Children's Day: ಮಕ್ಕಳು ಜ್ಞಾನದಾಹಿಗಳಾಗಬೇಕು ಎಂದ ಡಿ.ಕೆ.‌ ಶಿವಕುಮಾರ್ - Vistara News

ಕರ್ನಾಟಕ

Children’s Day: ಮಕ್ಕಳು ಜ್ಞಾನದಾಹಿಗಳಾಗಬೇಕು ಎಂದ ಡಿ.ಕೆ.‌ ಶಿವಕುಮಾರ್

Children’s Day: ಮಕ್ಕಳು ಒಂದೇ ನೆಗೆತಕ್ಕೆ ಆಕಾಶ ಮುಟ್ಟುತ್ತೇನೆ ಎಂದು ಹಾರಬಾರದು, ಅದರ ಬಗ್ಗೆ ಕನಸು ಕಟ್ಟಿಕೊಂಡು, ಶ್ರಮಪಟ್ಟು, ಶಿಸ್ತಿನಿಂದ ಬೆಳೆಯಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಸಲಹೆ ನೀಡಿದ್ದಾರೆ.

VISTARANEWS.COM


on

DK Shivakumar in Childrens day
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರಸ್ತುತ ಕಾಲದಲ್ಲಿ ಸ್ಪರ್ಧೆ ಕೇವಲ ಶಾಲಾಮಟ್ಟದಲ್ಲಿ ಇಲ್ಲ, ಜಾಗತಿಕಮಟ್ಟದಲ್ಲಿದೆ. ಮಕ್ಕಳು (Children’s Day) ಜಾಗತಿಕವಾಗಿ ಯೋಚನೆ ಮಾಡಬೇಕು. ಈ ದೇಶ, ಪ್ರಪಂಚ ವಿಶಾಲವಾಗಿದೆ, ಜ್ಞಾನವೂ ಹೆಚ್ಚು ವಿಸ್ತಾರಗೊಳ್ಳುತ್ತಿದೆ, ಅದಕ್ಕೆ ತಕ್ಕಂತೆ ಮಕ್ಕಳು ಸಹ ಜ್ಞಾನದಾಹಿಗಳಾಗಬೇಕು, ಈಗಿನ ಶಿಕ್ಷಕರು ಮಕ್ಕಳಿಗಿಂತ ಹೆಚ್ಚು ಕಲಿಯಬೇಕಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು.

ನಗರದ ಗಾಂಧಿ ಭವನದಲ್ಲಿ ಜವಾಹರ್ ಬಾಲ್ ಮಂಚ್ ಮಂಗಳವಾರ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆಯಲ್ಲಿ ಮಾತನಾಡಿದ ಅವರು, ಇಡೀ ಪ್ರಪಂಚದಲ್ಲಿ ಅದೃಷ್ಟವಂತರು ಎಂದರೆ ಮಕ್ಕಳು. ಏಕೆಂದರೆ ಅವರ ಪೋಷಕರು ನಾವು ಕಷ್ಟಪಟ್ಟಂತೆ ಮಕ್ಕಳು ಪಡಬಾರದು ಎಂದು ಎಲ್ಲಾ ರೀತಿಯ ಸೌಕರ್ಯ ಮಾಡಿಕೊಡುತ್ತಾರೆ, ಅವರ ಕಷ್ಟಗಳಿಗೆ ನಾವು ಸಾಧನೆ ಮಾಡಿ ಗೌರವ ಸಲ್ಲಿಸಬೇಕು ಎಂದು ತಿಳಿಸಿದರು.

ನಾನು ಭರತನಾಟ್ಯ ಕಲಿಯಲು ಹೋಗಿದ್ದೆ

ನಾನು ವಿದ್ಯಾರ್ಥಿಯಾಗಿದ್ದಾಗ ಎಲ್ಲಾ ಕೆಲಸಗಳು, ಸ್ಪರ್ಧೆಗಳಲ್ಲೂ ಆಸಕ್ತಿಯಿಂದ ಭಾಗವಹಿಸುತ್ತಿದ್ದೆ. ಶಾಲೆಯ ಬ್ಯಾಂಡ್‌ ತಂಡದಲ್ಲಿ ಬೇಸ್‌ ಡ್ರಮ್‌ ನುಡಿಸುತ್ತಿದ್ದೆ. ನಾನು ಮತ್ತು ನನ್ನ ಗೆಳೆಯನೊಬ್ಬ ಚಾಮರಾಜಪೇಟೆಯ ನೃತ್ಯಕಲಾ ನಿಕೇತನ ಎನ್ನುವ ಶಾಲೆಗೆ ಭರತನಾಟ್ಯ ಕಲಿಯಲು ಸೇರಿದ್ದೆವು. ಸಮಯದ ಅಭಾವದ ಕಾರಣ ಕೇವಲ 6- 7 ತಿಂಗಳು ಮಾತ್ರ ಕಲಿಯಲು ಸಾಧ್ಯವಾಯಿತು ಎಂದು ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.

ಇದನ್ನೂ ಓದಿ | IDEATHON 23: ಬ್ರ್ಯಾಂಡ್‌ ಬೆಂಗಳೂರಿಗಾಗಿ ಅಂತರ ಶಾಲಾ ಐಡಿಯಾಥಾನ್ ಸ್ಪರ್ಧೆ

6ನೇ ತರಗತಿಯಲ್ಲಿ ಇದ್ದಾಗ ಮೊದಲ ಚರ್ಚಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ರೈತ ಮೊದಲ- ಸೈನಿಕ ಮೊದಲ ಎನ್ನುವುದು ವಿಷಯವಾಗಿತ್ತು. ಇದರಲ್ಲಿ ಮೊದಲ ಬಹುಮಾನ ಪಡೆದೆ. ಹೀಗೆ ಮಕ್ಕಳು ಅವಕಾಶಗಳನ್ನು ಬಳಸಿಕೊಂಡು ಎತ್ತರಕ್ಕೆ ಬೆಳೆಯಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಏನಾನುಮಂ ಮಾಡು ಕೈಗೆ ದೊರೆತುಜ್ಜುಗವ ।
ನಾನೇನು ಹುಲುಕಡ್ಡಿಯೆಂಬ ನುಡಿ ಬೇಡ ।।
ಹೀನಮಾವುದುಮಿಲ್ಲ ಜಗದ ಗುಡಿಯೂಳಿಗದಿ ।
ತಾಣ ನಿನಗಿಹುದಿಲ್ಲಿ ಮಂಕುತಿಮ್ಮ ಎಂದು ಡಿವಿಜಿ ಅವರು ತಮ್ಮ ಕಗ್ಗದಲ್ಲಿ ಹೇಳುತ್ತಾರೆ.

ಅಂದರೆ ಸಮಾಜದಲ್ಲಿ ನಿಕೃಷ್ಟವಾದುದು ಏನೂ ಇಲ್ಲ, ಸಣ್ಣ ಹುಲ್ಲಿಗೂ ಅದರದ್ದೇ ಆದ ಮಹತ್ವವಿರುತ್ತದೆ. ಗಣೇಶನನ್ನು ಕೂರಿಸುವ ಮೊದಲು ಸಗಣಿ ಉಂಡೆಯ ಮಾಡಿ, ಅದಕ್ಕೆ ಗರಿಕೆ ಹುಲ್ಲು ಸಿಕ್ಕಿಸಿ ಪಿಳ್ಳಾರತಿ ಎಂದು ಪೂಜೆ ಮಾಡುತ್ತೇವೆ. ಗಣೇಶನ ಕೆಳಗೆ ಇಲಿ ಇರುತ್ತದೆ, ಅದಕ್ಕೂ ಗೌರವ ನೀಡುತ್ತೇವೆ, ಯಾವುದನ್ನೂ ನಾವು ನಿರ್ಲಕ್ಷ್ಯ ಮಾಡುವಂತಿಲ್ಲ. ಸಣ್ಣ ಇರುವೆಗಳಿಗೂ ಊಟ ಹಾಕುತ್ತೇವೆ. ಇಲ್ಲಿ ಸಗಣಿ, ಇರುವೆ, ಇಲಿ ಹೀಗೆ ಯಾವುದಕ್ಕೂ ಜಾತಿಯಿಲ್ಲ ಇದು ನಮ್ಮ ಸಂಸ್ಕೃತಿ ಎಂದು ಹೇಳಿದರು.

ಸಾಧನೆಗೆ ಬಡವ- ಶ್ರೀಮಂತ ಎನ್ನುವ ಭೇದವಿಲ್ಲ. ಸಲ್ಲದ ವಿಷಯಗಳಿಗೆ ಮಕ್ಕಳು ತಲೆ ಕೆಡಿಸಿಕೊಳ್ಳಬಾರದು, ಎಂಥಹ ಬಡವನ ಮಗನೂ ಸಾಧನೆಯ ಶಿಖರ ಏರಬಹುದು ಎಂದ ಅವರು, ಮಕ್ಕಳು ನಾಲ್ಕು ʼಡಿʼ ಗಳನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು. “Dream, you should desired for the Dream, you dedicated for the dream, you should Discipline for the Dream” ಒಂದೇ ನೆಗೆತಕ್ಕೆ ಆಕಾಶ ಮುಟ್ಟುತ್ತೇನೆ ಎಂದು ಹಾರಬಾರದು, ಅದರ ಬಗ್ಗೆ ಕನಸು ಕಟ್ಟಿಕೊಂಡು, ಶ್ರಮಪಟ್ಟು, ಶಿಸ್ತಿನಿಂದ ಬೆಳೆಯಬೇಕು ಎಂದು ಸ್ಫೂರ್ತಿಯ ಮಾತುಗಳನ್ನಾಡಿದರು.

ಬೇರುಗಳನ್ನು ಮರೆತರೇ ದಾರಿಯನ್ನು ಮರೆತಂತೆ, ಸ್ಪರ್ಧೆಯ ಮುಖಾಂತರ ನಿಮ್ಮ ಪ್ರತಿಭೆಗಳನ್ನು ಗುರುತಿಸುವ ಕೆಲಸವನ್ನು ಜವಾಹಾರ್ ಬಾಲ್ ಮಂಚ್ ಮಾಡುತ್ತಿದೆ. ನಮ್ಮ ಕಾಲದಲ್ಲಿ ಒಬ್ಬ ಮಂತ್ರಿಯ ಬಳಿ ಪ್ರಶಸ್ತಿ ತೆಗೆದುಕೊಳ್ಳುವ ಅದೃಷ್ಟ ನಮಗಿರಲಿಲ್ಲ. ಇಂದು ನೀವು ಉಪಮುಖ್ಯಮಂತ್ರಿಯ ಬಳಿ ಪ್ರಶಸ್ತಿ ಪಡೆದುಕೊಂಡಿರುವುದು ಸಾಧನೆ, ಹೀಗೆಂದ ಮಾತ್ರಕ್ಕೆ ಡಿ.ಕೆ.ಶಿವಕುಮಾರ್ ದೊಡ್ಡ ವ್ಯಕ್ತಿಯಲ್ಲ, ಬದಲಾಗಿ ಜನರು ನೀಡಿದ ಹುದ್ದೆ ದೊಡ್ಡದು ಎಂದು ಹೇಳಿದರು.

DK Shivakumar felicitated on Children's Day

ಇದನ್ನೂ ಓದಿ | ನೆಹರು ದೂರದೃಷ್ಟಿ ಬಗ್ಗೆ ಹಾಡಿ ಹೊಗಳಿದ ಸಿದ್ದರಾಮಯ್ಯ, ಡಿಕೆಶಿ

ಈ ದೇಶಕ್ಕೆ ಮಹಾತ್ಮ ಗಾಂಧಿ, ಬಾಬಾ ಸಾಹೇಬ್‌ ಅಂಬೇಡ್ಕರ್‌, ನೆಹರು ಅವರಂತಹ ಲಕ್ಷಾಂತರ ಚೇತನಗಳ ತ್ಯಾಗದಿಂದ ಸ್ವಾತಂತ್ರ್ಯ ದೊರಕಿದೆ. ಪ್ರಜಾಪ್ರಭುತ್ವವನ್ನು ಅನುಭವಿಸುತ್ತಿದ್ದೇವೆ, ಅದನ್ನು ಕಾಪಾಡುವ ಕೆಲಸ ಮಾಡಬೇಕು, ಈ ದೇಶದ ಭದ್ರ ಬುನಾದಿ ಸಂವಿಧಾನದ ಬಗ್ಗೆ ಮಕ್ಕಳು ಹೆಚ್ಚು ತಿಳಿದುಕೊಳ್ಳಬೇಕು ಎಂದು ಕಾಂಗ್ರೆಸ್ ಸರ್ಕಾರ ಕೆಲಸ ಮಾಡುತ್ತಿದೆ ಎಂದರು.

ಯಾವುದೇ ಸರ್ಕಾರ ಬಂದರೂ ಶೇ 30- 35 ರಷ್ಟು ಹಣವನ್ನು ಮಕ್ಕಳ ಶಿಕ್ಷಣ, ಆರೋಗ್ಯ ಸೇರಿ ಇತರೇ ಕಾರ್ಯಗಳಿಗೆ ವಿನಿಯೋಗ ಮಾಡುತ್ತದೆ. ನಮ್ಮ ಸರ್ಕಾರ ಕೂಡ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸಲು ಯೋಜನೆಗಳನ್ನು ರೂಪಿಸುತ್ತಿದೆ ಎಂದು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Modi 3.0 Cabinet: ಎನ್‌ಡಿಎ ಸರ್ಕಾರದಲ್ಲಿ ರಾಜ್ಯದಿಂದ ಐವರಿಗೆ ಸ್ಥಾನ; ವಿ.ಸೋಮಣ್ಣ ಅಚ್ಚರಿಯ ಆಯ್ಕೆ?

Modi 3.0 Cabinet: ಮೂಲಗಳ ಪ್ರಕಾರ ರಾಜ್ಯದ ಐವರು ಸಂಪುಟ ಸಭೆ ಸೇರಲಿದ್ದಾರೆ ಎನ್ನಲಾಗುತ್ತಿದ್ದು, ಅಚ್ಚರಿ ಎನ್ನುವಂತೆ ತುಮಕೂರು ಲೋಕಸಭಾ ಕ್ಷೇತ್ರದ ಸಂಸದ ವಿ.ಸೋಮಣ್ಣ ಅವರು ಮೋದಿ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿ ಆಯ್ಕೆಯಾಗಿದ್ದಾರೆ. ರಾಜ್ಯದಿಂದ ಕ್ಯಾಬಿನೆಟ್‌ ಖಾತೆ ಸಚಿವರಾಗಿ ಪ್ರಹ್ಲಾದ್‌ ಜೋಶಿ, ನಿರ್ಮಲಾ ಸೀತಾರಾಮನ್ ಮತ್ತು ಜೆಡಿಎಸ್‌ನ ಎಚ್‌.ಡಿ. ಕುಮಾರಸ್ವಾಮಿ ಅವರು ಆಯ್ಕೆಯಾಗಿದ್ದಾರೆ. ಇನ್ನು ಶೋಭಾ ಕರಂದ್ಲಾಜೆ ಮತ್ತು ವಿ.ಸೋಮಣ್ಣ ಅವರಿಗೆ ರಾಜ್ಯ ಖಾತೆ ಸಿಗಲಿದೆ.

VISTARANEWS.COM


on

Modi 3.0 Cabinet
Koo

ಬೆಂಗಳೂರು: ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲು ಕ್ಷಣಗಣನೆ ಆರಂಭವಾಗಿದ್ದು, ಇಂದು (ಜೂನ್‌ 9) ಸಂಜೆ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ (Narendra Modi) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ (Modi 3.0 Cabinet). ಈ ಮಧ್ಯೆ ಮೋದಿ ಅವರೊಂದಿಗೆ ಸಚಿವರಾಗಿ ಯಾರೆಲ್ಲ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ ರಾಜ್ಯದ ಐವರು ಸಂಪುಟ ಸಭೆ ಸೇರಲಿದ್ದಾರೆ ಎನ್ನಲಾಗುತ್ತಿದ್ದು, ಅಚ್ಚರಿ ಎನ್ನುವಂತೆ ತುಮಕೂರು ಲೋಕಸಭಾ ಕ್ಷೇತ್ರದ ಸಂಸದ ವಿ.ಸೋಮಣ್ಣ (V. Somanna) ಅವರಿಗೆ ಮಣೆ ಹಾಕಲಾಗಿದೆ.

ರಾಜ್ಯದಿಂದ ಯಾರೆಲ್ಲ?

ರಾಜ್ಯದಿಂದ ಕ್ಯಾಬಿನೆಟ್‌ ಖಾತೆ ಸಚಿವರಾಗಿ ಪ್ರಹ್ಲಾದ್‌ ಜೋಶಿ, ನಿರ್ಮಲಾ ಸೀತಾರಾಮನ್ ಮತ್ತು ಜೆಡಿಎಸ್‌ನ ಎಚ್‌.ಡಿ. ಕುಮಾರಸ್ವಾಮಿ ಅವರು ಆಯ್ಕೆಯಾಗಿದ್ದಾರೆ. ಇನ್ನು ಶೋಭಾ ಕರಂದ್ಲಾಜೆ ಮತ್ತು ವಿ.ಸೋಮಣ್ಣ ಅವರಿಗೆ ರಾಜ್ಯ ಖಾತೆ ಸಿಗಲಿದೆ ಎನ್ನಲಾಗುತ್ತಿದೆ.

ಸೋಮಣ್ಣ ಅಚ್ಚರಿಯ ಆಯ್ಕೆ

ವಿಶೇಷ ಎಂದರೆ ಸೋಮಣ್ಣ ಅವರದ್ದು ಅಚ್ಚರಿಯ ಆಯ್ಕೆ. ಉಳಿದ ನಾಲ್ವರ ನಾಲ್ವರ ಹೆಸರು ಮೊದಲೇ ಚಾಲ್ತಿಯಲ್ಲಿದ್ದರೂ ಸೋಮಣ್ಣ ಅವರ ಬಗ್ಗೆ ಹೆಚ್ಚು ಚರ್ಚೆ ನಡೆದಿರಲಿಲ್ಲ. ಇದೀಗ ಅವರು ಅಚ್ಚರಿ ಎಂಬಂತೆ ಆಯ್ಕೆಯಾಗಿದ್ದಾರೆ. ವಿ. ಸೋಮಣ್ಣ ಅವರು ಈ ಹಿಂದೆ ಗೋವಿಂದ ರಾಜ ನಗರ ಕ್ಷೇತ್ರದ ಶಾಸಕರಾಗಿದ್ದರು. ಬಿಜೆಪಿಯ ಹಿರಿಯ ನಾಯಕ ಅಮಿತ್‌ ಶಾ ಅವರ ಸೂಚನೆ ಮೇರೆಗೆ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ವರುಣಾ ಮತ್ತು ಚಾಮರಾಜ ನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು. ತಮ್ಮನ್ನು ಅತಂತ್ರಗೊಳಿಸಿದ ವಿಚಾರದಲ್ಲಿ ಅವರು ಸಿಟ್ಟಾಗಿದ್ದು, ಬಿಜೆಪಿ ಬಿಡುವ ಬಗ್ಗೆ ಮಾತನಾಡಿದ್ದರು. ಬಳಿಕ ಹೈಕಮಾಂಡ್‌ ಅವರನ್ನು ಸಮಾಧಾನ ಮಾಡಿತ್ತು.

ಒಂದು ಹಂತದಲ್ಲಿ ಅವರಿಗೆ ರಾಜ್ಯಸಭಾ ಸದಸ್ಯತ್ವ ನೀಡುವ ಸುದ್ದಿ ಹರಡಿತ್ತಾದರೂ ಅದು ನಾರಾಯಣ ಭಾಂಡಗೆ ಅವರಿಗೆ ಒಲಿದ ಹಿನ್ನೆಲೆಯಲ್ಲಿ ವಿ. ಸೋಮಣ್ಣ ಮತ್ತೆ ನಿರಾಸೆ ಅನುಭವಿಸಿದ್ದರು. ಇದೀಗ ಅವರು ಬಯಸಿದಂತೆ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಸ್ಪರ್ಧಿಸಿ ಜಯ ಗಳಿಸಿದ್ದು, ಸಚಿವ ಸ್ಥಾನ ಒಲಿಯುತ್ತಿದೆ.

ದಲಿತ, ಒಬಿಸಿ ಕೋಟಾದ ಸಂಸದರಿಗೆ ನಿರಾಸೆ

ದಲಿತ ಕೋಟಾದಲ್ಲಿ ಸಚಿವ ಸ್ಥಾನಕ್ಕೆ ಪ್ರಯತ್ನಿಸಿದ್ದ ಗೋವಿಂದ ಕಾರಜೋಳ ಮತ್ತು ರಮೇಶ್ ಜಿಗಜಿಣಿಗೆ ಅವರಿಗೆ ನಿರಾಸೆಯಾಗಿದೆ. ಒಬಿಸಿ ಕೋಟಾದಲ್ಲಿ ಸಚಿವ ಸ್ಥಾನದ ಆಸೆಯಲ್ಲಿ ಇದ್ದ ಕೋಟಾ ಶ್ರೀನಿವಾಸ ಪ್ರಸಾದ್ ಮತ್ತು ಪಿ.ಸಿ. ಮೋಹನ್ ಅವರಿಗೂ ಅದೃಷ್ಟ ಒಲಿದಿಲ್ಲ. ಇನ್ನು ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಜಗದೀಶ್ ಶೆಟ್ಟರ್ ಕೂಡ ನಿರಾಸೆಗೆ ಒಳಗಾಗಿದ್ದಾರೆ. ಲಿಂಗಾಯತ ಕೋಟಾದಲ್ಲಿ ತಮ್ಮ ಪುತ್ರ ರಾಘವೇಂದ್ರ ಅವರಿಗೆ ಸಚಿವ ಸ್ಥಾನ ಕೊಡಿಸಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪ್ರಯತ್ನಿಸಿದ್ದರು. ಇದು ಕೂಡ ಕೈಗೂಡಿಲ್ಲ. ಇತ್ತ ಲಿಂಗಾಯತ ಕೋಟಾದಲ್ಲಿ ಸೋಮಣ್ಣ ಅವರಿಗೆ ಜಾಕ್‌ಪಾಟ್‌ ಹೊಡೆದಿದೆ.

ಇದನ್ನೂ ಓದಿ: Narendra Modi: ‌ಮೋದಿ ಪ್ರಮಾಣವಚನ ಸಂಭ್ರಮಕ್ಕೆ ಗಣ್ಯರ ದಂಡೇ ಸಾಕ್ಷಿ; ದೇಶ-ವಿದೇಶಗಳ ಗಣ್ಯರ ಪಟ್ಟಿ ಹೀಗಿದೆ

Continue Reading

ಬೆಂಗಳೂರು ಗ್ರಾಮಾಂತರ

Murder Case : ಬಾಡಿಗೆ ಹಣ ಪಡೆಯಲು ಕಿರಿಕ್‌; ಬೆಡ್‌ ರೂಮ್‌ನಲ್ಲೇ ಪತ್ನಿ ಕೊಂದಿದ್ದ ಹಂತಕ ಅರೆಸ್ಟ್‌

Murder Case : ಮನೆ ಬಾಡಿಗೆ ಪಡೆಯುವ ವಿಚಾರಕ್ಕೆ ಹಾಗೂ ಪತ್ನಿ ಶೀಲ ಶಂಕಿಸಿದ್ದ ಪತಿಯೊಬ್ಬ ಪತ್ನಿಯನ್ನು ಚಾಕುವಿನಿಂದ ಇರಿದು ಪರಾರಿ ಆಗಿದ್ದ. ಇದೀಗ ಸರ್ಜಪುರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

VISTARANEWS.COM


on

By

Murder Case
Koo

ಆನೇಕಲ್: ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದಿದ್ದ (Murder Case) ಪಾಪಿ ಪತಿಯೊಬ್ಬ ಅರೆಸ್ಟ್ ಆಗಿದ್ದಾನೆ. ಗಂಗಿರೆಡ್ಡಿ ಬಂಧಿತ ಆರೋಪಿ ಆಗಿದ್ದಾನೆ. ಮನೆ ಬಾಡಿಗೆ ಹಣ ಪಡೆಯುವ ವಿಚಾರಕ್ಕೆ ನಡೆದ ಗಲಾಟೆಯು ಕೊಲೆಯಲ್ಲಿ ಅಂತ್ಯವಾಗಿತ್ತು. ಬೆಂಗಳೂರಿನ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಂಪುರದಲ್ಲಿ ಕಳೆದ 3ರಂದು ಹತ್ಯೆ ನಡೆದಿತ್ತು.

ಇತ್ತೀಚೆಗೆ ಗಂಗಿರೆಡ್ಡಿ ಬಾಡಿಗೆ ಹಣ ಪಡೆದು ಆ ಹಣದಿಂದ ಕುಡಿದು ಮಜಾ ಮಾಡುತ್ತಿದ್ದ. ಹೀಗಾಗಿ ಸುಜಾತ ಮನೆ ಬಾಡಿಗೆ ಹಣವನ್ನು ಗಂಗಿರೆಡ್ಡಿಗೆ ನೀಡದೆ ತಾನೇ ಪಡೆಯುತ್ತಿದ್ದಳು. ಇತ್ತ ತರಕಾರಿ ಅಂಗಡಿ ಇಟ್ಟುಕೊಂಡಿದ್ದ ಸುಜಾತ ಮೇಲೆ ಗಂಗಿರೆಡ್ಡಿ ಶೀಲ ಶಂಕಿಸಿದ್ದ. ಇಬ್ಬರ ನಡುವೆ ದಿನನಿತ್ಯ ಗಲಾಟೆ ನಡೆಯುತ್ತಿತ್ತು.

ಕಳೆದ 3ರಂದು ಇಬ್ಬರ ನಡುವೆ ಗಲಾಟೆ ನಡೆದು ವಿಕೋಪಕ್ಕೆ ತಿರುಗಿತ್ತು. ಇದೇ ವೇಳೆ ಮನೆಯಲ್ಲಿದ್ದ ಚಾಕುವಿನಿಂದ ಇರಿದು ಸುಜಾತಳನ್ನು ಕೊಂದು ಪರಾರಿ ಆಗಿದ್ದ. ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದ ಸರ್ಜಾಪುರ ಪೊಲೀಸರು, ಪರಾರಿಯಾಗಿದ್ದ ಆರೋಪಿ ಗಂಗಿರೆಡ್ಡಿಯನ್ನು ಬಂಧಿಸಿದ್ದಾರೆ.

ಸುಮ್ಮನಹಳ್ಳಿಯಲ್ಲಿ ಅಪರಿಚಿತ ಶವ ಪತ್ತೆ

ಬೆಂಗಳೂರಿನ ಸುಮ್ಮನಹಳ್ಳಿಯ ರಾಜಾಕಾಲುವೆ ಬಳಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ. ವ್ಯಕ್ತಿಯನ್ನು ಹತ್ಯೆ ನಡೆಸಿ ರಾಜಕಾಲುವೆ ಪಕ್ಕ ಬಿಸಾಡಿ ಹೋಗಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Road Accident : ವಾಕಿಂಗ್‌ ಹೊರಟಿದ್ದ ವೃದ್ಧೆಗೆ ಬೈಕ್‌ ಡಿಕ್ಕಿ; ಕ್ಷಣದಲ್ಲೇ ಹಾರಿಹೋಯ್ತು ಪ್ರಾಣ

Road Accident :ಕುಡಿದ ಮತ್ತಿನಲ್ಲಿ ಬೈಕ್‌ ಚಲಾಯಿಸಿದ ಯುವಕನೊಬ್ಬ ವೃದ್ಧೆಯೊಬ್ಬರ ಪ್ರಾಣವನ್ನೇ ಕಸಿದಿದ್ದಾನೆ. ವಾಕಿಂಗ್‌ ಮುಗಿಸಿ ಮನೆಗೆ ಹೋಗುತ್ತಿದ್ದ ವೃದ್ಧೆಗೆ ಹಿಂಬದಿಯಿಂದ ಬಂದ ಬೈಕ್‌ ಗುದ್ದಿದೆ. ಡಿಕ್ಕಿ ರಭಸಕ್ಕೆ ವೃದ್ಧೆ ಮೃತಪಟ್ಟಿದ್ದಾರೆ.

VISTARANEWS.COM


on

By

Road Accident
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ವಾಕಿಂಗ್‌ಗೆ (Walking) ತೆರಳಿದ್ದ ಮಹಿಳೆಗೆ ಬೈಕ್‌ವೊಂದು (Bike Hit) ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ (Road Accident) ಮೃತಪಟ್ಟಿದ್ದಾರೆ. ಹೇರೋಹಳ್ಳಿ ನಿವಾಸಿ ಶಿವಮ್ಮ (66) ಮೃತ ದುರ್ದೈವಿ.

ಶನಿವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಬೆಂಗಳೂರಿನ ಹೇರೋಹಳ್ಳಿಯ ಸಮೀಪ ನಡೆದಿದೆ. ಶಿವಮ್ಮ ವಾಕಿಂಗ್‌ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಪಲ್ಸರ್ ಬೈಕ್‌ ಶಿವಮ್ಮರಿಗೆ ಗುದ್ದಿದೆ.

ಗುದ್ದಿದ ರಭಸಕ್ಕೆ ಕೆಳಗೆ ಬಿದ್ದ ಶಿವಮ್ಮ ತಲೆಗೆ ಗಂಭೀರ ಪೆಟ್ಟಾಗಿದೆ. ಕೂಡಲೇ ರಕ್ತಸ್ರಾವವಾಗಿ ಒದ್ದಾಡುತ್ತಿದ್ದ ಶಿವಮ್ಮರನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇತ್ತ ಬೈಕ್‌ ಸವಾರ ಸುನೀಲ್‌ ಎಂಬಾತನಿಗೂ ಗಾಯವಾಗಿದ್ದು, ಕುಡಿದ ಮತ್ತಿನಲ್ಲಿ ಬೈಕ್ ಚಲಾಯಿಸಿರುವುದು ಪತ್ತೆಯಾಗಿದೆ.

ಸದ್ಯ ಘಟನೆ ಸಂಬಂಧ ಆರೋಪಿ ಸುನೀಲ್‌ನನ್ನು ಬಂಧಿಸಲಾಗಿದೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Drowned in water : ಆಯತಪ್ಪಿ ಘಟಪ್ರಭಾ ನದಿಗೆ ಬಿದ್ದ ಟ್ರಾಕ್ಟರ್; ಓರ್ವ ನೀರುಪಾಲು, 12 ಮಂದಿ ಪಾರು

ಚಿಕ್ಕೋಡಿಯಲ್ಲಿ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ

ಬೆಳಗಾವಿ ಜಿಲ್ಲೆಯ ರಾಯಬಾದ ತಾಲೂಕಿನ ಹಂದಿಗುಂದ ಗ್ರಾಮದಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು (Car Accident) ಅಪಘಾತಕ್ಕೀಡಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ. ಪಾಲಬಾವಿ ಗ್ರಾಮದ ಮಹಾಲಿಂಗ ನಿಂಗನೂರ (47) ಮತ್ತು ಈರಪ್ಪಾ ಉಗಾರೆ (32) ಮೃತ ದುರ್ದೈವಿಗಳು.

ಅಪಘಾತವಾಗುತ್ತಿದ್ದಂತೆ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ರಸ್ತೆಯಲ್ಲಿ ವೇಗವಾಗಿ ಬಂದ ಕಾರು ವಿದ್ಯುತ್‌ ಕಂಬ ಡಿಕ್ಕಿ ಹೊಡೆದಿದೆ. ಬಳಿಕ ಕಂಬದ ಸಮೇತ ರಸ್ತೆ ಬದಿಯ ಜಮೀನಿಗೆ ನುಗ್ಗಿದೆ. ಡಿಕ್ಕಿ ರಭಸಕ್ಕೆ ಕಾರಿನ ಹಿಂಬದಿ ಕುಳಿತಿದ್ದ ಇಬ್ಬರಿಗೆ ತೀವ್ರ ರಕ್ತಸ್ರಾವವಾಗಿದೆ. ಅಪಘಾತವಾಗುತ್ತಿದ್ದಂತೆ ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದಾರೆ. ಕೂಡಲೇ ಕಾರಿನಲ್ಲಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದವರನ್ನು ರಕ್ಷಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡು ಇಬ್ಬರು ಮೃತಪಟ್ಟಿದ್ದಾರೆ.

Car Accident

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ; ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಪರಮೇಶ್ವರ್‌

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣದಲ್ಲಿ ಈಗಾಗಲೇ ರಾಜ್ಯ ಸರ್ಕಾರದ ಸಚಿವರೊಬ್ಬರ ತಲೆದಂಡವಾಗಿದೆ. ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದೆ. ಈ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯಿಸಿ, ಪ್ರಕರಣದ ತನಿಖೆ ನಡೆಯುತ್ತಿದೆ. ಬಿಜೆಪಿ ಆರೋಪಕ್ಕೆ ಸದ್ಯ ಉತ್ತರಿಸುವುದಿಲ್ಲ ಎಂದು ಹೇಳಿದ್ದಾರೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣ (Valmiki Corporation Scam)ದಲ್ಲಿ ಈಗಾಗಲೇ ರಾಜ್ಯ ಸರ್ಕಾರದ ಸಚಿವರೊಬ್ಬರ ತಲೆದಂಡವಾಗಿದೆ. ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ (B Nagendra) ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದೆ. ಈ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ (G. Parameshwara) ಪ್ರತಿಕ್ರಿಯಿಸಿ, ಪ್ರಕರಣದ ತನಿಖೆ ನಡೆಯುತ್ತಿದೆ. ಬಿಜೆಪಿ ಆರೋಪಕ್ಕೆ ಸದ್ಯ ಉತ್ತರಿಸುವುದಿಲ್ಲ ಎಂದು ಹೇಳಿದ್ದಾರೆ.

ವಾಲ್ಮೀಕಿ ನಿಗಮ ಅಕ್ರಮ ಪ್ರಕರಣದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರ ಹೆಸರೂ ಕೇಳಿ ಬಂದಿದೆ. ಅವರ ಕಚೇರಿಯಲ್ಲಿ ಸಾಕ್ಷ್ಯ ನಾಶ ಕುರಿತು ಚರ್ಚೆ ನಡೆದಿದೆ ಎಂದು ಪ್ರಕರಣದ 8ನೇ ಆರೋಪಿ, ಲೆಕ್ಕಾಧಿಕಾರಿ ಪರಶುರಾಮ್​ ಆರೋಪಿಸಿದ್ದಾರೆ. ಇದನ್ನೂ ಉಲ್ಲೇಖಿಸಿ ಬಿಜೆಪಿ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದೆ. ಹಗರಣದಲ್ಲಿ ಸರ್ಕಾರವೇ ಭಾಗಿಯಾಗಿದೆ ಎಂದು ಆರೋಪಿಸಿದೆ.

ಬಿಜೆಪಿ ಈ ಆರೋಪದ ಕುರಿತು ಖಾರವಾಗಿ ಉತ್ತರಿಸಿದ ಪರಮೇಶ್ವರ್‌ ಅವರು, ʼʼಬಿಜೆಪಿ ನಾಯಕರು ಹೇಳ್ತಾ ಇರುತ್ತಾರೆ. ಇದಕ್ಕೆಲ್ಲ ಹೌದು ಎನ್ನಲು ಆಗುವುದಿಲ್ಲ. ಈಗಾಗಲೇ ಎಸ್‌ಐಟಿ ಮತ್ತು ಸಿಬಿಐ ತನಿಖೆ ಆರಂಭಿಸಿದೆ. ಬ್ಯಾಂಕಿನಲ್ಲಿಯೂ ಅಕ್ರಮ ನಡೆದಿದೆ ಎನ್ನುವ ವಿಚಾರಕ್ಕೆ ಸಿಬಿಐ ಕೂಡ ಪ್ರವೇಶ ಮಾಡಿದೆ. ತನಿಖೆಯಲ್ಲಿ‌ ಏನು ಬರುತ್ತದೆ ಎನ್ನುವುದನ್ನು ನೋಡೋಣʼʼ ಎಂದು ತಿಳಿಸಿದ್ದಾರೆ.

ಸಚಿವ ಶರಣು ಪ್ರಕಾಶ ಪಾಟೀಲ್ ಕಚೇರಿಯಲ್ಲಿ ಸಾಕ್ಷಿ ನಾಶ ಕುರಿತು ಸಭೆ ನಡೆದಿದೆ ಎನ್ನುವ ಆರೋಪದ ಬಗ್ಗೆ ಉತ್ತರಿಸಿದ ಅವರು, ʼʼಬಂಧಿತರು ನೀಡಿದ ಹೇಳಿಕೆಯನ್ನು ಪರಿಶೀಲಿಸಲಾಗುತ್ತಿದೆ. ಅಗತ್ಯವಿದ್ದರೆ ಶರಣು ಪ್ರಕಾಶ ಪಾಟೀಲ್ ಅವರ ಕಚೇರಿಯಲ್ಲಿನ ಸಿಸಿ ಟಿವಿ ದೃಶ್ಯಾವಳಿಗಳನ್ನು ಎಸ್ಐ‌ಟಿ ಪಡೆದುಕೊಳ್ಳಲಿದೆ. ತನಿಖೆಗೆ ಸಿಬಿಐನಿಂದ ಯಾವುದೇ ಪತ್ರ ಬಂದಿಲ್ಲ. ಮೌಕಿಕವಾಗಿ ಕೇಳಿದ್ದಾರೆ ಎಂಬ ಮಾಹಿತಿ ಇದೆ. ನಿನ್ನೆ, ಮೊನ್ನೆ ಏನಾದ್ರೂ ಪತ್ರ ಬಂದಿದ್ಯಾ ಎನ್ನುವುದು ಗೊತ್ತಿಲ್ಲ. ಬಂದಿದ್ದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಶೀಘ್ರ ತನಿಖೆ ಮುಗಿಸುವಂತೆ ಎಸ್‌ಐಟಿಗೆ ಮನವಿ ಮಾಡಿದ್ದೇವೆ. ಆದರೆ ಇಷ್ಟೇ ದಿನದಲ್ಲಿ ತನಿಖೆ ಮಾಡಿ ಅಂತ ಹೇಳಲು ಆಗುವುದಿಲ್ಲ. ಅವರಿಗೂ ಸಮಯಾವಕಾಶ ಕೊಡಬೇಕಾಗುತ್ತದೆʼʼ ಎಂದು ಪರಮೇಶ್ವರ್‌ ತಿಳಿಸಿದ್ದಾರೆ.

ಮೋದಿಗೆ ಅಭಿನಂದನೆ

ಮೂರನೇ ಬಾರಿಗೆ ಪ್ರಧಾನಿ ಆಗಗುತ್ತಿರುವ ಮೋದಿ ಅವರಿಗೆ ಪರಮೇಶ್ವರ್‌ ಅಭಿನಂದನೆ ತಿಳಿಸಿದ್ದಾರೆ. ”ಕಳೆದ 10 ವರ್ಷದಲ್ಲಿ ಜನ ಸಮುದಾಯ ತೊಂದರೆಯಲ್ಲಿದೆ. ಜನರ ದೃಷ್ಟಿಯಿಂದ ಕೆಲಸ ಮಾಡಬೇಕು. ಹಿಂದೆ ಎನೆಲ್ಲ ತಪ್ಪುಗಳಾಗಿದೆ ಅದನ್ನ ಸರಿಪಡಿಸಿಕೊಳ್ಳಲಿ. ಕರ್ನಾಟಕಕ್ಕೆ ಹೆಚ್ಚು ಸ್ಥಾನ ಸಿಗಲಿ. ನಿರ್ಮಲಾ ಸೀತಾರಾಮನ್‌ ಸೇರಿದಂತೆ ರಾಜ್ಯದಲ್ಲಿನ ಸಚಿವರು ಹಿತ ಕಾಯುವಲ್ಲಿ ವಿಫಲರಾಗಿದ್ದಾರೆ. ಇನ್ನಾದರೂ ಜನರಿಗಾಗಿ ಕೆಲಸ ಮಾಡಬೇಕುʼʼ ಎಂದು ಹೇಳಿದ್ದಾರೆ.

ಇದನ್ನೂ ಓದಿ: Valmiki Corporation Scam: ಸಾಕ್ಷ್ಯ ನಾಶ ಆರೋಪ; ಮೇ 24ರಂದು ನಾನು ಕಚೇರಿಗೆ ಹೋಗಿಯೇ ಇಲ್ಲ ಎಂದ ಸಚಿವ ಶರಣ ಪ್ರಕಾಶ್ ಪಾಟೀಲ್

Continue Reading
Advertisement
Kangana Ranaut Slapped incident Hrithik Roshan Backs Post
ಬಾಲಿವುಡ್2 mins ago

Kangana Ranaut: ಕಂಗನಾ ರಣಾವತ್‌ಗೆ ಕಪಾಳಮೋಕ್ಷ; ಹೃತಿಕ್ ರೋಷನ್ ರಿಯಾಕ್ಷನ್‌ ಏನು?

Modi 3.0 Cabinet
Lok Sabha Election 202429 mins ago

Modi 3.0 Cabinet: ಎನ್‌ಡಿಎ ಸರ್ಕಾರದಲ್ಲಿ ರಾಜ್ಯದಿಂದ ಐವರಿಗೆ ಸ್ಥಾನ; ವಿ.ಸೋಮಣ್ಣ ಅಚ್ಚರಿಯ ಆಯ್ಕೆ?

Murder Case
ಬೆಂಗಳೂರು ಗ್ರಾಮಾಂತರ34 mins ago

Murder Case : ಬಾಡಿಗೆ ಹಣ ಪಡೆಯಲು ಕಿರಿಕ್‌; ಬೆಡ್‌ ರೂಮ್‌ನಲ್ಲೇ ಪತ್ನಿ ಕೊಂದಿದ್ದ ಹಂತಕ ಅರೆಸ್ಟ್‌

IND vs PAK
ಕ್ರೀಡೆ42 mins ago

IND vs PAK: ಭಾರತ-ಪಾಕ್​ ಪಂದ್ಯಕ್ಕೆ ಸಚಿನ್ ಹಾಜರ್; ಮಾಜಿ ಅಧ್ಯಕ್ಷ ಒಬಾಮಗೂ ಇರದ ಭದ್ರತೆಯಲ್ಲಿ ನಡೆಯಲಿದೆ ಪಂದ್ಯ

Modi 3.0 Cabinet
ದೇಶ54 mins ago

Modi 3.0 Cabinet: ಬಿಜೆಪಿಯ 5, NDAಯ 10 ಸಂಸದರು INDIA ಜೊತೆ ಸಂಪರ್ಕ? ಹೊಸ ಬಾಂಬ್‌ ಸ್ಫೋಟಿಸಿದ TMC

Road Accident
ಬೆಂಗಳೂರು1 hour ago

Road Accident : ವಾಕಿಂಗ್‌ ಹೊರಟಿದ್ದ ವೃದ್ಧೆಗೆ ಬೈಕ್‌ ಡಿಕ್ಕಿ; ಕ್ಷಣದಲ್ಲೇ ಹಾರಿಹೋಯ್ತು ಪ್ರಾಣ

Valmiki Corporation Scam
ಕರ್ನಾಟಕ1 hour ago

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ; ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಪರಮೇಶ್ವರ್‌

Niveditha Gowda chandan matters told by Prashanth Sambargi
ಸ್ಯಾಂಡಲ್ ವುಡ್1 hour ago

Niveditha Gowda: ದುಡ್ಡಿನ ಹಿಂದೆ ಹೋದವರು ಯಾರಂತ ಗೊತ್ತಾಗುತ್ತೆ; ಚಂದನ್‌ಗೆ ನಮ್ಮ ಸಪೋರ್ಟ್‌ ಎಂದ ಪ್ರಶಾಂತ್‌ ಸಂಬರಗಿ!

assault Case in Bengaluru
ಬೆಂಗಳೂರು1 hour ago

Assault case : ಮೊದಲನೇ ಹೆಂಡ್ತಿ ಮಕ್ಕಳೊಂದಿಗೆ ಬಂದು 2ನೇ ಹೆಂಡ್ತಿಗೆ ರಕ್ತ ಬರುವಂತೆ ಬಾರಿಸಿದ ಭೂಪ

Puja Tomar
ಕ್ರೀಡೆ2 hours ago

Puja Tomar: ಯುಎಫ್​ಸಿ ಪಂದ್ಯ ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ಪೂಜಾ ತೋಮರ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌