Karnataka Election 2023 chikmagalur district constituency wise election analysisಚಿಕ್ಕಮಗಳೂರು ಜಿಲ್ಲೆ ಕ್ಷೇತ್ರ ಸಮೀಕ್ಷೆ: ಬಹುತೇಕ ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ Vistara News
Connect with us

ಕರ್ನಾಟಕ ಎಲೆಕ್ಷನ್

ಚಿಕ್ಕಮಗಳೂರು ಜಿಲ್ಲೆ ಕ್ಷೇತ್ರ ಸಮೀಕ್ಷೆ: ಬಹುತೇಕ ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ

ಚಿಕ್ಕಮಗಳೂರು ಜಿಲ್ಲೆ ಕ್ಷೇತ್ರ ಸಮೀಕ್ಷೆ: ಕಳೆದ ಚುನಾವಣೆಯಲ್ಲಿ ಐದು ಕ್ಷೇತ್ರಗಳಲ್ಲಿ ನಾಲ್ಕರಲ್ಲಿ ಗೆದ್ದು ಬೀಗುತ್ತಿದ್ದ ಬಿಜೆಪಿ ಈ ಬಾರಿ ಮತ್ತೆ ಪ್ರಾಬಲ್ಯ ಸ್ಥಾಪಿಸಲು ಹೆಣಗಾಡುತ್ತಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕೂಡ ತೀವ್ರ ಪೈಪೋಟಿ ನೀಡುತ್ತಿವೆ. ಜಿಲ್ಲೆಯ ಕ್ಷೇತ್ರಗಳ ಸದ್ಯದ ಗ್ರೌಂಡ್‌ ರಿಪೋರ್ಟ್‌ ಇಲ್ಲಿದೆ.

VISTARANEWS.COM


on

Karnataka Election 2023 chikmagalur district constituency wise election analysis
Koo
Karnataka Election 2023 chikmagalur district constituency wise election analysis

ಪ್ರವೀಣ್‌ ಕುಮಾರ್‌, ವಿಸ್ತಾರ ನ್ಯೂಸ್‌, ಚಿಕ್ಕಮಗಳೂರು
ಒಂದು ಕಾಲದಲ್ಲಿ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಕಾಫಿನಾಡು ಚಿಕ್ಕಮಗಳೂರು ಕಳೆದೆರಡು ದಶಕಗಳಿಂದ ಬಿಜೆಪಿಯ ಭದ್ರಕೋಟೆಯಾಗಿ ರೂಪುಗೊಂಡಿದೆ. ಈ ಚುನಾವಣೆಯಲ್ಲಿ (Karnataka Election 2023) ಬಿಜೆಪಿ ತನ್ನ ಭದ್ರಕೋಟೆಯನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದರೆ ಇತ್ತ ಕಾಂಗ್ರೆಸ್‌ ತನ್ನ ವೈಭವದ ದಿನಗಳನ್ನು ನೆನಪಿಸಿಕೊಂಡು ಮರಳಿ ಜಿಲ್ಲೆಯನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದೆ.

ಜಿಲ್ಲೆಯ ಐದು ಕ್ಷೇತ್ರಗಳಲ್ಲಿಯೂ ತ್ರಿಕೋನ ಸ್ಪರ್ಧೆ ನಡೆಯುತ್ತಿದ್ದು, ಜೆಡಿಎಸ್‌ ಕೂಡ ತನ್ನ ಪ್ರಾಬಲ್ಯವನ್ನು ಮರು ಸ್ಥಾಪಿಸಿಕೊಳ್ಳಲು ಹೆಣಗುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಗೆದ್ದು ಬೀಗಿತ್ತು. ಕೇವಲ ಒಂದು ಸ್ಥಾನದಲ್ಲಿ ಕಾಂಗ್ರೆಸ್ ಗೆಲ್ಲುವ ಮೂಲಕ ತೃಪ್ತಿ ಪಟ್ಟಿತ್ತು. ಈ ಬಾರಿ ಚಿಕ್ಕಮಗಳೂರು, ಮೂಡಿಗೆರೆ, ಶೃಂಗೇರಿ ಕ್ಷೇತ್ರಗಳು ಜಿದ್ದಾಜಿದ್ದಿಗೆ ಕಾರಣವಾಗಿದ್ದು ತೀವ್ರ ಕುತೂಹಲ ಮೂಡಿಸಿವೆ.

ಕೂಡೂರಿನಲ್ಲಿ ಮಾಜಿ ಸಚಿವ ವೈಎಸ್‌ವಿ ದತ್ತಾ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ್ದರಾದರೂ ಅಲ್ಲಿ ಟಿಕೆಟ್‌ ಸಿಗದೇ ಮರಳಿ ಜೆಡಿಎಸ್‌ಗೆ ಬಂದು ಪಕ್ಷದ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಕಡೂರಿನಲ್ಲಿ ಬಿಜೆಪಿ ಟಿಕೆಟ್‌ ಸಿಗದಿದ್ದಕ್ಕೆ ಶಾಸಕ ಎಂಪಿ ಕುಮಾರಸ್ವಾಮಿ ಪಕ್ಷ ಬಿಟ್ಟು ಜೆಡಿಎಸ್‌ ಸೇರಿ ಆ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಇದನ್ನು ಬಿಟ್ಟರೆ ಬೇರೆ ಮಹತ್ವದ ರಾಜಕೀಯ ಬೆಳವಣಿಗೆಗಳು ಜಿಲ್ಲೆಯಲ್ಲಿ ಸಂಭವಿಸಿಲ್ಲ.

ಚಿಕ್ಕಮಗಳೂರು : ಬಿಜೆಪಿ
ಕಾಂಗ್ರೆಸ್‌ ನಡುವೆ ಜಿದ್ದಾಜಿದ್ದಿ

ಕಳೆದ ನಾಲ್ಕು ಚುನಾವಣೆಗಳಲ್ಲಿ ಸತತವಾಗಿ ಗೆಲ್ಲುತ್ತಾ ಬಂದಿರುವ ಮಾಜಿ ಸಚಿವ ಸಿ. ಟಿ. ರವಿ ಈ ಕ್ಷೇತ್ರವನ್ನು ಬಿಜೆಪಿಯ ಭದ್ರಕೋಟೆಯಾಗಿಸಿದ್ದಾರೆ. ಆದರೆ ಈ ಬಾರಿ ಕಾಂಗ್ರೆಸ್‌ ತೀವ್ರ ಸವಾಲೊಡ್ಡುತ್ತಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿಯಿಂದ ಸಿಡಿದೆದ್ದು ಕಾಂಗ್ರೆಸ್ ಸೇರಿರುವ ಸಿ.ಟಿ.ರವಿ ಅವರ ಆಪ್ತ ಎಚ್‌ ಡಿ ತಮ್ಮಯ್ಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿಜೆಪಿಗೆ ಸಂಕಷ್ಟ ತಂದಿದ್ದಾರೆ.

ಜನತಾಪರಿವಾರದ ನೆಲೆ ಹೊಂದಿರುವ ಈ ಕ್ಷೇತ್ರದಲ್ಲಿ ಜೆಡಿಎಸ್ ನೆಪ ಮಾತ್ರಕ್ಕೆ ಸ್ಪರ್ಧೆ ಮಾಡುತ್ತಿದೆ. ಜೆಡಿಎಸ್ ಅಭ್ಯರ್ಥಿ ತಿಮ್ಮ ಶೆಟ್ಟಿ ಕಣದಲ್ಲಿ ಇದ್ದರಾದರೂ ಯಾವುದೇ ಪ್ರಚಾರ ನಡೆಸದೇ ದೂರ ಉಳಿದಿದ್ದಾರೆ. ಜೆಡಿಎಸ್ ಮತ್ತು ಕಾಂಗ್ರೆಸ್ ಒಂದಾಗಿ ಸಿ.ಟಿ. ರವಿಯನ್ನು ಈ ಬಾರಿ ಶತಾಯಗತಯಾ ಸೋಲಿಸಲು ರಣತಂತ್ರ ರೂಪಿಸಿವೆ.

ಸೋಲಿಲ್ಲದ ಸರದಾರ ಎಂದು ಬಿಂಬಿತವಾಗಿರುವ ಸಿ. ಟಿ. ರವಿ ಈ ಬಾರಿಯೂ ಗೆಲ್ಲುವ ಫೇವರೆಟ್ ಅಭ್ಯರ್ಥಿ ಎಂದೆ ಬಿಂಬಿತರಾಗಿದ್ದಾರೆ. ಆದರೂ ಕ್ಷೇತ್ರದಲ್ಲಿ ಹೆಚ್ಚಿರುವ ಲಿಂಗಾಯತ ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಎಚ್. ಡಿ. ತಮ್ಮ ಯ್ಯರನ್ನು ಕಣಕ್ಕಿಳಿಸಿ ಸಿ ಟಿ ರವಿ ಮಣಿಸಲು ಸಾಕಷ್ಟು ಪ್ರಯತ್ನನಡೆಸಿದೆ. ಮಾಜಿ ಸಿಎಂ ಕುಮಾರಸ್ವಾಮಿ ಆಪ್ತ ಎಸ್ ಎಲ್ ಭೋಜೇಗೌಡ ನೇರವಾಗಿ ಕಾಂಗ್ರೆಸ್ ಪರ ಪ್ರಚಾರ ನಡೆಸುತ್ತಿದ್ದು, ಕಾಂಗ್ರೆಸ್ ಗೆಲುವಿಗೆ ತಂತ್ರ ರೂಪಿಸುತ್ತಿದ್ದಾರೆ.

ಕಳೆದ ಚುನಾವಣೆಯ ಫಲಿತಾಂಶ ಏನು?
ಸಿ ಟಿ ರವಿ (ಬಿಜೆಪಿ) : 70,863 – ಬಿ ಎಲ್ ಶಂಕರ್ (ಕಾಂಗ್ರೆಸ್): 44,549- ಬಿ.ಎಚ್ ಹರೀಶ್ (ಜೆಡಿಎಸ್)- 38,317- ಗೆಲುವಿನ ಅಂತರ: 26,314

ತರೀಕೆರೆ : ಕಾಂಗ್ರೆಸ್‌ಗೆ
ಬಂಡಾಯದ ಬಿಸಿ

ಕಿಸಾನ್‌ ಮಜ್ದೂರ್‌ ಪ್ರಜಾ ಪಕ್ಷ, ಜನತಾ ಪಕ್ಷ, ಪ್ರಜಾ ಸಮಾಜವಾದಿ ಪಕ್ಷ ಹೀಗೆ ಇತರ ಪಕ್ಷಗಳ ಅಭ್ಯರ್ಥಿಗಳನ್ನೂ ಗೆಲ್ಲಿಸಿದ ಇತಿಹಾಸ ಹೊಂದಿರುವ ತರೀಕೆರೆಯಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ನಡೆಯುತ್ತಿದೆ. ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಡಿ ಎಸ್ ಸುರೇಶ್ ಅನಾಯಾಸವಾಗಿ ಗೆದ್ದಿದ್ದರು. ಪಕ್ಷ ಈ ಬಾರಿಯೂ ಶಾಸಕ ಡಿ ಎಸ್ ಸುರೇಶ್ ಅವರಿಗೇ ಟಿಕೆಟ್‌ ನೀಡಿದೆ. ಕಳೆದ ನಾಲ್ಕು ಚುನಾವಣೆಗಳಲ್ಲಿ ಒಮ್ಮೆ ಗೆದ್ದವರು ಮತ್ತೆ ಇಲ್ಲಿ ಗೆದ್ದಿಲ್ಲ. ಹೀಗಾಗಿ ಈ ಬಾರಿ ಏನಾಗುತ್ತದೆ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಈ ಬಾರಿ ಕಾಂಗ್ರೆಸ್‌ನಲ್ಲಿ ಬರೋಬ್ಬರಿ 12ಕ್ಕೂ ಹೆಚ್ಚು ಮಂದಿ ಟಿಕೆಟ್‌ ಆಕಾಂಕ್ಷಿಗಳಿದ್ದರು. ಆದರೂ ಕಾಂಗ್ರೆಸ್ ಹೈಕಮಾಂಡ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಆಪ್ತ ಜಿ ಎಸ್ ಶ್ರೀನಿವಾಸ್ ಗೆ ಟಿಕೆಟ್ ನೀಡಿದೆ.‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ಗೋಪಿಕೃಷ್ಣ ಟಿಕೆಟ್‌ ಸಿಗದೇ ಇದ್ದುದ್ದರಿಂದ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ತೊಡೆತಟ್ಟಿದ್ದಾರೆ. ಸತತ ಎರಡು ಚುನಾವಣೆಯಲ್ಲಿನ ಸೋತಿದ್ದಾರೆ ಎಂಬ ಅನುಕಂಪ ಗೋಪಿ ಕೃಷ್ಣ ಪರವಿದೆ. ಇವರಲ್ಲದೆ ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿ ದೋರನಾಳು ಪರಮೇಶ್‌ ಕೂಡ ಕಣದಲ್ಲಿದ್ದಾರೆ. ಇವರಿಬ್ಬರ ಸ್ಪರ್ಧೆ ಕಾಂಗ್ರೆಸ್‌ಗೆ ದೊಡ್ಡ ಸವಾಲಾಗಿದೆ.

ಒಟ್ಟಾರೆಯಾಗಿ ಕಾಂಗ್ರೆಸ್‌, ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿ ಗೋಪಿಕೃಷ್ಣ ರ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಇಲ್ಲಿ ಜೆಡಿಎಸ್‌ ಅಭ್ಯರ್ಥಿ ಕಣದಲ್ಲಿದ್ದಾರೆಯಾದರೂ ಪೈಪೋಟಿಯಲ್ಲಿಲ್ಲ.

ಕಳೆದ ಚುನಾವಣೆಯ ಫಲಿತಾಂಶ ಏನು?
ಡಿ ಎಸ್ ಸುರೇಶ್ (ಬಿಜೆಪಿ): 44, 960- ಶ್ರೀನಿವಾಸ್ ಜಿ ಎಚ್‌ (ಪಕ್ಷೇತರ) :33, 253- ಗೋಪಿ ಕೃಷ್ಣ (ಪಕ್ಷೇತರ): 29, 663- ಎಸ್ ಎಂ ನಾಗರಾಜು (ಕಾಂಗ್ರೆಸ್):20, 406 -ಗೆಲುವಿನ ಅಂತರ: 11,707

ಕಡೂರು: ಈ ಬಾರಿಯೂ
ತ್ರಿಕೋನ ಸ್ಪರ್ಧೆ

ಕಡೂರು ವಿಧಾನಸಭಾ ಕ್ಷೇತ್ರ ಈ ಬಾರಿಯ ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿ ಅಭ್ಯರ್ಥಿ ಬೆಳ್ಳಿ ಪ್ರಕಾಶ್ ಹಾಗೂ ಜೆಡಿಎಸ್ ಅಭ್ಯರ್ಥಿ ವೈ ಎಸ್ ವಿ ದತ್ತಾ ನಡುವೆ ನೇರ ನೇರ ಪೈಪೋಟಿ ನಡೆಯುತ್ತಿದೆ ಎನಿಸಿದರೂ ಕಾಂಗ್ರೆಸ್ ಅಭ್ಯರ್ಥಿ ಕೆ ಎಸ್ ಆನಂದ್ ಕೂಡ ಸವಾಲೊಡ್ಡುತ್ತಿದ್ದಾರೆ.

ಕಳೆದ ಕೆಲವು ತಿಂಗಳ ಹಿಂದಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಗೆ ಹಾರಿದ್ದ ಮಾಜಿ ಸಚಿವ ವೈಎಸ್‌ವಿ ದತ್ತಾ, ಕಾಂಗ್ರೆಸ್‌ ಟಿಕೆಟ್‌ ಸಿಗದೇ ಇದ್ದುದ್ದರಿಂದ ಮರಳಿ ಜೆಡಿಎಸ್‌ಗೆ ಬಂದು ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಗೆದ್ದು ಬಿಗಿದ್ದ ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ಬೆಳ್ಳಿ ಪ್ರಕಾಶ್ ಮತ್ತೊಮ್ಮೆ ಕಣದಲ್ಲಿದ್ದಾರೆ. ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡರ ಮಾನಸ ಪುತ್ರ ದತ್ತಾ 2013ರ ವಿಜಯಮಾಲೆಯನ್ನು ಮತ್ತೆ ಧರಿಸಲು ಕ್ಷೇತ್ರದ ಪ್ರತಿ ಹಳ್ಳಿ ಹಳ್ಳಿಗಳಿಗೂ ಭೇಟಿ ನೀಡಿ ಮತದಾರರ ಓಲೈಸಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಜೆಡಿಎಸ್‌ನ ಸಾಂಪ್ರದಾಯಿಕ ಮತಗಳ ಜೊತೆಗೆ ಕಡೂರು ಕ್ಷೇತ್ರದಲ್ಲಿ ಹೆಚ್ಚಾಗಿರುವ ಲಿಂಗಾಯಿತ ಹಾಗೂ ಕುರುಬ ಮತಗಳನ್ನೂ ಸೆಳೆಯುವ ಪ್ರಯತ್ನ ನಡೆಸಿದ್ದಾರೆ. ಇನ್ನು ಬೆಳ್ಳಿ ಪ್ರಕಾಶ್ ಮತ್ತು ಕೆ.ಎಸ್‌. ಆನಂದ್‌ ಕೂಡ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

ಕಳೆದ ಚುನಾವಣೆಯ ಫಲಿತಾಂಶ ಏನು?
ಬೆಳ್ಳಿ ಪ್ರಕಾಶ್ (ಬಿಜೆಪಿ): 62,232- ವೈ ಎಸ್ ವಿ ದತ್ತಾ (ಜೆಡಿಎಸ್) : 46,860- ಕೆ.ಎಸ್ ಆನಂದ್ (ಕಾಂಗ್ರೆಸ್): 46,142- ಗೆಲುವಿನ ಅಂತರ: 15,372

ಕಡೂರು ವಿಧಾನಸಭಾ ಕ್ಷೇತ್ರದ ಗ್ರೌಂಡ್‌ ರಿಪೋರ್ಟ್‌ ಇಲ್ಲಿದೆ ನೋಡಿ.

ಶೃಂಗೇರಿ : ಕಾಂಗ್ರೆಸ್‌
ಬಿಜೆಪಿಗೆ ಜೆಡಿಎಸ್‌ ಸವಾಲು

ಶೃಂಗೇರಿ ವಿಧಾನಸಭಾ ಕ್ಷೇತ್ರವು ಈ ಬಾರಿಯೂ ಹಲವು ಕುತೂಹಲಗಳಿಗೆ ಸಾಕ್ಷಿಯಾಗಿದೆ. ಕಳೆದ ಬಾರಿ ಕೇವಲ 2 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದ ಬಿಜೆಪಿ ಅಭ್ಯರ್ಥಿ ಡಿ ಎನ್ ಜೀವರಾಜ್ ಮತ್ತೆ ಈ ಬಾರಿ ಕಣದಲ್ಲಿದ್ದಾರೆ. ಹಾಲಿ ಶಾಸಕ ಟಿ. ಡಿ. ರಾಜೇಗೌಡ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದಾರೆ. ಇನ್ನು ಜೆಡಿಎಸ್ ಅಭ್ಯರ್ಥಿ ಸುಧಾಕರ್ ಶೆಟ್ಟಿ ಕೂಡ ಈ ಎರಡು ರಾಷ್ಟ್ರೀಯ ಪಕ್ಷಗಳಿಗೆ ಟಕ್ಕರ್ ಕೊಡಲು ಸಜ್ಜಾಗಿದ್ದಾರೆ.

ಹಿಂದೂ ಸಂಘಟನೆಗಳ ಕಡೆಗಡನೆ ಕಳೆದ ಬಾರಿ ಜೀವರಾಜ್ ಸೋಲಿಗೆ ಪ್ರಮುಖ ಕಾರಣವಾಗಿತ್ತು. ಆದರೆ ಈ ಬಾರಿ ಈ ಎಲ್ಲಾ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಳ್ಳುವುದರತ್ತ ಅವರು ಪ್ರಯತ್ನ ನಡೆಸಿದ್ದಾರೆ. ಕ್ಷೇತ್ರದಾದ್ಯಂತ ಓಡಾಡಿ ಗೆಲುವಿಗೆ ಕಸರತ್ತು ನಡೆಸಿದ್ದಾರೆ.

ದಲಿತ, ಅಲ್ಪಸಂಖ್ಯಾತರ ಜೊತೆಗೆ ಒಕ್ಕಲಿಗ ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಬಿಜೆಪಿಯನ್ನು ಮತ್ತೆ ಮಣಿಸಲು ತೀವ್ರ ರಣತಂತ್ರ ರೂಪಿಸುತ್ತಿದೆ. ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ರಾಜೇಗೌಡ ಪ್ರಚಾರ ನಡೆಸುತ್ತಿದ್ದಾರೆ. ಈ ನಡುವೆ ಜೆಡಿಎಸ್ ಅಭ್ಯರ್ಥಿ ಸುಧಾಕರ್ ಶೆಟ್ಟಿ ಕೂಡ ನಿರೀಕ್ಷೆಗೂ ಮೀರಿ ಸವಾಲೊಡ್ಡುತ್ತಿದ್ದಾರೆ. ಪಕ್ಷದ ಸಾಂಪ್ರದಾಯಿಕ ಮತಗಳ ಜತೆಗೆ ಕೂಲಿಕಾರ್ಮಿಕರ ಮತಗಳನ್ನೂ ಸೆಳೆಯುತ್ತಿರುವ ಅವರು ಎರಡೂ ಪಕ್ಷಗಳಿಗೆ ಸವಾಲಾಗಿದ್ದಾರೆ. ಹೀಗಾಗಿ ಈ ಬಾರಿ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ವಿಜಯಮಾಲೆ ಯಾರಿಗೆ ಅನ್ನೋದು ಫಲಿತಾಂಶದ ಬಳಿಕ ಗೊತ್ತಾಗಲಿದೆ.

ಕಳೆದ ಚುನಾವಣೆಯ ಫಲಿತಾಂಶ ಏನು?
ಟಿ. ಡಿ. ರಾಜೇಗೌಡ (ಕಾಂಗ್ರೆಸ್): 62, 780 -ಡಿ.ಎನ್. ಜೀವರಾಜ್ (ಬಿಜೆಪಿ) 60,791- ಎಚ್.ಜಿ ವೆಂಕಟೇಶ್ (ಜೆಡಿಎಸ್) 9,799-ಗೆಲುವಿನ ಅಂತರ: 1,989

ಮೂಡಿಗೆರೆ : ಕುತೂಹಲ
ಮೂಡಿಸಿದ ಪಕ್ಷಾಂತರ

ಮೂಡಿಗೆರೆ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಏಕೈಕ ಮೀಸಲು ಕ್ಷೇತ್ರವಾಗಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ಭರ್ಜರಿ ಗೆಲುವು ಸಾಧಿಸಿದ್ದ ಎಂಪಿ ಕುಮಾರಸ್ವಾಮಿ ಈ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಬಿಜೆಪಿಯ ಅಚ್ಚರಿಯ ಬೆಳವಣಿಗೆಯಲ್ಲಿ ಹೊಸ ಮುಖಕ್ಕೆ ಮಣೆ ಹಾಕಿದ್ದು ದೀಪಕ್ ದೊಡ್ಡಯ್ಯ ಅವರಿಗೆ ಟಿಕೆಟ್ ನೀಡಿದೆ.

ಇನ್ನು ಕಾಂಗ್ರೆಸ್ ಮಾಜಿ ಸಚಿವೆ ಮೊಟ್ಟಮ್ಮ ಅವರ ಪುತ್ರಿ ನಯನ ಮೊಟ್ಟಮ್ಮಗೆ ಟಿಕೆಟ್ ನೀಡಿದೆ. ಶಾಸಕ ಕುಮಾರಸ್ವಾಮಿ ಬಿಜೆಪಿ ಟಿಕೆಟ್‌ಗಾಗಿ ಕೊನೆಗಳಿಗೆ ವರೆಗೂ ಕಾದು ಟಿಕೆಟ್ ಸಿಗದಿದ್ದಕ್ಕೆ ಜೆಡಿಎಸ್ ಸೇರಿ, ಪಕ್ಷದ ಟಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೊದಲೇ ಜೆಡಿಎಸ್‌ ಮಾಜಿ ಶಾಸಕ ಬಿ ಬಿ ನಿಂಗಯ್ಯ ಅವರಿಗೆ ಟಿಕೆಟ್‌ ಘೋಷಿಸಿತ್ತು. ಕೊನೆ ಗಳಿಗೆಯಲ್ಲಿ ಬದಲಾವಣೆ ಮಾಡಿತು. ಇದರಿಂದ ರೊಚ್ಚಿಗೆದ್ದ ಅವರು ಕಾಂಗ್ರೆಸ್ ಸೇರಿ ನಯನ ಮೋಟಮ್ಮ ಗೆಲುವಿಗೆ ಓಡಾಡುತ್ತಿದ್ದಾರೆ. ಇದು ಜೆಡಿಎಸ್ ಗೆ ತಲೆ ನೋವಾಗಿ ಪರಿಣಮಿಸಿದೆ.

ಇನ್ನು ಜೆಡಿಎಸ್ ಅಭ್ಯರ್ಥಿ ಎಂ. ಪಿ. ಕುಮಾರಸ್ವಾಮಿ ಜೆಡಿಎಸ್ ನ ಸಾಂಪ್ರದಾಯಿಕ ಮತ, ಒಕ್ಕಲಿಗ, ದಲಿತ ಬಲಗೈ ಮತಗಳ ಮೇಲೆ ಕಣ್ಣಿಟ್ಟಿದ್ದಾರೆ. ಸದ್ಯ ಕ್ಷೇತ್ರದಲ್ಲಿ ಮೂರು ಪಕ್ಷಗಳ ನಡುವೆ ತೀವ್ರ ಸ್ಪರ್ಧೆ ನಡೆಯುತ್ತಿದೆ.

ಕಳೆದ ಚುನಾವಣೆಯ ಫಲಿತಾಂಶ ಏನು?
ಎಂ.ಪಿ ಕುಮಾರಸ್ವಾಮಿ (ಬಿಜೆಪಿ) : 58,783- ಮೋಟಮ್ಮ (ಕಾಂಗ್ರೆಸ್) : 46,721- ಬಿ ಬಿ ನಿಂಗಯ್ಯ : 22,063 (ಜೆಡಿಎಸ್)- ಗೆಲುವಿನ ಅಂತರ: 12,062

ಇದನ್ನೂ ಓದಿ: ಶಿವಮೊಗ್ಗ ಜಿಲ್ಲೆ ಕ್ಷೇತ್ರ ಸಮೀಕ್ಷೆ : ಬಿಜೆಪಿಗೆ ಪ್ರಾಬಲ್ಯ ಉಳಿಸಿಕೊಳ್ಳುವ ಸವಾಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕರ್ನಾಟಕ

Karnataka Cabinet Expansion: ಸರ್ಕಾರ ಟೇಕಾಫ್‌ ಆದ ಬೆನ್ನಲ್ಲೇ ಅಸಮಾಧಾನದ ಹೊಗೆ; ಖಾತೆ ಬದಲಿಸಿದ ಸಿದ್ದು

Karnataka Cabinet Expansion: ಸಿದ್ದರಾಮಯ್ಯ ಅವರು ಸಿಎಂ ಆಗಿ, ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಕಾಂಗ್ರೆಸ್‌ ಸರ್ಕಾರ ಟೇಕಾಫ್‌ ಆಯಿತು ಎನ್ನುವಷ್ಟರಲ್ಲಿಯೇ ಸಚಿವರಿಗೆ ನೀಡಲಾದ ಖಾತೆ ಬಗ್ಗೆ ಅಸಮಾಧಾನ ಶುರುವಾಗಿದೆ. ಹಾಗಾಗಿ, ಕೆಲ ಖಾತೆಗಳನ್ನು ಸಿದ್ದರಾಮಯ್ಯ ಅವರು ಬದಲಾಯಿಸಿದ್ದಾರೆ.

VISTARANEWS.COM


on

Edited by

Siddaramaiah
Koo

ಬೆಂಗಳೂರು: ‘ಮಳೆ ನಿಂತರೂ ಮಳೆ ಹನಿ ನಿಲ್ಲಲಿಲ್ಲ’ ಎಂಬ ಮಾತಿನಂತೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದು, ಕಾಂಗ್ರೆಸ್‌ ಗೆಲುವು ಸಾಧಿಸಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ, ಸಚಿವ ಸಂಪುಟ ಸಭೆ ವಿಸ್ತರಣೆಯಾದರೂ ಪಕ್ಷದಲ್ಲಿ ಆಂತರಿಕ ಗೊಂದಲ, ಅಸಮಾಧಾನ ಮಾತ್ರ ನಿಂತಿಲ್ಲ. ಖಾತೆ ಹಂಚಿಕೆ ಬಳಿಕವೂ ಸಚಿವರ ಮಧ್ಯೆಯೇ ಅಸಮಾಧಾನದ ಹೊಗೆ ಜಾಸ್ತಿಯಾದ ಕಾರಣ ರಾತ್ರೋರಾತ್ರಿ ಸಿದ್ದರಾಮಯ್ಯ ಅವರು ಖಾತೆಗಳನ್ನು ಬದಲಾವಣೆ ಮಾಡಿದ್ದಾರೆ.

ಹೌದು, ಎಂ.ಸಿ.ಸುಧಾಕರ್‌ ಅವರಿಗೆ ನೀಡಿದ್ದ ವೈದ್ಯಕೀಯ ಶಿಕ್ಷಣ ಶರಣ ಪ್ರಕಾಶ್ ಪಾಟೀಲ್ ಅವರಿಗೆ ನೀಡಲಾಗಿದೆ. ಇನ್ನು ಶರಣ ಪ್ರಕಾಶ್ ಪಾಟೀಲ್ ಅವರಿಗೆ ನೀಡಿದ್ದ ಉನ್ನತ ಶಿಕ್ಷಣ ಖಾತೆಯನ್ನು ಎಂ.ಸಿ.ಸುಧಾಕರ್‌ ಅವರಿಗೆ ನೀಡಿ ಸಮಾಧಾನ ಮಾಡಿದ್ದಾರೆ. ಹಾಗೆಯೇ, ಪ್ರಿಯಾಂಕ್ ಖರ್ಗೆ ಅವರಿಗೆ ಪಂಚಾಯತ್ ರಾಜ್ ಜತೆಗೆ ಐಟಿಬಿಟಿ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಕಾನೂನು ಸಂಸದೀಯ ಜತೆಗೆ ಪ್ರವಾಸೋದ್ಯಮ ಖಾತೆಯನ್ನು ಎಚ್‌.ಕೆ.ಪಾಟೀಲ್‌ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ. ಬೋಸರಾಜು ಅವರಿಗೆ ಸಣ್ಣ ನೀರಾವರಿ ಖಾತೆ ಜತೆಗೆ ವೈಜ್ಞಾನ ಮತ್ತು ತಂತ್ರಜ್ಞಾನ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ಮತ್ತೊಂದೆಡೆ, ಡಾ.ಜಿ.ಪರಮೇಶ್ವರ್‌ ಅವರಿಗೆ ಗೃಹ ಖಾತೆಯನ್ನು ನಿರ್ವಹಣೆ ಮಾಡಲು ಇಷ್ಟವಿಲ್ಲ. ರಾಮಲಿಂಗಾರೆಡ್ಡಿ ಅವರಿಗೆ ಸಾರಿಗೆ ಖಾತೆ ಸುತಾರಾಂ ಬೇಕಾಗಿಲ್ಲ. ಇವರಿಬ್ಬರು ಕೂಡ ಖಾತೆ ಬದಲಾವಣೆಗೆ ಪಟ್ಟು ಹಿಡಿದಿರುವುದು ಸಿದ್ದರಾಮಯ್ಯ ಅವರಿಗೆ ತಲೆನೋವು ತಂದಿದೆ. ಹಾಗಾಗಿಯೇ, ಸಚಿವರು ಹಾಗೂ ಅವರ ಖಾತೆ ಕುರಿತ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲು ವಿಳಂಬವಾಗಿದೆ ಎಂದು ತಿಳಿದುಬಂದಿದೆ.

ಇಲ್ಲಿದೆ ಸಚಿವರು ಹಾಗೂ ಅವರ ಖಾತೆಗಳ ಅಂತಿಮ ಪಟ್ಟಿ

Karnataka Ministers List

ಮೂಲ-ವಲಸಿಗ ಜಗಳ

ಸಚಿವ ಸಂಪುಟ ವಿಸ್ತರಣೆ ನಂತರ ಸಚಿವರಲ್ಲಿ ಅಸಮಾಧಾನದ ಜತೆಗೆ ಕಾಂಗ್ರೆಸ್‌ನಲ್ಲಿ ಮತ್ತೆ ಮೂಲ ಹಾಗೂ ವಲಸಿಗ ಜಗಳ ಆರಂಭವಾಗಿದೆ. ಅತ್ಯಂತ ಹಿರಿಯ ಹಾಗೂ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕನಾಗಿ ಕೆಲಸ ಮಾಡಿದ್ದರೂ ಸಚಿವ ಸ್ಥಾನ ಸಿಗದೇ ಇರುವ ಬಗ್ಗೆ ಬಿ.ಕೆ. ಹರಿಪ್ರಸಾದ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಮುಖವಾಗಿ ʼಹೊರಗಿನಿಂದ ಬಂದʼ ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.

ಇದನ್ನೂ ಓದಿ: Karnataka Cabinet expansion: ಸಂಪುಟದಲ್ಲಿನ್ನು ಸೀಟಿಲ್ಲ; ನಾಯಕರ, ಬೆಂಬಲಿಗರ ಆಕ್ರೋಶಕ್ಕೆ ಬೆಲೆ ಇಲ್ಲ

ಸಚಿವ ಸ್ಥಾನ ಮಿಸ್‌ ಆದ ಕುರಿತು ಮಾತನಾಡಿದ ಹರಿಪ್ರಸಾದ್‌, ಸಿಎಂ ಏನು ಬೇಕೋ ಹಾಗೆ ಮಾಡಿಕೊಂಡಿದ್ದಾರೆ. ಸಭಾ ನಾಯಕನಿಗೆ ಸಚಿವ ಸ್ಥಾನ ನೀಡುವ ಪದ್ಧತಿ, ಸಂಪ್ರದಾಯ ಇತ್ತು. ಸಿಎಂ ಅದನ್ನು ಈಗ ಬದಲಾಯಿಸಿದ್ದಾರೆ. ಅಷ್ಟಕ್ಕೂ ನನ್ನನ್ನು ಮಂತ್ರಿ ಮಾಡಿ ಎಂದು ಯಾರಲ್ಲೂ ಕೇಳಿಕೊಂಡಿರಲಿಲ್ಲ. ಎಲ್ಲಿಯವರೆಗೂ ಹೇಳುತ್ತಾರೋ ಅಲ್ಲಿಯವರೆಗೂ ನಾನು ಇರುತ್ತೇನೆ ಎಂದರು. ಮತ್ತೊಂದೆಡೆ, ಖಾತೆ ಸಿಗದ ಕಾರಣ ಟಿ.ಬಿ.ಜಯಚಂದ್ರ ಅವರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Continue Reading

ಕರ್ನಾಟಕ

New Parliament Building: ಸಂಸತ್ ಭವನ ಉದ್ಘಾಟನೆ ಬಹಿಷ್ಕಾರ ನಾಚಿಕೆಗೇಡಿನ ಸಂಗತಿ: ಎನ್. ರವಿಕುಮಾರ್‌

New Parliament Building: ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭ ಬಹಿಷ್ಕರಿಸಿರುವ ಮೂಲಕ ಕಾಂಗ್ರೆಸ್‌ ಸೇರಿ ಕೆಲ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ರಾಜಕೀಯ ದ್ವೇಷ ಸಾಧಿಸುತ್ತಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಹೇಳಿದ್ದಾರೆ.

VISTARANEWS.COM


on

Edited by

MLA N Ravikumar
Koo

ಬೆಂಗಳೂರು: ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಶುಭ ಸಂದರ್ಭದಲ್ಲಿ ಮೇ 28ರಂದು ನವದೆಹಲಿಯಲ್ಲಿ ನೂತನ ಸಂಸತ್ ಭವನವನ್ನು ಕೇಂದ್ರ ಸರ್ಕಾರವು ಉದ್ಘಾಟನೆ (New Parliament Building) ಮಾಡುತ್ತಿದೆ. ಆದರೆ, ರಾಷ್ಟ್ರಪತಿಯವರನ್ನು ಆಹ್ವಾನಿಸಿಲ್ಲವೆಂದು ಆರೋಪ ಮಾಡುತ್ತಾ ಕಾಂಗ್ರೆಸ್‌ ಸೇರಿ ಕೆಲ ವಿರೋಧ ಪಕ್ಷಗಳು ರಾಜಕೀಯ ದ್ವೇಷ ಸಾಧಿಸುತ್ತಿರುವುದು ಸರಿಯಲ್ಲ. ಇದು ನಾಚಿಕೆಗೇಡಿನ ಸಂಗತಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಎಂಎಲ್‌ಸಿ ಎನ್.ರವಿಕುಮಾರ್ ತಿಳಿಸಿದ್ದಾರೆ.

ಅಲ್ಲದೇ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ ಅವರ ಜನ್ಮದಿನದಂದು ನೂತನ ಸಂಸತ್ ಉದ್ಘಾಟನೆಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಸ್ವಾತಂತ್ರ್ಯ ನಂತರ ಭಾರತದಲ್ಲಿ ನಡೆದ ರಾಜಕೀಯ ಬೆಳವಣಿಗೆಗಳಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ಹಲವು ನಾಯಕರು ಸಂಸತ್ತಿನಲ್ಲಿ ಕುಳಿತು ದೇಶವನ್ನು ಮುನ್ನಡೆಸಬೇಕಿತ್ತು, ವಿಪರ್ಯಾಸವೆಂದರೆ ನೆಹರು ಕುಟುಂಬಸ್ಥರು ಇಡೀ ದೇಶವನ್ನೇ ತಮ್ಮ ಕುಟುಂಬದ ಸುಪರ್ದಿಗೆ ನೀಡುವ ಮೂಲಕ ಸಂಸತ್ತನ್ನು ತಮ್ಮ ಕುಟುಂಬಕ್ಕೆ ಸೀಮಿತ ಮಾಡಿಬಿಟ್ಟರು ಎಂದು ಕಿಡಿ ಕಾರಿದ್ದಾರೆ.

ಕೇಂದ್ರ ಸರ್ಕಾರದ ಪ್ರತಿಯೊಂದು ಯೋಜನೆಯ ಬಗ್ಗೆ ಕಾಲು ಕೆರೆದುಕೊಂಡು ಜಗಳಕ್ಕೆ ನಿಲ್ಲುವ ಕಾಂಗ್ರೆಸ್, ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯುತ್ತಿದೆ. ನೂತನ ಸಂಸತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿಯವರನ್ನು ಆಹ್ವಾನಿಸಿಲ್ಲವೆಂದು ಆರೋಪ ಮಾಡುತ್ತಾ ರಾಜಕೀಯ ದ್ವೇಷ ಸಾಧಿಸುತ್ತಿರುವುದು ಸರಿಯಲ್ಲ. ಈ ಹಿಂದೆ 1987ರಲ್ಲಿ ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಸಂಸತ್ತಿನ ನೂತನ ಗ್ರಂಥಾಲಯ ಉದ್ಘಾಟನೆಯನ್ನು ಅವರೇ ಮಾಡಿದ್ದರು, ಅಂದಿನ ರಾಷ್ಟ್ರಪತಿಗಳಿಗೆ ಕೂಡ ಆಹ್ವಾನವಿರಲಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | New Parliament Building: ರಾಜಸ್ಥಾನದ ಶಿಲೆ, ಮಹಾರಾಷ್ಟ್ರದ ತೇಗದ ಮರ; ವೈವಿಧ್ಯತೆಯಲ್ಲಿ ಏಕತೆಯ ಸಂಕೇತ ಈ ಸಂಸತ್‌ ಭವನ

ಇನ್ನು 2010ರಲ್ಲಿ ಸೋನಿಯಾ ಗಾಂಧಿ ಅವರು ‘ಅಟಲ್ ಟನೆಲ್’ಗೆ ಭೂಮಿ ಪೂಜೆ ಮಾಡಿದ್ದರು. ಕೇಂದ್ರ ಸರ್ಕಾರದ ಯೋಜನೆಯೊಂದಕ್ಕೆ ಭೂಮಿ ಪೂಜೆ ಮಾಡಲು ಸೋನಿಯಾ ಗಾಂಧಿ ಯಾಕೆ ಬರಬೇಕಿತ್ತು? 2009ರಲ್ಲಿ ಮುಂಬೈ ನಗರದ ‘ಬಾಂದ್ರಾ ಮತ್ತು ವರ್ಲಿ’ ಸೀ ಲಿಂಕ್ ಉದ್ಘಾಟನೆಯನ್ನು ಸೋನಿಯಾ ಗಾಂಧಿ ಅವರು ಮಾಡಿದ್ದರು. ತನ್ನ ಅಧಿಕಾರಾವಧಿಯಲ್ಲಿ ಜಾರಿಗೆ ತಂದಿರುವ ಅಷ್ಟೂ ಯೋಜನೆಗಳಿಗೆ ತಮ್ಮ ಕುಟುಂಬ ಸದಸ್ಯರ ಹೆಸರನ್ನೇ ಬಳಸಿಕೊಂಡಿರುವ ನೆಹರು ಕುಟುಂಬದ ಕುಡಿಗಳು ಈಗ ಸೆಂಟ್ರಲ್ ವಿಸ್ಟಾ ಬಗ್ಗೆ ಈಗ ಮಾತನಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.

ಅಲ್ಲದೇ ಪಕ್ಕದ ರಾಜ್ಯವಾದ ತೆಲಂಗಾಣದಲ್ಲಿ ಸಿಎಂ ಚಂದ್ರಶೇಖರ್ ರಾವ್ ಅವರು ಹೈದರಾಬಾದ್‌ನಲ್ಲಿ ನೂತನ ಸಚಿವಾಲಯ ಉದ್ಘಾಟನೆಗೆ ತೆಲಂಗಾಣದ ‘ರಾಜ್ಯಪಾಲ’ರನ್ನೂ ಆಹ್ವಾನಿಸಿರಲಿಲ್ಲ, ಆದರೆ ಈಗ ಸೆಂಟ್ರಲ್ ವಿಸ್ಟಾ ಉದ್ಘಾಟನೆಗೆ ರಾಷ್ಟ್ರಪತಿಗಳು ಬರದಿರುವುದರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

1947 ರಲ್ಲಿ ಬ್ರಿಟಿಷರು ಭಾರತಕ್ಕೆ ಅಧಿಕಾರ ಹಸ್ತಾಂತರಿಸಿದ ಸಂದರ್ಭದಲ್ಲಿ ಮೊದಲ ಪ್ರಧಾನಮಂತ್ರಿಯಾಗಿದ್ದ ನೆಹರು ಅವರಿಗೆ ನೀಡಿದ್ದ ತಮಿಳುನಾಡಿನ ‘ಸೆಂಗೋಲ್’ ಅನ್ನು ನೂತನ ಸಂಸತ್ತಿನಲ್ಲಿ ಸ್ಪೀಕರ್ ಕುರ್ಚಿ ಬಳಿ ಇಡುತ್ತಿರುವುದು ಮತ್ತೊಂದು ವಿಶೇಷ. ಬ್ರಿಟಿಷರಿಂದ ಅಧಿಕಾರ ಹಸ್ತಾಂತರವಾಗಿದ್ದರೂ ಅವರು ಕಟ್ಟಿಸಿದ್ದ ಸಂಸತ್ತಿನಿಂದ ನಾವು ಹೊರಬಂದಿರಲಿಲ್ಲ. ಬ್ರಿಟಿಷರ ಮನಸ್ಥಿತಿಯನ್ನೇ ತೋರುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಭಾರತೀಯರೇ ನಿರ್ಮಾಣ ಮಾಡಿರುವ ನೂತನ ಸಂಸತ್ ಕಟ್ಟಡ ಇಷ್ಟವಿಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ | New Parliament Building: ಸೆಂಗೋಲ್‌ ಎಂಬ ರಾಜದಂಡ ಸ್ವಾತಂತ್ರ್ಯದ ಸಂಕೇತ; ಪ್ರತಿಷ್ಠಾಪನೆಗೆ ಕಾರಣ ತಿಳಿಸಿದ ಮೋದಿ

ನೂತನ ಸಂಸತ್ ಭವನದ ಉದ್ಘಟನಾ ಸಮಾರಂಭದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಭಾಗವಹಿಸುತ್ತಿರುವುದು ಸಂತೋಷದ ಸಂಗತಿ. ಆದರೆ ಇಲ್ಲಸಲ್ಲದ ನೆಪವೊಡ್ಡಿ ಸೆಂಟ್ರಲ್ ವಿಸ್ಟಾ ಉದ್ಘಾಟನೆಯ ಕಾರ್ಯಕ್ರಮವನ್ನು ಕೆಲ ವಿರೋಧ ಪಕ್ಷಗಳು ಬಹಿಷ್ಕರಿಸುವುದಾಗಿ ಹೇಳಿರುವುದು ಸರಿಯಲ್ಲ. ಸಂಸತ್ ಭವನ ಕೇವಲ ಕಟ್ಟಡವಲ್ಲಿ ಅದು ದೇಶದ ಪ್ರಜಾಪ್ರಭುತ್ವ ಎಂಬುದನ್ನು ವಿರೋಧಪಕ್ಷಗಳು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.‌

Continue Reading

ಕರ್ನಾಟಕ

Praveen Nettaru: ಆಕ್ರೋಶದ ಬೆನ್ನಲ್ಲೇ ಔದಾರ್ಯ ಮೆರೆದ ಸಿದ್ದರಾಮಯ್ಯ; ನೆಟ್ಟಾರು ಪತ್ನಿ ಮರುನೇಮಕಕ್ಕೆ ನಿರ್ಧಾರ

Praveen Nettaru: ವಿಶೇಷ ಪ್ರಕರಣವೆಂದು ಪರಿಗಣಿಸಿ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಯನ್ನು ಗ್ರೂಪ್‌ ಸಿ ಹುದ್ದೆಗೆ ರಾಜ್ಯ ಸರ್ಕಾರ ಮರು ನೇಮಕ ಮಾಡಿದೆ.

VISTARANEWS.COM


on

Edited by

Praveen Nettarus wife nutan kumari
Koo

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಯನ್ನು (Praveen Nettaru) ಗ್ರೂಪ್‌ ಸಿ ಹುದ್ದೆಗೆ ಮರುನೇಮಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಹೊಸ ಸರ್ಕಾರ ರಚನೆಯಾದ ಬೆನ್ನಲ್ಲೇ ಬೊಮ್ಮಾಯಿ ಸರ್ಕಾರದಲ್ಲಿ ನೇಮಕ ಮಾಡಿದ್ದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಯನ್ನು ಕೆಲಸದಿಂದ ವಜಾ ಮಾಡಲಾಗಿತ್ತು. ಇದಕ್ಕೆ ಬಿಜೆಪಿ ಹಾಗೂ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ರಾಜ್ಯ ಸರ್ಕಾರ ಮರು ನೇಮಕ ಮಾಡಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಿಎಂ‌ ಸಿದ್ದರಾಮಯ್ಯ ಅವರು, ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. ಆದರೂ ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Karnataka Cabinet: ಕಾಂಗ್ರೆಸ್‌ನಲ್ಲಿ ಮತ್ತೆ ಶುರುವಾಯಿತು ಮೂಲ-ವಲಸಿಗ ಜಗಳ: ಸಿಎಂ ವಿರುದ್ಧ ಹರಿಪ್ರಸಾದ್‌ ಪ್ರಹಾರ

ಬೊಮ್ಮಾಯಿ ಸರ್ಕಾರದಲ್ಲಿ ಗ್ರೂಪ್‌ ಸಿ ಹುದ್ದೆ

ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಯ ಬಳಿಕ ಮಾನವೀಯ ದೃಷ್ಟಿಯಿಂದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಗೆ ಬೊಮ್ಮಾಯಿ ಸರ್ಕಾರವು ತಾತ್ಕಾಲಿಕ ನೆಲೆಯ ನೇಮಕಾತಿ ಮಾಡಿತ್ತು. ಮೊದಲಿಗೆ ಮುಖ್ಯಮಂತ್ರಿ ಸಚಿವಾಲಯದಲ್ಲಿ ಉದ್ಯೋಗ ನೀಡಲಾಗಿತ್ತು. ಗ್ರೂಪ್‌ ಸಿ ಹುದ್ದೆಗೆ ನೇಮಕಗೊಳಿಸಿ, 30,350 ರೂ. ವೇತನ ನಿಗದಿಪಡಿಸಲಾಗಿತ್ತು. ನಂತರ ನೂತನ ಕುಮಾರಿ ಅಪೇಕ್ಷೆ ಮೇರೆಗೆ ದಕ್ಷಿಣ ಕ‌ನ್ನಡ ಜಿಲ್ಲಾಡಳಿತ ಕಚೇರಿಯ ಪ್ರಾಕೃತಿಕ ವಿಕೋಪ ವಿಭಾಗದಲ್ಲಿ ಕೆಲಸ ಮಾಡಲು ಅನುಮತಿ ನೀಡಲಾಗಿತ್ತು.

ಈ ಹುದ್ದೆಯ ಅವಧಿಯು ಈ ಹಿಂದಿನ ಮುಖ್ಯಮಂತ್ರಿಗಳ ಪದಾವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ನೇಮಿಸಲಾಗಿತ್ತು. ಈಗ ಹೊಸ ಸರ್ಕಾರ ರಚನೆಯಾಗಿರುವುದರಿಂದ ಕೆಲಸದ ಅವಧಿ ಮುಕ್ತಾಯವಾಗಿತ್ತು. ಹೀಗಾಗಿ ಪ್ರವೀಣ್ ನೆಟ್ಟಾರು (Praveen Nettaru) ಪತ್ನಿ ನೂತನ ಕುಮಾರಿಯನ್ನು ಕೆಲಸದಿಂದ ವಜಾ ಮಾಡಲಾಗಿತ್ತು.

2022ರ ಸೆ. 22ರಂದು ಗುತ್ತಿಗೆ ಆಧಾರದಲ್ಲಿ ಗ್ರೂಪ್ ಸಿ ಹುದ್ದೆಗೆ ನೇಮಕ ಮಾಡಲಾಗಿತ್ತು. ಹೊಸ ಸರ್ಕಾರ ಬಂದ ಕೂಡಲೇ ನೆಟ್ಟಾರ್ ಪತ್ನಿಯನ್ನು ಕೆಲಸದಿಂದ ವಜಾ ಮಾಡಿದ್ದರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಸಿದ್ದರಾಮಯ್ಯ ಸರ್ಕಾರ ಈಗ, ನೂತನ ಕುಮಾರಿ ಮರು ನೇಮಕಕ್ಕೆ ನಿರ್ಧರಿಸಿದೆ.

Continue Reading

ಕರ್ನಾಟಕ

ವಿಸ್ತಾರ TOP 10 NEWS: ಸಿದ್ದರಾಮಯ್ಯ ಸಂಪುಟ ಭರ್ತಿಯಿಂದ, ಉದ್ಘಾಟನೆಗೆ ಸಜ್ಜಾದ ಸಂಸತ್‌ ಭವನದವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

Edited by

to new parliament inauguration and more news
Koo

1. Karnataka Cabinet expansion : 24 ನೂತನ ಸಚಿವರ ಸೇರ್ಪಡೆ: ಭರ್ತಿ ಸಂಪುಟದೊಂದಿಗೆ ಅಗ್ನಿ ಪರೀಕ್ಷೆಗಿಳಿದ ಸಿದ್ದರಾಮಯ್ಯ!
ಸರಳ ಬಹುಮತದೊಂದಿಗೆ ಗದ್ದುಗೆ ಏರಿರುವ, ಕಾಂಗ್ರೆಸ್‌ ಸರ್ಕಾರದ ಚುಕ್ಕಾಣಿ ಹಿಡಿದಿರುವ ಸಿಎಂ ಸಿದ್ದರಾಮಯ್ಯ, ಪೂರ್ಣ ಸಂಪುಟವನ್ನು ಭರ್ತಿ ಮಾಡುವ ಮೂಲಕ ಹೊಸ ಪರೀಕ್ಷೆಗೆ ಒಡ್ಡಿಕೊಂಡಿದ್ದಾರೆ. ಇದೀಗ 24 ಸಚಿವರ ಪ್ರಮಾಣದೊಂದಿಗೆ 34 ಸ್ಥಾನ ಭರ್ತಿಯಾಗಿದೆ. 2003ರಲ್ಲಿ ನಡೆದ ಸಂವಿಧಾನ ತಿದ್ದುಪಡಿ ನಂತರದಲ್ಲಿ ಕರ್ನಾಟಕಕ್ಕೆ 34 ಸಚಿವರನ್ನಷ್ಟೆ ನೇಮಿಸುವ ಅಧಿಕಾರವಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಜತೆಗೆ 8 ಸಚಿವರು ಈ ಮೊದಲು ಪ್ರಮಾಣವಚನ ಸ್ವೀಕರಿಸಿದ್ದರು. ಹೊಸ ಸಚಿವರ ಸೇರ್ಪಡೆ ಬೆನ್ನಲ್ಲೇ, ಸ್ಥಾನ ಸಿಗದವರ ಅಸಮಾಧಾನ ಹೊಗೆಯಾಡಲು ಆರಂಭಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Karnataka Cabinet: ಕಾಂಗ್ರೆಸ್‌ನಲ್ಲಿ ಮತ್ತೆ ಶುರುವಾಯಿತು ಮೂಲ-ವಲಸಿಗ ಜಗಳ: ಸಿಎಂ ವಿರುದ್ಧ ಹರಿಪ್ರಸಾದ್‌ ಪ್ರಹಾರ

2. Karnataka Cabinet: ಸಂಪುಟದಲ್ಲಿ ಸೋತರೂ ಖಾತೆಯಲ್ಲಿ ಗೆದ್ದ ಡಿ.ಕೆ. ಶಿವಕುಮಾರ್‌: ಇಲ್ಲಿದೆ ಎಲ್ಲ ಸಚಿವರ ಖಾತೆಗಳ ಪಟ್ಟಿ
ಸಂಪುಟ ರಚನೆ ವೇಳೆಯಲ್ಲಿ ತಮ್ಮ ಆಪ್ತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಿಕೊಳ್ಳುವಲ್ಲಿ ಹಾಗೂ ಸ್ವತಃ ಸಿಎಂ ಸ್ಥಾನ ಪಡೆಯುವಲ್ಲಿ ಹಿನ್ನಡೆ ಅನುಭವಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್‌ ಇದೀಗ ಖಾತೆ ಹಂಚಿಕೆ ವೇಳೆಗೆ ತಮ್ಮ ಕೈ ಮೇಲಾಗಿಸಿಕೊಂಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

3. Karnataka Cabinet expansion: ಮೊದಲ, 2ನೇ ಬಾರಿಗೇ ಸಚಿವಗಿರಿ ಪಡೆದ ಬೆಳಗಾವಿ ಶಾಸಕಿಯರಿವರು!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, ಬೆಳಗಾವಿಯಿಂದ ಮಹಿಳಾ ಕೋಟಾದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಸಚಿವರಾಗಿದ್ದಾರೆ. ಇವರು ಎರಡನೇ ಬಾರಿಗೆ ಆಯ್ಕೆಯಾದರೂ ಮಂತ್ರಿಗಿರಿಯ ಅದೃಷ್ಟ ಒಲಿದಿದೆ. ಇದೇ ರೀತಿ ಈ ಹಿಂದೆ ಇನ್ನೂ ಇಬ್ಬರು ಶಾಸಕಿಯರಿಗೆ ಮೊದಲ ಇಲ್ಲವೇ ಎರಡನೇ ಬಾರಿಗೆ ಮಂತ್ರಿ ಪಟ್ಟ ಸಿಕ್ಕಿದೆ. ಅವರ ಬಗ್ಗೆ ವಿವರವನ್ನು ನೋಡೋಣ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. Karnataka Cabinet expansion: ಸಂಪುಟದಲ್ಲಿನ್ನು ಸೀಟಿಲ್ಲ; ನಾಯಕರ, ಬೆಂಬಲಿಗರ ಆಕ್ರೋಶಕ್ಕೆ ಬೆಲೆ ಇಲ್ಲ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ವಿಸ್ತರಣೆ (Karnataka Cabinet expansion) ಆಗಿದ್ದು, ಶನಿವಾರ (ಮೇ 27) 24 ಮಂದಿ ಸೇರ್ಪಡೆಯಾಗುವ ಮೂಲಕ ಎಲ್ಲ 34 ಸ್ಥಾನಗಳೂ ಭರ್ತಿಯಾಗಿವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿ ನಿಷ್ಠೆಯಿಂದ ದುಡಿದ ಹಿರಿಯ ನಾಯಕರು ಸೇರಿದಂತೆ ಹಲವು ಕಾರಣಗಳಿಂದ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದವರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ, ರಾಜಭವನದ ಮುಂದೆ ಹಲವು ರಾಜಕೀಯ ನಾಯಕರ ಬೆಂಬಲಿಗರು ಪ್ರತಿಭಟನೆಯನ್ನೂ ನಡೆಸಿದ್ದಾರೆ. ಎಂ ಕೃಷ್ಣಪ್ಪ ಹಾಗೂ ಪ್ರಿಯಾ ಕೃಷ್ಣ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ, ಸದ್ಯಕ್ಕಂತೂ ಯಾರಿಗೂ ಸ್ಥಾನ ಸಿಗುವುದಿಲ್ಲ ಎಂಬುದು ಪಕ್ಕಾ ಆಗಿದ್ದು, ಇವರನ್ನು ಸಮಾಧಾನ ಪಡಿಸುವ ಪ್ರಯತ್ನಗಳೂ ಕಾಣುತ್ತಿಲ್ಲ ಎಂದೂ ಹೇಳಲಾಗುತ್ತಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. ಹಳೇ ಬೇರು, ಹೊಸ ಚಿಗುರು: ಮೊದಲಿನ ಸಂಸತ್‌, ನೂತನ ಸಂಸತ್‌ ಭವನದ ನಡುವಿನ ವ್ಯತ್ಯಾಸ ಹೀಗಿದೆ ನೋಡಿ
ನೂತನ ಹಾಗೂ ಭವ್ಯ ಸಂಸತ್‌ ಭವನದ ಉದ್ಘಾಟನೆಗೆ ಕ್ಷಣಗಣನೆ (May 28) ಆರಂಭವಾಗಿದೆ. ಪ್ರತಿಪಕ್ಷಗಳ ಬಹಿಷ್ಕಾರದ ಮಧ್ಯೆಯೂ ಅದ್ಧೂರಿಯಾಗಿ ನೂತನ ಸಂಸತ್‌ ಭವನದ ಉದ್ಘಾಟನೆಗೆ ಕೇಂದ್ರ ಸರ್ಕಾರ ಸಿದ್ಧವಾಗಿದೆ. ಇದರ ಮಧ್ಯೆಯೇ, ಹಳೆಯ ಹಾಗೂ ನೂತನ ಸಂಸತ್‌ ಭವನದ ನಡುವಿನ ವ್ಯತ್ಯಾಸ, ತಂತ್ರಜ್ಞಾನದ ಅಳವಡಿಕೆ, ವಿನ್ಯಾಸ ಸೇರಿ ಹಲವು ದಿಸೆಯಲ್ಲಿ ಹೋಲಿಕೆ ಮಾಡಿ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಮೊದಲಿನ ಹಾಗೂ ನೂತನ ಸಂಸತ್‌ ಭವನಗಳ ನಡುವಿನ ವ್ಯತ್ಯಾಸವನ್ನು ಚಿತ್ರಗಳಲ್ಲಿ ನೋಡಿ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. Praveen Nettaru: ಹೊಸ ಸರ್ಕಾರ ಅಸ್ತಿತ್ವದ ಬೆನ್ನಲ್ಲೇ ಪ್ರವೀಣ್‌ ನೆಟ್ಟಾರ್ ಪತ್ನಿ ಕೆಲಸಕ್ಕೆ ಕೊಕ್
ಹೊಸ ಸರ್ಕಾರ ರಚನೆಯಾದ ಬೆನ್ನಲ್ಲೇ ಪ್ರವೀಣ್ ನೆಟ್ಟಾರ್ (Praveen Nettaru) ಪತ್ನಿ ನೂತನ ಕುಮಾರಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ. ದುಷ್ಕರ್ಮಿಗಳಿಂದ ಕೊಲೆಯಾದ ಬಿಜೆಪಿ ಯುವ ಮೋರ್ಚಾ (BJP Yuva Morcha) ಪದಾಧಿಕಾರಿ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಅವರ ಪತ್ನಿಗೆ ಬಿಜೆಪಿ ಸರ್ಕಾರವು ಮಾನವೀಯತೆ ಆಧಾರದ ಮೇಲೆ ಉದ್ಯೋಗ ನೀಡಿ ಆದೇಶ ಹೊರಡಿಸಿತ್ತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. NITI Aayog Meeting: ನೀತಿ ಆಯೋಗದ ಸಭೆಗೆ ಸಿದ್ದು ಸೇರಿ 10 ಸಿಎಂಗಳು ಗೈರು; ರಾಜ್ಯಗಳಿಗೆ ನಷ್ಟವೇನು?
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನೀತಿ ಆಯೋಗದ ಎಂಟನೇ ಗವರ್ನಿಂಗ್‌ ಸಮಿತಿ ಸಭೆ (Governing Council Meeting) ನಡೆದಿದ್ದು, ಮಹತ್ವದ ವಿಚಾರಗಳನ್ನು ಚರ್ಚಿಸಲಾಗಿದೆ. ಆದರೆ, ಕೇಂದ್ರ ಸರ್ಕಾರದ ವಿರುದ್ಧದ ಆಕ್ರೋಶ, ಮುನಿಸಿನಿಂದಾಗಿ 10 ರಾಜ್ಯಗಳ ಮುಖ್ಯಮಂತ್ರಿಗಳು ಸಭೆಗೆ ಗೈರಾಗಿದ್ದಾರೆ. ಆದರೆ, ಅಭಿವೃದ್ಧಿ ದೃಷ್ಟಿಯಿಂದ ಮಹತ್ವ ಪಡೆದಿರುವ ಸಭೆಗೆ ಸಿಎಂಗಳು ಗೈರಾಗಿರುವುದು ಆಯಾ ರಾಜ್ಯಗಳಿಗೇ ನಷ್ಟ ಎಂದು ವಿಶ್ಲೇಷಿಸಲಾಗುತ್ತಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. IPL 2023 : ಫೈನಲ್​ ಪಂದ್ಯದಲ್ಲಿ ಸೃಷ್ಟಿಯಾಗಲಿರುವ ಕೆಲವು ದಾಖಲೆಗಳ ವಿವರ ಹೀಗಿದೆ ನೋಡಿ
70 ಲೀಗ್ ಪಂದ್ಯಗಳು ಮತ್ತು ಮೂರು ಪ್ಲೇಆಫ್ ಮುಖಾಮುಖಿಗಳ ನಂತರ ಎಲ್ಲರ ಗಮನ ಇಂಡಿಯನ್ ಪ್ರೀಮಿಯರ್ ಲೀಗ್​​ನ (IPL 2023) ಮೆಗಾ ಫೈನಲ್​ ಕಡೆಗೆ ನೆಟ್ಟಿದೆ. ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಮ್​ನಲ್ಲಿ ಭಾನುವಾರ (ಮೇ 28ರಂದು) ಫೈನಲ್ ಹಣಾಹಣಿ ನಡೆಯಲಿದೆ. ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿವೆ. ಈ ಪಂದ್ಯದ ವೇಳೆ ಕೆಲವು ಆಟಗಾರರ ವೈಯಕ್ತಿಕ ದಾಖಲೆಗಳನ್ನು ಹಾಗೂ ಮೈಲುಗಲ್ಲುಗಳನ್ನು ಸೃಷ್ಟಿಸಲಿದ್ದಾರೆ. ಅವುಗಳು ಇಂತಿವೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. Weather Report: ಈ ವಾರ ಕರಾವಳಿಯಲ್ಲಿ ಮಳೆ ಅಬ್ಬರ; ಉಳಿದೆಡೆ ಬಿಸಿಲಿಗೆ ಜನ ತತ್ತರ
ರಾಜ್ಯಾದ್ಯಂತ ಮಳೆ ತೀವ್ರತೆ ಕಡಿಮೆ ಆಗಿದ್ದು, ಇನ್ನೊಂದು ವಾರ ತಾಪಮಾನದಲ್ಲಿ (Heat wave) ಏರಿಳಿತ ಆಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆಯಾದರೂ ಹಲವು ಕಡೆ ಬಿಸಿಲು ಝಳಪಿಸಲಿದ್ದು, ನಾಗರಿಕರು ಮತ್ತಷ್ಟು ಹೈರಾಣಾಗಬಹುದು ಎಂದು ಹವಾಮಾನ ಇಲಾಖೆ (Weather report) ಮುನ್ಸೂಚನೆಯನ್ನು ನೀಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. 96 ಸಾವಿರ ರೂ.ಮೌಲ್ಯದ ಮೊಬೈಲ್​ಗಾಗಿ 21 ಲಕ್ಷ ಲೀಟರ್​ ನೀರು ಖಾಲಿ ಮಾಡಿಸಿದ ಸರ್ಕಾರಿ ಅಧಿಕಾರಿ
ಈಗಿನ ಕಾಲದಲ್ಲಿ ಮನುಷ್ಯನಿಗೆ ಮೊಬೈಲ್​​ನಷ್ಟು ‘ಅಮೂಲ್ಯ’ ವಸ್ತು ಇನ್ನೊಂದು ಇರಲಿಕ್ಕೆ ಇಲ್ಲ ಬಿಡಿ !. ಏನಿರತ್ತದೆಯೋ ಬಿಡುತ್ತದೆಯೋ ಕೈಯಲ್ಲಿ ಮೊಬೈಲ್​ ಅಂತೂ ಇರಲೇಬೇಕು. ಅದು ಕಳೆದು ಹೋದರೆ, ಕೆಟ್ಟು ಹೋದರೆ ಆಗುವ ಚಡಪಡಿಕೆ ಅಷ್ಟಿಷ್ಟಲ್ಲ. ಒಟ್ನಲ್ಲಿ ಮೊಬೈಲ್​ ಅನ್ನೋದು ಜೀವನದ ಬೇಸಿಕ್ ಅವಶ್ಯಕತೆ ಎಂಬಂತಾಗಿದೆ. ಅಂಥ ಅಮೂಲ್ಯವಾದ ಮೊಬೈಲ್​​ನ್ನು ಕಳೆದುಕೊಂಡ ಛತ್ತೀಸ್​ಗಢ ಸರ್ಕಾರಿ ಆಸ್ಪತ್ರೆ ಅಧಿಕಾರಿಯೊಬ್ಬ, ಜಲಾಶಯದಲ್ಲಿದ್ದ 21 ಲಕ್ಷ ಲೀಟರ್​ ನೀರನ್ನು ಖಾಲಿ ಮಾಡಿಸಿ (Drains 21 Lakh Litres Water), ಈಗ ಅಮಾನತುಗೊಂಡಿದ್ದಾರೆ ! ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

Continue Reading
Advertisement
Shah Rukh Khan And Akshay kumar Voice Over to New parliament building Video
ದೇಶ3 mins ago

ಪ್ರಧಾನಿ ಮೋದಿ ಮನವಿಗೆ ಸ್ಪಂದನೆ; ಸಂಸತ್​ ಭವನದ ವಿಡಿಯೊಕ್ಕೆ ಧ್ವನಿ ಕೊಟ್ಟ ಶಾರುಖ್​ ಖಾನ್​, ಅಕ್ಷಯ್​ ಕುಮಾರ್​

naresh and pavitra lokesh Live in Relationship
South Cinema14 mins ago

Telugu star Naresh: ಮಕ್ಕಳು ಮಾಡಿಕೊಳ್ಳುವ ಆಲೋಚನೆ ಬಗ್ಗೆ ನರೇಶ್‌, ಪವಿತ್ರಾ ಲೋಕೇಶ್‌ ಹೇಳಿದ್ದೇನು?

IIFA 2023 Winners Hrithik Roshan and anil Kapoor
South Cinema16 mins ago

IIFA 2023 Winners Full List: ಹೃತಿಕ್ ರೋಷನ್, ಆಲಿಯಾ ಭಟ್‌ಗೆ ಅತ್ಯುತ್ತಮ ನಟ, ನಟಿ ಪ್ರಶಸ್ತಿ; ವಿಜೇತರ ಪಟ್ಟಿ ಇಲ್ಲಿದೆ!

new Parliament building and coffin box
ದೇಶ21 mins ago

New Parliament Building: ಹೊಸ ಸಂಸತ್ ಭವನವನ್ನು ಶವಪೆಟ್ಟಿಗೆಗೆ ಹೋಲಿಸಿದ ಲಾಲು ಪ್ರಸಾದ್ ಯಾದವರ ಆರ್‌ಜೆಡಿ ಪಕ್ಷ!

ipl records gill
ಕ್ರಿಕೆಟ್34 mins ago

IPL 2023: ಕೊಹ್ಲಿ ದಾಖಲೆ ಮುರಿಯುವರೇ ಶುಭಮನ್​ ಗಿಲ್​?

aditya ranjan ias
ಅಂಕಣ44 mins ago

ರಾಜ ಮಾರ್ಗ ಅಂಕಣ: ಆಧುನಿಕ ಅಂಗನವಾಡಿಗಳ ನಿರ್ಮಾಪಕ ಆದಿತ್ಯರಂಜನ್ IAS

New Parliament building inauguration Live Video Here
ದೇಶ55 mins ago

New Parliament Building: ನೂತನ ಸಂಸತ್​ ಭವನದ ಉದ್ಘಾಟನೆ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ

Tokyo Olympics Champion Risako Kawai
ಕ್ರೀಡೆ1 hour ago

Wrestlers Protest: ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲ ಸೂಚಿಸಿದ ವಿಶ್ವ ಚಾಂಪಿಯನ್‌ ಕವಾಯ್

RTI Activist Harish Halli Died
ಕರ್ನಾಟಕ2 hours ago

ದಾವಣಗೆರೆಯಲ್ಲಿ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟ ಆರ್​ಟಿಐ ಕಾರ್ಯಕರ್ತ

Narendra Modi Stadium, Ahmedabad
ಕ್ರಿಕೆಟ್2 hours ago

IPL 2023: ಫೈನಲ್​ ಪಂದ್ಯಕ್ಕೆ ಹೇಗಿರಲಿದೆ ಉಭಯ ತಂಡಗಳ ಪ್ಲೇಯಿಂಗ್​ ಇಲೆವೆನ್​

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ3 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ5 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್7 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Land Surveyor Recruitment
ಉದ್ಯೋಗ4 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

New Parliament building inauguration Live Video Here
ದೇಶ55 mins ago

New Parliament Building: ನೂತನ ಸಂಸತ್​ ಭವನದ ಉದ್ಘಾಟನೆ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ

horoscope today
ಪ್ರಮುಖ ಸುದ್ದಿ7 hours ago

Horoscope Today : ವಾರದ ರಜೆಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

Laxmi Hebbalkar oath taking as a minister
ಕರ್ನಾಟಕ18 hours ago

Laxmi Hebbalkar: ಸಚಿವೆಯಾಗುವುದರ ಜತೆಗೆ ಅಜ್ಜಿಯೂ ಆದ ಲಕ್ಷ್ಮಿ ಹೆಬ್ಬಾಳ್ಕರ್‌; ಒಂದೇ ದಿನ 2 ಸಿಹಿ ಸುದ್ದಿ!

HD Kumaraswamy in JDS Meeting
ಕರ್ನಾಟಕ2 days ago

H.D. Kumaraswamy: ಜೆಡಿಎಸ್‌ ವಿಸರ್ಜನೆ ಹೇಳಿಕೆಗೆ ಬದ್ಧ ಎಂದ ಎಚ್‌.ಡಿ. ಕುಮಾರಸ್ವಾಮಿ!

induction stoves
ಕರ್ನಾಟಕ2 days ago

Congress Guarantee: ಬಿಪಿಎಲ್ ಕಾರ್ಡ್‌ಗೆ ಮುಗಿಬಿದ್ದ ಜನ; ಇಂಡಕ್ಷನ್‌ ಸ್ಟವ್‌ಗೆ ಹೆಚ್ಚಿದ ಬೇಡಿಕೆ

Viral Video, Teacher and Principal are quarrel in front of School children
ದೇಶ2 days ago

Viral Video: ಶಾಲಾ ಮಕ್ಕಳ ಎದುರೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಟೀಚರ್! ಇಲ್ಲಿದೆ ನೋಡಿ ವಿಡಿಯೋ

Horoscope Today
ಪ್ರಮುಖ ಸುದ್ದಿ2 days ago

Horoscope Today : ಮಕರ ರಾಶಿಯವರಿಗೆ ಕೌಟುಂಬಿಕವಾಗಿ ಶುಭ ಫಲ; ಇಂದಿನ ಭವಿಷ್ಯ ಇಲ್ಲಿದೆ

HD Kumaraswamy said he will take up the issue of congress guarantee
ಕರ್ನಾಟಕ3 days ago

Congress Guarantee: ನಾವು ಕಡುಬು ತಿನ್ನೋಕ ರಾಜಕಾರಣ ಮಾಡ್ತಿರೋದು?: ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ

Beware if the Congress Guarantee card is conditioned and Pratap Simha says he will fight from June 1
ಕರ್ನಾಟಕ3 days ago

Congress Guarantee: ಗ್ಯಾರಂಟಿ ಕಾರ್ಡ್‌ಗೆ ಕಂಡೀಷನ್ ಹಾಕಿದ್ರೆ ಹುಷಾರ್‌; ಜೂನ್‌ 1ರಿಂದ ಹೋರಾಟವೆಂದ ಪ್ರತಾಪ್‌ ಸಿಂಹ

Electricity bill man hit bescom staff
ಕರ್ನಾಟಕ4 days ago

Electricity Bill: ಕರೆಂಟ್‌ ಬಿಲ್‌ ಕಿರಿಕ್‌; ಬಾಕಿ ಬಿಲ್‌ ಕಟ್ಟು ಎಂದಿದ್ದಕ್ಕೆ ಚಪ್ಪಲಿಯಿಂದಲೇ ಹೊಡೆದವ ಅರೆಸ್ಟ್‌

ಟ್ರೆಂಡಿಂಗ್‌

error: Content is protected !!