Chitradurga News: ಗುಂಡೇರಿ ಗ್ರಾಮದಲ್ಲಿ ಅಷ್ಟಲಕ್ಷ್ಮಿ ಪೂಜೆ - Vistara News

ಚಿತ್ರದುರ್ಗ

Chitradurga News: ಗುಂಡೇರಿ ಗ್ರಾಮದಲ್ಲಿ ಅಷ್ಟಲಕ್ಷ್ಮಿ ಪೂಜೆ

Chitradurga News: ಹೊಳಲ್ಕೆರೆ ತಾಲೂಕಿನ ಗುಂಡೇರಿ ಗ್ರಾಮದ ಈಶ್ವರ ಕಲ್ಯಾಣ ಮಂಟಪ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ವತಿಯಿಂದ ಅಷ್ಟಲಕ್ಷ್ಮಿ ಪೂಜಾ ಕಾರ್ಯಕ್ರಮ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ ಜರುಗಿತು.

VISTARANEWS.COM


on

Ashta Lakshmi Puja programme inauguration at Gunderi village
ಹೊಳಲ್ಕೆರೆ ತಾಲೂಕಿನ ಗುಂಡೇರಿ ಗ್ರಾಮದ ಈಶ್ವರ ಕಲ್ಯಾಣ ಮಂಟಪ ಸಭಾಭವನದಲ್ಲಿ ಅಷ್ಟ ಲಕ್ಷ್ಮೀ ಪೂಜಾ ಕಾರ್ಯಕ್ರಮ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭಕ್ಕೆ ಚಾಲನೆ ನೀಡಲಾಯಿತು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಳಲ್ಕೆರೆ: ಭಾರತದ ಭವ್ಯ ಪರಂಪರೆಯಲ್ಲಿ ಧರ್ಮಕ್ಕೆ ಮತ್ತು ಸಂಸ್ಕೃತಿ ಸಂಸ್ಕಾರಗಳಿಗೆ ಉನ್ನತ ಸ್ಥಾನಮಾನ ನೀಡಲಾಗಿದೆ. ನಾವು ಅದನ್ನು ಮುಂದಿನ ಪೀಳಿಗೆಗೆ ಕಲಿಸಿಕೊಡುವ ಜವಾಬ್ದಾರಿ (Responsibility) ನಮ್ಮದಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚಿತ್ರದುರ್ಗ ಜಿಲ್ಲೆಯ ನಿರ್ದೇಶಕ ದಿನೇಶ್ ಪೂಜಾರಿ ತಿಳಿಸಿದರು.

ತಾಲೂಕಿನ ಗುಂಡೇರಿ ಗ್ರಾಮದ ಈಶ್ವರ ಕಲ್ಯಾಣ ಮಂಟಪ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ವತಿಯಿಂದ ಈಚೆಗೆ ಅಷ್ಟಲಕ್ಷ್ಮೀ ಪೂಜಾ ಕಾರ್ಯಕ್ರಮ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Teachers Recruitment: ಪ್ರಾಥಮಿಕ, ಪ್ರೌಢ ಶಾಲೆ ಶಿಕ್ಷಕರ ನೇಮಕ; ಒಟ್ಟು ಎಷ್ಟು ಹುದ್ದೆ ನಿರೀಕ್ಷೆ?

ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಸಂಸ್ಥೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿ ಕೊಂಡಿದೆ ಎಂದರೆ ಅದಕ್ಕೆ ಪಾಲುದಾರ ಕುಟುಂಬವೇ ಕಾರಣ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯ ಗಿರೀಶ್ ನಾಡಿಗ್ ಮಾತನಾಡಿದರು.

ಇದೇ ವೇಳೆ ನೂತನ ಪದಾಧಿಕಾರಿಗಳಿಗೆ ದಾಖಲಾತಿ ಹಸ್ತಾಂತರ ಮಾಡಲಾಯಿತು.

ಇದನ್ನೂ ಓದಿ: karnataka Weather :‌ ಮುಂದಿನ 24 ಗಂಟೆಯಲ್ಲಿ 18 ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಗೌರಮ್ಮ, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಗಂಗೂ ಬಾಯಿ, ಮೇಲ್ವಿಚಾರಕ ಉಮಾಪತಿ, ಸೇವಾ ಪ್ರತಿನಿಧಿಗಳು, ಗ್ರಾಮದ ಮುಖಂಡರು, ಸ್ವಸಹಾಯ ಸಂಘದ ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಈ ನಾಲ್ಕು ಜಿಲ್ಲೆಗಳಲ್ಲಿ 35 ಡಿಗ್ರಿ ಸೆಲ್ಸಿಯಸ್‌ಗೂ ಹೆಚ್ಚು ತಾಪಮಾನ! ಹೀಗುಂಟು ಬೆಂಗಳೂರು ಹವಾಮಾನ

Karnataka Weather : ಬೆಂಗಳೂರು ನಗರದ ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಫೆಬ್ರವರಿ 22ರಿಂದ 26ರವರೆಗೆ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್‌ ಇರಲಿದ್ದರೆ, ಗರಿಷ್ಠ ಉಷ್ಣಾಂಶ 32 – 33 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಹೀಗಾಗಿ ಬೆಂಗಳೂರಿನಲ್ಲಿ ತಂಪಿನ ವಾತಾವರಣ ಈಗ ಮರೀಚಿಕೆಯಾಗಿದೆ.

VISTARANEWS.COM


on

Sun Stroke with girls
Koo

ಬೆಂಗಳೂರು: ರಾಜ್ಯದಲ್ಲಿ ನಿಧಾನವಾಗಿ ಬಿಸಿಲು ತನ್ನ ಪ್ರಭಾವವನ್ನು ಹೆಚ್ಚಳ ಮಾಡಿಕೊಳ್ಳುತ್ತಿದೆ. ಗುರುವಾರ ಮತ್ತು ಶುಕ್ರವಾರ ಗರಿಷ್ಠ ತಾಪಮಾನದಲ್ಲಿ ಏರಿಕೆ ಇರಲಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮತ್ತು ಹೊನ್ನಾವರ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹಾಗೂ ಕಲಬುರಗಿ, ಬೆಳಗಾವಿಯಲ್ಲಿ 35 ಡಿಗ್ರಿ ಸೆಲ್ಸಿಯಸ್‌ಗೂ ಹೆಚ್ಚು ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather Forecast) ಉಲ್ಲೇಖಿಸಿದೆ.

ಹೀಗಾಗಿ ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಒಣ ಹವೆ (Dry Weather) ಇರಲಿದೆ. ಜತೆಗೆ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ 2 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರಲ್ಲಿ ಬಿಸಿಲು ಜಾಸ್ತಿ

ಬೆಂಗಳೂರು ನಗರದ ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಫೆಬ್ರವರಿ 22ರಿಂದ 26ರವರೆಗೆ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್‌ ಇರಲಿದ್ದರೆ, ಗರಿಷ್ಠ ಉಷ್ಣಾಂಶ 32 – 33 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಹೀಗಾಗಿ ಬೆಂಗಳೂರಿನಲ್ಲಿ ತಂಪಿನ ವಾತಾವರಣ ಈಗ ಮರೀಚಿಕೆಯಾಗಿದೆ.

ಮಲೆನಾಡಲ್ಲಿ ಭಾರಿ ಸೆಕೆ

ಮಲೆನಾಡು ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಇರಲಿದೆ. ಶಿವಮೊಗ್ಗದಲ್ಲಿ ಫೆ. 21ರಿಂದ 28ರವರೆಗಿನ ವಾತಾವರಣವನ್ನು ನೋಡುವುದಾದರೆ, ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಕಾಣಲಿದೆ. ಅಲ್ಲಿ 33 ಡಿಗ್ರಿ ಸೆಲ್ಸಿಯಸ್‌ನಿಂದ 36 ಡಿಗ್ರಿ ಸೆಲ್ಸಿಯಸ್‌ವರೆಗೆ ಇರಲಿದೆ, ಚಿಕ್ಕಮಗಳೂರು, ಹಾಸನ, ಕೊಡುಗು ಜಿಲ್ಲೆಯಲ್ಲಿ ಉಷ್ಣಾಂಶದಲ್ಲಿ ಏರಿಕೆಯಾಗಲಿದೆ ಎಂದು ಅಂದಾಜಿಸಲಾಗಿದೆ. ‌

ಕರಾವಳಿಗೆ ಬಿಸಿಲಿನ ಬಳುವಳಿ

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಕೆ ಹೆಚ್ಚಾಗಿ ಇರಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚು ಇರಲಿದೆ.

ದಕ್ಷಿಣ ಒಳನಾಡಿನ ವಾತಾವರಣ ಹೇಗಿರಲಿದೆ?

ದಕ್ಷಿಣ ಒಳನಾಡಿನಲ್ಲಿಯೂ ಬಿಸಿಲಿನ ಪ್ರಮಾಣ ಹೆಚ್ಚಾಗಿ ಇರಲಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಮೈಸೂರು, ಮಂಡ್ಯ, ಕೋಲಾರ, ರಾಮನಗರ, ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗದ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹೀಗಾಗಿ ಇಲ್ಲೆಲ್ಲ ಮೈಸುಡುವ ಬಿಸಿಲು ಇರಲಿದ್ದು, ಮನೆಯಲ್ಲಿದ್ದರೂ ಜನ ಬೆವರು ಸುರಿಸುವ ಪರಿಸ್ಥಿತಿ ತಲೆದೋರಲಿದೆ.

ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನ 2 ಡಿಗ್ರಿ ಸೆಲ್ಸಿಯಸ್‌ ಹೆಚ್ಚಳ

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Love marriage : ಅಂತರ್ಜಾತಿ ವಿವಾಹಕ್ಕೆ ಅಡ್ಡಿ; ಮಗಳನ್ನು ಧರಧರನೇ ಎಳೆದೊಯ್ದ ಪೋಷಕರು

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 33 ಡಿ.ಸೆ -19 ಡಿ.ಸೆ
ಮಂಗಳೂರು: 35 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 34 ಡಿ.ಸೆ – 20 ಡಿ.ಸೆ
ಗದಗ: 34 ಡಿ.ಸೆ – 18 ಡಿ.ಸೆ
ಹೊನ್ನಾವರ: 33 ಡಿ.ಸೆ- 21 ಡಿ.ಸೆ
ಕಲಬುರಗಿ: 37 ಡಿ.ಸೆ – 22 ಡಿ.ಸೆ
ಬೆಳಗಾವಿ: 35 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 21 ಡಿ.ಸೆ

Continue Reading

ಚಿತ್ರದುರ್ಗ

Love marriage : ಅಂತರ್ಜಾತಿ ವಿವಾಹಕ್ಕೆ ಅಡ್ಡಿ; ಮಗಳನ್ನು ಧರಧರನೇ ಎಳೆದೊಯ್ದ ಪೋಷಕರು

Love Marriage : ಮಗಳು ಪ್ರೀತಿಸಿ ಮದುವೆ ಆಗಿದ್ದಕ್ಕೆ ಸಿಟ್ಟಾದ ಪೋಷಕರು, ರಿಜಿಸ್ಟರ್‌ ಮ್ಯಾರೇಜ್‌ ಆಗಲು ಹೊರಟಾಗ ರಸ್ತೆಯಲ್ಲೇ ತಡೆದು (Inter caste marriage) ಎಳೆದುಹೋಗಿದ್ದಾರೆ.

VISTARANEWS.COM


on

By

Girls parents oppose inter caste marriage
Koo

ಚಿತ್ರದುರ್ಗ: ಪ್ರೀತಿಸಿ ಮದುವೆ ಆದ ಪ್ರೇಮಿಗಳಿಗೆ (Love marriage) ಪೋಷಕರೇ ವಿಲನ್ ಆಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿ.ಜಿ ಕೆರೆ ಗ್ರಾಮದಲ್ಲಿ ನಡೆದಿದೆ. ಪ್ರವೀಣ್ ಹಾಗೂ ಪದ್ಮಜಾ ಎಂಬುವವರು ಐದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ವಾರವಷ್ಟೇ ದೇವಸ್ಥಾನದಲ್ಲಿ ಮದುವೆಯನ್ನೂ (Inter caste marriage) ಆಗಿದ್ದರು.

ಆದರೆ ಈ ಅಂತರ್ಜಾತಿ ವಿವಾಹಕ್ಕೆ ಯುವತಿ ಪೋಷಕರು ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಮದುವೆ ಬಳಿಕ ರಿಜಿಸ್ಟರ್ ಮ್ಯಾರೇಜ್ ಆಗಲೂ ಬಂದಾಗ ಪದ್ಮಜಾಳನ್ನು ಆಕೆ ಪೋಷಕರು, ಸಂಬಂಧಿಗಳೆಲ್ಲರೂ ಸೇರಿ ಬಲವಂತವಾಗಿ ಕರೆದೊಯ್ದಿದ್ದಾರೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್‌ ಆಗಿದೆ.

Girls parents oppose inter caste marriage

ಇದನ್ನೂ ಓದಿ: Assault Case : ನಡುರಸ್ತೆಯಲ್ಲಿ ಅಟ್ಟಾಡಿಸಿ ಪತ್ನಿಗೆ ಮಚ್ಚು ಬೀಸಿದ ಪತಿ

ಬಿ.ಜಿ.ಕೆರೆ ಗ್ರಾಮದ ಪ್ರವೀಣ್ ನಾಯಕ ಸಮುದಾಯದವರಾದರೆ, ಕೋನಸಾಗರ ಗ್ರಾಮದ ಪದ್ಮಜಾ ಕುರುಬ ಸಮುದಾಯದವರು. ಪದ್ಮಜಾ ಮಂಗಳೂರು ಖಾಸಗಿ ನರ್ಸಿಂಗ್ ಕಾಲೇಜಲ್ಲಿ ಅತಿಥಿ ಉಪನ್ಯಾಸಕಿ ಕೆಲಸ ಮಾಡುತ್ತಿದ್ದರು. ಹಲವಾರು ವರ್ಷಗಳಿಂದ ಪ್ರೀತಿಸುತ್ತಿದ್ದ ಇವರಿಬ್ಬರ ಮದುವೆಗೆ ಪೋಷಕರು ಒಪ್ಪದ ಕಾರಣಕ್ಕೆ ದೇವಸ್ಥಾನದಲ್ಲಿ ಮದುವೆ ಆಗಿದ್ದರು. ಬಳಿಕ ಈ ಮದುವೆಯನ್ನು ರಿಜಿಸ್ಟರ್ ಮಾಡಲು ಹೋದಾಗ ಅಲ್ಲಿಗೆ ಬಂದ ಯುವತಿಯ ಪೋಷಕರು, ಬಲವಂತದಿಂದ ಎಳೆದುಕೊಂಡು ಹೋಗಿದ್ದಾರೆ. ಈ ವೇಳೆ ಯುವ ಪ್ರೇಮಿ ಎಷ್ಟೇ ಅಂಗಲಾಚಿದರೂ ಬಿಡದೇ ಯುವತಿಯನ್ನು ಕರೆದುಕೊಂಡು ಹೋಗಿದ್ದಾರೆ.

ಮತ್ತೊಂದು ಕಡೆ ಯುವತಿಗೆ ಚಿತ್ರಹಿಂಸೆ ನೀಡುತ್ತಿದ್ದಾರೆ. ನನಗೂ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಪ್ರವೀಣ್‌ ಆರೋಪಿಸಿದ್ದಾನೆ. ಯುವತಿ ಅಣ್ಣ ಶ್ರೀನಿವಾಸ್‌ ಎಂಬಾತ ಪ್ರವೀಣ್‌ಗೆ ಬೆದರಿಕೆ ಕರೆ ಮಾಡುತ್ತಿದ್ದರಂತೆ. ತಂಗಿಗೆ ವಿಷ ಹಾಕಿ ಸಾಯಿಸುತ್ತೇವೆ ಹೊರತು, ನಿನಗೆ ಕೊಡಲ್ಲ ಎಂದು ವಾಟ್ಸಪ್ ಮೆಸೇಜ್ ಮಾಡಿದ್ದಾರೆ. ಹತ್ಯೆ ಮಾಡುವುದಾಗಿ ಮೆಸೇಜ್ ಬರುತ್ತಿದ್ದಂತೆ ಆತಂಕಗೊಂಡಿರುವ ಪ್ರವೀಣ್, ನಮ್ಮಿಬ್ಬರಿಗೂ ನ್ಯಾಯ ಕೊಡಿಸಿ ಎಂದು ಠಾಣೆಮೆಟ್ಟಿಲೇರಿದ್ದಾರೆ. ನಾವಿಬ್ಬರು ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದೇವೆ, ದಯವಿಟ್ಟು ನಮ್ಮನ್ನು ಬದುಕಲು ಬಿಡಿ ಎಂದು ಬೇಡಿಕೆ ಕೊಳ್ಳುತ್ತಿದ್ದಾನೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather: 34 – 35 ಡಿಗ್ರಿ ಸೆಲ್ಸಿಯಸ್‌ ತಲುಪಿದ ತಾಪಮಾನ; ಈ ಜಿಲ್ಲೆಗಳು ಸೆಕೆಯ ತಾಣ!

Karnataka Weather: ಚಿತ್ರದುರ್ಗದಲ್ಲಿ ಮುಂದಿನ ಆರು ದಿನಗಳ ಕಾಲ 33-34 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ಇರಲಿದೆ. ಇದು ಸಹ ಒಂದೆರಡು ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಲೂಬಹುದು ಎಂದು ಅಂದಾಜಿಸಲಾಗಿದೆ. ಕನಿಷ್ಠ ತಾಪಮಾನವು 17 ಡಿಗ್ರಿ ಇರಲಿದೆ. ಅದೇ ಗದಗ ಜಿಲ್ಲೆಯಲ್ಲಿ 34-35 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ಇರಲಿದೆ ಎನ್ನಲಾಗಿದ್ದು, ಕನಿಷ್ಠ ತಾಪಮಾನವು 16-17 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

VISTARANEWS.COM


on

Temperature reached 34 to 35 degrees Celsius Karnataka Weather
Koo

ಬೆಂಗಳೂರು: ರಾಜ್ಯದಲ್ಲಿ ಮುಂದಿನ 48 ಗಂಟೆಯಲ್ಲಿ (ಗುರುವಾರ ಮತ್ತು ಶುಕ್ರವಾರ) ಸೆಕೆಯ ವಾತಾವರಣ ಮುಂದುವರಿಯಲಿದೆ. ಬಿಸಿಲು ಹೆಚ್ಚಾಗಿ ಇರುವುದರಿಂದ ಭಾರಿ ಪ್ರಮಾಣದಲ್ಲಿ ಸೆಕೆ ಉಂಟಾಗಲಿದೆ. ಅದರಲ್ಲೂ ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣಕನ್ನಡ, ಗದಗ, ಚಿತ್ರದುರ್ಗ ಸೇರಿದಂತೆ ಹಲವು ಕಡೆ ಈಗಾಗಲೇ ಗರಿಷ್ಠ ತಾಪಮಾನವು 34 – 35 ಡಿಗ್ರಿ ಸೆಲ್ಸಿಯಸ್‌ ತಲುಪಿದ್ದು, ಇನ್ನೂ ಒಂದೆರಡು ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ. ರಾಜ್ಯ ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿ (Karnataka Weather Forecast) ಪ್ರಕಾರ, ಗರಿಷ್ಠ ತಾಪಮಾನದಲ್ಲಿ (Maximum Temperature) ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಉತ್ತರ ಕನ್ನಡ, ಶಿವಮೊಗ್ಗದ ಹವಾಮಾನ ಹೀಗಿದೆ

ಹವಾಮಾನ ಇಲಾಖೆಯ ವರದಿಯನ್ವಯ, ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಮುಂದಿನ ಆರು ದಿನಗಳ ಕಾಲ 34 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ಇರಲಿದೆ. ಇದು ಒಂದೆರಡು ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಲೂಬಹುದು ಎಂದು ಅಂದಾಜಿಸಲಾಗಿದೆ. ಅಂದರೆ ಫೆಬ್ರವರಿ 20ರವರೆಗೆ ಈ ವಾತಾವರಣ ಇರಲಿದೆ. ಅದೇ ಕನಿಷ್ಠ ತಾಪಮಾನವು 21-22 ಡಿಗ್ರಿ ಆಸುಪಾಸಿನಲ್ಲಿರಲಿದೆ ಎಂದು ಅಂದಾಜಿಸಿದೆ. ಮಲೆನಾಡು ಶಿವಮೊಗ್ಗದಲ್ಲಿಯೂ ಇನ್ನೊಂದು ವಾರ 34-35 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎನ್ನಲಾಗಿದೆ.

ಈ ಜಿಲ್ಲೆಗಳಲ್ಲಿ ಹೆಚ್ಚಿನ ತಾಪಮಾನ

ಚಿತ್ರದುರ್ಗದಲ್ಲಿ ಮುಂದಿನ ಆರು ದಿನಗಳ ಕಾಲ 33-34 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ಇರಲಿದೆ. ಇದು ಸಹ ಒಂದೆರಡು ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಲೂಬಹುದು ಎಂದು ಅಂದಾಜಿಸಲಾಗಿದೆ. ಕನಿಷ್ಠ ತಾಪಮಾನವು 17 ಡಿಗ್ರಿ ಇರಲಿದೆ. ಅದೇ ಗದಗ ಜಿಲ್ಲೆಯಲ್ಲಿ 34-35 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ಇರಲಿದೆ ಎನ್ನಲಾಗಿದ್ದು, ಕನಿಷ್ಠ ತಾಪಮಾನವು 16-17 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಇನ್ನು ಕಲಬುರಗಿಯಲ್ಲಿ ಇನ್ನೊಂದು ವಾರ 35 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ಇರಲಿದೆ. ಇದು ಹೆಚ್ಚಾಗಲೂ ಬಹುದು ಎಂದು ಅಂದಾಜಿಸಲಾಗಿದೆ. ಹೀಗಾಗಿ ಈ ಎಲ್ಲ ಕಡೆ ಹೆಚ್ಚಿನ ಸಮಯದಲ್ಲಿ ಬಿಸಿಲು ಹಾಗೂ ಸೆಕೆ ಹೆಚ್ಚಿನ ಪಾಲನ್ನು ತೆಗೆದುಕೊಳ್ಳಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚು

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈಗಾಗಲೇ ಬಿಸಿಲು ಹೆಚ್ಚಾಗಿದೆ. ಕನಿಷ್ಠ ಹಾಗೂ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1.5 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲೂ ಏರಿಕೆ

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಮತ್ತು ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗದಲ್ಲಿ ಶುಷ್ಕ ವಾತಾವರಣ ಇರಲಿದೆ.

ಬೆಂಗಳೂರಲ್ಲಿ ಇನ್ನೊಂದು ವಾರ ಹೇಗೆ?

ಬೆಂಗಳೂರಿನಲ್ಲಿ ಈಗಾಗಲೇ ಸೆಕೆ ಹೆಚ್ಚಿದ್ದು, ಇನ್ನೂ ಒಂದು ವಾರ ಇದರಲ್ಲಿ ಯಾವುದೇ ಬದಲಾವಣೆ ಆಗುವ ಸೂಚನೆಗಳು ಇಲ್ಲ. ಏಕೆಂದರೆ ಇನ್ನೊಂದು ವಾರ 31ರಿಂದ 32 ಡಿಗ್ರಿ ಸೆಲ್ಸಿಯಸ್‌ನಲ್ಲಿ ರಾಜಧಾನಿಯ ವಾತಾವರಣ ಇರಲಿದೆ. ಗುರುವಾರದಂದು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್‌ ಇರಲಿದ್ದರೆ, ಗರಿಷ್ಠ ಉಷ್ಣಾಂಶವು 31 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ ಹೇಳಿದೆ.

ಇದು ಉತ್ತರ ಒಳನಾಡಿನ ಸ್ಥಿತಿ

ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಉಷ್ಣಾಂಶವು ಸಾಮಾನ್ಯಕ್ಕಿಂತ ಒಂದೆರಡು ಡಿಗ್ರಿ ಸೆಲ್ಸಿಯಸ್‌ ಹೆಚ್ಚಿರಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: HSRP Number Plate ಅವಧಿ ಮತ್ತೆ 3 ತಿಂಗಳು ವಿಸ್ತರಣೆ; ವಿಧಾನ ಪರಿಷತ್‌ನಲ್ಲಿ ಸರ್ಕಾರ ಘೋಷಣೆ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 32 ಡಿ.ಸೆ -17 ಡಿ.ಸೆ
ಮಂಗಳೂರು: 35 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 34 ಡಿ.ಸೆ – 18 ಡಿ.ಸೆ
ಗದಗ: 35 ಡಿ.ಸೆ – 17 ಡಿ.ಸೆ
ಹೊನ್ನಾವರ: 34 ಡಿ.ಸೆ- 23 ಡಿ.ಸೆ
ಕಲಬುರಗಿ: 35 ಡಿ.ಸೆ – 21 ಡಿ.ಸೆ
ಬೆಳಗಾವಿ: 34 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ

Continue Reading

ಕರ್ನಾಟಕ

Karnataka Weather: ಅಬ್ಬಬ್ಬಾ.. ಕರುನಾಡಲ್ಲಿ ಸೆಕೆ ನೋಡು! ಹೊರಗೆ ಬಂದರೆ ಮಂಡೆ ಬಿಸಿ

Karnataka Weather: ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

VISTARANEWS.COM


on

Karnataka Weather Increased sunshine in Karnataka and hot girl
Koo

ಬೆಂಗಳೂರು: ರಾಜ್ಯದಲ್ಲಿ ಮುಂದಿನ 48 ಗಂಟೆಯಲ್ಲಿ (ಗುರುವಾರ ಮತ್ತು ಶುಕ್ರವಾರ) ಯಾವುದೇ ಬದಲಾವಣೆ ಇಲ್ಲ. ಎಂದಿನಂತೆ ಬಿಸಿಲಿನ ವಾತಾವರಣ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather Forecast) ಉಲ್ಲೇಖಿಸಿದೆ. ಗರಿಷ್ಠ ತಾಪಮಾನದಲ್ಲಿನ (Maximum Temperature) ಬದಲಾವಣೆ ಬಹುತೇಕ ಎಲ್ಲ ಕಡೆ ಕಾಣಲಿದೆ. ಅಂದರೆ, ಉತ್ತರ ಒಳನಾಡು (North Inland), ದಕ್ಷಿಣ ಒಳನಾಡು (South Inland) ಹಾಗೂ ಕರಾವಳಿ (Coastal Karnataka) ಭಾಗಗಳಲ್ಲಿ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹೀಗಾಗಿ, ಚಪ್ಪಲಿ ಇಲ್ಲದಿದ್ದರೆ ಕಾಲು ಸುಡುತ್ತದೆ, ಛತ್ರಿ ಇಲ್ಲದಿದ್ದರೆ ತಲೆ ಬಿಸಿಯಾಗುತ್ತದೆ ಎಂಬ ಸ್ಥಿತಿ ನಿರ್ಮಾಣವಾಗಿದೆ.

ಇನ್ನೂ ಬೇಸಿಗೆಯೇ ಕಾಲಿಟ್ಟಿಲ್ಲ. ಆದರೆ, ಉತ್ತರ ಒಳನಾಡಿನ ಜನತೆ ಬೇಸಿಗೆ ಕಾಲವನ್ನು ಅನುಭವಿಸುತ್ತಿದ್ದಾರೆ. ಈ ಭಾಗದ ಕೆಲವು ಜಿಲ್ಲೆಗಳಲ್ಲಿ ಉಷ್ಣಾಂಶವು ಸಾಮಾನ್ಯಕ್ಕಿಂತ ಒಂದೆರಡು ಡಿಗ್ರಿ ಸೆಲ್ಸಿಯಸ್‌ ಹೆಚ್ಚಿರಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯಲ್ಲಿಯೂ ಭಾರಿ ಸೆಕೆ

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಸೆಕೆ ಕಾಣಿಸಿಕೊಂಡಿದೆ. ಸಮುದ್ರ ತೀರ ಸಮೀಪ ಇದ್ದರೂ ಇವರಿಗೆ ಸೆಕೆ ಮಾತ್ರ ತಪ್ಪಿಲ್ಲ. ಬಿಸಿಲಿನ ಹೊಡೆತಕ್ಕೆ ಜನ ತತ್ತರಿಸಿ ಹೋಗುತ್ತಿದ್ದಾರೆ. ಕರಾವಳಿ ಜಿಲ್ಲೆಗಳ ಕೆಲವೆಡೆ ಕನಿಷ್ಠ ಹಾಗೂ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ದಕ್ಷಿಣ ಒಳನಾಡಿನಲ್ಲೂ ಸೂರ್ಯ ಶಾಖ

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಮತ್ತು ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗದಲ್ಲಿ ಶುಷ್ಕ ವಾತಾವರಣ ಇರಲಿದೆ. ಇಲ್ಲಿಯೂ ಸಹ ನಿಯಮಿತವಾಗಿ ಕನಿಷ್ಠ ಮತ್ತು ಗರಿಷ್ಠ ಉಷ್ಣಾಂಶಗಳಲ್ಲಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಿಸಿ ಬಿಸಿಯಾದ ಬೆಂಗಳೂರು

ರಾಜಧಾನಿ ಬೆಂಗಳೂರು ಈಗ ಬಿಸಿ ಬಿಸಿ. ಮುಂಜಾನೆ ಕೆಲವು ಕಡೆ ಮಂಜಿನ ವಾತಾವರಣ ಕಂಡರೂ ಬೆಳಕು ಹರಿದ ಮೇಲೆ ಬಿಸಿಲೇ ಹೆಚ್ಚು. ಇದರಿಂದಾಗಿ ಸೆಕೆ ಹೆಚ್ಚಾಗುತ್ತಿದೆ. ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್‌ ಇರಲಿದ್ದರೆ, ಗರಿಷ್ಠ ಉಷ್ಣಾಂಶವು 30 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ: HSRP Number Plate ಅವಧಿ ಮತ್ತೆ 3 ತಿಂಗಳು ವಿಸ್ತರಣೆ; ವಿಧಾನ ಪರಿಷತ್‌ನಲ್ಲಿ ಸರ್ಕಾರ ಘೋಷಣೆ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 32 ಡಿ.ಸೆ -18 ಡಿ.ಸೆ
ಮಂಗಳೂರು: 34 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 33 ಡಿ.ಸೆ – 18 ಡಿ.ಸೆ
ಗದಗ: 35 ಡಿ.ಸೆ – 17 ಡಿ.ಸೆ
ಹೊನ್ನಾವರ: 33 ಡಿ.ಸೆ- 23 ಡಿ.ಸೆ
ಕಲಬುರಗಿ: 35 ಡಿ.ಸೆ – 21 ಡಿ.ಸೆ
ಬೆಳಗಾವಿ: 34 ಡಿ.ಸೆ – 15 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ

Continue Reading
Advertisement
Shafi Apologizes To Challenging Star Darshan
ಸಿನಿಮಾ6 mins ago

Actor Darshan: ದರ್ಶನ್ ವಿರುದ್ಧ ದೂರು ವಾಪಸ್ ಪಡೆದು ಕ್ಷಮೆ ಕೇಳಿದ ಕನ್ನಡ ಶಫಿ!

Google Gemini ai bias against modi and Minister assured action
ದೇಶ9 mins ago

Google Gemini: ಮೋದಿ ವಿರುದ್ದ ಗೂಗಲ್ ಎಐ ಟೂಲ್ ಜೆಮಿನಿ ಪಕ್ಷಪಾತಿ; ಕ್ರಮ ಎಂದ ಸಚಿವ ರಾಜೀವ್ ಚಂದ್ರಶೇಖರ್

Woman from Ullal dies in car accident in Dubai
ದಕ್ಷಿಣ ಕನ್ನಡ12 mins ago

Road Accident : ಡಿವೈಡರ್‌ಗೆ ಕಾರು ಡಿಕ್ಕಿ; ದುಬೈನಲ್ಲಿ ನಡೆದ ಅಪಘಾತದಲ್ಲಿ ಉಳ್ಳಾಲದ ಯುವತಿ ಮೃತ್ಯು

police constable
ಉದ್ಯೋಗ19 mins ago

Job Alert: ಫೆ. 25ರಂದು ಪೊಲೀಸ್‌ ಕಾನ್ಸ್‌ಟೇಬಲ್‌ ನೇಮಕಾತಿ ಪರೀಕ್ಷೆ; ಪ್ರವೇಶ ಪತ್ರ ಹೀಗೆ ಡೌನ್‌ಲೋಡ್‌ ಮಾಡಿ

pralhad joshi
ಕರ್ನಾಟಕ22 mins ago

Ram Mandir: ಅಯೋಧ್ಯೆ ಯಾತ್ರಿಕರಿಗೆ ಬೆದರಿಕೆ ಹಾಕಿದವರನ್ನು ಒದ್ದು ಒಳಗೆ ಹಾಕಿ: ಪ್ರಲ್ಹಾದ್‌ ಜೋಶಿ ಆಗ್ರಹ

Narendra Modi
ದೇಶ23 mins ago

Narendra Modi: ಗುಜರಾತ್‌ನವನಾದರೂ ನಾನೀಗ ಬನಾರಸಿ ಎಂದ ಪ್ರಧಾನಿ ಮೋದಿ

BY Vijayendra calls on BJP workers to make 100 votes 200 Attack on CM Siddaramaiah
ರಾಜಕೀಯ26 mins ago

BY Vijayendra: 100 ಮತವನ್ನು 200 ಮಾಡಿ; ಬಿಜೆಪಿ ಕಾರ್ಯಕರ್ತರಿಗೆ ವಿಜಯೇಂದ್ರ ಟಾಸ್ಕ್‌; ಸಿಎಂ ವಿರುದ್ಧ ವಾಗ್ದಾಳಿ

R Ashwin
ಪ್ರಮುಖ ಸುದ್ದಿ27 mins ago

R Ashwin : ಕ್ರಿಕೆಟ್​ ದಂತಕತೆಗಳ ಎಲೈಟ್​ ಪಟ್ಟಿ ಸೇರಿದ ಆರ್​ ಅಶ್ವಿನ್​; ಏನಿದು ಸಾಧನೆ?

Elderly woman dies after road Accident Five seriously injured
ಕ್ರೈಂ43 mins ago

Road Accident : ಟಂಟಂ ಪಲ್ಟಿಯಾಗಿ ವೃದ್ಧೆ ಸಾವು; ಐವರು ಗಂಭೀರ ಗಾಯ

R Ashwin
ಪ್ರಮುಖ ಸುದ್ದಿ50 mins ago

R Ashwin : ಈ ಸಾಧನೆ ಮಾಡಿದ ಮೊಟ್ಟ ಮೊದಲ ಬೌಲರ್​ ಎಂಬ ಖ್ಯಾತಿಗೆ ಪಾತ್ರರಾದ ರವಿಚಂದ್ರನ್ ಅಶ್ವಿನ್​

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ4 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Fire breaks out in auto shed Burnt autos
ಬೆಂಗಳೂರು3 hours ago

Fire Accident : ಬೆಂಗಳೂರಿನಲ್ಲಿ ತಡರಾತ್ರಿ ಭಾರೀ ಅಗ್ನಿ ಅವಘಡ! 40-50 ಆಟೋಗಳು ಬೆಂಕಿಗಾಹುತಿ

read your daily horoscope predictions for february 23 2024
ಭವಿಷ್ಯ11 hours ago

Dina Bhavishya : ಈ ರಾಶಿಯವರಿಗೆ ಆಫೀಸ್‌ನಲ್ಲಿ ಬಾಸ್‌ನ ಕಿರಿಕಿರಿಯಿಂದ ದಿನಪೂರ್ತಿ ಟೆನ್ಷನ್‌!

Catton Candy contain cancer Will there be a ban in Karnataka
ಬೆಂಗಳೂರು24 hours ago

cotton candy Ban : ಕರ್ನಾಟಕದಲ್ಲಿ ಬ್ಯಾನ್‌ ಆಗುತ್ತಾ ಬಾಂಬೆ ಮಿಠಾಯಿ; ಕ್ಯಾನ್ಸರ್​​ ಕಾರಕ ವಿಷ ಪತ್ತೆ!

Swarnavalli Mutt appoints successor ceremony
ಕರ್ನಾಟಕ1 day ago

Swarnavalli Mutt: ಸ್ವರ್ಣವಲ್ಲೀ ಶ್ರೀಗಳ ಶಿಷ್ಯ ಸ್ವೀಕಾರ ಸಂಪನ್ನ; ಇಲ್ಲಿದೆ ಲೈವ್‌ ವಿಡಿಯೊ

read your daily horoscope predictions for february 21 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಸಂಗಾತಿಯ ವರ್ತನೆಯು ಕೋಪ, ಮುಜುಗರವನ್ನುಂಟು ಮಾಡುತ್ತೆ!

read your daily horoscope predictions for february 20 2024
ಭವಿಷ್ಯ3 days ago

Dina Bhavishya : ಈ ದಿನ ಆತುರದಲ್ಲಿ ಈ ರಾಶಿಯವರು ಯಾವ ತೀರ್ಮಾನವನ್ನು ಮಾಡ್ಬೇಡಿ!

read your daily horoscope predictions for february 19 2024
ಭವಿಷ್ಯ4 days ago

Dina Bhavishya : ನಿಮ್ಮನ್ನು ದ್ವೇಷಿಸುವವರೇ ಸ್ನೇಹಿತರಾಗಿ ಬದಲಾಗುತ್ತಾರೆ

read your daily horoscope predictions for february 18 2024
ಭವಿಷ್ಯ5 days ago

Dina Bhavishya : ಈ ರಾಶಿಯವರು ಇಂದು ನೀರಿನಂತೆ ಹಣವನ್ನು ಖರ್ಚು ಮಾಡ್ತಾರೆ

Challenging Darsha
ಪ್ರಮುಖ ಸುದ್ದಿ6 days ago

Actor Darshan : ಚಾಲೆಂಜಿಂಗ್ ಸ್ಟಾರ್​ ದರ್ಶನ್​ ‘ಬೆಳ್ಳಿ ಪರ್ವ’ ಕಾರ್ಯಕ್ರಮದ ಲೈವ್​ ಇಲ್ಲಿ ವೀಕ್ಷಿಸಿ

Children lock up their mother for property
ಕರ್ನಾಟಕ6 days ago

Inhuman Behaviour : ಆಸ್ತಿಗಾಗಿ ಹೆತ್ತ ತಾಯಿಯನ್ನೇ ಗೃಹ ಬಂಧನದಲ್ಲಿಟ್ಟರು ಮಕ್ಕಳು!

ಟ್ರೆಂಡಿಂಗ್‌