Site icon Vistara News

Child Dead In Ambulance : ಸಕಾಲಕ್ಕೆ ಸಿಗದ ಚಿಕಿತ್ಸೆ; ಆಂಬ್ಯುಲೆನ್ಸ್‌ನಲ್ಲೇ ಗರ್ಭಿಣಿಗೆ ಹೆರಿಗೆ, ಮಗು ಸಾವು

#image_title

ನೆಲಮಂಗಲ: ಐದಾರು ಆಸ್ಪತ್ರೆಗಳನ್ನು ಸುತ್ತಾಡಿದರೂ ಸೂಕ್ತ ಸಮಯಕ್ಕೆ ಗರ್ಭಿಣಿಗೆ ಚಿಕಿತ್ಸೆ ಸಿಗದೆ (Child Dead In Ambulance) ಆಂಬ್ಯುಲೆನ್ಸ್‌ನಲ್ಲೇ ಹೆರಿಗೆ ಆಗಿದ್ದು ಮಗುವು ಮೃತಪಟ್ಟಿದೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಸಾಕ್ಷಿ ಹಳ್ಳಿ ನಿವಾಸಿ ಅರ್ಪಿತಾಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಪತಿ ಮಂಜುನಾಥ್‌ ಕೂಡಲೇ ಆಂಬ್ಯುಲೆನ್ಸ್‌ನೊಂದಿಗೆ ಶಿರಾ ಸಾರ್ವಜನಿಕ ಆಸ್ಪತ್ರೆಗೆ ಕರೆದುಹೋಗಿದ್ದಾರೆ.

ಆದರೆ ಅಲ್ಲಿ ಚಿಕಿತ್ಸೆ ಸಿಗದ ಕಾರಣಕ್ಕೆ ನಾಲ್ಕೈದು ಆಸ್ಪತ್ರೆಗೆ ಅಲೆದಾಡಿದ್ದಾರೆ. ಬಳಿಕ ತುಮಕೂರು ಜಿಲ್ಲಾ ಆಸ್ಪತ್ರೆಯಿಂದ ವಾಣಿವಿಲಾಸ ಆಸ್ಪತ್ರೆಗೆ ಬರುವ ಮಾರ್ಗ ಮಧ್ಯೆ ಆಂಬ್ಯುಲೆನ್ಸ್‌ನಲ್ಲಿಯೇ ಅರ್ಪಿತಾಗೆ ಹೆರಿಗೆ ಆಗಿದೆ. ಆದರೆ ದುರಾದೃಷ್ಟವಾಶತ್‌ ಮಗು ಸಾವನ್ನಪ್ಪಿದೆ. ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಮಗು ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ.

ಇದನ್ನೂ ಓದಿ: Accident In Chhattisgarh: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ, ಏಳು ಶಾಲಾ ಮಕ್ಕಳ ಸಾವು

ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದ ಕಾರಣಕ್ಕೆ ಪತಿ ಮಂಜುನಾಥ್‌ ಹಾಗೂ ಸಂಬಂಧಿಕರು ಕಿಡಿಕಾರಿದ್ದಾರೆ. ಯಾವ ವೈದ್ಯರು ತುರ್ತು ಸಂದರ್ಭದಲ್ಲಿ ಸರಿಯಾಗಿ ಸ್ಪಂದಿಸಲಿಲ್ಲ ಎಂದು ಆರೋಪಿಸಿದ್ದಾರೆ. ಹಣ ಕೊಟ್ಟರಷ್ಟೇ ಚಿಕಿತ್ಸೆ ಬಡವರು ಇಂತಹ ಪರಿಸ್ಥಿತಿಯಲ್ಲಿ ಏನು ಮಾಡಬೇಕೆಂದು ಅಸಮಾಧಾನ ಹೊರಹಾಕಿದ್ದಾರೆ. ಇನ್ನು ಅರ್ಪಿತಾ ಸ್ಥಿತಿ ಚಿಂತಾಜನಕವಾಗಿದ್ದು, ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ರವಾನಿಸಲಾಗಿದೆ.

Exit mobile version