ಹೊಳಲ್ಕೆರೆ: ಭಾರತದ ಭೂಪಟದಲ್ಲಿ ಕರ್ನಾಟಕ (Karnataka) ರಾಜ್ಯಕ್ಕೆ ಅತ್ಯುತ್ತಮವಾದ ಸ್ಥಾನವಿದೆ, ಕನ್ನಡ ನಾಡು, ನುಡಿ, ನೆಲ, ಜಲಕ್ಕೆ ವಿಶಿಷ್ಟತೆಯಿದೆ ಎಂದು ಹೊಳಲ್ಕೆರೆ ಶಾಸಕ ಡಾ. ಎಂ. ಚಂದ್ರಪ್ಪ ತಿಳಿಸಿದರು.
ಪಟ್ಟಣದ ಸಂವಿಧಾನಸೌಧದಲ್ಲಿ ಬುಧವಾರ 68ನೇ ಕನ್ನಡ ರಾಜ್ಯೋತ್ಸವದಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ಹಿಂದುಳಿದ ಜನಾಂಗದ ಬಗ್ಗೆ ಅಪಾರವಾದ ಕಾಳಜಿಯಿಟ್ಟುಕೊಂಡಿದ್ದ ಧೀಮಂತ ನಾಯಕ, ಹಿಂದುಳಿದ ವರ್ಗಗಳ ಹರಿಕಾರ, ದಿವಂಗತ ಡಿ.ದೇವರಾಜ ಅರಸುರವರು ಮೈಸೂರನ್ನು ಕರ್ನಾಟಕವೆಂದು ನಾಮಕರಣ ಮಾಡಿ ಇಂದಿಗೆ ಐವತ್ತು ವರ್ಷಗಳಾಗಿವೆ ಎಂದು ಹೇಳಿದರು.
ಇದನ್ನೂ ಓದಿ: Money Guide : ನಿವೃತ್ತಿ ಬಳಿಕ ಹಣದ ಚಿಂತೆ; ಈ 10 ಟಿಪ್ಸ್ ಪಾಲಿಸಿದರೆ ನೋ ಟೆನ್ಷನ್!
ಕನ್ನಡ ಭಾಷೆಗೆ ಕೇಂದ್ರ ಸರ್ಕಾರ ಶಾಸ್ತ್ರೀಯ ಸ್ಥಾನಮಾನ ನೀಡಿದೆ. ವಿದ್ಯಾರ್ಥಿಗಳು ಶಿಕ್ಷಣವಂತರಾಗುವುದರ ಜೊತೆಗೆ ಬುದ್ಧಿವಂತರಾಗಿ ಗುರು-ಹಿರಿಯರು ತಂದೆ-ತಾಯಿಗಳಿಗೆ ಕೀರ್ತಿ ತರುವಂತಾಗಬೇಕು ಎಂದರು.
ಇದೇ ವೇಳೆ ಎಸ್‌ಎಸ್‌ಎಲ್‌ಸಿ ಮತ್ತು ಪಿ.ಯು.ಸಿ.ಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಇದನ್ನೂ ಓದಿ: Actor Rishi: ರಿಷಿ ಮುಡಿಗೇರಿದ ಒಟಿಟಿ ಅವಾರ್ಡ್!
ಈ ಸಂದರ್ಭದಲ್ಲಿ ತಹಸೀಲ್ದಾರ್ ಬೀಬಿ ಫಾತಿಮ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್, ಪುರಸಭೆ ಮುಖ್ಯಾಧಿಕಾರಿ ಎ.ವಾಸೀಂ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವಮೂರ್ತಿ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಹನುಮಂತಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಲೋಕೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್, ಪುರಸಭೆ ಸದಸ್ಯರುಗಳಾದ ಅಶೋಕ್, ಕೆ.ಸಿ.ರಮೇಶ್, ಪಿ.ಎಂ.ಮುರುಗೇಶ್, ಮಲ್ಲಿಕಾರ್ಜುನಸ್ವಾಮಿ, ವಿಜಯ, ನಾಗರತ್ನ ವೇದಮೂರ್ತಿ, ಸುಧಾ ಬಸವರಾಜ್, ಸೈಯದ್ ಸಜೀಲ್, ಸೈಯದ್ ಮನ್ಸೂರ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.