Chitradurga Accident: ಚಿತ್ರದುರ್ಗದಲ್ಲಿ ಯಮನ ಅಟ್ಟಹಾಸ; ಬಸ್-ಲಾರಿ ಡಿಕ್ಕಿಯಾಗಿ ನಾಲ್ವರ ಸಾವು - Vistara News

ಚಿತ್ರದುರ್ಗ

Chitradurga Accident: ಚಿತ್ರದುರ್ಗದಲ್ಲಿ ಯಮನ ಅಟ್ಟಹಾಸ; ಬಸ್-ಲಾರಿ ಡಿಕ್ಕಿಯಾಗಿ ನಾಲ್ವರ ಸಾವು

Chitradurga Accident: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ನಾಲ್ವರು ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ.

VISTARANEWS.COM


on

Accident In Chitradurga
ಅಪಘಾತದ ತೀವ್ರತೆಗೆ ಬಸ್‌ ನಜ್ಜುಗುಜ್ಜಾಗಿದೆ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಸೊಮವಾರ ಬೆಳಗಿನ ಜಾವ ಭೀಕರ ಅಪಘಾತ (Chitradurga Accident) ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಲಾರಿ ಡಿಕ್ಕಿಯಾಗಿದ್ದು, ಬಸ್‌ನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಹತ್ತಾರು ಜನ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.

ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಬಳಿ ಬೆಳಗಿನ ಜಾವ 3 ಗಂಟೆಗೆ ಅಪಘಾತ ಸಂಭವಿಸಿದೆ. ರಾಯಚೂರು ಕಡೆಯಿಂದ ಬೆಂಗಳೂರಿಗೆ ಹೊರಟಿದ್ದ ಬಸ್‌ ಹಾಗೂ ಲಾರಿ ಡಿಕ್ಕಿಯಾಗಿದೆ. ಮಸ್ಕಿ ಮೂಲದ ರಮೇಶ್‌ (40) ಹಾಗೂ ಬೆಂಗಳೂರು ಮೂಲದ ಪಾರ್ವತಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ ಎಂದು ತಿhirಳಿದುಬಂದಿದೆ.

ಅಪಘಾತ ಸ್ಥಳದ ವಿಡಿಯೊ

ಅಪಘಾತದ ತೀವ್ರತೆಗೆ ಬಸ್‌ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಬಸ್‌ನಲ್ಲಿದ್ದ ಕೆಲವರಿಗೆ ಗಂಭೀರವಾಗಿ ಗಾಯಗಳಾದರೆ, 10 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಹಿರಿಯೂರು ಹಾಗೂ ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಸಂಭವಿಸುತ್ತಲೇ ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಐಮಂಗಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Comedian Chandraprabha : ಅಪಘಾತ ಆದ್ಮೆಲೆ ಭಯಪಟ್ಟು ಹೊರಟು ಹೋಗಿಬಿಟ್ಟೆ ತಪ್ಪಾಯ್ತು; ಗಿಚ್ಚಿ ಗಿಲಿಗಿಲಿ ಚಂದ್ರಪ್ರಭ

ಒಂದು ವಾರದ ಹಿಂದಷ್ಟೇ ಚಿತ್ರದುರ್ಗದ ಮಲ್ಲಾಪುರ ಬಳಿ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಕಾರು- ಲಾರಿ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದರು. ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕಾರು ಬಂದು ಬಂದು ಡಿಕ್ಕಿ ಹೊಡೆದ ಕಾರಣ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದರು. ಘಟನೆಯಲ್ಲಿ ಮೂವರು ಮಕ್ಕಳು ಗಾಯಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

Karnataka Weather Forecast : ರಾಜ್ಯಾದ್ಯಂತ ಕಳೆದೊಂದು ವಾರದಿಂದ ಮಳೆಯು (Rain news) ಅಬ್ಬರಿಸುತ್ತಿದ್ದು, ಏಳು ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಬೆಂಗಳೂರಿನಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

VISTARANEWS.COM


on

By

karnataka Weather Forecast Rain
Koo

ಬೆಂಗಳೂರು: ಜು.5ರಂದು ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದ್ದು, ಮಲೆನಾಡು ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ನಿರೀಕ್ಷೆಯಿದೆ. ಇನ್ನೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಮಧ್ಯಮ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಕೂಡಿದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇತ್ತ ಉತ್ತರ ಒಳನಾಡಿನದಲ್ಲಿ ಸಾಕಷ್ಟು ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಆದರೆ ಬೀದರ್, ಕಲಬುರಗಿ, ಬೆಳಗಾವಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇನ್ನೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ರಾಜಧಾನಿ ಬೆಂಗಳೂರಿನಲ್ಲಿಂದು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗುಡುಗು ಸಹಿತ ಗಾಳಿಯೊಂದಿಗೆ ಭಾರಿ ಮಳೆ ಎಚ್ಚರಿಕೆ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಮುಖ್ಯವಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಬೆಳಗಾವಿ, ಧಾರವಾಡ, ಕೊಡಗು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

Karnataka Weather Forecast: ಭಾರಿ ಮಳೆಗೆ (Rain News) ಗುಡ್ಡ ಕುಸಿದಿದೆ. ಪರಿಣಾಮ ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಈ ಮೂಲಕ ಕರಾವಳಿಯಲ್ಲಿ ಮಳೆಗೆ ಮೊದಲ ಬಲಿಯಾಗಿದೆ.

VISTARANEWS.COM


on

By

karnataka Weather Forecast
Koo

ಉಡುಪಿ: ಕರಾವಳಿಯಲ್ಲಿ ಭಾರಿ ಮಳೆಗೆ (Karnataka Weather) ಮೊದಲ (Rain News) ಬಲಿಯಾಗಿದೆ. ಉಡುಪಿಯ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಗುಡ್ಡ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಹಳ್ಳಿ ಬೇರು ನಿವಾಸಿ ಅಂಬಾ (45) ಮೃತಪಟ್ಟವರು.

ಏಕಾಏಕಿ ಗುಡ್ಡ ಕುಸಿದು ಬಿದ್ದ ಪರಿಣಾಮ ಅಂಬಾ ಮಣ್ಣಿನ ಅಡಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತ ದೇಹವನ್ನು ಮೇಲೆ ಎತ್ತಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಆಗುಂಬೆಯಲ್ಲಿ 25 ಸೆಂ.ಮೀ ಮಳೆ ದಾಖಲು

ನೈರುತ್ಯ ಮಾನ್ಸೂನ್ ಕರಾವಳಿಯಲ್ಲಿ ಸಕ್ರಿಯವಾಗಿದ್ದರೆ, ಒಳಭಾಗದಲ್ಲಿ ಸಾಮಾನ್ಯವಾಗಿತ್ತು. ಆಗುಂಬೆ (ಶಿವಮೊಗ್ಗ ಜಿಲ್ಲೆ) 25, ಗೇರ್ಸೊಪ್ಪ (ಉತ್ತರ ಕನ್ನಡ ಜಿಲ್ಲೆ) 24, ಸಿದ್ದಾಪುರ (ಉಡುಪಿ ಜಿಲ್ಲೆ) 23, ಕಮ್ಮರಡಿ (ಚಿಕ್ಕಮಗಳೂರು) 20 ಸೆಂ.ಮೀ ಮಳೆಯಾಗಿತ್ತು. ಲಿಂಗನಮಕ್ಕಿ (ಶಿವಮೊಗ್ಗ ಜಿಲ್ಲೆ) 19, ಕದ್ರಾ (ಉತ್ತರ ಕನ್ನಡ ಜಿಲ್ಲೆ) 15, ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ) 15, ಶೃಂಗೇರಿ (ಜಿಲ್ಲೆ ಚಿಕ್ಕಮಗಳೂರು) 15, ಕುಂದಾಪುರ (ಉಡುಪಿ ಜಿಲ್ಲೆ) 13, ಮಂಕಿ (ಉತ್ತರ ಕನ್ನಡ ಜಿಲ್ಲೆ) 12 ಸೆಂ.ಮೀ ಮಳೆಯಾಗಿತ್ತು.

ಇದನ್ನೂ ಓದಿ: Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

ಚಾರ್ಮಾಡಿ ಹೆದ್ದಾರಿ ತಡೆಗೋಡೆಗಳಲ್ಲಿ ಬಿರುಕು

ಚಿಕ್ಕಮಗಳೂರಿನಲ್ಲಿ ಮಳೆ ಮುಂದುವರಿದ್ದು, ಚಾರ್ಮಾಡಿ ಹೆದ್ದಾರಿಯ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದೆ. ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಲ್ಲಲ್ಲಿ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದ್ದು, ಅಪಾಯಕ್ಕೆ ಆಹ್ವಾನಿಸುತ್ತಿದೆ. ಹೊಸ ಕಾಮಗಾರಿ ನಡೆದ ಸ್ಥಳದಲ್ಲೇ ಬಿರುಕು ಕಾಣಿಸಿಕೊಂಡಿದೆ. ಮಳೆ ಹಾಗೂ ಮಂಜಿನ ನಡುವೆ ರಸ್ತೆ ಬಿರುಕು ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. ರಸ್ತೆಗೆ ಕೋಟ್ಯಂತರ ರೂಪಾಯಿ ವ್ಯಯಿಸಿದರೂ ಪ್ರಯೋಜನವಾಗಿಲ್ಲ. ಕಳಪೆ ಗುಣಮಟ್ಟದ ಕಾಮಗಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇತ್ತ ರಾತ್ರಿಯಿಡೀ ಸುರಿದ ಮಳೆಗೆ ಸೇತುವೆ ಮೇಲೆ ನೀರು ಉಕ್ಕಿ ಹರಿಯುತ್ತಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಾಳೆ ಗದ್ದೆ ಬಿಳ್ಳೂರು ಗ್ರಾಮದಲ್ಲಿ ಬಿಳ್ಳೂರು- ಮುಲ್ಲರ ಹಳ್ಳಿ ಸೇರಿ ಹಲವು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ. ಸೇತುವೆ ಮೇಲೆ ನೀರು ನದಿಯಂತೆ ಉಕ್ಕಿ ಹರಿಯುತ್ತಿದೆ. ಒಂದು ಕಡೆಯಿಂದ ಮತ್ತೊಂದು ಕಡೆ ಹೋಗಲು ಗ್ರಾಮಸ್ಥರು ಪರದಾಟ ಅನುಭವಿಸುತ್ತಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ.

ಶೃಂಗೇರಿಯ ಕೆರೆಕಟ್ಟೆ ಘಟ್ಟಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಶೃಂಗೇರಿ ಶಾರದಾಂಭೆ ತಟದಲ್ಲಿ ತುಂಗಾ ನದಿ ದೊಡ್ಡ ಪ್ರಮಾಣದಲ್ಲಿ ಹರಿಯುತ್ತಿದೆ. ತುಂಗಾ ನದಿ ಇಕ್ಕೆಲಗಳ ತೋಟಗಳು ಜಲಾವೃತ‌ವಾಗುವ ಸಾಧ್ಯತೆ ಇದೆ. ಇತ್ತ ಅಪಾಯದ ಮಟ್ಟ ಮೀರಿದ ಭದ್ರಾ ನದಿಯಿಂದಾಗಿ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗುವ ಹಂತ ತಲುಪಿದೆ.

ಹೆಬ್ಬಾಳೆ ಸೇತುವೆಯ ಮೇಲ್ಪದರಕ್ಕೆ ಭದ್ರಾ ನೀರು ಅಪ್ಪಳಿಸುತ್ತಿದೆ. ಸೇತುವೆ ಮುಳುಗಡೆಯಾದರೆ ಹತ್ತಾರು ಹಳ್ಳಿಗಳ ಸಂಪರ್ಕ ಬಂದ್ ಆಗಲಿದೆ. ಕಳಸ-ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಮಾರ್ಗವೂ ಬಂದ್ ಆಗಲಿದೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ಪ್ರವಾಸಿಗರು ಹಾಗೂ ಸ್ಥಳೀಯರ ಓಡಾಟಕ್ಕೆ ತಡೆಹಿಡಿಯಲಾಗಿದೆ. ಯಾವುದೇ ಕ್ಷಣದಲ್ಲಾದರೂ ಸೇತುವೆ ಮೇಲೆ ನೀರು ಉಕ್ಕುವ ಸಾಧ್ಯತೆ ಇದೆ. ಹೀಗಾಗಿ ಸ್ಥಳದಲ್ಲಿಯೇ ಕಳಸ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Reels Obsession : ಶೋಕಿಲಾಲನ ವಿರುದ್ಧ ಚಿತ್ರದುರ್ಗದಲ್ಲೂ ಕೇಸ್‌; ಡಮ್ಮಿ ಗನ್‌ ಕೊಟ್ಟ ಸ್ಯಾಂಡಲ್‌ವುಡ್‌ ಟೆಕ್ನಿಷಿಯನ್‌ಗೆ ಸಂಕಷ್ಟ

Reels Obsession: ಮೊನ್ನೆಯಷ್ಟೇ ರೀಲ್ಸ್‌ಗಾಗಿ ಡಮ್ಮಿ ಗನ್‌ ಹಿಡಿದು ಶೋಕಿ ಮಾಡಿದ ಕಾರಣಕ್ಕೆ ರೀಲ್ಸ್‌ ಸ್ಟಾರ್‌ ಅರೆಸ್ಟ್‌ ಆಗಿದ್ದ. ಆದರೆ ಈತನ ವಿರುದ್ಧ ಚಿತ್ರದುರ್ಗದಲ್ಲೂ ಕೇಸ್‌ ದಾಖಲಾಗಿದ್ದು, ಡಮ್ಮಿ ಗನ್‌ ಕೊಟ್ಟ ಸ್ಯಾಂಡಲ್‌ವುಡ್‌ ಟೆಕ್ನಿಷಿಯನ್‌ಗೆ ಸಂಕಷ್ಟ ಎದುರಾಗಿದೆ.

VISTARANEWS.COM


on

By

Reels Obsession who gave dummy gun To Reels Obsession Sandalwood technician now trouble
ಸಿನಿಮಾ ಟೆಕ್ನಿಷಿಯನ್ ಸಾಹಿಲ್‌ಗೆ ಪೊಲೀಸರಿಂದ ನೋಟಿಸ್‌.. ಡಮ್ಮಿ ಗನ್‌ ಹಿಡಿದು ಶೋಕಿ ಮಾಡಿದ ಅರುಣ್‌ ಕಟಾರೆ
Koo

ಚಿತ್ರದುರ್ಗ/ಬೆಂಗಳೂರು: ರೀಲ್ಸ್‌ಗಾಗಿ ಎಕೆ 47 (AK 47 Rifle) ರೈಫಲ್‌ ಹಿಡಿದ ಗನ್ ಮ್ಯಾನ್‌ಗಳನ್ನು ಬಾಡಿಗಾರ್ಡ್ಸ್‌ (Bodyguards) ಆಗಿಟ್ಟುಕೊಂಡು ಶೋಕಿ (Reels Obsession) ಮಾಡಿದ ಅರುಣ್‌ ಕಟಾರೆ ಎಂಬಾತನನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದರು. ಆದರೆ ಕಳೆದ ವರ್ಷವೇ ಚಿತ್ರದುರ್ಗದಲ್ಲಿ ಅರುಣ್‌ ವಿರುದ್ಧ ಪ್ರತ್ಯೇಕ ಎರಡು ಎಫ್‌ಐಆರ್‌ಗಳು ದಾಖಲಾಗಿವೆ.

ಶೋಕಿಲಾಲ ಅರುಣ್‌ ಕಟಾರೆ ವಿರುದ್ಧ ಕಳೆದ 2023ರ ಏಪ್ರಿಲ್ ಹಾಗೂ ಜುಲೈನಲ್ಲಿ ಬ್ಲ್ಯಾಕ್‌ಮೇಲ್‌ ಹಾಗೂ ಚೀಟಿಂಗ್‌ ಮಾಡಿರುವ ಆರೋಪದಡಿ ಎಫ್‌ಐಆರ್‌ ದಾಖಲಾಗಿದೆ. ಬಾಲಕನಿಗೆ ಮದ್ಯ ಕುಡಿಸಿ, ಸಿಗರೇಟ್ ಸೇದಿಸಿ ಮೊಬೈಲ್‌ನಲ್ಲಿ ವಿಡಿಯೊ ಮಾಡಿ ಬೆದರಿಸುತ್ತಿದ್ದ. ಮನೆಯಿಂದ ಒಡವೆ ತರುವಂತೆ ಬಾಲಕನಿಗೆ ಅರುಣ್ ಕಟಾರೆ ಬೆದರಿಸುತ್ತಿದ್ದ. ಈ ವಿಚಾರ ತಿಳಿಯುತ್ತಿದ್ದಂತೆ ಬಾಲಕನ ತಂದೆ ಬಾಲಾಜಿ ಎಂ.ಕೆ ಎಂಬುವವರಿಂದ ದೂರು ದಾಖಲಿಸಿದ್ದರು.

ಹಣ ಡಬಲ್‌ ಮಾಡುವುದಾಗಿ ವಂಚನೆ

ಮತ್ತೊಬ್ಬರಿಗೆ ಹಣ ಡಬಲ್ ಮಾಡಿಕೊಡುವುದಾಗಿ ಹೇಳಿ ಸುಮಾರು 3,68,000 ಹಣ ಪಡೆದು ಅರುಣ್ ಕಟಾರೆ ವಂಚಿಸಿದ್ದಾನೆ. ಡ್ಯೂಯೆಟ್ ಪಬ್‌ನಲ್ಲಿ ಬಂಡವಾಳ ಹಾಕಿ ಡಬಲ್ ಮಾಡುವುದಾಗಿ ಹೇಳಿದ್ದ. ವಂಚನೆಗೆ ಒಳಗಾದ ರವಿತೇಜ ಎಲ್.ಯು ಎಂಬುವುವರಿಂದ ದೂರು ದಾಖಲಾಗಿದೆ. ರವಿತೇಜನಿಂದ ಹಣ ಪಡೆದ ಬಳಿಕ ಫೋನ್ ಸ್ವಿಚ್ ಮಾಡಿಕೊಂಡು ಅರುಣ್‌ ಕಟಾರೆ ಪರಾರಿ ಆಗಿದ್ದ.

ಸ್ಯಾಂಡಲ್‌ವುಡ್‌ ಟೆಕ್ನಿಷಿಯನ್‌ಗೆ ಸಂಕಷ್ಟ

ಅರುಣ್‌ ಕಟಾರೆ ರೀಲ್ಸ್ ಶೋಕಿಯಿಂದಾಗಿ ಸ್ಯಾಂಡಲವುಡ್‌ನ ಟೆಕ್ನಿಷಿಯನ್‌ಗೆ ಸಂಕಷ್ಟ ಎದುರಾಗಿದೆ. ಕನ್ನಡದ ಸೂಪರ್ ಹಿಟ್ ಸಿನಿಮಾಗಳಿಗೆ ಡಮ್ಮಿ ಗನ್ ಒದಗಿಸುವ ಟೆಕ್ನಿಷಿಯನ್ ಸಾಹಿಲ್‌ಗೆ ಪೊಲೀಸರು ನೋಟಿಸ್‌ ಕೊಟ್ಟಿದ್ದಾರೆ. ಹೊಂಬಾಳೆ ಫಿಲ್ಸ್, ಗೀತಾ ಪಿಕ್ಚರ್ಸ್ ನಂತಹ ಬ್ಯಾನರ್‌ಗಳ ಸಿನಿಮಾಗಳಿಗೆ ಸಾಹಿಲ್ ಟೆಕ್ನಿಷಿಯನ್ ಆಗಿದ್ದರು. ಕನ್ನಡದ ಸೂಪರ್ ಹಿಟ್ ಚಿತ್ರಗಳಾದ ಕಬ್ಜ, ಭೈರತಿ ರಣಗಲ್, ಮಪ್ತಿ ಸಿನಿಮಾಗಳಿಗೆ ಟೆಕ್ನಿಷಿಯನ್ ಸಾಹಿಲ್ ಡಮ್ಮಿ ಗನ್ ಒದಗಿಸಿದ್ದರು. ಇದೇ ಸಾಹಿಲ್ ಬಳಿ ಅರುಣ್ ಕಟಾರೆ ಡಮ್ಮಿ ಗನ್ ಬಾಡಿಗೆ ಪಡೆದಿದ್ದರು. ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಮಾಡಲು ಡಮ್ಮಿ ಗನ್‌ ಅನ್ನು ಅರುಣ್ ಕಟಾರೆ ಬಳಸಿದ್ದ. ಸದ್ಯ ಕೊತ್ತನೂರು ಠಾಣೆ ಪೊಲೀಸರಿಂದ ಬಂಧಿತನಾಗಿದ್ದ ಅರುಣ್ ಕಾಟೇರ, ಸಾಹಿಲ್ ಬಳಿ ಶಾರ್ಟ್ ಮೂವಿಗೆ ಎಂದು ಡಮ್ಮಿ ಗನ್ ಬಾಡಿಗೆ ತೆಗೆದುಕೊಂಡಿದ್ದ. ಈಗ ಕೊತ್ತನೂರು ಪೊಲೀಸರು ಸಾಹಿಲ್‌ಗೆ ನೊಟೀಸ್ ಜಾರಿ ಮಾಡಿದ್ದಾರೆ.

ಇದನ್ನೂ ಓದಿ: Viral Video: ರೀಲ್ಸ್‌ಗಾಗಿ ಸಿಗರೇಟ್‌ ದಂ ಹೊಡೆದ ಯುವತಿ; ಮನೇಲಿ ಹಿಗ್ಗಾಮುಗ್ಗಾ ಹೊಡೆದ ಅಪ್ಪ!

ಏನಿದು ಪ್ರಕರಣ?

ಬೆಂಗಳೂರು: ರೀಲ್ಸ್‌ಗಾಗಿ ಶೋಕಿ (Reels Obsession) ಮಾಡಿದವನನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಮುದ್ದೆ ಮುರಿಯಲು ಕಳಿಸಿದ್ದರು. ಈತ ಎಕೆ 47 (AK 47 Rifle) ರೈಫಲ್‌ ಹಿಡಿದ ಗನ್ ಮ್ಯಾನ್‌ಗಳನ್ನು ಬಾಡಿಗಾರ್ಡ್ಸ್‌ (Bodyguards) ಆಗಿಟ್ಟುಕೊಂಡು, ಪಾಶ್ ಕಾರುಗಳನ್ನು ಚಲಾಯಿಸಿಕೊಂಡು, ಮೈಮೇಲೆ ಕಿಲೋಗಟ್ಟಲೆ ಚಿನ್ನ ಧರಿಸಿಕೊಂಡು ಶೋಕಿ ಮಾಡುತ್ತಿದ್ದ. ಬೀದಿಬೀದಿಯಲ್ಲಿ ಈತನ ಗನ್‌ ಕಂಡು ಜನ ಆತಂಕಕ್ಕೊಳಗಾಗಿದ್ದರು.

ಬೆಂಗಳೂರಿನಲ್ಲಿ ಹೀಗೆ ಶೋ ಕೊಡಲು ಹೋಗಿ ಜೈಲು ಸೇರಿದ ರೀಲ್ಸ್ ಸ್ಟಾರ್ ಹೆಸರು ಅರುಣ್ ಕಟಾರೆ. ಕೊತ್ತನೂರು ಪೊಲೀಸರು ಈತನನ್ನು ಬಂಧಿಸಿದ್ದರು. ರೌಡಿ ಚಟುವಟಿಕೆ ಮತ್ತು ಹಳೆಯ ಎಂಓಬಿಗಳ ಮೇಲೆ ನಿಗಾ ವಹಿಸಿದ್ದ ಕೊತ್ತನೂರು ಸಿಬ್ಬಂದಿ ಬಾತ್ಮಿದಾರರಿಂದ ಬಂದ ಮಾಹಿತಿ ಮೇರೆಗೆ ಅರುಣ್ ಕಟಾರೆಯನ್ನು ವಶಕ್ಕೆ ಪಡೆದಿದ್ದರು.

ಈತ ಬಾಡಿಗಾರ್ಡ್ಸ್‌ ಥರ ಮನುಷ್ಯರನ್ನಿಟ್ಟುಕೊಂಡು, ಅವರ ಕೈಲಿ ಎಕೆ 47 ಮಾದರಿಯ ನಕಲಿ ಗನ್ ಹಿಡಿಸಿ ರಸ್ತೆಯಲ್ಲಿ ಶೋಆಫ್‌ ಮಾಡುತ್ತಿದ್ದ. ಮೈಮೇಲೆ ನಕಲಿ ಚಿನ್ನ ಹೇರಿಕೊಳ್ಳುತ್ತಿದ್ದ. ಅರುಣ್ ಕಟಾರೆ ಶೋನಿಂದ ಬೆದರಿದ ಸಾರ್ವಜನಿಕರು ಆತಂಕದಿಂದ ಈ ಬಗ್ಗೆ ಮಾಹಿತಿ ನೀಡಿದ್ದರು. ಆರ್ಮ್ಸ್ ಕಾಯಿದೆ ಸೆ. 290 ಅಡಿಯಲ್ಲಿ ಪ್ರಕರಣ ದಾಖಲಿಸಿ ಈತನನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ, ನಕಲಿ ಗನ್ ಹಿಡಿದು ಏರಿಯಾದಲ್ಲಿ ಹವಾ ಸೃಷ್ಟಿಸಲು ಹೋದವನ ಗುಟ್ಟು ಬಯಲಾಗಿತ್ತು. ರೀಲ್ಸ್ ಶೋಕಿಗೆ ಬಿದ್ದ ಯುವಕನನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಕಳಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

Karnataka Weather Forecast : ಅಬ್ಬರಿಸುತ್ತಿರುವ ಮಳೆಯಿಂದಾಗಿ ನಾನಾ ಅವಾಂತರವೇ ಸೃಷ್ಟಿ ಆಗಿದೆ. ಮಳೆಗೆ (Rain News) ಲಾರಿಗಳ ನಡುವೆ ಮುಖಾಮುಖಿ (Road Accident) ಡಿಕ್ಕಿಯಾದರೆ, ಮತ್ತೊಂದು ಕಡೆ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್‌ ಮರ ಬಿದ್ದು ಜಖಂಗೊಂಡಿದೆ. ಹಲವಾರು ಗ್ರಾಮಗಳು ನೀರಿನಿಂದ ಮುಳುಗಡೆಯಾಗಿದೆ.

VISTARANEWS.COM


on

By

karnataka Rain
Koo

ಬೆಳಗಾವಿ/ಶಿವಮೊಗ್ಗ/ಉಡುಪಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯು (Karnataka rain) ಅವಾಂತರವನ್ನೇ (Rain Effect) ಸೃಷ್ಟಿಸಿದೆ. ತೀವ್ರ ಮಳೆಯಿಂದಾಗಿ ಚಾಲಕರ ನಿಯಂತ್ರಣ ತಪ್ಪಿ ಲಾರಿಗಳ ಮಧ್ಯೆ ಮುಖಾಮುಖಿ (Road Accident) ಡಿಕ್ಕಿಯಾಗಿದೆ. ಬೆಳಗಾವಿ ತಾಲೂಕಿನ ಹಲಗಾ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಲಾರಿ ಚಾಲಕರಿಬ್ಬರಿಗೂ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಡಿಕ್ಕಿಯ ರಭಸಕ್ಕೆ ಲಾರಿಗಳು ಸಂಪೂರ್ಣವಾಗಿ ನುಜ್ಜು ಗುಜ್ಜಾಗಿವೆ. ಹಿರೇಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Karnataka Rain

ಮಳೆಗೆ ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಭಾಗದಲ್ಲಿ ಭಾರೀ ಗಾಳಿಯೊಂದಿಗೆ ಮಳೆಯಾಗತ್ತಿದೆ. ಪರಿಣಾಮ ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಬೃಹತ್ ಮರ ಬಿದ್ದಿದೆ. ಆಗುಂಬೆ ಘಾಟಿಯ ನಾಲ್ಕನೇ ತಿರುವಿನಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಓಮಿನಿಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಓಮಿನಿ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರಿನ ಮೇಲೆ ಮರ ಬಿದ್ದ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

karnataka Rain

ಉಡುಪಿಯಲ್ಲಿ ಮುಳುಗಡೆಯಾದ ಗ್ರಾಮಗಳು

ಪ್ರತಿ ವರ್ಷದಂತೆ ಈ ವರ್ಷವೂ ಉಡುಪಿಯ ಬೈಂದೂರು ತಾಲೂಕಿನಲ್ಲಿ ನೆರೆಹಾವಳಿ ಸೃಷ್ಟಿಯಾಗಿದೆ. ತಾಲೂಕಿನ ನಾವುಂದ, ಬಡಾಕೇರಿ, ಮರವಂತೆ, ಸಾಲ್ಬುಡ, ಅರೆಹೊಳೆ ಕೋಣ್ಕಿ ಹಾಗೂ ಕುದ್ರು ಚಿಕ್ಕಳ್ಳಿ ಪಡುಕೋಣೆ ಭಾಗದಲ್ಲಿ ನೆರೆಹಾವಳಿಗೆ ತುತ್ತಾಗಿವೆ.

ಸ್ಥಳೀಯ ಯುವಕರು ನೆರೆಹಾವಳಿ ಪೀಡಿತ ಪ್ರದೇಶಗಳಿಗೆ ತೆರಳಿ ಅಗತ್ಯ ನೆರವು ನೀಡುತ್ತಿದ್ದಾರೆ. ಮೂರು ದೋಣಿಗಳನ್ನು ಬಳಸಿ ರಕ್ಷಣಾ ಕಾರ್ಯದ ಜತೆಗೆ ಅಗತ್ಯ ವಸ್ತು ಪೂರೈಸುತ್ತಿದ್ದಾರೆ. ಹೆಚ್ಚುವರಿಯಾಗಿ ಬೈಂದೂರು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನೆರೆಪೀಡಿತ ಪ್ರದೇಶಕ್ಕೆ ಕುಂದಾಪುರ ಸಹಾಯಕ ಕಮೀಶನರ್ ರಶ್ಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

ಮನೆಗಳು ಜಲಾವೃತ

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆಯಿಂದಾಗಿ ಅಂಕೋಲಾ ತಾಲೂಕಿನ ಬಿಳೆಹೊಂಯ್ಗಿ, ಮಂಜಗುಣಿ ಸೇರಿದಂತೆ 5ಕ್ಕೂ ಹೆಚ್ಚು ಗ್ರಾಮಗಳಿಗೆ ನೀರು ನುಗ್ಗಿದೆ. ಹೊನ್ನೆಬೈಲ್ ಗ್ರಾಮದಲ್ಲಿ 20 ಮನೆಗಳು ಜಲಾವೃತಗೊಂಡಿದೆ. ಅಂಕೋಲಾ ತಾಲೂಕಿನ 5 ಗ್ರಾಮಗಳಲ್ಲಿ ರಸ್ತೆ ನೀರಿನಿಂದ ಮುಳುಗಿದೆ. ಹೀಗಾಗಿ ಬಿಳೆಹೊಂಯ್ಗಿ, ಹೊನ್ನೆಬೈಲು, ಶಿಂಗನಮಕ್ಕಿ, ಮಂಜಗುಣಿ ಶಾಲೆಗಳಲ್ಲಿ ಕಾಳಜಿ ಕೇಂದ್ರವನ್ನು ಜಿಲ್ಲಾಡಳಿತ ತೆರೆದಿದೆ. ನೆರೆ ಪರಿಸ್ಥಿತಿ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

karnataka rain

50ಕ್ಕೂ ಅಧಿಕ ನಿವಾಸಿಗಳು ಕಾಳಜಿ ಕೇಂದ್ರಕ್ಕೆ ರವಾನೆಯಾಗಿದ್ದಾರೆ. ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ನದಿ, ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿದೆ. ವರುಣನ ಅಬ್ಬರಕ್ಕೆ ತಗ್ಗು ಪ್ರದೇಶದ ನಿವಾಸಿಗಳಲ್ಲಿ ಆತಂಕ ಹೆಚ್ಚಿದೆ. ಇತ್ತ ಭಟ್ಕಳದಲ್ಲೂ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನೀರು ನಿಂತು ಹೆದ್ದಾರಿಯಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆ ಹಿನ್ನಲೆ ಭಟ್ಕಳ ರಂಗಿನಕಟ್ಟೆ ಪ್ರದೇಶ ಹೊಳೆಯಂತಾಗಿದೆ. ಭಟ್ಕಳ ತಹಸೀಲ್ದಾರ ನಾಗರಾಜ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪುರಸಭಾ ಸಿಬ್ಬಂದಿ ಚರಂಡಿಯಲ್ಲಿ ತುಂಬಿರುವ ಮಣ್ಣು, ಕಲ್ಲನ್ನು ತೆರವುಗೊಳಿಸುತ್ತಿದ್ದಾರೆ. ಪಟ್ಟಣದ ಜಾಮೀಯಾಬಾದ್‌ ನಲ್ಲಿಯೂ ಮನೆಗಳಿಗೆ ನೀರು ನುಗ್ಗಿದೆ. ಕೋಗ್ತಿ ರೋಡ್, ಡೊಂಗರಪಳ್ಳಿ, ಆಝಾದ್‌ನಗರ, ಕಾರಗದ್ದೆ ರಸ್ತೆ ಜಲಾವೃತಗೊಂಡಿದೆ.

ಉಡುಪಿಯಲ್ಲಿ ಉಕ್ಕಿಹರಿದ ಮಡಿಸಾಲು ಹೊಳೆ

ಬ್ರಹ್ಮಾವರ ತಾಲೂಕಿನ ಆಲೂರು ಬಳಿ ಮಡಿಸಾಲು ಹೊಳೆಯು ಉಕ್ಕಿಹರಿದಿದೆ. ಆರೂರು- ಬೆಳ್ಮಾರು ಗ್ರಾಮದ ಮಧ್ಯ ಹರಿಯಲಿದ್ದು, ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನೆರೆಹಾವಳಿ ಸೃಷ್ಟಿಯಾಗಿದೆ. ಕೃಷಿಕರಿಗೆ ಜೀವನದಿಯಾಗಿದ್ದ ಮಡಿಸಾಲು ಹೊಳೆ ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಹೊಳೆಯ ಪಕ್ಕದ ಎಕರೆಗಟ್ಟಲೆ ಕೃಷಿ ಭೂಮಿ ಜಲಾವೃತಗೊಂಡಿದೆ. ಕೆಲವು ದಿನಗಳ ಹಿಂದೆಯಷ್ಟೆ ಭತ್ತದ ನಾಟಿ ಮಾಡಿ ಮಾಡಿದ್ದ ಪ್ರದೇಶದಲ್ಲಿ ಈಗ ನೆರೆಹಾವಳಿ ಸೃಷ್ಟಿಯಾಗಿದೆ. ನೆರೆಯಿಂದಾಗಿ ಆರೂರು ಬೆಳ್ಮಾರು ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಮತ್ತೆ ಮಳೆ ಮುಂದುವರಿದರೆ ಕಿರು ಸೇತುವೆ ಮುಳುಗಡೆಯಾಗುವ ಭೀತಿ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Prajwal Devaraj New Movie Rakshasa
ಸ್ಯಾಂಡಲ್ ವುಡ್6 mins ago

Prajwal Devaraj: ಮೊದಲ ಬಾರಿಗೆ ಹಾರರ್ ಸಿನಿಮಾದಲ್ಲಿ ಡೈನಾಮಿಕ್‌ ಪ್ರಿನ್ಸ್ `ಪ್ರಜ್ವಲ್ ದೇವರಾಜ್`

Hathras Stampede
ದೇಶ23 mins ago

Hathras Stampede: ಇಂದು ಹತ್ರಾಸಕ್ಕೆ ರಾಹುಲ್‌ ಗಾಂಧಿ; ಕಾಲ್ತುಳಿತ ಸಂತ್ರಸ್ತರ ಭೇಟಿ

Sleep Apnea
ಆರೋಗ್ಯ24 mins ago

Sleep Apnea: ಗೊರಕೆಯೆಂದು ನಿರ್ಲಕ್ಷಿಸಬೇಡಿ, ಇದು ಜೀವಕ್ಕೂ ಎರವಾದೀತು!

Job Interview
Latest24 mins ago

Job Interview: ಉದ್ಯೋಗ ಸಂದರ್ಶನವನ್ನು ಹೇಗೆ ಎದುರಿಸಬೇಕು? ಈ ಟಿಪ್ಸ್‌ ಫಾಲೋ ಮಾಡಿ

chemicals in food
ಕೋಲಾರ30 mins ago

Chemicals in Food: ಕ್ಯಾನ್ಸರ್​ ಕಾರಕ ಅಂಶವಿರುವ ರಾಸಾಯನಿಕ ಕಲರ್ ಬಳಸಿದ ಸ್ವೀಟ್​ ವಶಕ್ಕೆ

dengue fever hassan news
ಹಾಸನ52 mins ago

Dengue Fever: ಹಾಸನದಲ್ಲಿ ಶಂಕಿತ ಡೆಂಗ್ಯು ಜ್ವರದಿಂದ ನಾಲ್ಕನೇ ಬಾಲಕಿ ಬಲಿ

Hot Corn Recipe
ಆಹಾರ/ಅಡುಗೆ1 hour ago

Hot Corn Recipe: ಮಳೆಗಾಲದಲ್ಲಿ ಬಿಸಿಬಿಸಿಯಾದ ಜೋಳವನ್ನು ಮನೆಯಲ್ಲೇ ಮಾಡುವುದು ಹೇಗೆ?

karnataka Weather Forecast Rain
ಮಳೆ2 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

Vastu Tips
ಧಾರ್ಮಿಕ2 hours ago

Vastu Tips: ಉದ್ಯೋಗದಲ್ಲಿ ಪ್ರಗತಿ ಸಾಧಿಸಬೇಕೆ? ಹೀಗೆ ಮಾಡಿ

Dina Bhavishya
ಭವಿಷ್ಯ3 hours ago

Dina Bhavishya :‌ ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಗುಡ್‌ ನ್ಯೂಸ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast Rain
ಮಳೆ2 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ14 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ16 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ17 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ18 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ19 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ20 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ21 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ3 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ4 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಟ್ರೆಂಡಿಂಗ್‌