Site icon Vistara News

Child Death : ಟಿಪ್ಪರ್‌ ಅಟ್ಟಹಾಸ; 4 ವರ್ಷದ ಪುಟ್ಟ ಮಗು ಚಕ್ರದಡಿ ಸಿಲುಕಿ ಸಾವು

Child death Belagavi

ಚಿಕ್ಕೋಡಿ: ನಾಲ್ಕು ವರ್ಷದ ಪುಟ್ಟ ಮಗುವೊಂದು (Four year old Child) ಟಿಪ್ಪರ್ ವಾಹನದಡಿ (Tipper accident) ಸಿಲುಕಿ ದಾರುಣವಾಗಿ ಪ್ರಾಣ ಕಳೆದುಕೊಂಡ (Child death) ಘಟನೆ ಬೆಳಗಾವಿ ಜಿಲ್ಲೆಯ (Belagavi news) ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ನಡೆದಿದೆ.

ಅದ್ವೈತ್ ಅಕ್ಷಯ್ ನಾಶಿಪುಡಿ (4) ಚಕ್ರದಡಿ ಸಿಲುಕಿ ಮೃತಪಟ್ಟ ಪುಟ್ಟ ಮಗು. ರಸ್ತೆ ಪಕ್ಕದಲ್ಲಿ ಆಟವಾಡುತ್ತಿದ್ದಾಗ ಒಮ್ಮೆಗೇ ವಾಹನದ ಹಿಂಬದಿ ಚಕ್ರಕ್ಕೆ ಸಿಲುಕಿ ಮಗು ಮೃತಪಟ್ಟಿದೆ. ಇಸ್ಲಾಂಪುರ ಗ್ರಾಮದ ಶಾಬಂದರ್ ವಂಟಮೂರಿ ರಸ್ತೆಯಲ್ಲಿ ವೇಗವಾಗಿ ಬಂದ ಟಿಪ್ಪರ್‌ ಮಗುವನ್ನು ಬಲಿ ಪಡೆದುಕೊಂಡಿದೆ.

ಸ್ಥಳಕ್ಕೆ ಯಮಕನಮರಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಸಾವಿರಾರು ಜನರು ನೆರೆದಿದ್ದು, ಮಗುವಿನ ಹೆತ್ತವರು ಮತ್ತು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಆಟವಾಡುತ್ತಿದ್ದ ಪುಟ್ಟ ಮಗುವನ್ನು ತಂದು ಕೊಡಿ ಎಂದು ಹೆತ್ತವರು ಮತ್ತು ಅಜ್ಜಿ ಕಣ್ಣೀರು ಹಾಕುತ್ತಿರುವುದು ಎಂಥವರನ್ನಾದರೂ ಕರಗಿಸುತ್ತದೆ.

ಇದನ್ನೂ ಓದಿ : Road Accident: ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರ ಸಾವು

ಹೆದ್ದಾರಿಯಲ್ಲೇ ಪಲ್ಟಿಯಾದ ಕಾರು: ಸ್ಥಳದಲ್ಲೇ ಒಬ್ಬರು ಸಾವು

ಮಂಡ್ಯ: ಕಾರೊಂದು ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲೇ ಉರುಳಿ ಬಿದ್ದ (Road Accident) ಪರಿಣಾಮವಾಗಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ನಿಡಘಟ್ಟ ಬಳಿಯ ಬೆಂಗಳೂರು -ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಘಟನೆ ನಡೆದಿದೆ. ಮೃತರನ್ನು ಕೋಲಾರ ಜಿಲ್ಲೆಯ ಬಂಗಾರಪೇಟೆ ನಿವಾಸಿ ಫೈರೋಜ್ (36) ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಟಾಟಾ ಸುಮೋ ನಿಡಘಟ್ಟ ಬಳಿ ತೆರಳುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಮೃತ ಫೈರೋಜ್ ಸಹೋದರ ಅಫ್ರೋಜ್‌ಗೆ ಕೂಡಾ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಅಫ್ರೋಜ್‌ಗೆ ಮಂಡ್ಯ ಮಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಟಾಟಾ ಸುಮೋ ವಾಹನದಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಗುಜರಿ ಕಬ್ಬಿಣವನ್ನು ಸಾಗಿಸಲಾಗುತ್ತಿತ್ತು. ಸ್ಥಳಕ್ಕೆ ಮದ್ದೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version