ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮತ್ತೆ ಲವ್ ಜಿಹಾದ್ ಕೂಗು ಕೇಳಿ ಬಂದಿದೆ. ಮುಸ್ಲಿಂ ಯುವಕನಿಂದ ಲವ್ ಜಿಹಾದ್ (Love Jihad) ನಡೆಸಲಾಗುತ್ತಿದೆ ಎಂದು ರೊಚ್ಚಿಗೆದ್ದ ಹಿಂದೂ ಕಾರ್ಯಕರ್ತರು, ಯುವಕನನ್ನು ಕೂಡಿಹಾಕಿ ಹಿಗ್ಗಾ-ಮುಗ್ಗಾ ಥಳಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪಟ್ಟಣದಲ್ಲಿ ಘಟನೆ ನಡೆದಿದೆ.
ಅಪ್ರಾಪ್ತ ಹಿಂದೂ ಬಾಲಕಿಯ ಜತೆ ಆಲ್ದೂರು ಪಟ್ಟಣದ ಸಂತೆ ಮೈದಾನದ ನಿವಾಸಿ ರೂಮನ್ ಎಂಬಾತ ಸಲಿಗೆ ಬೆಳೆಸಿಕೊಂಡಿದ್ದ. ರೂಮನ್ ಡಾನ್ಸ್ ಮಾಸ್ಟರ್ ಆಗಿದ್ದು, ಪ್ರೀತಿಯ ಹೆಸರಿನಲ್ಲಿ ಈತ ಲವ್ ಜಿಹಾದ್ ನಡೆಸುತ್ತಿದ್ದಾನೆ ಎಂಬುದು ಹಿಂದೂ ಕಾರ್ಯಕರ್ತರು ಆರೋಪಿಸಿದ್ದಾರೆ.
ಇದನ್ನೂ ಓದಿ: Murder Case : ಜಮೀನು ಮಾರಾಟದಲ್ಲಿ ಕಿರಿಕ್; ಮಾರಣಾಂತಿಕ ಹಲ್ಲೆಗೆ ರಕ್ತಕಾರಿ ಸತ್ತ ಯುವಕ
ಚಿಕ್ಕಮಗಳೂರು ತಾಲೂಕಿನ ದೊಡ್ಡ ಮಾಗರವಳ್ಳಿ ಗ್ರಾಮದ ಹಿಂದೂ ಬಾಲಕಿಯನ್ನು ಪ್ರೀತಿಯ ಹೆಸರಲ್ಲಿ ಪುಸಲಾಯಿಸಿದ್ದಾನೆ ಎಂದು ಕಿಡಿಕಾರಿದ್ದಾರೆ. ರೂಮನ್ ಮೇಲೆ ಹಲ್ಲೆ ನಡೆಸಿದ ಕಾರಣಕ್ಕೆ ಘಟನೆ ಸಂಬಂಧ ವಿಎಚ್‌ಪಿ (VHP) ಜಿಲ್ಲಾ ಸಂಚಾಲಕ ಸೇರಿ 7 ಹಿಂದೂ ಕಾರ್ಯಕರ್ತರನ್ನು ಆಲ್ದೂರು ಪೊಲೀಸರು ಬಂಧಿಸಿದ್ದಾರೆ.
ಇತ್ತ ಬಾಲಕಿಯ ಪೋಷಕರಿಂದ ರೂಮನ್ ವಿರುದ್ಧ ಅಪ್ರಾಪ್ತೆಯ ಅಪಹರಣ ಯತ್ನ, ಪ್ರೀತಿ ವಂಚನೆ ಎಂದು ದೂರು ದಾಖಲಿಸಿದ್ದಾರೆ. ಘಟನೆ ಸಂಬಂಧ ರೂಮನ್ ಕುಟುಂಬಸ್ಥರಿಂದಲೂ ಪ್ರತಿ ದೂರು ದಾಖಲಾಗಿದೆ. ಇನ್ನೂ ಮುನ್ನೆಚ್ಚರಿಕಾ ಕ್ರಮವಾಗಿ ಆಲ್ದೂರು ಪಟ್ಟಣದಲ್ಲಿ ಕೆಎಸ್‌ಆರ್‌ಪಿ (KSRP) ನಿಯೋಜನೆ ಮಾಡಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ