Site icon Vistara News

ಮುರುಘಾಶ್ರೀ ಪ್ರಕರಣ | ಜೀವ ಬೆದರಿಕೆ, ರಕ್ಷಣೆ ಕೋರಿ ಒಡನಾಡಿ ಸಂಸ್ಥೆ ನಿರ್ದೇಶಕರಿಂದ ಪೊಲೀಸ್‌ ಆಯುಕ್ತರಿಗೆ ಪತ್ರ

ಮುರುಗಾಶ್ರೀ ಪ್ರಕರಣ

ಮೈಸೂರು: ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿರುವ ಹಿನ್ನೆಲೆಯಲ್ಲಿ ಸ್ವಾಮೀಜಿಗಳ ಅನುಯಾಯಿಗಳು ಹಾಗೂ ಮಠದ ಪರವಾಗಿರುವ ಪಟ್ಟಭದ್ರ ಹಿತಾಸಕ್ತಿಗಳಿಂದ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಹೀಗಾಗಿ ರಕ್ಷಣೆ ಒದಗಿಸಬೇಕು ಎಂದು ಕೋರಿ ಮೈಸೂರಿನ ಒಡನಾಡಿ ಸಂಸ್ಥೆ ನಿರ್ದೇಶಕರಾದ ಸ್ಟ್ಯಾನ್ಲಿ ಹಾಗೂ ಪರಶುರಾಮ್‌ ನಗರ ಪೊಲೀಸ್‌ ಆಯುಕ್ತ ಡಾ. ಚಂದ್ರಗುಪ್ತ ಅವರಿಗೆ ಮನವಿ ಪತ್ರ ನೀಡಿದ್ದಾರೆ.

ಮುರುಘಾಮಠದ ಹಾಸ್ಟೆಲ್‌ನ ಇಬ್ಬರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಆ.26ರಂದು ದೂರು ದಾಖಲಿಸಲಾಗಿತ್ತು. ಈ ಸಂಬಂಧ ಸೆ.2ರಂದು ಮುರುಘಾಶ್ರೀಗಳನ್ನು ಚಿತ್ರದುರ್ಗ ಪೋಲೀಸರು ಬಂಧಿಸಿದ್ದಾರೆ. ಹೀಗಾಗಿ ಜೀವ ಬೆದರಿಕೆ ಕರೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ವೈಯಕ್ತಿಕವಾಗಿ ಹಾಗೂ ಹೆಣ್ಣು ಮಕ್ಕಳ ಪುನರ್ವಸತಿ ಕೇಂದ್ರ ಒಡನಾಡಿ ಸಂಸ್ಥೆಯ ಮಕ್ಕಳು, ಸಿಬ್ಬಂದಿಗೆ ರಕ್ಷಣೆ ವ್ಯವಸ್ಥೆ ಮಾಡಿ, ಗನ್‌ ಮ್ಯಾನ್‌ ಅನ್ನು ನಿಯೋಜಿಸಬೇಕು ಎಂದು ನಿರ್ದೇಶಕರಾದ ಸ್ಟ್ಯಾನ್ಲಿ ಹಾಗೂ ಪರಶುರಾಮ್‌ ಕೋರಿದ್ದಾರೆ.

ಇದನ್ನೂ ಓದಿ | ಮುರುಘಾಶ್ರೀ ಪ್ರಕರಣಕ್ಕೆ Big twist: ಸಂತ್ರಸ್ತ ಬಾಲಕಿ 1 ತಿಂಗಳು ಬಸವರಾಜನ್‌ ಮನೆಲೇ ಇದ್ದಳು ಎಂದ ಚಿಕ್ಕಪ್ಪ

Exit mobile version