ಚಿಕ್ಕೋಡಿ: ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಸರ್ಕಾರಿ ಬಸ್‌ವೊಂದು (Road Accident) ಹರಿದಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಗಲಗಲಿ ಆಸ್ಪತ್ರೆ ಬಳಿ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ಸುನೀಲ್ ಬಂಡರಗರ್(10) ಬಾಲಕ ಮೃತ ದುರ್ದೈವಿ.
ಸುನೀಲ್ ಟ್ಯೂಷನ್ ಮುಗಿಸಿ ಮೂತ್ರ ವಿಸರ್ಜನೆಗೆಂದು ಗೆಳೆಯರ ಜತೆಗೆ ಹೊರ ಬಂದಿದ್ದ. ಈ ವೇಳೆ ಗೆಳೆಯರೊಟ್ಟಿಗೆ ರಸ್ತೆ ಬದಿ ನಿಂತಿದ್ದ. ಈ ವೇಳಿ ಕಿರಿದಾದ ರಸ್ತೆಯಲ್ಲಿ ವೇಗವಾಗಿ ಬಂದಿದ್ದ ಬಸ್, ಮಕ್ಕಳು ನಿಂತಿದ್ದನ್ನು ಗಮನಿಸಿದರೂ ಮಕ್ಕಳ ಮೇಲೆ ಚಲಾಯಿಸಿದ್ದಾನೆ. ಈ ವೇಳೆ ಐದಾರು ಮಕ್ಕಳು ಹಿಂದಕ್ಕೆ ಸರಿದಿದ್ದರು. ಆದರೆ ಸುನೀಲ್ ತಿರುಗಿ ನೋಡುವಷ್ಟರಲ್ಲಿ ಬಸ್ ಡಿಕ್ಕಿ ಹೊಡೆದು ಆತನ ಮೇಲೆ ಹರಿದಿದೆ. ಪರಿಣಾಮ ಬಾಲಕ ನಜ್ಜುಗುಜ್ಜಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಾಲಕನ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಸರ್ಕಾರಿ ಬಸ್ ಅಥಣಿಯಿಂದ ಕಾರವಾರ ಹೋಗುತ್ತಿದ್ದಾಗ ಈ ಅಪಘಾತ ನಡೆದಿದೆ. ಭೀಕರ ರಸ್ತೆ ಅಪಘಾತ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸಿಲಿಂಡರ್ ಸ್ಫೋಟಕ್ಕೆ ನಾಲ್ವರು ಗಂಭೀರ
ಗೃಹ ಬಳಕೆ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ರೊಟ್ಟಿಗವಾಡ ಗ್ರಾಮದಲ್ಲಿ ಘಟನೆ ನಡೆದಿದೆ. ಸಿದ್ದಲಿಂಗಯ್ಯ ಹಿರೆಮಠ(43), ವಿಶಾಲಾ ಹಿರೆಮಠ (35), ಶ್ರಿಪಾದಯ್ಯ ಹಿರೆಮಠ (17), ನಿರ್ಮಲಾ ಹಿರೆಮಠಗೆ ಗಂಭೀರ ಗಾಯಗೊಂಡವರು. ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆಗೂ ಹಾನಿಯಾಗಿದೆ. ಗಾಯಾಳುಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ