ಚಿಕ್ಕಮಗಳೂರು: ಎಷ್ಟೇ ಬಾರಿ ಹೇಳಿದರೂ ಒತ್ತುವರಿ ಜಾಗವನ್ನು ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಪ್ರತಿಭಟನಾರ್ಥವಾಗಿ ಗ್ರಾಮ ಪಂಚಾಯಿತಿ ಸದಸ್ಯ ಸಂಜಯ್ ಕೊಟ್ಟಿಗೆಹಾರ ಏಕಾಂಗಿಯಾಗಿ 36 ಕಿ.ಮೀ. ಪಾದಯಾತ್ರೆ ನಡೆಸುತ್ತಿದ್ದಾರೆ. ಚಿಕ್ಕಮಗಳೂರು (Chikkamagaluru News) ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಘಟನೆ ನಡೆದಿದೆ.
ಎನ್. ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಬಿ.ಕಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ವೆ ನಂ. 136ರಲ್ಲಿ 2.30 ಎಕರೆ ಗೋಮಾಳವನ್ನು ಪ್ರಭಾವಿಯೊಬ್ಬರು ಒತ್ತುವರಿ ಮಾಡಿ ಕೃಷಿ ಮಾಡುತ್ತಿದ್ದಾರೆ. ಈ ಬಗ್ಗೆ ಎನ್.ಆರ್.ಪುರ ತಹಸೀಲ್ದಾರ್ ಜಂಟಿ ಸರ್ವೆಗೆ ಸೂಚಿಸಿದ್ದರು. ಅಧಿಕಾರಿಗಳು ಗೋಮಾಳವೆಂದು ವರದಿ ನೀಡಿದ್ದಾರೆ. ಆದರೆ, ಈವರೆಗೂ ಅಧಿಕಾರಿಗಳು ಒತ್ತುವರಿ ತೆರವು ಮಾಡಿಲ್ಲ. ಬಿ.ಕಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂರಾರು ಜನ ನಿವೇಶನ ರಹಿತರಿದ್ದು, ಹಲವರಿಗೆ ವಸತಿ ಸೌಲಭ್ಯಗಳಿಲ್ಲ. ಅಧಿಕಾರಿಗಳು ಕೂಡಲೇ ಒತ್ತುವರಿ ಜಾಗವನ್ನು ತೆರವು ಮಾಡಿ ಸರ್ಕಾರಿ ಬಳಕೆಗೆ ಬಿಟ್ಟುಕೊಡಬೇಕೆಂದು ಆಗ್ರಹಿಸಿ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | Vikrant Rona | ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಆಸ್ಕರ್ ಪ್ರಶಸ್ತಿ ಸ್ಪರ್ಧೆಗೆ ನಾಮಕರಣ