Site icon Vistara News

Child Death | ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಮಗು ಸಾವು; ವೈದ್ಯರು, ಸಿಬ್ಬಂದಿ ವಿರುದ್ಧ ಪೋಷಕರ ಆಕ್ರೋಶ

Child Death

ಚಿಕ್ಕಮಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಗು, ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಮೃತಪಟ್ಟಿದೆ (Child Death) ಎಂದು ಆರೋಪಿಸಿ ಪೋಷಕರು ಹಾಗೂ ಸಂಬಂಧಿಕರು ನಗರದ ಜಿಲ್ಲಾಸ್ಪತ್ರೆ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ತಾಲೂಕಿನ ಸೂರಾಪುರ ಗ್ರಾಮದ ಮೀನಾಕ್ಷಿ, ಗೋಪಾಲ್ ಎಂಬುವವರು ಅನಾರೋಗ್ಯದ ಹಿನ್ನೆಲೆಯಲ್ಲಿ ನಾಲ್ಕು ತಿಂಗಳ ಗಂಡು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಮಗು ದಿಢೀರ್ ಮೃತಪಟ್ಟಿದೆ. ಹೀಗಾಗಿ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದಲೇ ಮಗು ಕೊನೆಯುಸಿರೆಳೆದಿದೆ ಎಂದು ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈದ್ಯರ ಮಾರ್ಗದರ್ಶನ ಲೆಕ್ಕಿಸದೆ ನರ್ಸ್ ಚಿಕಿತ್ಸೆ ವಿಧಾನ ಬದಲಿಸಿದ್ದೇ ದುರಂತಕ್ಕೆ ಕಾರಣ. ಹೀಗಾಗಿ ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ. ಪ್ರತಿಭಟನೆ ವೇಳೆ ನರ್ಸ್ ಹಾಗೂ ವೈದ್ಯರು ಆಸ್ಪತ್ರೆ ಹಿಂಬಾಗಿಲಿನಿಂದ ಎಸ್ಕೇಪ್‌ ಆಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ | Murder Case | ಅನೈತಿ‌ಕ ಸಂಬಂಧ ಶಂಕೆ; ನಾದಿನಿಯನ್ನು ಕೊಂದು ಶವ ಹೂತಿಟ್ಟ ಬಾವ

Exit mobile version