Site icon Vistara News

Chitradurga News: ರಂಗಯ್ಯನದುರ್ಗ ಜಲಾಶಯ ಪಾತ್ರದ ಕೆರೆಗಳಿಗೆ ನೀರು ಹರಿಸಲು ಪ್ರಯತ್ನ: ಶಾಸಕ ಗೋಪಾಲಕೃಷ್ಣ

Molakalmuru MLA NY Gopalakrishna speech

ಮೊಳಕಾಲ್ಮೂ ರು: ರಂಗಯ್ಯನದುರ್ಗ ಜಲಾಶಯದಿಂದ (Rangayyanadurga Reservoir) ಕೆರೆಗಳಿಗೆ (lakes) ನೀರು ಹರಿಸಲು ಪೈಪ್‌ಲೈನ್ ಅಳವಡಿಕೆ ವ್ಯವಸ್ಥೆ ಕಲ್ಪಿಸಬೇಕು ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣರವರಿಗೆ ನಾನಾ ಭಾಗದ ರೈತ ಮುಖಂಡರು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕರು, ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.

ಹಾನಗಲ್ ಪ್ರವಾಸಿ ಮಂದಿರದಲ್ಲಿ ನಡೆದ ರಂಗನಯ್ಯನದುರ್ಗ ಜಲಾಶಯದ ಅಚ್ಚುಕಟ್ಟುದಾರರ ಸಭೆಯಲ್ಲಿ, ಬಲದಂಡೆ ಮತ್ತು ಎಡದಂಡೆ ನಾಲೆಯಲ್ಲಿ ಹೂಳು ತುಂಬಿಕೊಂಡಿದ್ದು ಪೈಪ್‌ಲೈನ್ ವ್ಯವಸ್ಥೆ ಕಲ್ಪಿಸುವ ಮೂಲಕ ನಾನಾ ಗ್ರಾಮಗಳ ಕೆರೆಗಳಿಗೆ ನೀರು ಹರಿಸಬೇಕಿದೆ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Antrix-Devas Case: ರಾಮಚಂದ್ರನ್‌ ವಿಶ್ವನಾಥನ್‌ ದೇಶಭ್ರಷ್ಟ ಆರ್ಥಿಕ ಅಪರಾಧಿ: ಸಿಬಿಐ ಸ್ಪೆಷಲ್ ಕೋರ್ಟ್‌

ಸಭೆಯಲ್ಲಿ ಶಾಸಕ ಎನ್.ವೈ. ಗೋಪಾಲಕೃಷ್ಣ ಮಾತನಾಡಿ, ಈ ಹಿಂದಿನ ಅವಧಿಯಲ್ಲಿ ಸಂಪೂರ್ಣವಾಗಿ ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ವ್ಯವಸ್ಥೆ ಕೆಟ್ಟು ಹೋಗಿದೆ, ಇನ್ನು ಮುಂದಾದರೂ ವ್ಯವಸ್ಥೆ ಬದಲಾಯಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸಬೇಕು. ರಂಗಯ್ಯನದುರ್ಗ ಜಲಾಶಯವನ್ನು ಸಂರಕ್ಷಣೆ ಮಾಡಬೇಕಾಗಿರುವುದು ನಮ್ಮೆಲ್ಲರ ಮೊದಲ ಕರ್ತವ್ಯ ಜಲಾಶಯ ಪಾತ್ರದ ಕೆರೆಗಳಿಗೆ ನೀರು ಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದರು.

ಇದನ್ನೂ ಓದಿ: Disney+ Hotstar: ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ನೀಡಲಿದೆ ಹಾಟ್ ಸ್ಟಾರ್

ಈ ಸಂದರ್ಭದಲ್ಲಿ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಶಾಖಾ ಮಠದ ಪೀಠಾಧಿಪತಿ ಬಸವಲಿಂಗ ಮಹಾ ಸ್ವಾಮೀಜಿ, ಕಾಂಗ್ರೆಸ್ ಹಿರಿಯ ಮುಖಂಡರಾದ ಅಬ್ದುಲ್ ಸುಭಾನ್ ಸಾಬ್ ಪಟೇಲ್, ಜಿ. ಪಾಪನಾಯಕ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Exit mobile version