ಚಿತ್ರದುರ್ಗ: ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಅಧ್ಯಕ್ಷ ಹಾಗೂ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ನುಲೇನೂರು ಎಂ. ಶಂಕರಪ್ಪ (68) ಮಂಗಳವಾರ ರಾತ್ರಿ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. (Death News)
ಮೃತರು ಪತ್ನಿ, ವೈದ್ಯ ಡಾ. ರವಿಶಂಕರ್ ಸೇರಿದಂತೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಬುಧವಾರ ಬೆಳಿಗ್ಗೆ ಚಿತ್ರದುರ್ಗ ಜಿಲ್ಲಾಧಿಕಾರಿ ವೃತ್ತದಲ್ಲಿ ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಮೃತರ ಅಂತ್ಯಕ್ರಿಯೆಯು ಸ್ವಗ್ರಾಮ ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರಿನಲ್ಲಿ ಬುಧವಾರ ಸಂಜೆ ನೆರವೇರಿಸಲಾಯಿತು.