Site icon Vistara News

Road Accident : ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಕಾರು; ತಾಯಿ- ಮಗ ಸ್ಥಳದಲ್ಲೇ ಮೃತ್ಯು

Road accident near Chikkamagaluru

ಚಿಕ್ಕಮಗಳೂರು: ನಿಯಂತ್ರಣ ತಪ್ಪಿ ಕಾರೊಂದು ಸೇತುವೆಗೆ ಡಿಕ್ಕಿ (Car Rams into Bridge) ಹೊಡೆದ ಪರಿಣಾಮವಾಗಿ (Road accident) ಕಾರಿನಲ್ಲಿದ್ದ ತಾಯಿ ಮತ್ತು ಮಗ ಇಬ್ಬರು ಸ್ಥಳದಲ್ಲೇ ಮೃತಪಟ್ಟ (Mother and son dies in accident) ದಾರುಣ ಘಟನೆ ನಡೆದಿದೆ.

ಚಿಕ್ಕಮಗಳೂರು (Chikkamagaluru news) ತಾಲೂಕಿನ ಕಣಿವೆ ಕ್ರಾಸ್ ಬಳಿ ನಡೆದ ಘಟನೆಯಲ್ಲಿ ಮೃತಪಟ್ಟವರನ್ನು ಚೆನ್ನಮ್ಮ (67) ಮತ್ತು ಅವರ ಮಗ ನಿರಂಜನ್‌ (42) ಎಂದು ಗುರುತಿಸಲಾಗಿದೆ. ಇವರ ಜತೆಗಿದ್ದ ಇನ್ನೊಬ್ಬ ಮಹಿಳೆಗೆ ಗಂಭೀರ ಗಾಯಗಳಾಗಿವೆ.

ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆ ನಿವಾಸಿಯಾಗಿರುವ ನಿರಂಜನ್‌ ಅವರು ತಮ್ಮ ತಾಯಿಯನ್ನು ಕರೆದುಕೊಂಡು ಚಿಕ್ಕಮಗಳೂರಿನಿಂದ ಕಡೂರಿಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಕಾರು ಸೇತುವೆಗೆ ಡಿಕ್ಕಿ ಹೊಡೆದು ಅಲ್ಲೇ ಸಿಕ್ಕಿಹಾಕಿಕೊಂಡಿದೆ. ಡಿಕ್ಕಿಯ ಹೊಡೆತಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ತಾಯಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡರು.

ಕಾರಿನಲ್ಲಿ ಕಾರಿನಲ್ಲಿ ಸಿಲುಕಿದ್ದ ನಿರಂಜನ್ ಅವರನ್ನು ರಕ್ಷಿಸಲು ಸ್ಥಳೀಯರು ಹರಸಾಹಸ ಮಾಡಿದರು. ಹಾಗೆ ಹೊರತೆಗೆದ ಬಳಿಕ ಆಸ್ಪತ್ರೆಗೆ ಸಾಗಿಸಿದರು. ಆದರೆ, ಸ್ವಲ್ಪ ದೂರ ಹೋಗುವಷ್ಟರಲ್ಲೇ ಪ್ರಾಣಪಕ್ಷಿ ಹಾರಿಹೋಗಿದೆ.

ನಿರಂಜನ್‌ ಅವರು ಖಾಸಗಿ ಆಸ್ಪತ್ರೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಅಮ್ಮನ ಜತೆಗೆ ಹೋಗುವಾಗಲೇ ದುರಂತ ಸಂಭವಿಸಿದ್ದನ್ನು ನೋಡಿ ಮನೆಯವರು ಕಣ್ಣೀರು ಹಾಕುತ್ತಿದ್ದಾರೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ. ಸಿಟ್ಟಿಗೆದ್ದ ಸ್ಥಳೀಯರು ಬಸ್ಸಿನ ಮೇಲೆ ಕಲ್ಲೆಸೆದು ಗಾಜುಗಳನ್ನು ಪುಡಿಗಟ್ಟಿ ತಮ್ಮ ಆಕ್ರೋಶವನ್ನು ತೋರಿಸಿದ್ದಾರೆ.

ಇದನ್ನೂ ಓದಿ : Illicit Relationship : ಈ ಪೋಲೀಸಪ್ಪನಿಗೆ ಅಕ್ರಮ ಸಂಬಂಧ ಒಂದಲ್ಲ, ಎರಡಲ್ಲ!; ಪತ್ನಿ ದೂರಿಗೆ ಇನ್ನೊಬ್ಬಳ ಬೆಂಬಲ!

ರಸ್ತೆ ಬದಿಯಲ್ಲಿ ನಿಂತಿದ್ದ ಮಗುವನ್ನು ಬಲಿ ಪಡೆದ ಟ್ರ್ಯಾಕ್ಟರ್‌

ದೊಡ್ಡಬಳ್ಳಾಪುರ: ಬೆಂಗಳೂರು ಮತ್ತು ಹೊರವಲಯದಲ್ಲಿ ಅಪಘಾತಗಳು (Road accident) ಒಂದೇ ಸಮನೆ ಹೆಚ್ಚುತ್ತಿವೆ, ಜೀವ ಬಲಿಯೂ ಜಾಸ್ತಿಯಾಗುತ್ತಿದೆ ಎಂಬ ಆಪಾದನೆಗಳ ನಡುವೆಯೇ ದೊಡ್ಡ ಬಳ್ಳಾಪುರದಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ಪುಟ್ಟ ಮಗುವೊಂದನ್ನು (Child dead) ಟ್ರ್ಯಾಕ್ಟರ್‌ ಬಲಿ ಪಡೆದಿದೆ.

ದೊಡ್ಡಬಳ್ಳಾಪುರದ ಡಿಕ್ರಾಸ್ ರಸ್ತೆಯ ಅಯ್ಯಪ್ಪಸ್ವಾಮಿ ದೇವಾಲಯದ ಬಳಿ ಘಟನೆಯಲ್ಲಿ ಮೃತಪಟ್ಟ ಮಗುವಿನ ಹೆಸರು ದರ್ಶನ್‌. ಕೇವಲ ಮೂರು ವರ್ಷ. ತೀವ್ರವಾಗಿ ಗಾಯಗೊಂಡ ಮಗು ಮತ್ತು ಅಜ್ಜಿ ಇಬ್ಬರನ್ನೂ ಸಮೀಪದ ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಗೆ ಒಯ್ಯಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. ಅಜ್ಜಿ ಕಮಲೇಶ್‌ ದೇವಿ ಅವರಿಗೂ ಗಂಭೀರ ಗಾಯಗಳಾಗಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿ ನಡೆದಿರುವ ಘಟನೆಯ ಬಗ್ಗೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version