Site icon Vistara News

Challakere News : ಅಡಿಕೆ ತೋಟಕ್ಕೆ ಬೆಂಕಿ; ಲಕ್ಷಾಂತರ ಮೌಲ್ಯದ ಬೆಳೆ ಹಾನಿ

#image_title

ಚಳ್ಳಕೆರೆ: ಚಳ್ಳಕೆರೆ ತಾಲೂಕಿನ ಭರಮಸಾಗರ ಗ್ರಾಮದಲ್ಲಿ ಅಡಿಕೆ ತೋಟಕ್ಕೆ ಬೆಂಕಿ ಹತ್ತಿಕೊಂಡು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ(Challakere News). ವಿದ್ಯುತ್‌ ಅವಘಡದಿಂದಾಗಿ ಈ ಘಟನೆ ಸಂಭವಿಸಿದೆ.

ಭರಮಸಾಗರ ಗ್ರಾಮದ ರುದ್ರಮುನಿಯಪ್ಪ ಎಂಬುವವರ ಜಮೀನಿನಲ್ಲಿ ಬೆಂಕಿ ಹತ್ತಿ ಉರಿದಿದೆ. ಸುಮಾರು 1.50 ಲಕ್ಷ ರೂ. ಮೌಲ್ಯದ ಅಡಿಕೆ, ತೆಂಗು, ಬಾಳೆ ಮತ್ತು ವೀಳ್ಯದ ಎಲೆಯು ಬೆಂಕಿಯಿಂದಾಗಿ ಸುಟ್ಟು ಭಸ್ಮವಾಗಿದೆ. ಬೆಂಕಿ ಕಂಡ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಸಿಬ್ಬಂದಿ ಬೆಂಕಿ ನಂದಿಸಿ ಅನಾಹುತವನ್ನು ತಪ್ಪಿಸಿದ್ದಾರೆ.

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ಆಗಿದ್ದರಿಂದಾಗಿ ತೋಟಕ್ಕೆ ಬೆಂಕಿ ಹತ್ತಿಕೊಂಡಿದೆ. ಘಟನಾ ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ನಾಗರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಗೆಯೇ ಸರ್ಕಾರಕ್ಕೆ ಬೆಂಕಿ ಘಟನೆಯ ಮಾಹಿತಿಯನ್ನು ಕಳಿಸುವ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ರಂಗಸ್ವಾಮಿ ಮಾತನಾಡಿದ್ದು, “ವಿದ್ಯುತ್ ಇಲಾಖೆ ಸಿಬ್ಬಂದಿಯ ಬೇಜವಾಬ್ದಾರಿತನದಿಂದ ಇಂತಹ ಅವಘಡಗಳು ಗ್ರಾಮದಲ್ಲಿ ಸರ್ವೇಸಾಮಾನ್ಯವಾಗಿದೆ. ಇದರಿಂದಾಗಿ ರೈತರು ಆತಂಕದಲ್ಲಿ ಜೀವನ ನಡೆಸಬೇಕಾಗಿದೆ. ಈ ಬಗ್ಗೆ ಬೆಸ್ಕಾಂ ಹಿರಿಯ ಅಧಿಕಾರಿಗಳು ಗಮನಹರಿಸಿ ಮುಂದಿನ ದಿನಗಳಲ್ಲಿ ಹೆಚ್ಚಿನ ಅನಾಹುತಗಳು ನಡೆಯದಂತೆ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಚಿತ್ರಲಿಂಗಪ್ಪ ಡಿಸಿ, ಓಂಕಾರಪ್ಪ, ರಂಗಸ್ವಾಮಿ ಅವರು ರೈತ ಕುಟುಂಬಕ್ಕೆ ಸಾಂತ್ವನ ಹೇಳಿದರು.

Exit mobile version