ಚಿಕ್ಕಮಗಳೂರು: ಟ್ರಾಫಿಕ್ ಪೊಲೀಸ್‌ವೊಬ್ಬರು ಚಲಿಸುತ್ತಿದ್ದ ಬೈಕ್ ಸವಾರನ ಕಾಲರ್ ಪಟ್ಟಿ ಹಿಡಿದು (Assault Case) ಎಳೆದಿದ್ದಾರೆ. ಪರಿಣಾಮ ಸವಾರ ಬೈಕ್‌ನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದಾನೆ. ಚಿಕ್ಕಮಗಳೂರು ನಗರದ ಎಐಟಿ ವೃತ್ತದಲ್ಲಿ ಘಟನೆ ನಡೆದಿದೆ.
ಹೆಲ್ಮೆಟ್ ಹಾಕದಿದ್ದಕ್ಕೆ ಫೈನ್ ಹಾಕುವ ಬದಲು ಟ್ರಾಫಿಕ್ ಪೊಲೀಸ್ ದೌರ್ಜನ್ಯ ಮೆರೆದಿದ್ದಾರೆ ಅಂತ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಟ್ರಾಫಿಕ್ ಸಬ್ ಇನ್‌ಸ್ಪೆಕ್ಟರ್ ಧನಂಜಯ್ ವರ್ತನೆಗೆ ಕಿಡಿಕಾರಿದ್ದಾರೆ. ಘಟನೆಯ ದೃಶ್ಯ ರಸ್ತೆ ಬದಿಯ ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕಾಲರ್ ಪಟ್ಟಿ ಹಿಡಿದು ಎಳೆದಾಕ್ಷಣ ಬೈಕ್ ಸವಾರ ನಿಯಂತ್ರಣ ತಪ್ಪಿ ಬಿದ್ದಿದ್ದಾನೆ. ಯುವಕನ ಕೈ-ಕಾಲುಗಳಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಟ್ರಾಫಿಕ್ ಪಿಎಸ್ಐ ಧನಂಜಯ್ ವರ್ತನೆಗೆ ಸ್ಥಳದಲ್ಲೇ ಹಲವರು ಕ್ಲಾಸ್ ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ: Self Harming : ಉಕ್ಕಿ ಹರಿಯುವ ಕೃಷ್ಣಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು
ಆಟೋ ಚಾಲಕರ ಹೊಡಿಬಡಿ
ಉಡುಪಿ ನಗರದಲ್ಲಿ ಬಾಡಿಗೆ ಮಾಡುವ ವಿಚಾರ ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಪ್ರತಾಪ್ ಚಂದ್ರ ಎಂಬಾತ ಆಟೋ ಚಾಲಕರಿಂದಲೇ ಹಲ್ಲೆಗೊಳಗಾದವರು. ಉಡುಪಿ ನಗರದ ಸಿಟಿ ಬಸ್ ಸ್ಟಾಂಡ್ ಬಳಿ ಘಟನೆ ನಡೆದಿದೆ.
ನಗರ ವ್ಯಾಪ್ತಿಯಲ್ಲಿ ರಿಕ್ಷಾ ಬಾಡಿಗೆ ಮಾಡುತ್ತಿರುವಾಗ ಒಂದು ತಂಡದಿಂದ ಹಲ್ಲೆ ನಡೆದಿದೆ. ಬಾಡಿಗೆ ಮಾಡಲು ನನಗೆ ಅನುಮತಿ ಇದೆ ಎಂದಾಗ ಕೋಪಗೊಂಡ ನಗರದ ರಿಕ್ಷಾ ಚಾಲಕರು ಪ್ರತಾಪ್ ಚಂದ್ರ ಅವರಿಗೆ ಹಲ್ಲೆ ನಡೆಸಿದ್ದಾರೆ. ಉಡುಪಿ ನಗರದ ವ್ಯಾಪ್ತಿಯಲ್ಲಿರುವ ರಿಕ್ಷಾ ಸ್ಟ್ಯಾಂಡ್‌ಗಳಲ್ಲಿ ಎಲ್ಲಿಯೂ ರಿಕ್ಷಾ ನಿಲ್ಲಿಸದಂತೆ ತಾಕೀತು ಮಾಡಿದ್ದಾರೆ. ಸದ್ಯ ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಆಟೋ ಚಾಲಕ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್
ಹನ್ನೆರಡು ವರ್ಷಗಳಿಂದ ತಲೆಮರಿಸಿಕೊಂಡಿದ್ದ ಆರೋಪಿಯ ಬಂಧನವಾಗಿದೆ. ಸಿಸಿಬಿಯ OCW ವಿಭಾಗದ ಅಧಿಕಾರಿಗಳು ವಿವೇಕ್ ಎಂಬಾತನನ್ನು ಬಂಧಿಸಿದ್ದಾರೆ. 2012 ರಲ್ಲಿ ಆರ್ ಟಿ ನಗರದ ಆರ್ಮ್ಸ್ ಆಯ್ಟ್ ಮತ್ತು ದರೋಡೆ ಯತ್ನ ಕೇಸ್‌ನಲ್ಲಿ ವಿವೇಕ್ ಅರೆಸ್ಟ್ ಆಗಿದ್ದ. ನಂತರ ಪೊಲೀಸರ ಕೈಗೂ ಸಿಗದೆ, ನ್ಯಾಯಾಲಯಕ್ಕೂ ಹಾಜರಾಗದೆ ಎಸ್ಕೇಪ್ ಆಗಿದ್ದ. ಮೈಸೂರಿನಲ್ಲಿ ತಲೆಮರೆಸಿಕೊಂಡಿದ್ದ ವಿವೇಕ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ