Arecanut Cultivation: ಒಣಗುತ್ತಿರುವುದು ಅಡಿಕೆ ಮರಗಳಲ್ಲ, ರೈತರ ಬದುಕು! - Vistara News

ಚಿತ್ರದುರ್ಗ

Arecanut Cultivation: ಒಣಗುತ್ತಿರುವುದು ಅಡಿಕೆ ಮರಗಳಲ್ಲ, ರೈತರ ಬದುಕು!

Arecanut Cultivation: ಬೇಸಿಗೆಯಲ್ಲಿ ಹಲವೆಡೆ ಕುಡಿಯುವ ನೀರಿಲ್ಲದೆ ಜನ ಸಂಕಷ್ಟ ಎದುರಿಸುವಂತಾಗಿದೆ. ಮತ್ತೊಂದೆಡೆ ಮಳೆಯಿಲ್ಲದೆ ಅಡಿಕೆ ಸೇರಿ ವಿವಿಧ ರೀತಿಯ ಬೆಳೆಗಳು ಒಣಗುತ್ತಿದ್ದು, ಚಿತ್ರದುರ್ಗದ ಚಳ್ಳಕೆರೆ ತಾಲೂಕಿನಲ್ಲಿ ನೀರಿನ ಅಭಾವದಿಂದ ಅಡಿಕೆ ಮರಗಳು ಒಣಗುತ್ತಿವೆ. ಇದರಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ.

VISTARANEWS.COM


on

Arecanut cultivation
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಚಳ್ಳಕೆರೆ: ಬರಗಾಲಕ್ಕೆ ತುತ್ತಾದ ಚಳ್ಳಕೆರೆ ತಾಲೂಕಿನ ರೈತರಿಗೆ ಅನಿವಾರ್ಯವಾದದ್ದೇ ಅಡಿಕೆ ಬೆಳೆ (Arecanut Cultivation). ಸಾವಿರಾರು ಹೆಕ್ಟೇರ್​ನಲ್ಲಿ ಅಡಿಕೆ ಬೆಳೆದು ಬದುಕು ಸಾಗಿಸಲು ಕನಸು ಕಂಡಿದ್ದ ಬೆಳೆಗಾರರ ಬದುಕೀಗ ಬಿಸಿಲ ಬೇಗೆಗೆ ಸುಟ್ಟು ಕರಕಲಾಗಿದೆ. ಹಚ್ಚ- ಹಸಿರಿನಿಂದ ರಾರಾಜಿಸುತ್ತಿದ್ದ ಅಡಿಕೆ ಮರಗಳು ನೀರಿಲ್ಲದೇ ಒಣಗಿ ನಿಲ್ಲುತ್ತಿವೆ. ಬೋರ್​ವೆಲ್​ನಲ್ಲಿ ನೀರು ನಿಲ್ಲುತ್ತಿದ್ದಂತೆ ಮರಗಳು ಸುಡಲು ಆರಂಭಿಸಿವೆ. ಒಣಗುತ್ತಿರುವುದು ಮರಗಳಲ್ಲ. ನಮ್ಮ ಬದುಕು ಎಂದು ಬೆಳೆಗಾರರು ಕಂಗಾಲಾಗಿದ್ದಾರೆ.

ಅತ್ತ ಮಳೆ ಇಲ್ಲ. ಇತ್ತ ನೆಲದಲ್ಲಿ ನೀರಿಲ್ಲ. ಎಷ್ಟು ಬೋರ್ ಕೊರೆಯಿಸಿದರು. ನೀರು ಬರುತ್ತಿಲ್ಲ.
ಇನ್ನು ಒಂದು ತಿಂಗಳ ಕಾಲ ಭೂಮಿಗೆ ಮಳೆ ಬಾರದಿದ್ದರೆ ಅದೆಷ್ಟೋ ಅಡಿಕೆ ತೋಟಗಳು ಒಣಗಿ ಹೋಗುತ್ತವೆ ಎನ್ನುತ್ತಾರೆ ರೈತ ತಿಪ್ಪೇಸ್ವಾಮಿ.

ತಾಲೂಕಿನ ಕಾಪರಹಳ್ಳಿ ಗ್ರಾಮದ ಗುರುಸ್ವಾಮಿ ರೈತ ತಮ್ಮ ಜಮೀನಿನಲ್ಲಿ ಅಡಿಕೆ ಬೆಳೆಯನ್ನು ಬೆಳೆದಿದ್ದು, ಈಗ ಕೊಳವೆ ಬಾವಿಯಲ್ಲಿ ನೀರಿಲ್ಲದೆ ಅಡಿಕೆ ಬೆಳೆ ಸಂಪೂರ್ಣ ಒಣಗುತ್ತಿದೆ.

ವಿಸ್ತಾರ ಗ್ರಾಮ ದನಿ: ಅಡಿಕೆ ರೋಗಗಳಿಗೆ, ಇಳುವರಿ ಕ್ಷೀಣಿಸುವುದಕ್ಕೆ ಕಾರಣವೇ ಇದು! ಬೆಳೆಗಾರರೇ ಗಮನಿಸಿ…

Areca Agriculture
Aravind Sigadal
-ಅರವಿಂದ ಸಿಗದಾಳ್, ಮೇಲುಕೊಪ್ಪ

ಅಡಿಕೆ ಹಳದಿ ರೋಗಕ್ಕೆ ಕಾರಣ ಮತ್ತು ಔಷಧಿ (Areca Agriculture) ಎರಡೂ ಇನ್ನು ಪ್ರಶ್ನೆಯಾಗಿಯೇ ಉಳಿದಿವೆ. ಅಡಿಕೆ ಎಲೆ ಚುಕ್ಕಿ ರೋಗ ನಿರ್ದಿಷ್ಟ ಫಂಗಸ್‌ಗಳಿಂದ ಸಾಂಕ್ರಾಮಿಕವಾಗಿ ಹರಡುತ್ತಿರುವುದು ಕಾರಣ ಎಂದು ಗೊತ್ತಾಗಿದ್ದರೂ, ರೋಗಕ್ಕೆ ಇನ್ನೂ ಔಷಧಿಯನ್ನು ಕಂಡು ಹಿಡಿದಿಲ್ಲ. ಅನೇಕ ಫಂಗಿಸೈಡ್‌ಗಳನ್ನು ಪ್ರಯೋಗಿಸಿ ರೋಗದ ನಿಯಂತ್ರಣ ಪ್ರಯತ್ನ-ಪ್ರಯೋಗ ನೆಡೆಯುತ್ತಿದೆ. ರೋಗ ಬಂದ ಮೇಲೆ ಔಷಧಿ ಕೊಡುವ ಪ್ರಯತ್ನಗಳು ಸಹಜ ಮತ್ತು ಅಗತ್ಯ ಕೂಡ. ಅದರ ಜೊತೆಗೆ ರೋಗಗಳಿಗೆ ಕಾರಣವಾಗುವ ಮೂಲ ಯಾವುದು ಎಂಬ ಅಧ್ಯಯನ ಮತ್ತು ಪ್ರಯೋಗಗಳು ನಡೆಯಬೇಕು. ಆದರೆ ಅಡಿಕೆ ಹಳದಿ ರೋಗ ಮತ್ತು ಎಲೆಚುಕ್ಕಿ ರೋಗಗಳ ವಿಚಾರದಲ್ಲಿ ಈ ಕಾರಣ ಕಂಡುಹಿಡಿಯುವ ಅಧ್ಯಯನ ಮತ್ತು ಪ್ರಯೋಗಗಳು ತಳ ಮಟ್ಟದಿಂದ ತೀವ್ರಗತಿಯಲ್ಲಿ ನಡೆಯುತ್ತಿಲ್ಲ.

ಹವಾಮಾನ ವೈಪರೀತ್ಯ ಪರಿಣಾಮ, ಮಣ್ಣು-ನೀರು-ಗಾಳಿ-ಅಡಿಕೆ ಮರದ ಒಳ ಭಾಗದಲ್ಲಿ ಆಗುತ್ತಿರುವ pH ವ್ಯತ್ಯಾಸ, ಕ್ಷೀಣಿಸುತ್ತಿರುವ ಮಣ್ಣಿನ ಫಲವತ್ತತೆ, ಅದಕ್ಕೆ ಕಾರಣವಾಗುತ್ತಿರುವ ರಾಸಾಯನಿಕಗಳ ಬಳಕೆ, ಮಣ್ಣಿನ ಸಾವಯವ ಇಂಗಾಲದ ಕೊರತೆ, ಪ್ರತಿಯೊಂದು ರೋಗದ ಲಕ್ಷಣ ಕಂಡಾಗಲೂ ಬಳಸುತ್ತಿರುವ ಅತಿಯಾದ ವಿಷ ಪೂರಿತ ಔಷಧಿಗಳು, ಬಳಸುತ್ತಿರುವ ಕಳೆ ನಾಶಕಗಳು, ಹೆಚ್ಚು ಇಳುವರಿ ಬಯಕೆಯಿಂದ ಮಾಡುತ್ತಿರುವ ಬೇಸಾಯ ಪದ್ದತಿಗಳು, ಇವೆಲ್ಲವುಗಳಿಂದ ಆಗುತ್ತಿರುವ ಪರಿಣಾಮ ಇವತ್ತು ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಅಡಿಕೆಗೆ ರೋಗಗಳು ಹೆಚ್ಚುತ್ತಿವೆ. ಆರೋಗ್ಯವಂತ ಅಡಿಕೆ ತೋಟಗಳಲ್ಲಿ ಸಾಂಪ್ರದಾಯಕವಾಗಿ ಬೇಸಾಯ ಮಾಡುವಾಗ ಸರಾಸರಿ ಎಕರೆಗೆ 12 ಕ್ವಿಂಟಾಲ್ ಬರುತ್ತಿದ್ದ ಅಡಿಕೆ ಈಗ ಆರೋಗ್ಯವಿರುವಂತೆ ಕಾಣುವ ತೋಟದಲ್ಲೂ ಸರಾಸರಿ 7-8 ಕ್ವಿಂಟಾಲ್ ಮೇಲೆ ಬರುತ್ತಿಲ್ಲ. ಹಳದಿ ಎಲೆ ರೋಗ ಬಂದಲ್ಲಿ ಇಳುವರಿ 2-3 ಕ್ವಿಂಟಾಲಿಗೆ ಇಳಿದಿದೆ. ಹಳದಿ ರೋಗ, ಎಲೆ ಚುಕ್ಕಿ ರೋಗ ಎರಡೂ ಇರುವಲ್ಲಿ ಎಕರೆಗೆ ಕ್ವಿಂಟಾಲ್ ಇರಲಿ, 60-70 ಕೆಜಿ ಅಡಿಕೆಯೂ ಆಗುತ್ತಿಲ್ಲ!

Areca nuts image

ವಯಸ್ಸಾದಂತೆ ರೋಗ

ಹೇಗೆ ಮನುಷ್ಯರಲ್ಲಿ 35ನೇ ವಯಸ್ಸಿನಲ್ಲಿ ಬಿಪಿ, ಡಯಾಬಿಟಿಸ್, ಗ್ಯಾಸ್ಟಿಕ್‌ನಂತಹ ಶಾಶ್ವತ ರೋಗಗಳು ಬರುವಂತೆ ಅಡಿಕೆ ತೆಂಗು ಮರಗಳಿಗೂ, ಸಾಮರ್ಥ್ಯ ಕಮ್ಮಿಯಾಗುವ, ರೊಗಗಳಿಗೆ ಬಲಿಯಾಗುವ, ಇಳುವರಿ ಕಮ್ಮಿಯಾಗುವ ಸ್ಥಿತಿ ಉಂಟಾಗುತ್ತಿವೆ. ಕಡಿಮೆ ಇಳುವರಿಯ ಪರಿಸ್ಥಿತಿಗೆ ಹೊಂದಿಕೊಳ್ಳುವುದು ಅನಿವಾರ್ಯವಾಗುತ್ತಿದೆ. ಬಿಪಿ, ಡಯಾಬಿಟಿಸ್, ಗ್ಯಾಸ್ಟಿಕ್‌ನಂತೆ ಇಳುವರಿ ಕಡಿಮೆಯಾಗುವುದು ಶಾಶ್ವತ ಸಮಸ್ಯೆ ಆಗುತ್ತಿದೆ.
ಅತಿ ರಾಸಾಯನಿಕ ಬಳಕೆ, ಕೀಟನಾಶಕಗಳು, ಕ್ರಿಮಿನಾಶಕಗಳು, ರೋಗಗಳಿಗೆ ಕೊಡುತ್ತಿರುವ ರಾಸಾಯನಿಕ ಔಷಧಿಗಳು, ಕಡಿಮೆ ಆಗುತ್ತಿರುವ ಕೊಟ್ಟಿಗೆ ಗೊಬ್ಬರಗಳು, ಅವಜ್ಞಾನಿಕ ಕೃತಕ ಸಾವಯವ ಗೊಬ್ಬರ ಬಳಕೆಗಳ ನಡುವೆ ಸ್ವಾಭಾವಿಕವಾಗಿ ಉತ್ಪಾದನೆಗೊಳ್ಳುವ ಸಾವಯವ ಇಂಗಾಲದ ಕೊರತೆ ಅಡಿಕೆ ರೋಗಗಳಿಗೆ ಒಂದು ಪ್ರಮುಖ ಕಾರಣವಾಗಿದೆ.

Organic carbon

ಏನಿದು ಸಾವಯವ ಇಂಗಾಲ?

ಸರಳವಾಗಿ ಹೇಳುವುದಾದರೆ, ಪರಿಸರದಲ್ಲೇ ಇರುವ ಸಾವಯವ ವಸ್ತುಗಳು ಮತ್ತು ತ್ಯಾಜ್ಯಗಳು ಕೊಳೆಯುವುದರಿಂದ ಸಾವಯವ ಇಂಗಾಲ ಉತ್ಪತ್ತಿಯಾಗುತ್ತದೆ. ಮಣ್ಣಿನ ಫಲವತ್ತತೆ ಮತ್ತು ಗಿಡಗಳ ಬೆಳವಣಿಗೆಗೆ ಸಾವಯವ ಇಂಗಾಲ ಒಂದು ಪ್ರಮುಖ ಅಂಶ. ಗಿಡಗಳ ಆರೋಗ್ಯಕ್ಕೆ, ಉತ್ತಮ ಇಳುವರಿಗೆ, ಮಣ್ಣಿನ ಆರೋಗ್ಯಕ್ಕೆ ಈ ಸಾವಯವ ಇಂಗಾಲ ಅತ್ಯಗತ್ಯ. ಪರಿಸರದಲ್ಲಿ ಸಹಜವಾಗಿ ನೆಡೆಯುವ ರಾಸಾಯನಿಕ ಪ್ರಕ್ರಿಯೆಗಳಲ್ಲಿ ಈ ಸಾವಯವ ಇಂಗಾಲ ಉತ್ಪಾದನೆಯೂ ಒಂದು. ಮಣ್ಣಿನಲ್ಲಿ ತನ್ನಿಂದ ತಾನೆ ಉತ್ಪತ್ತಿಯಾಗುವ ಅನೇಕ ಜೀವಾಣುಗಳಿಗೆ ಆಹಾರವೂ ಈ ಸಾವಯವ ಇಂಗಾಲ. ಸಾವಯವ ಇಂಗಾಲಯುಕ್ತ ಮಣ್ಣು ಎಲ್ಲ ಸೂಕ್ಷ್ಮ ಜೀವಿಗಳಿಗೂ, ಎರೆಹುಳು, ಏಡಿಯಂತಹ ಜೀವಿಗಳಿಗೂ ಆಧಾರ. ಸಾವಯವ ಇಂಗಾಲದಿಂದ ಮಣ್ಣಿನಲ್ಲಿ ಸದಾ ತೇವದಿಂದ ಕೂಡಿದ ತಂಪಾದ ನೆಲೆ ಉಂಟಾಗುತ್ತದೆ. ಇದು ಅಗತ್ಯವಿರುವ ಎಲ್ಲ ಸೂಕ್ಷ್ಮ ಜೀವಿಗಳಿಗೆ ನೆಲೆ ಕೂಡ.

ಜೀವಾಣುಗಳಿಗೆ ದಾಹ

ನಮ್ಮ ಮಣ್ಣಿನಲ್ಲಿ ಕೋಟ್ಯಂತರ ಜೀವಾಣುಗಳಿವೆ. ಆದರೆ, ಸಾವಯವ ಪದ್ಧತಿ ಬಿಟ್ಟು ರಾಸಾಯನಿಕ ಬಳಕೆ ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಈ ಜೀವಾಣುಗಳು ಹಸಿವು, ದಾಹದಿಂದ ಬಳಲುತ್ತಿವೆ. ಆಹಾರ, ನೀರು ಮತ್ತು ನೆರಳಿಲ್ಲದೆ ಒಣಗುತ್ತಿವೆ, ನಾಶವಾಗುತ್ತಿವೆ. ಮಣ್ಣಿನ ಇಂಗಾಲದ ಪ್ರಮಾಣ ಗಣನೀಯವಾಗಿ ಇಳಿಮುಖವಾಗುತ್ತಿವೆ.
ಮಣ್ಣು ಜೀವಿಗಳಿಗೆ ಸೂಕ್ತ ಆಹಾರ, ನೀರು ನೀಡಿ ಜೀವಿಗಳು ನೆಮ್ಮದಿಯಿಂದ ಬದುಕಿ, ಬೆಳೆಯಲು ಅಗತ್ಯವಿರುವ ವಾತಾವರಣವನ್ನು ಸೃಷ್ಟಿಸುವುದು ನಮ್ಮೆಲ್ಲರ, ಅದರಲ್ಲೂ ಮುಖ್ಯವಾಗಿ ಕೃಷಿಕರ ಮೂಲ ಗುರಿಯಾಗಬೇಕು. ನೆಲದ ಮೇಲಿರುವ ನಮಗೆಲ್ಲರಿಗೂ ನೆಲದೊಳಗಿನ ಈ ಜೀವಿಗಳೇ ಆಧಾರ. ಇವಿಲ್ಲದೆ ನಾವಿಲ್ಲ. ಪೌಶ್ಟಿಕ ಆಹಾರ ಮತ್ತು ತಂಪಾದ ನೆಲೆಯನ್ನಷ್ಟೇ ಮಣ್ಣಿನ ಜೀವಾಣುಗಳು ನಮ್ಮಿಂದ ನಿರೀಕ್ಷಿಸುವುದು. ಈ ಮಣ್ಣುಜೀವಿಗಳು ಬದುಕುಳಿಯಲು ಸಮೃದ್ಧ ಆಹಾರ ಕೊಡಬೇಕು. ಎರೆಹುಳು ಮತ್ತಿತರ ಮಣ್ಣು ಜೀವಿಗಳಿಗೆ ಸಾವಯವ ಗೊಬ್ಬರವೇ ಉತ್ತಮ ಆಹಾರ. ಮಣ್ಣಲ್ಲಿ ಕೊಳೆತು ಕಳಿಯುವ ಈ ಗೊಬ್ಬರ ಮಣ್ಣುಜೀವಿಗಳಿಗೆ ಮೃಷ್ಟಾನ್ನದಂತೆ. ಬಳಿಕ ಇದುವೇ ನಮ್ಮ ನಿಮ್ಮೆಲ್ಲರ ಬೆಳೆಗಳನ್ನು ಕಾಯುವ, ಕಾಪಾಡುವ ಸಮೃದ್ಧ ಇಂಗಾಲವಾಗಿ ಮಾರ್ಪಡುತ್ತದೆ. ಈ ಇಂಗಾಲದಿಂದ ಮಣ್ಣು ಜೀವಿಗಳು ಬದುಕುಳಿಯಲು ಪೂರಕ ವಾತಾವರಣ ಸೃಷ್ಟಿಯಾಗುತ್ತದೆ. 
ಸಾವಯವ ಗೊಬ್ಬರವನ್ನು ತಿಂದು ಬದುಕುವ ಜೀವಿಗಳು ಕ್ರಮೇಣ ಗೊಬ್ಬರವನ್ನು ಗಿಡದ ಬೆಳವಣಿಗೆಗೆ ಅತ್ಯಗತ್ಯವಾದ ಪೋಷಕಾಂಶಗಳಾಗಿ ಪರಿವರ್ತಿಸುತ್ತವೆ. ಈ ವೇಳೆ ಮಣ್ಣಿನ ಮೇಲ್ಪದರದಲ್ಲಿ ಹ್ಯೂಮಸ್ ರೂಪುಗೊಳ್ಳುತ್ತದೆ. ಈ ಹ್ಯೂಮಸ್ ಮಣ್ಣಿನಲ್ಲಿ ಇಂಗಾಲದ ಅಂಶವನ್ನು ಹಿಡಿದಿಟ್ಟುಕೊಳ್ಳುತ್ತದೆ. ನಮ್ಮ ಮಣ್ಣುಗಳಲ್ಲಿ ಇಂಗಾಲಾಂಶ ಹೆಚ್ಚಾದಾಗ, ನಮ್ಮ ಹೊಲ ತೋಟಗಳು ಸಕಲ ಪೋಷಕಾಂಶಗಳನ್ನೂ ಒಳಗೊಂಡ ಶಕ್ತಿಕೇಂದ್ರಗಳಾಗುತ್ತವೆ.
ದರಗು, ಸೊಪ್ಪು, ಕತ್ತರಿಸಿ ಅಲ್ಲೇ ಬಿಟ್ಟ ಕಳೆ, ಹಳೇ ಅಡಿಕೆ ಮರ, ಕಸಿ ಮಾಡಿದ ಇತರೆ ಮರ-ರೆಂಬೆ-ಕೊಂಬೆಗಳು ಮಣ್ಣಿನಲ್ಲಿ ಕೊಳೆತು, ಮಣ್ಣುಸ್ನೇಹಿ ಜೀವಾಣುಗಳು ಅದನ್ನು ಸೇವಿಸಿ, ಜೀರ್ಣಿಸಿಕೊಂಡು ವಿಸರ್ಜಿಸಿದಾಗ ಮಣ್ಣಿನಲ್ಲಿ ಇಂಗಾಲ ಸೇರಿಸಿಕೊಳ್ಳುತ್ತದೆ.

Soil carbon

ಮಣ್ಣಿನ ಇಂಗಾಲದ ಪ್ರಯೋಜನಗಳೇನು?

ಮುಖ್ಯವಾಗಿ ಇಂಗಾಲದ ಅಂಶ ಹೆಚ್ಚಾಗಿರುವ ಮಣ್ಣುಗಳಲ್ಲಿ ಇಳುವರಿಯಲ್ಲಿ ಸುಧಾರಣೆ ಕಾಣಬಹುದು. ಇಂಗಾಲ ಹೆಚ್ಚಾದರೆ, ಹೆಚ್ಚು ಪ್ರಮಾಣದಲ್ಲಿ ನೀರನ್ನು, ಪೋಷಕಾಂಶಗಳನ್ನು ಹಿಡಿದಿಡುವ ಸಾಮರ್ಥ್ಯ ಮಣ್ಣಿಗೆ ಬರುತ್ತದೆ. ಜೊತೆಗೆ ಗಿಡಗಳಿಗೆ ಅಗತ್ಯವಿದ್ದಾಗ ಮಾತ್ರ ಅವು ಬಳಕೆಯಾಗುತ್ತದೆ. ಈ ಮೂಲಕ ಬಿಸಿಲು ಹೆಚ್ಚಿದ್ದಾಗಲೂ ಸಹ ಗಿಡಗಳಿಗೆ ಅಗತ್ಯ ತೇವಾಂಶ ಮತ್ತು ಪೋಷಕಾಂಶಗಳು ಸಿಗುತ್ತವೆ. ಮಣ್ಣಲ್ಲಿನ ಸಾವಯವ ಇಂಗಾಲದ ಅಂಶ ಮಣ್ಣಿನ ರಸಸಾರವನ್ನು ಸಮತೋಲನದಲ್ಲಿ ಇರಿಸುತ್ತದೆ. ಮಣ್ಣಿನ pH ಸಮತೋಲನ ಅಡಿಕೆ, ತೆಂಗು ಮತ್ತು ಎಲ್ಲ ರೀತಿಯ ಸಸ್ಯ, ಮರಗಳ ಸರ್ವತೋಮುಖ ಬೆಳವಣಿಗೆಗೆ, ಅಧಿಕ ಇಳುವರಿಗೆ ಪ್ರಮುಖ ಅಂಶವಾಗುತ್ತದೆ. ಇಂಗಾಲದ ಅಂಶವಿರುವ ಮಣ್ಣು ಇತರೆ ಮಣ್ಣುಗಳಿಗಿಂತ ಫಲವತ್ತಾಗಿರುತ್ತದೆ. ಸಾವಯವ ಇಂಗಾಲದ ಅಂಶ ಇರುವ ಮಣ್ಣಿನಲ್ಲಿ ಅತಿ ಮಳೆ ಆದಾಗ ಉಂಟಾಗಬಹುದಾದ ಮಣ್ಣು ಸವಕಳಿಯನ್ನು ತಪ್ಪಿಸುತ್ತದೆ. ಮಣ್ಣಲ್ಲಿನ ಸಾವಯವ ವಸ್ತುವೇ ಪ್ರಧಾನ ಅಂಶವಾಗಿದ್ದು, ಇದರಿಂದ ಮಣ್ಣಲ್ಲಿ ಹೆಚ್ಚಾಗುವ ಮಣ್ಣು ಜೀವಿಗಳು ಮಾಲಿನ್ಯಕಾರಕ ವಸ್ತುಗಳನ್ನು ಹೀರಿ ಮಣ್ಣಿನ ವಾತಾವರಣವನ್ನು ಶುದ್ಧಗೊಳಿಸುತ್ತವೆ.

(ಕೆಲವು ಹಿರಿಯ ಅಡಿಕೆ ಬೆಳೆಗಾರರ ಅಭಿಪ್ರಾಯ, ಅಂತರ್ಜಾಲದಲ್ಲಿ ಸಿಕ್ಕಿದ ವಿವಿಧ ಮಾಹಿತಿಗಳು ಮತ್ತು ಎಲ್ಲಕ್ಕಿಂತ ಮುಖ್ಯವಾಗಿ ಈ ಲೇಖಕ ಮಾಡುತ್ತಿರುವ ಸಣ್ಣ ಮಟ್ಟದ ಪ್ರಾಯೋಗಿಕ ಅನುಭವಗಳ ಪಲಿತಾಂಶಗಳನ್ನು ಆಧರಿಸಿ ಸಂಕ್ಷೇಪಿಸಿ ಈ ಮಾಹಿತಿ ಬರಹ ಸಿದ್ಧಪಡಿಸಲಾಗಿದೆ. ಸಣ್ಣ ಮಟ್ಟದ ಪ್ರಾಯೋಗಿಕ ಅನುಭವ ಎಂದರೆ, ಕಳೆದ ಆರೇಳು ವರ್ಷಗಳಿಂದ ದರಗು, ಹಳು ಸೌರಿದ ತ್ಯಾಜ್ಯ, ಕೊನಮಟ್ಟೆ, ಒಣಗಿದ ಅಡಿಕೆ ಸಿಪ್ಪೆ, ಬಿದ್ದು ಹೋದ ಅಡಿಕೆ ಮರಗಳು, ಕಡಿದ ಕಾಫಿ-ಬಾಳೆ ಗಿಡಗಳ ತ್ಯಾಜ್ಯ, ಬೇಲಿ ಸೌರಿದ ತ್ಯಾಜ್ಯ, ಅಡಿಕೆ ಒಲೆ ಬೂದಿ, ಅಡಿಗೆ ಮನೆಯಲ್ಲಿ ಸೃಷ್ಟಿಗೊಂಡ ಹಸಿರು ತ್ಯಾಜ್ಯ, ಮೆಣಸಿನ ಕಾಳು ಬಿಡಿಸಿದ ಕರೆ….ಎಲ್ಲವನ್ನೂ ಅಡಿಕೆ ತೋಟಕ್ಕೆ ವಾಪಾಸ್ ಬಡಿಸಲಾಗುತ್ತಿದೆ! ಇದುವರೆಗೆ ಕಳೆ ನಾಶಕ ಬಳಸಿಲ್ಲ. ತೋಟಕ್ಕೆ ಬರುವವರು ಖಾಲಿ ಗುಟ್ಕಾ ಪ್ಲಾಸ್ಟಿಕ್ ಪೌಚ್‌ನ್ನೂ ಹಾಕದಂತೆ ಪ್ಲಾಸ್ಟಿಕ್ ತ್ಯಾಜ್ಯ ನಿರ್ಬಂಧಗೊಳಿಸಲಾಗಿದೆ.)

Areca nuts image

ಕಾಫಿ ಸಿಪ್ಪೆ ಬಳಕೆ

ಇತ್ತೀಚೆಗೆ ಕೊಪ್ಪದ ಜೋಗಿಸರ ಸೂರ್ಯನಾರಾಯಣರವರು ಕಾಫಿ ಸಿಪ್ಪೆಯನ್ನೂ ಸಾವಯವ ಕಾರ್ಬನ್ ಹೆಚ್ಚಿಸಲು ಬಳಸಬಹುದು ಅಂತ ಪ್ರಾಯೋಗಿಕ ಅಧ್ಯಯನ ಮಾಡಿ ಸಲಹೆ ಕೊಟ್ಟಿದ್ದಾರೆ. ಅಡಿಕೆ ತ್ಯಾಜ್ಯ ವಸ್ತುಗಳ ಮರು ಬಳಕೆಯಿಂದ 30% ನಷ್ಟು NPK, ಇತರೆ ಪೋಷಕಾಂಶಗಳನ್ನು ಮತ್ತು ಹೆಚ್ಚಿನ ಇಂಗಾಲವನ್ನು ಉಚಿತವಾಗಿ ಪಡೆಯಬಹುದು ಎಂದು ಕೃಷಿ ವಿಜ್ಞಾನಿಗಳು ನಿರೂಪಿಸಿದ್ದಾರೆ. ಉಳಿದಂತೆ ಮಣ್ಣಿನಲ್ಲಿ ಸಾವಯವ ಇಂಗಾಲ ಹೆಚ್ಚಿಸಲು ಅನೇಕ ಕ್ರಮಗಳಿವೆ. ಸಾಂಪ್ರದಾಯಿಕ ಕೊಟ್ಟಿಗೆ ಗೊಬ್ಬರ, ಕಬ್ಬಿನ ಸಿಪ್ಪೆ, ತೆಂಗಿನ ನಾರುಗಳಿಂದ ತಯಾರಿಸುತ್ತಿರುವ ಪ್ರೆಸ್ ಮಡ್ ಗೊಬ್ಬರಗಳ ಬಳಕೆಯಿಂದಲೂ ಮಣ್ಣಿನ ಇಂಗಾಲದ ಅಂಶವನ್ನು ಹೆಚ್ಚಿಸಬಹುದು. (ಈಗ ಮಾರ್ಕೇಟ್‌ನಲ್ಲಿ ಮಸಾಲೆ ದೋಸೆಯಂತೆ ಅತಿ ಬೇಡಿಕೆ ಮತ್ತು ಪೂರೈಕೆಯಾಗುತ್ತಿರುವ , ಪ್ರೆಸ್ ಮಡ್ ಗೊಬ್ಬರಗಳನ್ನು ಹೆಚ್ಚಾಗಿ ಅವೈಜ್ಞಾನಿಕವಾಗಿ ತಯಾರಾಗುತ್ತಿದೆ!! ಬಳಸುವಾಗ ಇಲ್ಲೊಂದು ಜಾಗ್ರತೆ ಬೇಕು. ಇದರ ಬಗ್ಗೆ ಮುಂದಿನ ಸಂಚಿಕೆಯೊಂದರಲ್ಲಿ ನೋಡೋಣ)
ಅಂದ ಹಾಗೆ, ಅಡಿಕೆ ತೋಟದಲ್ಲಿ ಸಾವಯವ ಇಂಗಾಲದ ಪ್ರಮಾಣ 0.75% ಗಿಂತ ಹೆಚ್ಚಿರಬೇಕು. ಇಂಗಾಲದ ಪ್ರಮಾಣ 1% – 2% ಇದ್ದರೆ ಅಡಿಕೆ ಇಳುವರಿಗೆ ಮತ್ತು ರೋಗಗಳ ನಿಂತ್ರಣಕ್ಕೆ ಹೆಚ್ಚು ಸಹಕಾರಿ. ಕನಿಷ್ಟಪಕ್ಷ ಮೂರು ವರ್ಷಗಳಿಗೆ ಒಮ್ಮೆಯಾದರೂ ಮಣ್ಣು ಪರೀಕ್ಷೆ ಮಾಡಿ, ನಮ್ಮ ತೋಟದ ಇಂಗಾಲದ ಪ್ರಮಾಣವನ್ನು ತಿಳಿದುಕೊಳ್ಳುವುದು ಒಳ್ಳೆಯದು.
ಅಂಕಿ ಅಂಶಗಳ ಮಾಹಿತಿ ಪ್ರಕಾರ ಕರ್ನಾಟಕದ ಮಣ್ಣಿನ ಸರಾಸರಿ ಸಾವಯವ ಇಂಗಾಲದ ಪ್ರಮಾಣ 0.25% to 0.50% ಇದೆ. ಇರಬೇಕಾಗಿದ್ದು ಕನಿಷ್ಠ 0.75%!!!.

ಇದನ್ನೂ ಓದಿ | Areca Price: ಅಡಿಕೆ ದರ ಗಗನಮುಖಿ; ಚುನಾವಣೆ ಬಳಿಕ ಮತ್ತಷ್ಟು ಏರಿಕೆ?

ಹಾಗಾದರೆ, ಮಣ್ಣಿನಲ್ಲಿ ಸಾವಯವ ಇಂಗಾಲ ಕಡಿಮೆ ಆಗುವುದು ಹೇಗೆ?

ಮುಖ್ಯವಾಗಿ, ತೋಟ-ಗದ್ದೆಗಳಲ್ಲಿ ಬೆಳೆದು ಹೊರಗೆ ತರುವ ಉತ್ಪನ್ನಗಳಿಂದಲೇ ಬಹುತೇಕ ಸಾವಯವ ಇಂಗಾಲ ನಮ್ಮ ಜಮೀನಿನಿಂದ ಹೊರ ಹೋಗುತ್ತವೆ. ಕೃಷಿ ಭೂಮಿಯಲ್ಲಿ ಸೃಷ್ಟಿಯಾಗುವ ವೇಸ್ಟ್‌ನ್ನು (ಕಬ್ಬಿನ ಜಲ್ಲೆ, ಕಳೆ, ಉತ್ಪನ್ನಗಳ ಸಿಪ್ಪೆ) ಕೃಷಿ ಭೂಮಿಯಿಂದ ಹೊರ ಸಾಗಿಸುವಿದರಿಂದ ಮಣ್ಣಿನ ಇಂಗಾಲ ಕಡಿಮೆಯಾಗುತ್ತದೆ. ಇನ್ನುಳಿದಂತೆ, ಉಷ್ಣತೆ ಏರಿಕೆಯಿಂದಲೂ ಮಣ್ಣಿನ ಕಾರ್ಬನ್ ಕಡಿಮೆ ಆಗುತ್ತದೆ. ಅತಿಯಾದ ಕೆಮಿಕಲ್ ಬಳಸುವಿಕೆಯಿಂದಲೂ ಇಂಗಾಲ ಕಡಿಮೆಯಾಗುತ್ತಿದೆ.
ನಗರ ಪ್ರದೇಶದ ವಾತಾವರಣದಲ್ಲಿ ಇಂಗಾಲದ ಪ್ರಮಾಣ ಹೆಚ್ಚಾಗುತ್ತಿರುವುದು ಸಮಸ್ಯೆಯಾದರೆ, ಗ್ರಾಮೀಣ ಕೃಷಿ ಭೂಮಿಯಲ್ಲಿ ಇಂಗಾಲದ ಪ್ರಮಾಣ ಕಡಿಮೆ ಆಗುತ್ತಿರುವುದು ಸಮಸ್ಯೆ! ಎರಡೂ ಮನುಷ್ಯನ ಬದುಕಿಗೆ ಮಾರಕ. ಆದರೆ, ಅದೇ ಆಗ್ತಾ ಇದೆ!
ಕೃಷಿ ಭೂಮಿಯಲ್ಲಿ ಇಂಗಾಲದ ಪ್ರಮಾಣ ಹೆಚ್ಚಿಸಲು ಗಂಭೀರ ಚಿಂತನೆ ಮತ್ತು ಅನುಷ್ಠಾನಕ್ಕೆ ರೈತರು ಮುಂದಾಗಬೇಕು.
ಪ್ರಯತ್ನ ಮಾಡೋಣ….

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಚಿತ್ರದುರ್ಗ

Murder Case : ಕ್ಷುಲ್ಲಕ ಕಾರಣಕ್ಕೆ ಶುರುವಾದ ಅಪ್ಪ-ಮಗನ ಜಗಳ ಕೊಲೆಯಲ್ಲಿ ಅಂತ್ಯ

Murder Case : ಅಪ್ಪ-ಮಗನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

VISTARANEWS.COM


on

Murder Case

ಚಿತ್ರದುರ್ಗ: ಕ್ಷುಲ್ಲಕ ಕಾರಣಕ್ಕೆ‌ ತಂದೆ-ಮಗನ ನಡುವೆ ಜಗಳವಾಗಿದ್ದು, ತಂದೆ ಮೇಲೆ ಹಲ್ಲೆ ಮಾಡಿ ಕೆಳಗೆ ಬೀಳಿಸಿ ಮಗನೇ ಕೊಲೆ (Murder Case) ಮಾಡಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕುಂದಲಗುರ ಗ್ರಾಮದಲ್ಲಿ ಘಟನೆ ನಡೆದಿದೆ. ರಂಗಸ್ವಾಮಿ (50) ಮಗನಿಂದಲೇ ಹತ್ಯೆಯಾದವರು. ದೇವರಾಜ್ ಆರೋಪಿ ಆಗಿದ್ದಾನೆ.

ಮನೆಯಲ್ಲಿ ಊಟದ ವಿಚಾರಕ್ಕೆ ತಂದೆ ಜತೆ ದೇವರಾಜ್‌ ಜಗಳ ಆರಂಭಿಸಿದ್ದ. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿದ್ದು, ರಂಗಸ್ವಾಮಿಯನ್ನು ಕೆಳಗೆ ಬೀಳಿಸಿದ್ದಾನೆ. ಬಿದ್ದ ರಭಸಕ್ಕೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಸ್ಥಳಕ್ಕೆ‌ ಸಿಪಿಐ (CPI)ಗುಡ್ಡಪ್ಪ, ಹಾಗೂ ಅಬ್ಬಿನಹೊಳೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಬ್ಬಿನಹೊಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಭೀಕರ ರಸ್ತೆ ಅಪಘಾತ ಆರು ಮಂದಿ ದಾರುಣ ಸಾವು

ಅನಂತಪುರ ಜಿಲ್ಲೆಯ ಶಿಂಗನಮಲ ಮಂಡಲದ ನಾಯನಪಲ್ಲಿ ಕ್ರಾಸ್‌ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರಿನ ಟಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಅನಂತಪುರ ಇಸ್ಕಾನ್‌ಗೆ ಸೇರಿದವರು ಎಂದು ವರದಿಯಾಗಿದೆ. ತಾಡಿಪತ್ರಿ ನಗರದಲ್ಲಿ ಇಸ್ಕಾನ್ ನಗರ ಸಂಕೀರ್ತನೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ತಾಡಿಪತ್ರಿಯಿಂದ ಅನಂತಪುರಕ್ಕೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸಂತೋಷ್, ಷಣ್ಮುಕ್, ವೆಂಕಣ್ಣ, ಶ್ರೀಧರ್ ಹಾಗೂ ಪ್ರಸನ್ನ, ವೆಂಕಿ ಮೃತ ದುರ್ದೈವಿಗಳು

Continue Reading

ಬೆಂಗಳೂರು

Actor Darshan : ನಾಳೆ ಹೈಕೋರ್ಟ್‌ನಲ್ಲಿ ನಟ ದರ್ಶನ್‌ ಜಾಮೀನು ಭವಿಷ್ಯ

Actor Darshan : ಹೈಕೋರ್ಟ್‌ನಲ್ಲಿ ನಟ ದರ್ಶನ್‌ ಜಾಮೀನು ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್‌ ಬಳ್ಳಾರಿ ಜೈಲಿನಿಂದ ಬೆಂಗಳೂರಿಗೆ ಶಿಫ್ಟ್‌ ಮಾಡುವಂತೆ ವಕೀಲರು ವಾದ ಮಾಡಿಸಲಿದ್ದಾರೆ.

VISTARANEWS.COM


on

Hc to hear Darshans bail plea tomorrow

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲು ಕಂಬಿ ಎಣಿಸುತ್ತಿರುವ ನಟ ದರ್ಶನ್ (Actor Darshan) ಜಾಮೀನು ಭವಿಷ್ಯ ನಾಳೆ ಸೋಮವಾರ ನಿರ್ಧಾರವಾಗಲಿದೆ. ಹೈಕೋರ್ಟ್‌ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನಟ ದರ್ಶನ್‌ರ ಮೆಡಿಕಲ್ ರಿಪೋರ್ಟ್ ಸಲ್ಲಿಕೆ ಮಾಡುವಂತೆ ಬಳ್ಳಾರಿ ಜೈಲಾಧಿಕಾರಿಗಳಿಗೆ ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಜೈಲಾಧಿಕಾರಿಗಳು ನಾಳೆ ಹೈಕೋರ್ಟ್‌ಗೆ ಮೆಡಿಕಲ್ ರಿಪೋರ್ಟ್ ಸಲ್ಲಿಕೆ‌‌ ಮಾಡಲಿದ್ದಾರೆ.

ವೈದ್ಯಾಧಿಕಾರಿಗಳು ಈಗಾಗಲೇ ನಟ ದರ್ಶನ್‌ಗೆ ಎಂಆರ್‌ಐ (MRI) ಸ್ಕ್ಯಾನ್ ಮಾಡಿದ್ದಾರೆ. ಸ್ಕ್ಯಾನಿಂಗ್ ವೇಳೆ ಬೆನ್ನುನೋವು ಇರುವುದರ ಬಗ್ಗೆ ಉಲ್ಲೇಖಿಸಿದ್ದಾರೆ. ಮತ್ತೊಂದು ಕಡೆ ಮೆಡಿಕಲ್ ರಿಪೋರ್ಟ್ ಇಟ್ಟುಕೊಂಡೇ ನಟ ದರ್ಶನ್‌ ಪರ ವಕೀಲರು ಜಾಮೀನು ಕೋರಿ ವಾದ ಮಂಡಿಸಲಿದ್ದಾರೆ. ದರ್ಶನ್ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಲಿದ್ದಾರೆ. ಮತ್ತೊಂದು ಕಡೆ ಜಾಮೀನು ಕೊಡದಂತೆ ಎಸ್ ಪಿ ಪಿ ಪ್ರಸನ್ನ ಕುಮಾರ್ ಆಕ್ಷೇಪಣೆಗೆ ತಯಾರಿ ಮಾಡಿಕೊಂಡಿದ್ದಾರೆ.

Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

karnataka Weather Forecast

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

Karnataka Rain

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading
Advertisement
Latest15 hours ago

ಮರು ಮತ ಎಣಿಕೆಯಲ್ಲೂ ಜಯ ಸಾಧಿಸಿದ ಶಾಸಕ ಟಿ.ಡಿ ರಾಜೇಗೌಡ

Latest20 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest21 hours ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

Latest2 days ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest3 days ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest3 days ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest3 days ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest3 days ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest3 days ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest3 days ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌