ಚಿಕ್ಕಬಳ್ಳಾಪುರ: ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ (Self harming) ಮಾಡಿಕೊಂಡಿದ್ದಾರೆ. ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಲಾವಣ್ಯ (30) ಆತ್ಮಹತ್ಯೆಗೆ ಶರಣಾದವರು. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಲಕ್ಕೇಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ.
ವಿಷ ಸೇವಿಸಿ ಅಸ್ವಸ್ಥಳಾಗಿದ್ದ ಲಾವಣ್ಯಳನ್ನು ಚಿಂತಾಮಣಿ ತಾಲೂಕು ಆಸ್ಪತ್ರೆಗೆ ಕುಟುಂಬಸ್ಥರು ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಲಾವಣ್ಯ ಮಂಜುನಾಥ್ ಎಂಬುವರ ಜತೆ ವಿವಾಹವಾಗಿದ್ದರು. 13 ವರ್ಷಗಳ ದಾಂಪತ್ಯಕ್ಕೆ ಇಬ್ಬರು ಮಕ್ಕಳನ್ನು ಹೊಂದಿದ್ದರು.
ಆದರೆ ಇದೀಗ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.
ಚಿಕ್ಕೋಡಿಯಲ್ಲಿ ಸಾಲಬಾಧೆಗೆ ಯುವಕ ಆತ್ಮಹತ್ಯೆ
ಸಾಲಬಾಧೆ ಯುವಕನೊರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಣಗಲಾ ಗ್ರಾಮದಲ್ಲಿ ಘಟನೆ ನಡೆದಿದೆ. ಹರೀಶ ಸಂಜಯ ಭೋವಿ (25) ಮೃತಪಟ್ಟವನು.
ಸಾಲಬಾಧೆ ತಾಳಲಾರದೆ ಮನನೊಂದಿದ್ದ ಹರೀಶ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಲ ತಿರಿಸಲಾಗದೆ ಮನನೊಂದು ಮನೆಯಲ್ಲಿ ನೇಣು ಬೀಗಿದುಕೊಂಡಿದ್ದಾನೆ. ಮೃತನ ಪತ್ನಿ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Karkala Physical Abuse: ಹಿಂದೂ ಯುವತಿಗೆ ಮತ್ತು ಬೆರೆಸುವ ಔಷಧ ಕುಡಿಸಿ ಮುಸ್ಲಿಂ ಯುವಕನಿಂದ ಅತ್ಯಾಚಾರ, ಕಾರ್ಕಳ ಉದ್ವಿಗ್ನ
ಪ್ರಿನ್ಸಿಪಾಲ್ ಬೈದರೆಂದು 3ನೇ ಅಂತಸ್ತಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
ಬೆಂಗಳೂರು: ಖಾಸಗಿ ಶಾಲೆಯ ವಿದ್ಯಾರ್ಥಿನಿಯೊಬ್ಬಳು ಮೂರನೇ ಅಂತಸ್ತಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ (Self Harming) ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಪೂಜಿ ನಗರದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ಚಿಕಿತ್ಸೆಗಾಗಿ ಇಂದಿರಾಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದ ಮೇಲಿಂದ ಯುವತಿ ಜಿಗಿಯುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ.
ಖಾಸಗಿ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ಮಧ್ಯಾಹ್ನ 3 ಗಂಟೆ ಸುಮಾರಿಗೆ 3ನೇ ಅಂತಸ್ತಿನಿಂದ ಏಕಾಏಕಿ ಜಿಗಿದಿದ್ದಾಳೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ಇಂದಿರಾಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಾಂಶುಪಾಲರು ಬೈದರು ಎಂಬ ಕಾರಣಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಕುರಿತು ಬ್ಯಾಟರಾಯನಪುರ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ವಿದ್ಯಾರ್ಥಿನಿ ತಾಯಿ ಸಲ್ಮಾ ಪ್ರತಿಕ್ರಿಯಿಸಿ, ಮಗಳು ಚೆನ್ನಾಗಿ ಓದುತ್ತಾ ಇದ್ದಳು, 9ನೇ ತರಗತಿಯಲ್ಲಿ 99.9 ಪರ್ಸೆಂಟ್ ಬಂದಿತ್ತು. ಡಾಕ್ಟರ್ ಆಗಬೇಕು ಅಂತ ಕನಸು ಕಂಡಿದ್ದಳು ಅಂತ ಕಣ್ಣೀರು ಹಾಕಿದ್ದಾರೆ.
ಬಾಲಕಿಯ ಸಹೋದರ ಶಹಭಾಜ್ ಮಾತನಾಡಿ, ಘಟನೆ ನಡೆದು ಎರಡು ಗಂಟೆ ಆದಮೇಲೆ ನಮಗೆ ಗೊತ್ತಾಯಿತು.
ಹೆಡ್ ಮೇಡಮ್ ಒಂದು ತಿಂಗಳಿನಿಂದ ಕ್ಯಾಮೆರಾದಲ್ಲಿ ಏನೋ ಚೆಕ್ ಮಾಡುತ್ತಿದ್ದರಂತೆ. ಮೂರ್ನಾಲ್ಕು ವಿದ್ಯಾರ್ಥಿನಿಯರ ಕರೆದು ಬೈದಿದ್ದರಂತೆ. ಹೀಗಾಗಿ ಸಹೋದರಿ ಕಟ್ಟಡದ ಮೇಲಿಂದ ಕೆಳಗೆ ಬಿದ್ದಿದ್ದಾಳೆ. ಫಸ್ಟ್ ಕ್ಲಾಸ್‌ನಲ್ಲಿ ಓದುತ್ತಿದ್ದಳು, ಈಗ ಎಮರ್ಜೆನ್ಸಿ ವಾರ್ಡ್‌ನಲ್ಲಿ ಇಟ್ಟಿದ್ದಾರೆ. ವೈದ್ಯರು 48 ಗಂಟೆ ಕಳೆಯುವವರೆಗೆ ಏನೂ ಹೇಳಲು ಸಾಧ್ಯವಾಗದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ. ನಮಗೆ ನ್ಯಾಯ ಸಿಗಬೇಕು, ಈ ರೀತಿ ಬೇರೆ ಯಾರಿಗೂ ಆಗಬಾರದು ಎಂದಿದ್ದಾರೆ.
ಬಾಲ್ಕನಿಯಿಂದ ಬಿದ್ದು 3 ವರ್ಷದ ಬಾಲಕಿ ದಾರುಣ ಸಾವು; ಆಘಾತಕಾರಿ ವಿಡಿಯೊ
ನವದೆಹಲಿ: ಪೋಷಕರು ಮಕ್ಕಳ ಬಗ್ಗೆ ನಿಗಾ ಇಡಬೇಕು. ಅವರು ಆಟವಾಡುವಾಗ ಅವರ ಪಾಡಿಗೆ ಅವರನ್ನು ಬಿಡುವಂತಹ ತಪ್ಪುಗಳನ್ನು ಮಾಡಬೇಡಿ. ಇದರಿಂದ ಅನಾಹುತಗಳೇ ಸಂಭವಿಸುತ್ತವೆ. ಅಷ್ಟೆ ಅಲ್ಲದೇ ಮಕ್ಕಳನ್ನು ಮನೆಯ ಬಾಲ್ಕನಿಯಲ್ಲಿ ಆಡಲು ಬಿಡುವ ತಾಯಂದಿರು ಅವರು ಸುರಕ್ಷಿತವಾಗಿರುತ್ತಾರೆ ಎಂದು ಭಾವಿಸುತ್ತಾರೆ. ಆದರೆ ಇದು ತುಂಬಾ ಅಪಾಯಕಾರಿ ಎಂಬುದನ್ನು ಮೊದಲು ತಿಳಿಯಿರಿ. ಪಶ್ಚಿಮ ದೆಹಲಿಯ ಸಾಗರ್‌ಪುರ ಪ್ರದೇಶದಲ್ಲಿ ಅಪಾರ್ಟ್‍ಮೆಂಟ್ ಒಂದರ ಮೂರನೇ ಮಹಡಿಯಿಂದ ಬಿದ್ದು ಮೂರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ನಡೆದಿದೆ. ಇಡೀ ಘಟನೆಯು ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿಗಳಲ್ಲಿ ಸೆರೆಯಾಗಿದೆ. ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.
ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮಗು ಇದ್ದಕ್ಕಿದ್ದಂತೆ ಕೆಳಗಿನ ಬೀದಿಗೆ ಬಿದ್ದಿದೆ. ಸ್ವಲ್ಪ ಹೊತ್ತಿನ ನಂತರ, ಮಹಿಳೆಯೊಬ್ಬಳು ರಕ್ತದ ಮಡುವಿನಲ್ಲಿ ಬಿದ್ದ ಮಗುವನ್ನು ಕಂಡು ಭಯಭೀತಳಾಗಿ ಮಗುವಿನ ಬಳಿ ಓಡಿಬರುತ್ತಾಳೆ. ಸ್ವಲ್ಪ ಸಮಯದ ನಂತರ ಬಾಲಕಿಯ ಕುಟುಂಬದವರು ಘಟನಾ ಸ್ಥಳಕ್ಕೆ ಬರುತ್ತಾರೆ. ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ವೈದ್ಯರು ಅವಳನ್ನು ಉಳಿಸಲು ಸಾಧ್ಯವಾಗಲಿಲ್ಲ. ಮಗು ಸ್ಥಳದಲ್ಲೇ ಸಾವನಪ್ಪಿದೆ ಎಂದು ವೈದ್ಯರು ಕೈ ಚೆಲ್ಲಿದರು.
Delhi Sagarpur Incident
— Bhambrisahil94🇮🇳 (@Bhambrisahil941) August 22, 2024
Delhi Police- As per statements of family on 21/08/2024, she was fetching clothes hanging on the rope of balcony for drying where she slipped, fell down and sustained injuries. was declared brought dead.
CCTV Footage pic.twitter.com/GLVfG2NzHs
ಬಾಲಕಿ ಮೂರನೇ ಮಹಡಿಯಿಂದ ಬಿದ್ದಿದ್ದು ಹೇಗೆ ಎಂಬುದನ್ನು ಕಂಡುಹಿಡಿಯಲು ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಬಾಲ್ಕನಿಯಲ್ಲಿ ಒಬ್ಬಂಟಿಯಾಗಿ ಆಡುತ್ತಿದ್ದಾಗ ಬಾಲಕಿ ಆಕಸ್ಮಿಕವಾಗಿ ಬಿದ್ದಿರಬಹುದು. ಘಟನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ಸಂಗ್ರಹಿಸಲು ಪೊಲೀಸರು ಆ ಪ್ರದೇಶದ ಇತರ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಕಳೆದ ಡಿಸೆಂಬರ್ ನಲ್ಲಿ ನೋಯ್ಡಾದಲ್ಲಿ ನಡೆದ ಇದೇ ರೀತಿಯ ಘಟನೆಯಲ್ಲಿ, ಮೂರು ವರ್ಷದ ಬಾಲಕಿ ಆಟವಾಡುವಾಗ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಳು.
ಮತ್ತೊಂದು ಘಟನೆಯಲ್ಲಿ, ದೆಹಲಿಯ ಜಫ್ರಾಬಾದ್ ಪ್ರದೇಶದಲ್ಲಿ ಮನೆಯ ಕಿಟಕಿಯ ಬಳಿ ಆಟವಾಡುತ್ತಿದ್ದ ಮಗು ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿತ್ತು. ಬ್ಯಾಲೆನ್ಸ್ ಕಳೆದುಕೊಂಡು ಮಗು ಕೆಳಗೆ ಬಿದ್ದಿತ್ತು. ಮಗುವನ್ನು ಉಳಿಸಲು ವೈದ್ಯರು ಎಲ್ಲ ಪ್ರಯತ್ನಗಳನ್ನು ಮಾಡಿದರೂ ಸಾಧ್ಯವಾಗಿರಲಿಲ್ಲ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ