ಹಾವೇರಿ: ಜಿಲ್ಲೆಯ ಶಿಗ್ಗಾಂವಿಯ ನೀರಲಕಟ್ಟಿ ತಾಂಡಾದಲ್ಲಿ ಕಾಡು ಔಡಲ ಬೀಜ ತಿಂದು 9 ಶಾಲಾ ಮಕ್ಕಳು ಅಸ್ವಸ್ಥರಾಗಿದ್ದು (Children Fall ill), ಅವರನ್ನು ಶಿಗ್ಗಾಂವಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನೀರಲಕಟ್ಟಿ ತಾಂಡಾ ಸರ್ಕಾರಿ ಶಾಲೆಯ ಬಳಿ ಸಿಕ್ಕ ಕಾಡು ಔಡಲ ಬೀಜವನ್ನು ತಿಂದ ಹಿನ್ನೆಲೆಯಲ್ಲಿ ಹೊಟ್ಟೆ ನೋವು, ವಾಂತಿ ಕಾಣಿಸಿಕೊಂಡು ಮಕ್ಕಳು ಅಸ್ವಸ್ಥರಾಗಿದ್ದಾರೆ. ಹೀಗಾಗಿ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಚಲಿಸುತ್ತಿದ್ದ ರೈಲಿನಿಂದ ಕಾಲುಜಾರಿ ಬಿದ್ದು ವ್ಯಕ್ತಿ ಸಾವು
ರಾಮನಗರ: ಚಲಿಸುತ್ತಿದ್ದ ರೈಲಿನಿಂದ ಕಾಲುಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕು ಬೈರಾಪಟ್ಟಣದ ಬಳಿ ನಡೆದಿದೆ. ಕನಕಪುರ ತಾಲೂಕಿನ ಸಾತನೂರು ಹೋಬಳಿಯ ಕೆಂಪೇಗೌಡನದೊಡ್ಡಿ ನಿವಾಸಿ, ನಿವೃತ್ತ ಪೊಲೀಸ್ ಅಧಿಕಾರಿ ಚಿಕ್ಕವೆಂಕಟಯ್ಯ ಮೃತರು. ಘಟನಾ ಸ್ಥಳದಲ್ಲಿ ಸಿಕ್ಕ ಐಡಿ ಕಾರ್ಡ್‌ನಿಂದ ಗುರುತು ಪತ್ತೆಯಾಗಿದೆ. ಮೈಸೂರು-ಬೆಂಗಳೂರು ಮಾರ್ಗದಲ್ಲಿ ಘಟನೆ ನಡೆದಿದ್ದು, ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.