ಹೊಳಲ್ಕೆರೆ: ಭಾರತದ ಭವ್ಯ ಪರಂಪರೆಯಲ್ಲಿ ಧರ್ಮಕ್ಕೆ ಮತ್ತು ಸಂಸ್ಕೃತಿ ಸಂಸ್ಕಾರಗಳಿಗೆ ಉನ್ನತ ಸ್ಥಾನಮಾನ ನೀಡಲಾಗಿದೆ. ನಾವು ಅದನ್ನು ಮುಂದಿನ ಪೀಳಿಗೆಗೆ ಕಲಿಸಿಕೊಡುವ ಜವಾಬ್ದಾರಿ (Responsibility) ನಮ್ಮದಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚಿತ್ರದುರ್ಗ ಜಿಲ್ಲೆಯ ನಿರ್ದೇಶಕ ದಿನೇಶ್ ಪೂಜಾರಿ ತಿಳಿಸಿದರು.
ತಾಲೂಕಿನ ಗುಂಡೇರಿ ಗ್ರಾಮದ ಈಶ್ವರ ಕಲ್ಯಾಣ ಮಂಟಪ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಈಚೆಗೆ ಅಷ್ಟಲಕ್ಷ್ಮೀ ಪೂಜಾ ಕಾರ್ಯಕ್ರಮ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಇದನ್ನೂ ಓದಿ: Teachers Recruitment: ಪ್ರಾಥಮಿಕ, ಪ್ರೌಢ ಶಾಲೆ ಶಿಕ್ಷಕರ ನೇಮಕ; ಒಟ್ಟು ಎಷ್ಟು ಹುದ್ದೆ ನಿರೀಕ್ಷೆ?
ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಸಂಸ್ಥೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿ ಕೊಂಡಿದೆ ಎಂದರೆ ಅದಕ್ಕೆ ಪಾಲುದಾರ ಕುಟುಂಬವೇ ಕಾರಣ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯ ಗಿರೀಶ್ ನಾಡಿಗ್ ಮಾತನಾಡಿದರು.
ಇದೇ ವೇಳೆ ನೂತನ ಪದಾಧಿಕಾರಿಗಳಿಗೆ ದಾಖಲಾತಿ ಹಸ್ತಾಂತರ ಮಾಡಲಾಯಿತು.
ಇದನ್ನೂ ಓದಿ: karnataka Weather : ಮುಂದಿನ 24 ಗಂಟೆಯಲ್ಲಿ 18 ಜಿಲ್ಲೆಗಳಿಗೆ ಮಳೆ ಮುನ್ಸೂಚನೆ
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಗೌರಮ್ಮ, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಗಂಗೂ ಬಾಯಿ, ಮೇಲ್ವಿಚಾರಕ ಉಮಾಪತಿ, ಸೇವಾ ಪ್ರತಿನಿಧಿಗಳು, ಗ್ರಾಮದ ಮುಖಂಡರು, ಸ್ವಸಹಾಯ ಸಂಘದ ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.