Site icon Vistara News

Chikkamagaluru News | ಮನೆಯ ಎದುರು ನಿಲ್ಲಿಸುತ್ತಿದ್ದ ಬೈಕ್‌ ಕದಿಯುತ್ತಿದ್ದವನ ಬಂಧನ

Bike thief kadur police station

ಚಿಕ್ಕಮಗಳೂರು: ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗಳನ್ನು ರಾತ್ರೋರಾತ್ರಿ ಎಗರಿಸಿ ಕಡಿಮೆ ಬೆಲೆಗೆ ಮಾರುತ್ತಿದ್ದ ಕುಖ್ಯಾತ ಬೈಕ್ ಕಳ್ಳನನ್ನು ಚಿಕ್ಕಮಗಳೂರು (Chikkamagaluru News ) ಜಿಲ್ಲೆ ಕಡೂರು ಪೊಲೀಸರು ಬಂಧಿಸಿದ್ದಾರೆ.

ಕಡೂರು ತಾಲೂಕಿನ ಶೆಟ್ಟಿಹಳ್ಳಿ ನಿವಾಸ್ ಮೋಹನ್ ಕುಮಾರ್ ಬಂಧಿತ ಆರೋಪಿ. ಈತನಿಂದ ಸುಮಾರು 4 ಲಕ್ಷ ರೂ. ಮೌಲ್ಯದ 11 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಡೂರು ತಾಲೂಕಿನಲ್ಲಿ ತೀವ್ರವಾಗಿ ಬೈಕ್ ಕಳ್ಳತನವಾಗುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದರು. ಖಚಿತ ಮಾಹಿತಿಗೆ ಮೇರೆಗೆ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕಡೂರು ಪೊಲೀಸರ ಎದುರು ಆರೋಪಿ ಮೋಹನ್ ತಪ್ಪೊಪ್ಪಿಕೊಂಡಿದ್ದಾನೆ.

ತನಿಖೆಯ ವೇಳೆ, ಕಡೂರು ಅಷ್ಟೇ ಅಲ್ಲದೆ ಬೆಂಗಳೂರು, ತುಮಕೂರು ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಲ್ಲಿ ಬೈಕ್‍ಗಳನ್ನು ಕದ್ದಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. ಕಡೂರು ಸರ್ಕಲ್ ಇನ್ಸ್‌ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | ‌Talk War | ಸಿ.ಟಿ. ರವಿ ಕಳ್ಳಭಟ್ಟಿ ಕುಡಿದು ಮಾತಾಡುತ್ತಿದ್ದಾರೆ ಎಂದ ಬಿ.ಕೆ. ಹರಿಪ್ರಸಾದ್;‌ ನಾನು ಕೊತ್ವಾಲ್‌ ಶಿಷ್ಯ ಅಲ್ಲ ಎಂದ ರವಿ

Exit mobile version