Site icon Vistara News

ಸಿಇಟಿ ಪರೀಕ್ಷೆಯಲ್ಲೂ ಅಕ್ರಮದ ವಾಸನೆ: ಮೈಸೂರು ಮೂಲದ ವಿದ್ಯಾರ್ಥಿ ಪೊಲೀಸ್‌ ವಶಕ್ಕೆ

puc

ಚಿಕ್ಕಮಗಳೂರು: ರಾಜ್ಯದಲ್ಲಿ ಪಿಎಸ್‌ಐ ಅಕ್ರಮ ನೇಮಕಾತಿ ಬಳಿಕ ಇದೀಗ ವೃತ್ತಿಪರ ಶಿಕ್ಷಣಕ್ಕಾಗಿ ನಡೆಯುತ್ತಿರುವ ಸಿಇಟಿ ಪರೀಕ್ಷೆಯಲ್ಲಿಯೂ ಅಕ್ರಮದ ಶಂಕೆ ವ್ಯಕ್ತವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜೂನ್‌ 16, 17ರಂದು ಮುಖ್ಯ ವಿಷಯಕ್ಕೆ ಪರೀಕ್ಷೆ ನಡೆಸಿದ್ದು, ಇಂದು ಹೊರನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಡೆಸಿದೆ. ಈ ನಡುವೆ ಪರೀಕ್ಷಾ ಕೊಠಡಿಯೊಳಗೆ ಮೊಬೈಲ್‌ ತಂದಿದ್ದಕ್ಕೆ ವಿದ್ಯಾರ್ಥಿಯೊಬ್ಬನನ್ನು ಚಿಕ್ಕಮಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | ಎಕ್ಸಾಂ ಟೆನ್ಷನ್‌, ಹಿಜಾಬ್‌ ಕನ್ಫ್ಯೂಷನ್‌ ನಡುವೆ ನಡೆದ ಸಿಇಟಿ ಪರೀಕ್ಷೆ

ಪಿ.ಎಸ್.ಐ. ನೇಮಕಾತಿ ಅಕ್ರಮದ ಬೆನ್ನಲ್ಲೇ ಸಿಇಟಿಯಲ್ಲೂ ಅಕ್ರಮ ನಡೆದಿರುವ ಗುಮಾನಿ ಎದ್ದಿದೆ. ಇದಕ್ಕೆ ಕಾರಣವಾಗಿರುವುದು ಮೈಸೂರು ಮೂಲದ ವಿದ್ಯಾರ್ಥಿ ಪರೀಕ್ಷೆಯಲ್ಲಿ ಮೊಬೈಲ್ ಬಳಕೆ ಮಾಡಿರುವ ಆರೋಪ ಕೇಳಿ ಬಂದಿದೆ. ಬೇಲೂರು ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ನಡೆದ ರಸಾಯನಶಾಸ್ತ್ರ ಪರೀಕ್ಷೆಯಲ್ಲಿ ಮೊಬೈಲ್ ಬಳಕೆ ಮಾಡಿರುವುದಾಗಿ ತಿಳಿದು ಬಂದಿದೆ.

ವಿದ್ಯಾರ್ಥಿನಿ ಮೊಬೈಲ್‌ನಲ್ಲಿ ಪ್ರಶ್ನೆಪತ್ರಿಕೆಯ ಫೋಟೋ ತೆಗೆದು ಗೂಗಲ್‌ನಲ್ಲಿ  ಉತ್ತರ ಹುಡುಕುವ ಪ್ರಯತ್ನ ನಡೆಸಿದ್ದು ಕಂಡು ಬಂದಿದೆ. ಕೊಠಡಿ ಮೇಲ್ವಿಚಾರಕರು ಪರಿಶೀಲಿಸಿದಾಗ ವಿದ್ಯಾರ್ಥಿಯ ಪ್ಯಾಂಟ್ ನಲ್ಲಿ ಮೊಬೈಲ್ ಪತ್ತೆಯಾಗಿದೆ.

ಇದನ್ನೂ ಓದಿ | 2nd puc Toppers| ಹಪ್ಪಳ ಮಾರುವವರ ಮಗಳು ಈಗ ಪಿಯುಸಿ ಟಾಪರ್‌! ಸಾಧನೆಗೆ ಯಾವುದೂ ಅಡ್ಡಿ ಅಲ್ಲ

Exit mobile version