನ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ
-
ಕರ್ನಾಟಕ10 hours ago
Shivamogga politics : ಯುಗಾದಿ, ರಂಜಾನ್ಗೆ ಶುಭ ಕೋರಿ ಫ್ಲೆಕ್ಸ್ ಹಾಕಿಸಿದ ಆಯನೂರು, ಹರಕು ಬಾಯಿ ಮುಚ್ಚಲಿ ಅಂದಿದ್ದು ಯಾರಿಗೆ?
-
ಧಾರ್ಮಿಕ8 hours ago
Ugadi 2023 : ಜಗದ ಆದಿ ಈ ಯುಗಾದಿ!
-
ಅಂಕಣ10 hours ago
ನನ್ನ ದೇಶ ನನ್ನ ದನಿ ಅಂಕಣ: ಪಂಜಾಬ್ ನಾಶವಾಗುವುದು ಒಳ್ಳೆಯ ಲಕ್ಷಣವಲ್ಲ