Site icon Vistara News

Hiriyuru News: ಹಿರಿಯೂರಿನಲ್ಲಿ ಜೆಡಿಎಸ್‌ನಿಂದ ಎಂ.ರವೀಂದ್ರಪ್ಪ ಅವರಿಗೇ ಟಿಕೆಟ್‌; ಯಶೋಧರ

#image_title

ಹಿರಿಯೂರು: ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್‌ಗಾಗಿ ಐವರು ಆಕಾಂಕ್ಷಿಗಳಿಂದ ಬಾರಿ ಪೈಪೋಟಿ ಶುರುವಾಗಿತ್ತು. ಆದರೆ ಇದೀಗ ಯಾರಿಗೆ ಟಿಕೆಟ್ ನೀಡಬೇಕು ಎಂಬ ಗೊಂದಲಕ್ಕೆ (Hiriyuru News) ತೆರೆ ಬಿದ್ದಿದೆ. ನಿವೃತ್ತ ಚೀಪ್ ಇಂಜಿನಿಯರ್ ಎಂ. ರವೀಂದ್ರಪ್ಪಗೆ ಟಿಕೆಟ್ ಅಂತಿಮವಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ಯಶೋಧರ ಹೇಳಿದ್ದಾರೆ.

ಹಿರಿಯೂರು ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇಂದು ಅಥವಾ ನಾಳೆ ಜೆಡಿಎಸ್ ಎರಡನೇ ಹಂತದ ಅಭ್ಯರ್ಥಿ ಪಟ್ಟಿ ಬಿಡುಗಡೆಯಾಗಲಿದೆ. ಹಿರಿಯೂರು ಕ್ಷೇತ್ರದ ಜೆಡಿಎಸ್ ಟಿಕೆಟ್ ಹಂಚಿಕೆ ವಿಚಾರದಲ್ಲಿ ಗೊಂದಲ ಉಂಟಾಗಿತ್ತು. ಕಳೆದ ಎರಡು ವರ್ಷಗಳಿಂದ ಅನೇಕ ರೀತಿ ಊಹಾಪೋಹಗಳು ನಡೆದು ಹೋದವು. ಇದೀಗ ಈ ಎಲ್ಲ ಗೊಂದಲಗಳಿಗೆ ತೆರೆ ಬಿದ್ದಿದೆ. ಇಂದು ನಮ್ಮ ಪಕ್ಷದ ವರಿಷ್ಠರು ರವೀಂದ್ರಪ್ಪ ಅವರನ್ನು ಪಕ್ಷದ ಅಭ್ಯರ್ಥಿ ಎಂದು ಮೌಖಿಕವಾಗಿ ಸೂಚನೆ ಕೊಟ್ಟಿದ್ದಾರೆ” ಎಂದು ತಿಳಿಸಿದರು.

ಇನ್ನು ಏಪ್ರಿಲ್ 10ರಂದು ಹಿರಿಯೂರು ನಗರಕ್ಕೆ ಪಂಚರತ್ನ ಯಾತ್ರೆ ಆಗಮಿಸಲಿದೆ. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಪಂಚರತ್ನ ಯಾತ್ರೆ ನಗರದ ರಂಜಿತಾ ಹೋಟೆಲ್‌ನಿಂದ ಎಪಿಎಂಸಿ ಆವರಣದವರೆಗೆ ಸಾಗಲಿದೆ. ನಂತರ ಸಾರ್ವಜನಿಕ ಸಭೆ ಜರುಗಲಿದೆ. ಈ ಕಾರ್ಯಕ್ರಮ ಇಡೀ ರಾಜ್ಯವೇ ಬೆರಗಾಗುವಂತೆ ನಡೆಯಲಿದೆ. ಇಂತಹ ಐತಿಹಾಸಿಕ ಸಮಾವೇಶದಿಂದಾಗಿ ರಾಷ್ಟ್ರೀಯ ಪಕ್ಷಗಳ ಅಬ್ಬರ ಸದ್ದು ಅಡಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: Karnataka Election 2023: ಹಾಸನ ಟಿಕೆಟ್‌ ಗೊಂದಲ, ಜೆಡಿಎಸ್‌ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮುಂದೂಡಿಕೆ

ಈ ಸಂದರ್ಭದಲ್ಲಿ ಅಭ್ಯರ್ಥಿ ಎಂ. ರವೀಂದ್ರಪ್ಪ, ತಾಲೂಕು ಜೆಡಿಎಸ್ ಅಧ್ಯಕ್ಷ ಹನುಮಂತರಾಯ, ಜೆಜಿ ಹಳ್ಳಿ ಮಂಜುನಾಥ್, ಟಿ. ಬಸವರಾಜ್, ವಕೀಲ ಕೂಡ್ಲಹಳ್ಳಿ ಶಿವಶಂಕರ್ ರಾಮಮೂರ್ತಿ, ರಮೇಶ್ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version