Site icon Vistara News

Elephant Attack | ಕಾಡಾನೆ ದಾಳಿಗೆ ಕಾರ್ಮಿಕ ಸಾವು ಪ್ರಕರಣ: ಮೃತದೇಹವಿಟ್ಟು ಪ್ರತಿಭಟನೆ, ಪೊಲೀಸರಿಂದ ಲಾಠಿಚಾರ್ಜ್

Elephant attack

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮದಲ್ಲಿ ಕೂಲಿ ಕಾರ್ಮಿಕ ಅರ್ಜುನ್ ಕಾಡಾನೆ (Elephant Attack) ದಾಳಿಗೆ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಮುಂದೆ ಮೃತದೇಹವಿಟ್ಟು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಬಲಿಯಾಗುವರ ಸಂಖ್ಯೆ ಮುಂದುವರಿದಿದ್ದು, ಕಾಡಾನೆ ದಾಳಿಗೆ ಒಂದೇ ತಿಂಗಳಲ್ಲಿ ಇಬ್ಬರು ಸಾವಿಗೀಡಾಗಿದ್ದರು. ತೋಟದಿಂದ ಕೆಲಸ ಮುಗಿಸಿ ಬರುವಾಗ ಕೂಲಿ ಕಾರ್ಮಿಕ ಅರ್ಜುನ್ (48) ಮೇಲೆ ಕಾಡಾನೆ ದಾಳಿ ಮಾಡಿತ್ತು. ಅರ್ಜುನ್‌ ಮೃತಪಟ್ಟಿದ್ದರು. ಈ ಕುರಿತು ಅರಣ್ಯ ಇಲಾಖೆ ವಿರುದ್ಧ ಜನರು ಆಕ್ರೋಶ ಹೊರ ಹಾಕಿದ್ದರು.

ಇದನ್ನೂ ಓದಿ | Elephant attack | ರಾತ್ರಿ ಹೊಲ ಕಾಯುವಾಗ ಒಂಟಿ ಸಲಗ ತುಳಿದು ರೈತನ ಸಾವು

ಅಷ್ಟೇ ಅಲ್ಲದೇ ಚಿಕ್ಕಮಗಳೂರು ವಿಭಾಗದ ಮೂಡಿಗೆರೆ ವಲಯ ವ್ಯಾಪ್ತಿಯ ಊರುಬಗೆ, ಗೌಡಳ್ಳಿ ಮುಂತಾದ ಗ್ರಾಮಗಳ ವ್ಯಾಪ್ತಿಯಲ್ಲಿ 4 ಕಾಡಾನೆಗಳ ಹಿಂಡು ನಿರಂತರವಾಗಿ 5-6 ವರ್ಷಗಳಿಂದ ಬೆಳೆಹಾನಿ , ಪ್ರಾಣಹಾನಿ ಮಾಡಿತ್ತು. ಕಾಡಾನೆಗಳನ್ನು ಹಿಡಿದು ಸ್ಥಳಾಂತರಿಸಿಬೇಕೆಂದು ಸಾರ್ವಜನಿಕರು ಹಾಗೂ ಚುನಾಯಿತ ಪ್ರತಿನಿಧಿಗಳು ನಿರಂತರವಾಗಿ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದರು.

ಅರಣ್ಯ ಇಲಾಖೆ ಕ್ರಮ ತೆಗೆದುಕೊಳ್ಳದೇ ಇದ್ದುದ್ದಕ್ಕೆ ಅರಣ್ಯ ಇಲಾಖೆ ಮುಂದೆ ಕಾರ್ಮಿಕನ ಮೃತದೇಹವಿಟ್ಟು ಸ್ಥಳೀಯರು ಪ್ರತಿಭಟನೆ ನಡೆಸಿದರು. ಕಾಡಾನೆಯನ್ನು ಸೆರೆ ಹಿಡಿಯುವಂತೆ ಆಗ್ರಹಿಸಿ ಸ್ಥಳೀಯರು ಅರಣ್ಯ ಇಲಾಖೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರಿಂದ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ.

ಇದೀಗ ಮೂಡಿಗೆರೆ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿರುವ ಹಾಗೂ ಮಾನವ ಪ್ರಾಣ ಹಾನಿಗೆ ಕಾರಣವಾಗಿರುವ ʻಮೂಡಿಗೆರೆ ಬೈರʼ ಎಂದು ಕರೆಯಲಾಗುವ ಕಾಡಾನೆಯನ್ನು ನಿರ್ದಿಷ್ಟವಾಗಿ ಗುರುತಿಸಿ, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಸೆರೆ ಹಿಡಿದು ಆನೆ ಶಿಬಿರಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳುವಂತೆ ಆದೇಶ ನೀಡಲಾಗಿದೆ.

ಇದನ್ನೂ ಓದಿ | Elephant attack | ಚಿಕ್ಕಮಗಳೂರಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Exit mobile version