Site icon Vistara News

Road accident : ಚಿಕ್ಕಮಗಳೂರಿನಲ್ಲಿ ಮೂರು ವಾಹನಗಳ ನಡುವೆ ಅಪಘಾತ, 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

bus

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಮೂರು ವಾಹನಗಳ ನಡುವೆ ಶನಿವಾರ ರಾತ್ರಿ ಸರಣಿ ಅಪಘಾತ ಸಂಭವಿಸಿದ್ದು, 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯವಾಗಿದೆ. (Road accident ) ಆದರೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಿಕ್ಕಮಗಳೂರು ಹಬ್ಬ ಮುಗಿಸಿ ಮನೆಗೆ ತೆರಳುವಾಗ ಘಟನೆ ನಡೆದಿದೆ. ಸಖರಾಯಪಟ್ಟಣದ ಸರ್ಕಾರಿ ಶಾಲೆಯ 25ಕ್ಕೂ ಹೆಚ್ಚು ಮಕ್ಕಳಿಗೆ ಸಣ್ಣಪುಟ್ಟ ಗಾಯವಾಗಿದೆ.

ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ಕೊಡಿಸಲಾಗಿದೆ. ಘಟನೆಯಲ್ಲಿ ಕೆಎಸ್ಆರ್‌ಟಿಸಿ ಬಸ್, ಕಾರು, ಒಂದು ಟಂ ಟಂ ವಾಹನ ಜಖಂಗೊಂಡಿದೆ. ಕಡೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಘಟನೆ ನಡೆದಿದೆ.

Exit mobile version