ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಸೊಮವಾರ ಬೆಳಗಿನ ಜಾವ ಭೀಕರ ಅಪಘಾತ (Chitradurga Accident) ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಕೆಎಸ್ಆರ್ಟಿಸಿ ಬಸ್ ಹಾಗೂ ಲಾರಿ ಡಿಕ್ಕಿಯಾಗಿದ್ದು, ಬಸ್ನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಹತ್ತಾರು ಜನ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.
ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಬಳಿ ಬೆಳಗಿನ ಜಾವ 3 ಗಂಟೆಗೆ ಅಪಘಾತ ಸಂಭವಿಸಿದೆ. ರಾಯಚೂರು ಕಡೆಯಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ಹಾಗೂ ಲಾರಿ ಡಿಕ್ಕಿಯಾಗಿದೆ. ಮಸ್ಕಿ ಮೂಲದ ರಮೇಶ್ (40) ಹಾಗೂ ಬೆಂಗಳೂರು ಮೂಲದ ಪಾರ್ವತಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ ಎಂದು ತಿhirಳಿದುಬಂದಿದೆ.
ಅಪಘಾತ ಸ್ಥಳದ ವಿಡಿಯೊ
ಅಪಘಾತದ ತೀವ್ರತೆಗೆ ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಬಸ್ನಲ್ಲಿದ್ದ ಕೆಲವರಿಗೆ ಗಂಭೀರವಾಗಿ ಗಾಯಗಳಾದರೆ, 10 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಹಿರಿಯೂರು ಹಾಗೂ ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಸಂಭವಿಸುತ್ತಲೇ ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Comedian Chandraprabha : ಅಪಘಾತ ಆದ್ಮೆಲೆ ಭಯಪಟ್ಟು ಹೊರಟು ಹೋಗಿಬಿಟ್ಟೆ ತಪ್ಪಾಯ್ತು; ಗಿಚ್ಚಿ ಗಿಲಿಗಿಲಿ ಚಂದ್ರಪ್ರಭ
ಒಂದು ವಾರದ ಹಿಂದಷ್ಟೇ ಚಿತ್ರದುರ್ಗದ ಮಲ್ಲಾಪುರ ಬಳಿ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಕಾರು- ಲಾರಿ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದರು. ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕಾರು ಬಂದು ಬಂದು ಡಿಕ್ಕಿ ಹೊಡೆದ ಕಾರಣ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದರು. ಘಟನೆಯಲ್ಲಿ ಮೂವರು ಮಕ್ಕಳು ಗಾಯಗೊಂಡಿದ್ದರು.