ʼಅಪ್ಪುʼಗೆ ಮರಣೋತ್ತರ ಪ್ರಶಸ್ತಿ ; ಗದ್ಗದಿತರಾದ ಅಶ್ವಿನಿ - Vistara News

ಚಿತ್ರದುರ್ಗ

ʼಅಪ್ಪುʼಗೆ ಮರಣೋತ್ತರ ಪ್ರಶಸ್ತಿ ; ಗದ್ಗದಿತರಾದ ಅಶ್ವಿನಿ

ಬಸವ ಜಯಂತಿಯ ಅಂಗವಾಗಿ ಮುರುಘಾ ಮಠದ ಅನುಭವ ಮಂಟಪದಲ್ಲಿ ಸಮಾರಂಭವನ್ನು ಆಯೋಜಿಸಲಾಗಿತ್ತು. ಪುನೀತ್‌ ಅವರ ಜೀವನ, ಸಾಧನೆಗಳನ್ನು ವಾಚನ ಮಾಡಲಾಯಿತು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಚಿತ್ರನಟ ಪುನೀತ್‌ ರಾಜಕುಮಾರ್‌ ಅವರಿಗೆ ಮರಣೋತ್ತರ ʼಬಸವಶ್ರೀʼ ಪ್ರಶಸ್ತಿಯನ್ನು ಚಿತ್ರದುರ್ಗದ ಮುರುಘಾ ಮಠದಲ್ಲಿ ಮಂಗಳವಾರ ಪ್ರದಾನ ಮಾಡಲಾಯಿತು. 12ನೇ ಶತಮಾನದ ಬಸವಣ್ಣನವರ ಆಶಯಕ್ಕೆ ಅನುಗುಣವಾಗಿ ಸಾಮಾಜಿಕ ಸೇವೆ ಸಲ್ಲಿಸಿದವರಿಗೆ ಬಸವಶ್ರೀ ಪ್ರಶಸ್ತಿಯನ್ನು ಮರಣೋತ್ತರವಾಗಿ ಪುನೀತ್‌ ಪತ್ನಿ, ಗದ್ಗದಿತರಾಗಿಯೇ ಸ್ವೀಕರಿಸಿದರು. ಬಸವ ಜಯಂತಿಯ ಅಂಗವಾಗಿ ಮುರುಘಾ ಮಠದ ಅನುಭವ ಮಂಟಪದಲ್ಲಿ ಸಮಾರಂಭವನ್ನು ಆಯೋಜಿಸಲಾಗಿತ್ತು. ಪ್ರಶಸ್ತಿ ನೀಡುವುದಕ್ಕೂ ಮೊದಲು ಅಶ್ವಿನಿ ಅವರನ್ನು ವೇದಿಕೆಯ ಮುಂಭಾಗದ ಕುರ್ಚಿಯಲ್ಲಿ ಕುಳ್ಳಿರಿಸಲಾಯಿತು.

ಪುನೀತ್‌ ಅವರ ಜೀವನ, ಸಾಧನೆಗಳನ್ನು ವಾಚನ ಮಾಡಲಾಯಿತು. ಅಲ್ಲಿಯವರೆಗೂ ಮೌನವಾಗಿಯೇ ಕುಳಿತಿದ್ದ ಅಶ್ವಿನಿ ಅವರು ಪುನೀತ್‌ ಅವರ ಜೀವನದ ಕುರಿತು ವಾಚನ ಮಾಡುವಾಗ ಸಂಪೂರ್ಣ ಗದ್ಗದಿತರಾದರು. ಉಕ್ಕಿಬರುವ ದುಃಖವನ್ನು ಸಾವರಿಸಿಕೊಂಡೇ ಕತ್ತು ಬಗ್ಗಿಸಿ ಕುಳಿತಿದ್ದರು. ನಂತರ ಗಣ್ಯರೆಲ್ಲರೂ ಆಗಮಿಸಿ ಪ್ರಶಸ್ತಿ ಪ್ರದಾನ ಮಾಡಿದರು. ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಪ್ರಸಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಯು ₹5 ಲಕ್ಷ ನಾಗದು ಹಾಗು ಪಾರಿತೋಶಕ ಒಳಗೊಂಡಿದೆ.

ಇದನೂ ಓದಿ: ಡಾ. ರಾಜ್‌ ಕುಟುಂಬದ ಮತ್ತೊಂದು ಕುಡಿ ಎಂಟ್ರಿ: ಯುವ ರಾಜ್‌ಕುಮಾರ್‌ ಪದಾರ್ಪಣೆ ಘೋಷಣೆ

ನಂತರ ಮಾತನಾಡಿದ ಮುರುಘಾ ಶರಣರು, ʼಕನ್ನಡದ ಪುತ್ರʼ ನಟ ಪುನೀತ ರಾಜಕುಮಾರ. ನಟನೆ ಮತ್ತು ವ್ಯಕ್ತಿತ್ವದ ಮುಲಕ ಆಕಾಶದ ಎತ್ತರಕ್ಕೆ ಬೆಳೆದರು. ಅಭಿನಯ, ಹಾಡುವುದು, ಅಭಿವ್ಯಕ್ತಿಯಲ್ಲಿ ಪುನೀತ್‌ ಅವರನ್ನು ಮೀರಿಸಲು ಯಾರಿಗೂ ಸಾದ್ಯವಿಲ್ಲ. ರಾಜ್‌ ಕುಟುಂಬ ಇಡೀ ಕನ್ನಡ ಚಿತ್ರರಂಗವನ್ನೆ ಶ್ರೀಮಂತಗೊಳಿಸಿದೆ ಎಂದು ಹೇಳಿದರು.
ಸಾಹಿತಿ ರಾಜಪ್ಪ ದಳಾಯಿ ಅವರು ಪುನೀತ್‌ ರಾಜಕುಮಾರ್‌ ಕುರಿತು ಮಾತನಾಡಿದರು.

ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಕೃಷಿ ಸಚಿವ ಬಿ.ಸಿ. ಪಾಟೀಲ್‌, ಶಾಸಕ ತಿಪ್ಪಾರೆಡ್ದಿ, ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌. ನವೀನ್‌, ಚಿತ್ರ ನಿರ್ಮಾಪಕ ಚಿನ್ನೆಗೌಡ, ಖನಿಜ ನಿಗಮ ಅಧ್ಯಕ್ಷ ಎಸ್. ಲಿಂಗಮೂರ್ತಿ, ಜಿಲ್ಲಾಧಿಕಾರಿ ಕವಿತಾ ಎಸ್‌ .ಮನ್ನಿಕೆರಿ, ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಕೆ.ಪರಶುರಾಮ್‌, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಾಣಧಿಕಾರಿಡಾ| ಕೆ. ನಂದಿನಿ ದೇವಿ ಮತ್ತಿತರರಿದ್ದರು.

ಇದನೂ ಓದಿ | Rajkumar Birthday: ಸೋತಾಗ ಧೈರ್ಯ ತುಂಬುವ ಅಣ್ಣಾವ್ರ 7 ಹಾಡುಗಳು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

Karnataka Weather Forecast :ರಾಜ್ಯಾದ್ಯಂತ ಮಳೆ ಅಬ್ಬರಕ್ಕೆ (Rain News) ಗುಡ್ಡ ಕುಸಿತದಂತಹ ಪ್ರಕರಣಗಳು ಹೆಚ್ಚಾಗುತ್ತಿದೆ. ಕೊಡಗಿನಲ್ಲಿ ಗುಡ್ಡ ಕುಸಿದರೆ, ಮಂಗಳೂರಲ್ಲಿ ರಸ್ತೆ ಕುಸಿದಿದೆ. ಚಿಕ್ಕಮಗಳೂರಲ್ಲಿ ಗಾಳಿ- ಮಳೆಗೆ ಶಾಲೆಗೆ ಹಾನಿಯಾಗಿದೆ. ಇನ್ನೊಂದು ವಾರವು ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ನೈರುತ್ಯ ಮುಂಗಾರು (Rain News) ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿದ್ದು, ಉತ್ತರ ಒಳನಾಡಿನಲ್ಲಿ (Karnataka Weather Forecast) ದುರ್ಬಲಗೊಂಡಿದೆ. ಕರಾವಳಿ, ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದ್ದು, ಗುಡ್ಡ ಕುಸಿತದಂತಹ ಪ್ರಕರಣಗಳು ಹೆಚ್ಚಾಗಿವೆ. ಕೊಲ್ಲೂರು, ಸಿದ್ದಾಪುರ, ಕೊಟ್ಟಿಗೆಹಾರದಲ್ಲಿ 9 ಸೆಂ.ಮೀ ಮಳೆಯಾಗಿದೆ. ಕೋಟ, ಆಗುಂಬೆಯಲ್ಲಿ ತಲಾ 8 ಸೆಂ.ಮೀ ಹಾಗೂ ಉಡುಪಿ, ಧರ್ಮಸ್ಥಳ, ಲಿಂಗನಮಕ್ಕಿಯಲ್ಲಿ 7 ಸೆಂ.ಮೀ ಮಳೆಯಾಗಿದೆ.

ಆರಿದ್ರಾ ಮಳೆ ಎಫೆಕ್ಟ್‌ ಕೊಡಗಿನಲ್ಲಿ ಗುಡ್ಡ ಕುಸಿತ

ಕೊಡಗಿನಲ್ಲಿ ಸುರಿದ ಆರಿದ್ರಾ ಮಳೆಯ ಎಫೆಕ್ಟ್‌ನಿಂದಾಗಿ ಅಲ್ಲಲ್ಲಿ ಸಣ್ಣ ಪ್ರಮಾಣದ ಗುಡ್ಡ ಕುಸಿತ ಉಂಟಾಗುತ್ತಿದೆ. ನಿನ್ನೆ ಸೋಮವಾರ ಸುರಿದ ಮಳೆಗೆ ಬೆಟ್ಟದ ಮಣ್ಣು ಕುಸಿದು ಮನೆ ಮತ್ತು ದೇವಸ್ಥಾನಕ್ಕೆ ಅಲ್ಪಪ್ರಮಾಣದಲ್ಲಿ ಹಾನಿಯಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಪಾಲೆಮಾಡುವಿನಲ್ಲಿ ಘಟನೆ ನಡೆದಿದೆ. ಪಾಲೆಮಾಡುವಿನ ಎಂಆರ್ ಕಾಳಪ್ಪ ಅವರ ಮನೆಯ ಸಮೀಪದ ಮಣ್ಣು ಕುಸಿದಿದೆ. ದೇವಸ್ಥಾನದ ಗೋಡೆ ಪಕ್ಕದಲ್ಲಿ ಮತ್ತು ವಾಸದ ಮನೆಯ ಪಕ್ಕದಲ್ಲಿ ರಾಶಿ ಮಣ್ಣು ತುಂಬಿದೆ.

ಇದನ್ನೂ ಓದಿ: Student Death : ಅಮ್ಮನ ಸೀರೆಯಲ್ಲಿ ನೇಣು ಬಿಗಿದುಕೊಂಡಳು ಅಪ್ರಾಪ್ತೆ

ಮಂಗಳೂರಿನ ಬಂಗ್ರ ಕೂಳೂರಿನಲ್ಲೂ ರಸ್ತೆ ಕುಸಿತ

ಭಾರೀ ಮಳೆಯಿಂದಾಗಿ ಮಂಗಳೂರಿನಲ್ಲಿ ಅವಾಂತರವೇ ಸೃಷ್ಟಿಯಾಗಿದೆ. ಮಂಗಳೂರಿನ ಬಂಗ್ರ ಕೂಳೂರಿನಲ್ಲಿ ರಸ್ತೆ ಕುಸಿದಿದೆ. ಎ ಜೆ ಇಂಜಿನಿಯರಿಂಗ್ ಕಾಲೇಜಿಗೆ ಸಂಪರ್ಕಿಸುವ ರಸ್ತೆ ಇದಾಗಿದ್ದು, ಮಣ್ಣಿನ ಸವೆತಕ್ಕೆ ಕ್ಷಣ ಕ್ಷಣಕ್ಕೂ ರಸ್ತೆಯು ಕುಸಿಯುತ್ತಿದೆ.

350 ಮೀಟರ್ ಉದ್ದದ ಈ ರಸ್ತೆಯಲ್ಲಿ ರಾಜಕಾಲುವೆಯು ಹೊಂದಿಕೊಂಡಿದೆ. ಹೀಗಾಗಿ ಈ ರಸ್ತೆಯಲ್ಲಿ ವಾಹನ ಸಂಚಾರ ಹಾಗೂ ಜನರ ಓಡಾಟವನ್ನು ನಿಷೇಧಿಸಲಾಗಿದೆ. ರಸ್ತೆ ಪಕ್ಕದ 10ಕ್ಕೂ ಹೆಚ್ಚು ಮನೆಗಳು ಕೂಡ ಅಪಾಯದಲ್ಲಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ.

ಚಿಕ್ಕಮಗಳೂರಲ್ಲಿ ಗಾಳಿ- ಮಳೆಗೆ ಶಾಲೆಗೆ ಹಾನಿ

ಚಿಕ್ಕಮಗಳೂರಿನಲ್ಲಿ ಗಾಳಿ-ಮಳೆ ಮುಂದುವರಿದಿದೆ. ಭಾರಿ ಮಳೆಗೆ ಶಾಲಾ ಕಟ್ಟಡವೊಂದು ಶಿಥಿಲಾವಸ್ಥೆಗೊಂಡಿದೆ. ಸರ್ಕಾರಿ ಶಾಲೆಯ ಚಾವಣಿಗೆ ಹಾನಿಯಾಗಿದ್ದು, ಗೋಡೆಯ ಮಣ್ಣು ಉದುರುತ್ತಿದೆ. ಮೂಡಿಗೆರೆ ತಾಲೂಕಿನ ಹಾಲೂರು ಸರ್ಕಾರಿ ಶಾಲೆಯಲ್ಲಿ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಶಾಲೆಗೆ ಭೇಟಿ ನೀಡಿದ ಸ್ಥಳೀಯ ಶಾಸಕಿ ನಯನ ಮೋಟಮ್ಮ, ಶಿಥಿಲಾವಸ್ಥೆ ಗೊಂಡಿರುವ ಚಾವಣಿ ಸರಿಪಡಿಸಲು ಕ್ರಮವಹಿಸಲು ಸೂಚಿಸಿದರು.

ಧಾರಾಕಾರ ಮಳೆಗೆ ಧುಮ್ಮಿಕ್ಕಿದ ಜೋಗ್‌ ಫಾಲ್ಸ್‌

ಶಿವಮೊಗ್ಗದ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯಿಂದ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಜೋಗ ಜಲಪಾತದ ಸೌಂದರ್ಯಕ್ಕೆ ಪ್ರವಾಸಿಗರು ಮನ ಸೋತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿತ್ರದುರ್ಗ

Student Death : ಅಮ್ಮನ ಸೀರೆಯಲ್ಲಿ ನೇಣು ಬಿಗಿದುಕೊಂಡಳು ಅಪ್ರಾಪ್ತೆ

Student Death : ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿಯೊಬ್ಬಳು ಅಮ್ಮನ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ.

VISTARANEWS.COM


on

By

Student death
Koo

ಚಿತ್ರದುರ್ಗ: ಅಪ್ರಾಪ್ತೆಯೊಬ್ಬಳು ಅನುಮಾನಾಸ್ಪದವಾಗಿ (Student Death) ಮೃತಪಟ್ಟಿದ್ದಾಳೆ. ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಚಿತ್ರದುರ್ಗ ಜಿಲ್ಲೆಯ ಹಳವುದರ ಲಂಬಾಣಿಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಸಂಜನಾ (14) ಮೃತ ದುರ್ದೈವಿ.

ಹಳವುದರ ಲಂಬಾಣಿಹಟ್ಟಿ ಗ್ರಾಮದ ಬೇಬಿಬಾಯಿ ಹಾಗೂ ಉಮ್ಯಾನಾಯ್ಕ್ ದಂಪತಿಯ ಪುತ್ರಿ ಸಂಜನಾ ಕರಿಯಮ್ಮನ ಹಟ್ಟಿ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಮನೆಯಲ್ಲಿ ಯಾರು ಇಲ್ಲದ ವೇಳೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸದ್ಯ ಬಾಲಕಿ ಆತ್ಮಹತ್ಯೆ ಕುರಿತು ಪೋಷಕರು ಅನುಮಾನವನ್ನು ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಭರಮಸಾಗರ ಠಾಣೆ ಪೊಲೀಸರು ಮೃತದೇಹವನ್ನು ಸಿರಿಗೆರೆ ಆಸ್ಪತ್ರೆಗೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಭರಮಸಾಗರ ಠಾಣೆಯಲ್ಲಿ ಈ ಸಂಬಂಧ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. ಬಾಲಕಿ ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಳು, ಯಾರಾದರೂ ಪ್ರಚೋದನೆ ನೀಡಿದ್ದರಾ ಎಂಬ ಎಲ್ಲ ಆಯಾಮದಲ್ಲೂ ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Theft case : ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಕೆಲಸಗಾರ; ರಾಯಚೂರಲ್ಲಿ ಬೀಡುಬಿಟ್ಟ ಮಂಕಿ ಕ್ಯಾಪ್‌ ಗ್ಯಾಂಗ್‌!

ಶಿಕ್ಷಕನಿಂದ ಇದೆಂಥ ಅನಾಚಾರ! ಬಾಲಕಿಗೆ ಲೈಂಗಿಕ ಕಿರುಕುಳ

ಬೆಂಗಳೂರು: ಪ್ರೌಢ ಶಾಲಾ ಶಿಕ್ಷಕನಿಂದ ಬಾಲಕಿಗೆ ಲೈಂಗಿಕ ಕಿರುಕುಳದ (Physical Abuse) ಆರೋಪ ಕೇಳಿ ಬಂದಿದೆ. ಕಳೆದ ಶನಿವಾರ ಕಮಲಾನಗರದ ಶಾಲೆಯೊಂದರಲ್ಲಿ ಇಂತಹ ಅನಾಚಾರ ನಡೆದಿದೆ.

ಮಗಳ ಮೇಲೆ ಶಿಕ್ಷಕ ಲೈಂಗಿಕ ದೌರ್ಜನ್ಯ ನಡೆಸಿದ ಹಿನ್ನೆಲೆಯಲ್ಲಿ ಬಾಲಕಿ ತಂದೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಮಕ್ಕಳ ಹಕ್ಕುಗಳ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಜತೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ದೂರು ದಾಖಲಾಗಿದೆ.

ಕಾಮುಕನ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಾಲಕಿಯ ತಂದೆ ಮನವಿ ಮಾಡಿದ್ದಾರೆ. ಕಾಮುಕ ಶಿಕ್ಷಕ ಶಾಲೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿ ಮೇಲೆ ಎರಗಿದ್ದಾನೆ. ಬಳಿಕ ಈ ವಿಷಯವನ್ನು ಹೊರಗೆ ಹೇಳದಂತೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. ಶಿಕ್ಷಕನ ವರ್ತನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ತಮ್ಮ ಮಕ್ಕಳನ್ನು ಶಾಲೆಗೆ ಕಳಿಸಲು ಇತರೆ ಪೋಷಕರು ಹಿಂದೇಟು ಹಾಕುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯದ ಇಲ್ಲೆಲ್ಲ ವಿಪರೀತ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather Forecast : ಕರಾವಳಿ ಹಾಗೂ ಮಲೆನಾಡು ಸುತ್ತಮುತ್ತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಸಂಜೆ ವೇಳೆ ಹಗುರದಿಂದ ಕೂಡಿದ ಮಳೆ ಸುರಿಯಲಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ (rain News) ಸಾಧ್ಯತೆ ಇದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (karnataka Weather Forecast) ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳದಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚಿನ ಜತೆಗೆ ಗಂಟೆಗೆ 30-40 ಕಿ.ಮೀ ಗಾಳಿ ಬೀಸುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಪ್ರತ್ಯೇಕವಾಗಿ ಹಗುರವಾದ ಮಳೆಯಾಗುವ ನಿರೀಕ್ಷೆಯಿದೆ.

ಮಲೆನಾಡು ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾದರೆ, ಕರಾವಳಿಯಲ್ಲಿ ವ್ಯಾಪಕ ಲಘುದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಕರಾವಳಿ ಮತ್ತು ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆಯು ಮುಂದುವರಿದಿದೆ. ಗುಡುಗು ಸಹಿತ ಗಾಳಿಗೆ ವೇಗವು 40-50 ಕಿ.ಮೀ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ ಹೇರಲಾಗಿದೆ.

ಇದನ್ನೂ ಓದಿ: Tumkur News : ತುಮಕೂರಿನಲ್ಲಿ ಗ್ರಾಪಂ ಸದಸ್ಯನ ಮೇಲೆ ಚಪ್ಪಲಿ ಎಸೆದು ಮನಬಂದಂತೆ ಥಳಿಸಿದ ಉಪಾಧ್ಯಕ್ಷ!

ಮಳೆಗಾಲಕ್ಕೆ ತಕ್ಕಂತೆ ಬದಲಾಗುವ ಫುಟ್‌ವೇರ್‌ ಸ್ಟೈಲಿಂಗ್‌


ಮಳೆಗಾಲಕ್ಕೆ ತಕ್ಕಂತೆ (Monsoon Footwear Fashion) ಪ್ರತಿಯೊಬ್ಬರ ಫುಟ್‌ವೇರ್‌ ಸ್ಟೈಲಿಂಗ್‌ ಕೂಡ ಬದಲಾಗುತ್ತದೆ. ಇದಕ್ಕೆ ಪೂರಕ ಎಂಬಂತೆ, ಮಾರುಕಟ್ಟೆಯಲ್ಲಿ ನಾನಾ ಬ್ರಾಂಡ್‌ಗಳು ವಿನೂತನ ಮಾದರಿಯ ಬಗೆಬಗೆಯ ವಿನ್ಯಾಸದ ವಾಟರ್‌ಪ್ರೂಫ್‌ ಹಾಗೂ ಸ್ಕಿಡ್‌ ಆಗದ ಫುಟ್‌ವೇರ್​​ಗಳು ಲಗ್ಗೆ ಇಟ್ಟಿವೆ.

Monsoon Footwear Fashion

ವೈವಿಧ್ಯಮಯ ಫುಟ್‌ವೇರ್ಸ್

ಅವುಗಳಲ್ಲಿ ಫಂಕಿ ಕ್ರೂಕ್ಸ್‌, ಫ್ಲಿಪ್‌ಫ್ಲಾಪ್‌, ಜೆಲ್ಲಿ ಫ್ಲಾಟ್ಸ್, ವೆಡ್ಜಸ್‌ ಬೆಲ್ಲಿ ಶೂಸ್‌, ಸ್ಕಿಪ್ಪರ್‌ ಕ್ಲಾಗ್ಸ್‌, ಕ್ಯಾನ್ವಾಸ್‌, ಬ್ಯಾಲೇರಿನಾ ಫ್ಲಾಟ್‌ ಸ್ಯಾಂಡಲ್ಸ್, ಮಾನ್ಸೂನ್‌ ಸ್ನೀಕರ್‌, ರೈನ್‌ ಶೂ, ಅಕ್ವಾ ಶೂಸ್‌, ಗಮ್‌ ಬೂಟ್ಸ್, ಫೋಮ್‌ ಕ್ಲಾಗ್ಸ್ ಸೇರಿದಂತೆ ಮೆನ್ಸ್‌ ಹಾಗೂ ವುಮೆನ್ಸ್‌ ಕೆಟಗರಿಯಲ್ಲಿ ನಾನಾ ಬಗೆಯವು ಬಿಡುಗಡೆಗೊಂಡಿದ್ದು, ಮಾರಾಟ ಹೆಚ್ಚಾಗಿಯೇ ಸಾಗಿದೆ ಎನ್ನುತ್ತಾರೆ ಫುಟ್‌ವೇರ್‌ ಶೋರೂಂವೊಂದರ ಮಾರಾಟಗಾರರು.

ಸೀಸನ್‌ಗೆ ಬದಲಾಗುವ ಫುಟ್‌ವೇರ್ಸ್

ಸಮ್ಮರ್‌ ಸೀಸನ್‌ನಿಂದ ಮಾನ್ಸೂನ್‌ ಸೀಸನ್‌ಗೆ ಕಾಲಿಡುವಾಗ ಫುಟ್‌ವೇರ್‌ ಫ್ಯಾಷನ್‌ ಕೂಡ ಸಾಕಷ್ಟು ಬದಲಾಗುತ್ತದೆ. ಗ್ರ್ಯಾಂಡ್‌ ಲುಕ್‌ ನೀಡುವ ಸ್ಯಾಂಡಲ್ಸ್‌ ಆಗಲಿ, ವೆಲ್ವೆಟ್‌ ಹಾಗೂ ಡಿಸೈನರ್‌ ಶೂಗಳನ್ನಾಗಲಿ ಈ ಮಳೆಗಾಲದಲ್ಲಿ ಧರಿಸಿ ಹೊರಾಂಗಣದಲ್ಲಿ ಓಡಾಡಲು ಸಾಧ್ಯವಿಲ್ಲ! ಹಾಗಾಗಿ ಮಳೆಗಾಲಕ್ಕೆ ನೀರಿನಲ್ಲಿ ನೆನೆದರೂ, ತೊಪ್ಪೆಯಾದರೂ, ವಾಶ್‌ ಮಾಡಿದರೂ ಹಾಳಾಗದ ಮೆಟೀರಿಯಲ್‌ನ ಫುಟ್‌ವೇರ್‌ಗಳನ್ನು ಧರಿಸುವುದು, ವಾಕ್‌ ಮಾಡುವಾಗ ಸ್ಕಿಡ್‌ ಆಗದ, ಜಾರದ ಫುಟ್‌ವೇರ್‌ಗಳನ್ನು ಧರಿಸುವುದು ಅವಶ್ಯವಾಗುತ್ತದೆ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು. ಅದರಲ್ಲೂ ಪ್ರತಿನಿತ್ಯ ಹೆಚ್ಚು ಓಡಾಡುವ ವ್ಯಾಪಾರಸ್ಥರು, ಉದ್ಯೋಗಸ್ಥರು ಹೆಚ್ಚಾಗಿ ಕಂಫರ್ಟಬಲ್‌ ಜೊತೆಗೆ ಸೀಸನ್‌ ಮುಗಿಯುವವರೆಗೂ ಬಾಳಿಕೆ ಬರುವಂತಹ ಫುಟ್‌ವೇರ್‌ಗಳನ್ನೇ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ ಎನ್ನುತ್ತಾರೆ ಅವರು.

ಬೂಟ್ಸ್-ಶೂ-ಸ್ಯಾಂಡಲ್ಸ್-ಫ್ಲಿಪ್‌-ಫ್ಲಾಪ್‌

ಮಳೆಗಾಲದಲ್ಲಿ ಫ್ಯಾಷನ್‌ ಲುಕ್‌ಗಾಗಿ ಮಾತ್ರವಲ್ಲ, ನಿಮ್ಮ ಕಂಫರ್ಟಬಲಿಟಿಗೆ ತಕ್ಕಂತೆ ಆಯ್ಕೆ ಮಾಡಿಕೊಳ್ಳುವುದು ಜಾಣತನ. ಔಟ್‌ಡೋರ್‌ನಲ್ಲಿ ಹೆಚ್ಚು ಓಡಾಡುವವರು ಹಾಗೂ ಕೆಲಸ ಮಾಡುವವರು ಬೂಟ್ಸ್​​​ಗಎ ಮೊರೆ ಹೋದರೆ, ಮಹಿಳೆಯರು ಸ್ಯಾಂಡಲ್ಸ್‌ ಹಾಗೂ ಫ್ಲಿಪ್‌-ಫ್ಲಾಪ್‌ಗಳನ್ನು ಚೂಸ್‌ ಮಾಡುತ್ತಾರೆ. ಇನ್ನು ಹುಡುಗಿಯರು ಕ್ರೂಕ್ಸ್‌ ಹಾಗೂ ಬ್ಯಾಲೇರಿನಾ ಶೂಗಳಂತವನ್ನು ಸೆಲೆಕ್ಟ್‌ ಮಾಡುತ್ತಾರೆ ಎನ್ನುತ್ತಾರೆ ಫುಟ್‌ವೇರ್‌ ಮಾರಾಟಗಾರರು.

ಫುಟ್‌ವೇರ್‌ ಸೆಲೆಕ್ಷನ್‌ ಹೀಗಿರಲಿ

  • – ಫ್ಯಾಷನ್‌ಗಿಂತ ಹೆಚ್ಚಾಗಿ ಆರಾಮದಾಯಕವಾಗಿರಲಿ.
  • – ಫುಟ್‌ವೇರ್‌ ಒದ್ದೆಯಾಗಿದ್ದಲ್ಲಿ, ಒಣಗಿಸಿ, ಧರಿಸಿ.
  • – ಗುಣಮಟ್ಟದ ಫುಟ್‌ವೇರ್ ಕೊಳ್ಳಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Karnataka Weather Forecast : ಸೋಮವಾರ ದಾವಣಗೆರೆ, ಕೊಡಗು ಸುತ್ತಮುತ್ತ ಮಳೆಯಾಗಿದ್ದು, ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇತ್ತು. ಜು.2ರಂದು ರಾಜ್ಯಾದ್ಯಂತ ಮಳೆಯಾಗುವ (Rain News) ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು/ದಾವಣಗೆರೆ: ಕರಾವಳಿ, ಮಲೆನಾಡು ಹಾಗೂ ಒಳನಾಡು ಭಾಗದಲ್ಲಿ ಮಳೆಯು (Rain News) ಅಬ್ಬರಿಸುತ್ತಿದೆ. ಸೋಮವಾರ (ಜು.1) ದಾವಣಗೆರೆಯಲ್ಲಿ ಅರ್ಧ ಗಂಟೆಗೂ ಹೆಚ್ಚು ಸಮಯ (Karnataka weather Forecast) ಮಳೆಯಾಗಿದೆ. ನಗರದ ಕೆಬಿ ಬಡಾವಣೆ, ಪಿಜೆ ಬಡಾವಣೆಯ ರಸ್ತೆಗಳಲ್ಲಿ ನೀರು ತುಂಬಿ ಹರಿದಿದೆ. ಇತ್ತ ಕೊಡಗಿನಲ್ಲೂ ಆರಿದ್ರಾ ಮಳೆ ಅಬ್ಬರಕ್ಕೆ ನದಿ ತೋರೆ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ತಲಕಾವೇರಿ ಭಾಗಮಂಡಲ ವ್ಯಾಪ್ತಿಯಲ್ಲೂ ಉತ್ತಮ ಮಳೆಯಾಗುತ್ತಿದೆ. ಕಾವೇರಿ ನದಿ ನೀರಿನ ಮಟ್ಟದಲ್ಲೂ ಗಣನೀಯ ಏರಿಕೆ ಕಂಡಿದೆ.

ಪಂಚಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಮುಳುಗಡೆ

ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಮಳೆ ಮುಂದುವರಿದಿದೆ. ನಿರಂತರ ಮಳೆಯಿಂದ ಪಂಚಗಂಗಾ ಒಳಹರಿವಿನ ಪ್ರಮಾಣ ಹೆಚ್ಚಳಗೊಂಡಿದೆ. ಪಂಚಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಬ್ರಿಡ್ಜ್ ಕಮ್ ಬ್ಯಾರೇಜ್ ಮುಳುಗಡೆಯಾಗಿದೆ. ಕೊಲ್ಹಾಪುರ ಜಿಲ್ಲೆಯ ಶಿಂಗನಾಪುರ ಬಳಿ ಇರುವ ಸೇತುವೆ ಮುಳುಗಡೆಗೊಂಡಿದ್ದು, ವಾಹಗಳ ಸಂಚಾರಕ್ಕೆ ತೊಂದರೆಯುಂಟಾಗಿದೆ. ಇತ್ತ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದ ಕೊಲ್ಹಾಪುರ ಜಿಲ್ಲಾಡಳಿತ ಹಾಗೂ ಪೊಲೀಸರ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: Inspirational Story: ಕಣ್ಣೆದುರೆ ಸುಟ್ಟು ಕರಕಲಾದ ಮಗಳ ದುರಂತ ಅಂತ್ಯ; ಬಡಮಕ್ಕಳಿಗೆ ದಾರಿದೀಪವಾದ ಎಎಸ್‌ಐ

ಒಳನಾಡಿನಲ್ಲಿ ಮುಂಗಾರು ಸಕ್ರಿಯ

ನೈರುತ್ಯ ಮುಂಗಾರು ಒಳನಾಡಿನಲ್ಲಿ ಸಕ್ರಿಯವಾಗಿದ್ದರೆ, ಕರಾವಳಿಯಲ್ಲಿ ಸಾಧಾರಣವಾಗಿತ್ತು. ಕೊಡಗಿನ ವಿರಾಜಪೇಟೆಯಲ್ಲಿ 13 ಸೆಂ.ಮೀ ಮಳೆಯಾಗಿದೆ. ಜತೆಗೆ ಭಾಗಮಂಡಲ 11, ಆಗುಂಬೆ 9, ಸಿದ್ದಾಪುರ 8, ಕಮ್ಮರಡಿ 8 ಹಾಗೂ ಕುಂದಾಪುರ 7 ಸೆಂ.ಮೀ ಮಳೆಯಾಗಿದೆ. ಉಳಿದಂತೆ ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ.

ಕರಾವಳಿಯಲ್ಲಿ ತಗ್ಗಿದ ಮಳೆ ಅಬ್ಬರ

ಜು.2ರಂದು ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಅಬ್ಬರವು ತಗ್ಗಿದೆ. ಉತ್ತರ ಒಳನಾಡಿನ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ತಲುಪಲಿದೆ. ದಕ್ಷಿನ ಒಳನಾಡಿನ ಹಲವೆಡೆ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದ್ದು, ಗರಿಷ್ಟ ಹಾಗೂ ಕನಿಷ್ಠ ಉಷ್ಣಾಂಶವು ಕ್ರಮವಾಗಿ 27 ಹಾಗೂ 21 ಡಿ.ಸೆ ಇರಲಿದೆ.

ಚಾರ್ಮಾಡಿ ಘಾಟ್‌ನಲ್ಲಿ ಪ್ರವಾಸಿಗರ ಹುಚ್ಚಾಟ

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ ಜಾರುವ ಬಂಡೆಗಳ ಮೇಲೆ ಪ್ರವಾಸಿಗರು ಹುಚ್ಚಾಟ ಮೆರೆದಿದ್ದಾರೆ. ಜಲಪಾತಗಳ ಮಧ್ಯೆ ಹೋಗಿ ಜಾರುವ ಬಂಡೆಗಳ ಮೇಲೆ ಸ್ವಲ್ಪ ಯಾಮಾರಿದರೂ ಅಪಾಯ ಕಟ್ಟಿಟ್ಟ ಬುತ್ತಿ. ಬಂಡೆಗಳ ಮೇಲೆ ಹತ್ತಿ ಅಪಾಯದ ಸ್ಥಳದಲ್ಲಿ ಡ್ಯಾನ್ಸ್ ಮಾಡುತ್ತಾ ಮೋಜು ಮಸ್ತಿ ಮಾಡುತ್ತಿದ್ದಾರೆ. ನಿರಂತರವಾಗಿ ನೀರು ಹರಿದು ಬಂಡೆ ತೀವ್ರವಾಗಿ ಜಾರುತ್ತಿರುತ್ತೆ. ಈ ಹಿಂದೆಯೂ ಬಿದ್ದು ಕೈ-ಕಾಲು ಮುರಿದುಕೊಂಡಿದ್ದಾರೆ, ಜೀವ ಕಳೆದುಕೊಂಡಿದ್ದಾರೆ. ಬಂಡೆಗಳ ಮೇಲೆ ಹತ್ತದಂತೆ ನಾಮಫಲಕ ಇದ್ದರೂ ಪ್ರವಾಸಿಗರು ಮಾತ್ರ ಡೋಂಟ್ ಕೇರ್ ಎನ್ನುತ್ತಿದ್ದಾರೆ. ಇತ್ತ ಪೊಲೀಸರು ಗಸ್ತು ತಿರುಗುತ್ತಿದ್ದರೂ ಕಣ್ತಪ್ಪಿಸಿ ಬಂಡೆ ಹತ್ತುತ್ತಿದ್ದಾರೆ. ಜಲಪಾತಗಳ ಬಳಿ ಕಾರು ನಿಲ್ಲಿಸಿಕೊಂಡು ರಸ್ತೆ ಬದಿಯೂ ಕುಣಿದು ಕುಪ್ಪಳಿಸುತ್ತಾ, ಇತರೆ ವಾಹನಗಳಿಗೂ ಅಡ್ಡಿಯಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Pancreatitis
ಆರೋಗ್ಯ32 seconds ago

Pancreatitis: ಏನಿದು ಪ್ಯಾಂಕ್ರಿಯಾಟೈಟಿಸ್‌ನಿಂದ ಉಂಟಾಗುವ ಉರಿಯೂತ? ಇದಕ್ಕೇನು ಪರಿಹಾರ?

MLA Shivaram Hebbar spoke in Taluk level janaspandana programme yallapur
ಉತ್ತರ ಕನ್ನಡ3 mins ago

Uttara Kannada News: ಮಾನವೀಯ ದೃಷ್ಟಿಯಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಶಾಸಕ ಶಿವರಾಮ ಹೆಬ್ಬಾರ್ ಸೂಚನೆ

Advocate G Devarajegowda
ಕರ್ನಾಟಕ4 mins ago

Advocate G Devarajegowda: ಅತ್ಯಾಚಾರ ಕೇಸ್‌; ಜೈಲಿನಿಂದ ವಕೀಲ ದೇವರಾಜೇಗೌಡ ರಿಲೀಸ್‌

Uttara Kannada News Meeting by DC Gangubai Manakar in Karwar
ಉತ್ತರ ಕನ್ನಡ5 mins ago

Uttara Kannada News: ಉತ್ತರ ಕನ್ನಡ ಸ್ಥಳೀಯ ಸಂಸ್ಥೆಗಳ ಕಾಮಗಾರಿ ಚುರುಕುಗೊಳಿಸಲು ಡಿಸಿ ಸೂಚನೆ

Minister Lakshmi Hebbalkar has submitted various proposals to the Union Minister seeking grant for the strengthening of the department
ಕರ್ನಾಟಕ7 mins ago

Lakshmi Hebbalkar: ಅಂಗನವಾಡಿ ಬಲವರ್ಧನೆಗೆ ಕೇಂದ್ರದ ನೆರವು ಕೋರಿದ ಲಕ್ಷ್ಮೀ ಹೆಬ್ಬಾಳಕರ್

Hathras Stampede
ದೇಶ14 mins ago

Hathras Stampede: ಹತ್ರಾಸ್‌ನಲ್ಲಿ ಕಾಲ್ತುಳಿತ ಹೇಗಾಯ್ತು? ಸತ್ಸಂಗ ನಡೆಸಿದ ಭೋಲೆ ಬಾಬಾ ಯಾರು? ಇಲ್ಲಿದೆ ಮಾಹಿತಿ

Krishna River Tragedy
ಕರ್ನಾಟಕ30 mins ago

Krishna River Tragedy: ಕೃಷ್ಣಾ ನದಿಯಲ್ಲಿ ತೆಪ್ಪ ಮುಗುಚಿ ಆರು ಮಂದಿ ನೀರುಪಾಲು, ಒಬ್ಬರ ಮೃತದೇಹ ಪತ್ತೆ

Stampedes in India
ದೇಶ38 mins ago

Stampedes in India: ದೇಶದಲ್ಲಿ ಈ ಹಿಂದೆಯೂ ನಡೆದಿವೆ ಭಾರೀ ಕಾಲ್ತುಳಿತ ದುರಂತ; ಇಲ್ಲಿದೆ ಲಿಸ್ಟ್‌

Agniveer
ರಾಜಕೀಯ46 mins ago

Agniveer: ಹುತಾತ್ಮ ʼಅಗ್ನಿವೀರʼನ ಕುಟುಂಬಕ್ಕೆ 1.08 ಕೋಟಿ ರೂ. ಪರಿಹಾರ; ರಾಹುಲ್‌ ಗಾಂಧಿ ಆರೋಪ ಠುಸ್‌!

Hathras Stampede
ಪ್ರಮುಖ ಸುದ್ದಿ49 mins ago

Hathras Stampede : ಹತ್ರಾಸ್​ ಸತ್ಸಂಗದಲ್ಲಿ ಕಾಲ್ತುಳಿತಕ್ಕೆ ಮೃತಪಟ್ಟವರ ಸಂಖ್ಯೆ 107 ಕ್ಕೆ ಏರಿಕೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ1 day ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌