ಚಿಕ್ಕೋಡಿ: ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಬಾಲಕನೊರ್ವ ಮೃತಪಟ್ಟಿರುವ ದಾರುಣ (Drowned in water) ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಜೋಡಕುರಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಅರುಣ ಖದ್ದಿ (4) ಮೃತ ದುರ್ದೈವಿ. ಘಟಪ್ರಭಾ ಎಡದಂಡೆ ಕಾಲುವೆಯಲ್ಲಿ ಆಟವಾಡಲು ಹೋದ ಅರುಣ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾನೆ.
ಭಾರಿ ಮಳೆ ಹಿನ್ನೆಲೆಯಲ್ಲಿ ಕಾಲುವೆಗೆ ನೀರು ಬಿಡಲಾಗಿತ್ತು. ಕಾಲುವೆಗೆ ಬಿದ್ದಾಗ ನೀರಿನಲ್ಲಿ ಮುಳುಗಿ ಬಾಲಕ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಚಿಕ್ಕೋಡಿ ಪೊಲೀಸರು ಪ್ರಕರಣ ದಾಖಲಾಗಿದೆ.
ದಾವಣಗೆರೆಯಲ್ಲಿ ವಿದ್ಯುತ್ ತಗುಲಿ ವ್ಯಕ್ತಿ ಸಾವು
ವಿದ್ಯುತ್ ತಗುಲಿ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಕಡರನಾಯಕನಹಳ್ಳಿಯ ಡಿ ಎಸ್ ಸುರೇಶ್ (40) ಮೃತ ದುರ್ದೈವಿ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕಡರನಾಯಕನಹಳ್ಳಿಯಲ್ಲಿ ಘಟನೆ ನಡೆದಿದೆ. ಜಮೀನಿನಲ್ಲಿ ಪಂಪ್ ಸೆಟ್ ಚಾಲನೆ ಮಾಡುವಾಗ ಈ ಘಟನೆ ನಡೆದಿದೆ. ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.
ಇದನ್ನೂ ಓದಿ: Road Accident: ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಕ್ಲೀನರ್ ಸಾವು; ಬೈಕ್ ಅಪಘಾತದಲ್ಲಿ ಸವಾರರಿಬ್ಬರು ಮೃತ್ಯು
ರಸ್ತೆ ಗುಂಡಿಗೆ ಗ್ರಾಪಂ ಸದಸ್ಯ ಬಲಿ
ಬೆಳಗಾವಿ: ರಾಜ್ಯ ಹೆದ್ದಾರಿಯೋ ಗುಂಡಿಗಳ (Pot holes) ರಹದಾರಿಯೋ? ಎಂಬ ಅನುಮಾನ ಶುರುವಾಗಿದೆ. ಖಾನಾಪುರದ ರಾಜ್ಯ ಹೆದ್ದಾರಿಯಲ್ಲಿ ಗುಂಡಿಗಳ ದರ್ಬಾರ್ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿಯವರ ಸ್ವಂತ ಜಿಲ್ಲೆಯಲ್ಲಿಯೇ ಇಂತಹ ಅದ್ವಾನ ಕಂಡು ಬಂದಿದೆ.
ಮೊಳಕಾಲುದ್ದ ಗುಂಡಿಗಳು ಬಿದ್ದರೂ ಸಹ ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಇಟಗಿ ಗ್ರಾಮ ಪಂಚಾಯತ್ ಸದಸ್ಯ ಭೀಮಪ್ಪ ಭೋವಿ ಮೃತ ದುರ್ದೈವಿ. ಭೀಮಪ್ಪ ಬೈಕ್ ಓಡಿಸಿಕೊಂಡು ಬರುವಾಗ ರಸ್ತೆ ಗುಂಡಿ ಮಧ್ಯೆ ನಿಯಂತ್ರಣ ಸಿಗದೆ ಕೆಳಗೆ ಬಿದ್ದು ಪ್ರಾಣ ತೆತ್ತಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಬಿದ್ದು ಭೀಮಪ್ಪ ಮೊಳಕಾಲು ಪೆಟ್ಟು ಮಾಡಿಕೊಂಡಿದ್ದರು.
ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಭೀಮಪ್ಪ ಮೃತಪಟ್ಟಿದ್ದಾರೆ. ಇತ್ತ ಅಪಘಾತಗಳು ಜರುಗುತ್ತಲೇ ಎಚ್ಚೆತ್ತ ನಂದಗಡ ಪೊಲೀಸರು ಇಟ್ಟಿಗೆಗಳನ್ನು ಗಾಡಿಯಲ್ಲಿ ತಂದು ಗುಂಡಿ ಮುಚ್ಚಿದ್ದಾರೆ. ಖಾನಾಪುರದಿಂದ ಲಿಂಗನಮಠದವರೆಗೆ ಸಂಪೂರ್ಣ ರಸ್ತೆ ಹದಗೆಟ್ಟಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ