Love marriage : ಅಂತರ್ಜಾತಿ ವಿವಾಹಕ್ಕೆ ಅಡ್ಡಿ; ಮಗಳನ್ನು ಧರಧರನೇ ಎಳೆದೊಯ್ದ ಪೋಷಕರು - Vistara News

ಚಿತ್ರದುರ್ಗ

Love marriage : ಅಂತರ್ಜಾತಿ ವಿವಾಹಕ್ಕೆ ಅಡ್ಡಿ; ಮಗಳನ್ನು ಧರಧರನೇ ಎಳೆದೊಯ್ದ ಪೋಷಕರು

Love Marriage : ಮಗಳು ಪ್ರೀತಿಸಿ ಮದುವೆ ಆಗಿದ್ದಕ್ಕೆ ಸಿಟ್ಟಾದ ಪೋಷಕರು, ರಿಜಿಸ್ಟರ್‌ ಮ್ಯಾರೇಜ್‌ ಆಗಲು ಹೊರಟಾಗ ರಸ್ತೆಯಲ್ಲೇ ತಡೆದು (Inter caste marriage) ಎಳೆದುಹೋಗಿದ್ದಾರೆ.

VISTARANEWS.COM


on

Girls parents oppose inter caste marriage
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಪ್ರೀತಿಸಿ ಮದುವೆ ಆದ ಪ್ರೇಮಿಗಳಿಗೆ (Love marriage) ಪೋಷಕರೇ ವಿಲನ್ ಆಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿ.ಜಿ ಕೆರೆ ಗ್ರಾಮದಲ್ಲಿ ನಡೆದಿದೆ. ಪ್ರವೀಣ್ ಹಾಗೂ ಪದ್ಮಜಾ ಎಂಬುವವರು ಐದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ವಾರವಷ್ಟೇ ದೇವಸ್ಥಾನದಲ್ಲಿ ಮದುವೆಯನ್ನೂ (Inter caste marriage) ಆಗಿದ್ದರು.

ಆದರೆ ಈ ಅಂತರ್ಜಾತಿ ವಿವಾಹಕ್ಕೆ ಯುವತಿ ಪೋಷಕರು ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಮದುವೆ ಬಳಿಕ ರಿಜಿಸ್ಟರ್ ಮ್ಯಾರೇಜ್ ಆಗಲೂ ಬಂದಾಗ ಪದ್ಮಜಾಳನ್ನು ಆಕೆ ಪೋಷಕರು, ಸಂಬಂಧಿಗಳೆಲ್ಲರೂ ಸೇರಿ ಬಲವಂತವಾಗಿ ಕರೆದೊಯ್ದಿದ್ದಾರೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್‌ ಆಗಿದೆ.

Girls parents oppose inter caste marriage

ಇದನ್ನೂ ಓದಿ: Assault Case : ನಡುರಸ್ತೆಯಲ್ಲಿ ಅಟ್ಟಾಡಿಸಿ ಪತ್ನಿಗೆ ಮಚ್ಚು ಬೀಸಿದ ಪತಿ

ಬಿ.ಜಿ.ಕೆರೆ ಗ್ರಾಮದ ಪ್ರವೀಣ್ ನಾಯಕ ಸಮುದಾಯದವರಾದರೆ, ಕೋನಸಾಗರ ಗ್ರಾಮದ ಪದ್ಮಜಾ ಕುರುಬ ಸಮುದಾಯದವರು. ಪದ್ಮಜಾ ಮಂಗಳೂರು ಖಾಸಗಿ ನರ್ಸಿಂಗ್ ಕಾಲೇಜಲ್ಲಿ ಅತಿಥಿ ಉಪನ್ಯಾಸಕಿ ಕೆಲಸ ಮಾಡುತ್ತಿದ್ದರು. ಹಲವಾರು ವರ್ಷಗಳಿಂದ ಪ್ರೀತಿಸುತ್ತಿದ್ದ ಇವರಿಬ್ಬರ ಮದುವೆಗೆ ಪೋಷಕರು ಒಪ್ಪದ ಕಾರಣಕ್ಕೆ ದೇವಸ್ಥಾನದಲ್ಲಿ ಮದುವೆ ಆಗಿದ್ದರು. ಬಳಿಕ ಈ ಮದುವೆಯನ್ನು ರಿಜಿಸ್ಟರ್ ಮಾಡಲು ಹೋದಾಗ ಅಲ್ಲಿಗೆ ಬಂದ ಯುವತಿಯ ಪೋಷಕರು, ಬಲವಂತದಿಂದ ಎಳೆದುಕೊಂಡು ಹೋಗಿದ್ದಾರೆ. ಈ ವೇಳೆ ಯುವ ಪ್ರೇಮಿ ಎಷ್ಟೇ ಅಂಗಲಾಚಿದರೂ ಬಿಡದೇ ಯುವತಿಯನ್ನು ಕರೆದುಕೊಂಡು ಹೋಗಿದ್ದಾರೆ.

ಮತ್ತೊಂದು ಕಡೆ ಯುವತಿಗೆ ಚಿತ್ರಹಿಂಸೆ ನೀಡುತ್ತಿದ್ದಾರೆ. ನನಗೂ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಪ್ರವೀಣ್‌ ಆರೋಪಿಸಿದ್ದಾನೆ. ಯುವತಿ ಅಣ್ಣ ಶ್ರೀನಿವಾಸ್‌ ಎಂಬಾತ ಪ್ರವೀಣ್‌ಗೆ ಬೆದರಿಕೆ ಕರೆ ಮಾಡುತ್ತಿದ್ದರಂತೆ. ತಂಗಿಗೆ ವಿಷ ಹಾಕಿ ಸಾಯಿಸುತ್ತೇವೆ ಹೊರತು, ನಿನಗೆ ಕೊಡಲ್ಲ ಎಂದು ವಾಟ್ಸಪ್ ಮೆಸೇಜ್ ಮಾಡಿದ್ದಾರೆ. ಹತ್ಯೆ ಮಾಡುವುದಾಗಿ ಮೆಸೇಜ್ ಬರುತ್ತಿದ್ದಂತೆ ಆತಂಕಗೊಂಡಿರುವ ಪ್ರವೀಣ್, ನಮ್ಮಿಬ್ಬರಿಗೂ ನ್ಯಾಯ ಕೊಡಿಸಿ ಎಂದು ಠಾಣೆಮೆಟ್ಟಿಲೇರಿದ್ದಾರೆ. ನಾವಿಬ್ಬರು ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದೇವೆ, ದಯವಿಟ್ಟು ನಮ್ಮನ್ನು ಬದುಕಲು ಬಿಡಿ ಎಂದು ಬೇಡಿಕೆ ಕೊಳ್ಳುತ್ತಿದ್ದಾನೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರಿಸಲಿದ್ದು, ವಿವಿಧ ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಘೋಷಿಸಲಾಗಿದೆ. ಮಳೆ ನಡುವೆಯೂ ಕೆಲವು ಜಿಲ್ಲೆಗಳಿಗೆ ಹೀಟ್‌ ವೇವ್‌ ವಾರ್ನಿಂಗ್‌ ಅನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಬಿರುಗಾಳಿ ಜತೆಗೆ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

ಮುಖ್ಯವಾಗಿ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ 40-50 ಕಿ.ಮೀ ಗಾಳಿಯೊಂದಿಗೆ ಗುಡುಗು ಸಹಿತ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆ ಜತೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನೂ ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಹೀಟ್‌ ವೇವ್‌ ವಾರ್ನಿಂಗ್‌

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯನಗರ, ಬಳ್ಳಾರಿ, ದಾವಣಗೆರೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಬಳ್ಳಾರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Road Accident: ಅಪಘಾತವಾಗಿ ರಕ್ತದ ಮಡುವಿನಲ್ಲಿ ಬಿದ್ದ ಯುವಕರನ್ನು ಆಸ್ಪತ್ರೆಗೆ ಸೇರಿಸಿದ ಪಿಎಸ್‌ಐ

Road Accident: ಮೊಳಕಾಲ್ಮುರು ತಾಲೂಕಿನ ಹಾನಗಲ್ ಗ್ರಾಮದ ರೈಸ್‌ಮಿಲ್ ಬಳಿ ಮಂಗಳವಾರ ಸಂಜೆ ಬೈಕ್ ಅಪಘಾತವಾಗಿ,ಇಬ್ಬರು ಯುವಕರು ರಕ್ತ ಮಡುವಿನಲ್ಲಿ ಬಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಯುವಕರನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ರಾಂಪುರ ಪೊಲೀಸ್ ಠಾಣೆಯ ಪಿಎಸ್‌ಐ ಮಹೇಶ್ ಹೊಸಪೇಟೆ ಮಾನವೀಯತೆ ಮೆರೆದಿದ್ದಾರೆ.

VISTARANEWS.COM


on

Rampura PSI Mahesh Hosapete admitted to the hospital Hanagal village road accident injured persons
Koo

ಮೊಳಕಾಲ್ಮುರು: ಅಪಘಾತವಾಗಿ (Road Accident) ರಕ್ತದ ಮಡುವಿನಲ್ಲಿ ಬಿದ್ದು, ಜೀವನ್ಮರಣ ಹೋರಾಟ ನಡೆಸುತ್ತಿದ್ದ ಯುವಕರನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ರಾಂಪುರ ಪೊಲೀಸ್ ಠಾಣೆಯ ಪಿಎಸ್‌ಐ ಮಹೇಶ್ ಹೊಸಪೇಟೆ ಮಾನವೀಯತೆ ಮೆರೆದಿದ್ದಾರೆ.

ಮೊಳಕಾಲ್ಮುರು ತಾಲೂಕಿನ ಹಾನಗಲ್ ಗ್ರಾಮದ ರೈಸ್ ಮಿಲ್ ಬಳಿ ಮಂಗಳವಾರ ಸಂಜೆ ಬೈಕ್ ಅಪಘಾತವಾಗಿ,ಇಬ್ಬರು ಯುವಕರು ರಕ್ತ ಮಡುವಿನಲ್ಲಿ ಬಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದರು. ಈ ಘಟನೆಯನ್ನು ನೋಡುತ್ತಾ ಕೆಲವರು ವಿಡಿಯೋ ಮಾಡುತ್ತಿದ್ದರೆ, ಇನ್ನೂ ಕೆಲವರು ಆಂಬುಲೆನ್ಸ್ ಗೆ ಫೋನ್ ಮಾಡಿ ಅಪಘಾತವಾಗಿರುವ ಮಾಹಿತಿಯನ್ನು ಹೇಳಿದರೂ ಸಹ ಅರ್ಧ ಗಂಟೆಗೂ ಹೆಚ್ಚು ಕಾಲ ಕಾದರೂ ಸಕಾಲದಲ್ಲಿ ಯಾವುದೇ ಆಂಬುಲೆನ್ಸ್ ಸ್ಥಳಕ್ಕೆ ಬಂದಿಲ್ಲ.

ಇದನ್ನೂ ಓದಿ: Lok Sabha Election 2024: ಕೈಗಳಿಲ್ಲದಿದ್ದರೂ ಮತದಾನ ಮಾಡಿ ಮಾದರಿಯಾದ ಅಂಕಿತ್ ಸೋನಿ

ಅದಾಗಲೇ ಅಪಘಾತದಲ್ಲಿ ಒಬ್ಬ ಯುವಕನು ಗಂಭೀರವಾಗಿ ಗಾಯಗೊಂಡ ಕಾರಣ ರಸ್ತೆಯಲ್ಲಿಯೇ ನರಳುತ್ತಿದ್ದನು. ಇನ್ನೂ ಈ ವೇಳೆ ಇದೇ ದಾರಿಯಲ್ಲಿ ಪೊಲೀಸ್ ವಾಹನದಲ್ಲಿ ತೆರಳುತ್ತಿದ್ದ ರಾಂಪುರ ಪಿಎಸ್ಐ ಮಹೇಶ್ ಹೊಸಪೇಟೆ ಅಪಘಾತವಾಗಿರುವುದನ್ನು ಕಂಡು ಕೂಡಲೇ ಸ್ಥಳದಲ್ಲಿ ಗಾಯಾಳುಗಳನ್ನು ಉಪಚರಿಸಿ ತಕ್ಷಣವೇ ಪೊಲೀಸ್ ವಾಹನದಲ್ಲಿಯೇ ಗಾಯಳುಗಳನ್ನು ಕರೆದೋಯ್ದು ಮೊಳಕಾಲ್ಮುರು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಸೇರಿಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡವರ ಪೈಕಿ ತಿಪ್ಪೇಶ್ ಎಂಬುವ ಯುವಕನು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಇನ್ನೊರ್ವ ಯುವಕನಿಗೆ ಸಾಧಾರಣ ಗಾಯಗಳಾಗಿವೆ. ಈ ಇಬ್ಬರು ಯುವಕರು ಗಡ್ಡದಬೋರಯ್ಯನಹಟ್ಟಿ ಗ್ರಾಮದವರಾಗಿದ್ದಾರೆ.

ಇದನ್ನೂ ಓದಿ: IPL 2024 : ಗುರಿ ಬಿಟ್ಟು ಬೇರೆ ಕಡೆಗೆ ಪ್ರಯಾಣಿಸಿದ ಕೆಕೆಆರ್​ ಆಟಗಾರರಿದ್ದ ವಿಮಾನ!

ಅಪಘಾತದಲ್ಲಿ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಯುವಕರನ್ನು ಆಸ್ಪತ್ರೆಗೆ ಸೇರಿಸಲು ರಾಂಪುರ ಪೊಲೀಸ್‌ ಠಾಣೆಯ ಪಿಎಸ್‌ಐ ಮಹೇಶ್ ಹೊಸಪೇಟೆ ಅವರಿಗೆ ಸಿಬ್ಬಂದಿ ಲೋಕೇಶ್‌, ಪ್ರೇಮ್‌ಕುಮಾರ್‌, ಬಸವರಾಜ್‌, ಮಹಾಂತೇಶ್‌ ಸಾಥ್‌ ನೀಡಿದರು.

Continue Reading

ಮಳೆ

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Rain News : ಮೇ 7ರಂದು ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದೆ. ರಾಜ್ಯದಲ್ಲಿ ಇನ್ನೊಂದು ವಾರ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಚಿಕ್ಕಮಗಳೂರು/ಹಾಸನ/ಬೆಂಗಳೂರು: ಮಂಗಳವಾರ ಮಧ್ಯಾಹ್ನ ಚಿಕ್ಕಮಗಳೂರು ನಗರದಲ್ಲಿ ಧಾರಾಕಾರ ಮಳೆಯಾಗಿದೆ. ಭಾರಿ ಆಲಿಕಲ್ಲು ಮಳೆಗೆ ಚಿಕ್ಕಮಗಳೂರು ನಗರ ನಿವಾಸಿಗಳು ಥಂಡಾ ಹೊಡೆದಿದ್ದಾರೆ. ಮಳೆಯಿಲ್ಲದೆ ಕಾದ ಕಾವಲಿಯಂತಾಗಿದ್ದ ಕಾಫಿನಾಡಿನಲ್ಲಿ ಕಳೆದೊಂದು ಗಂಟೆಯಿಂದ ಭಯಂಕರ ಮಳೆ ಸುರಿಯುತ್ತಿದೆ.

ರಸ್ತೆಯಲ್ಲಿ ಅರ್ಧ ಅಡಿ ಎತ್ತರದಲ್ಲಿ ನೀರು ಹರಿಯುತ್ತಿದೆ. 41 ಡಿಗ್ರಿ ತಲುಪುತ್ತಿದ್ದ ಬಿಸಿಲ ತಾಪಮಾನಕ್ಕೆ ಜನ ಹೈರಾಣಾಗಿದ್ದರು. ಧಾರಾಕಾರ ಮಳೆ ಕಂಡು ರೈತರು, ಬೆಳೆಗಾರರು ಸಂತಸಗೊಂಡರು. ಇನ್ನೂ ಆಲಿಕಲ್ಲು ಕೈಯಲ್ಲಿ ಹಿಡಿದು ಖುಷಿ ಪಟ್ಟರು.

Karnataka weather Forecast

ಹಾಸನದಲ್ಲೂ ಧಾರಾಕಾರ ಮಳೆ

ಹಾಸನ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ. ಹಾಸನ, ಹೊಳೆನರಸೀಪುರ, ಅರಸೀಕೆರೆ ಭಾಗಗಳಲ್ಲಿ ಭಾರಿ ಗಾಳಿಯೊಂದಿಗೆ ಗುಡುಗು, ಸಿಡಿಲು ಸಹಿತ ಮಳೆ ಸುರಿಯುತ್ತಿದೆ. ಅರಸೀಕೆರೆಯಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. ಜೋರಾಗಿ ಆಲಿಕಲ್ಲು ಬೀಳುತ್ತಿರುವುದರಿಂದ ಸವಾರರು ಬೈಕ್‌ ನಿಲ್ಲಿಸಿ ರಸ್ತೆ ಬದಿ ನಿಲ್ಲುವಂತಾಯಿತು. ಬಿಸಿಲಿನಿಂದ ಕಂಗಾಲಾಗಿದ್ದ ಜನತೆಗೆ ವರುಣ ತಂಪೆರೆದಿದ್ದಾನೆ.

ಇದನ್ನೂ ಓದಿ: Karnataka Rains: ಮಳೆಗೆ ಮರ ಬಿದ್ದು ಮಂಡ್ಯದಲ್ಲಿ ವ್ಯಕ್ತಿ ಸಾವು, ಬೆಂಗಳೂರಲ್ಲಿ ಟೆಕ್ಕಿ ಬೆನ್ನು ಮೂಳೆ ಮುರಿತ

ಮಂಗಳವಾರ ಸಂಜೆಗೆ ಲಘು ಮಳೆ ಎಚ್ಚರಿಕೆ

ಮೇ 7ರ ಸಂಜೆಗೆ ದಕ್ಷಿಣ ಕನ್ನಡ, ಕೊಡಗು, ಮಂಡ್ಯ, ಮೈಸೂರು ಸೇರಿದಂತೆ ತುಮಕೂರು, ಉಡುಪಿಯಲ್ಲಿ ಗುಡುಗು ಸಹಿತ ಲಘು ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರಲ್ಲಿ ಗುಡುಗು, ಮಿಂಚು ಸಹಿತ ಗಾಳಿ ಮಳೆ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಮುಂಜಾನೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ/ರಾತ್ರಿಯ ಸಮಯದಲ್ಲಿ ಗುಡುಗು ಮಿಂಚು ಜತೆಗೆ ಮಳೆಯಾಗಲಿದೆ. ಈ ವೇಳೆ ಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35 ಮತ್ತು 22 ಡಿ.ಸೆ ಇರಲಿದೆ.

ಇನ್ನೂ ಕೊಡಗು, ಮೈಸೂರು, ಮಂಡ್ಯ, ಹಾಸನ, ಕೋಲಾರ, ಬೆಂಗಳೂರು ನಗರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು ಮತ್ತು ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ (ಗಂಟೆಗೆ 40-50 ಕಿಮೀ) ಹಗುರದಿಂದ ಶುರುವಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ವಿಜಯನಗರ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ (30-40 ಕಿಮೀ) ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

karnataka Weather : ಇಂದು ಮಳೆಗೂ ಮುನ್ನವೇ ವೋಟ್‌ ಹಾಕಿಬಿಡಿ; ಸಂಜೆಗೆ ಭಾರಿ ವರ್ಷಧಾರೆ

Karnataka Weather Forecast : ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಮಳೆಯು (Rain News) ಅಬ್ಬರಿಸಲಿದೆ. ಜೋರಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯದ ವಿವಿಧೆಡೆ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಗುಡುಗು ಸಹಿತ ಮಳೆಯಾಗಲಿದ್ದು, ಬಿರುಗಾಳಿಯು ಜತೆಗೆ ಇರಲಿದೆ. ಹೀಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆಗೆ ಮಳೆಗೂ ಮುನ್ನವೇ ವೋಟ್‌ ಹಾಕಿಬಿಡಿ.

ಆಲಿಕಲ್ಲು ಮಳೆ ಎಚ್ಚರಿಕೆ

ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ರಾಮನಗರದ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಗುಡುಗು ಸಹಿತ ಅಲ್ಲಲ್ಲಿ ಆಲಿಕಲ್ಲು ಮಳೆಯಾಗಲಿದೆ. ಮಲೆನಾಡಿನಲ್ಲಿ ಮಾಯವಾಗಿದ್ದ ಮಳೆಯು ಮತ್ತೆ ಹಾಜರಾತಿ ಹಾಕಿದೆ. ಮಲೆನಾಡಿನ ಕೊಡಗು ಹಾಗೂ ದಕ್ಷಿಣ ಒಳನಾಡಿನ ಮೈಸೂರು ಮತ್ತು ಮಂಡ್ಯದಲ್ಲಿ ಕೆಲವೆಡೆ ಭಾರೀ ಮಳೆಯೊಂದಿಗೆ ಅಬ್ಬರಿಸಲಿದೆ.

ಕರಾವಳಿಯಲ್ಲೂ ಮಳೆಯಿಲ್ಲದೇ ತಾಪಮಾನ ಹೆಚ್ಚಾಗಿತ್ತು. ಮಂಗಳವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಸೇರಿ ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಬಳ್ಳಾರಿಯಲ್ಲೂ ಮಳೆ ಅಬ್ಬರಿಸಲಿದೆ. ಇನ್ನೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ವಿಜಯನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಗುಡುಗು ಇರಲಿದೆ.

ಬೆಂಗಳೂರಲ್ಲಿ ಸಂಜೆ ಮಳೆ

ರಾಜಧಾನಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದೊಂದಿಗೆ ಸಾಧಾರಣ ಮಳೆಯಾಗಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 24 ಡಿ.ಸೆ ಇರಲಿದೆ.

ಗುಡುಗು ಸಹಿತ ಮಳೆಗೆ ಯೆಲ್ಲೋ ಅಲರ್ಟ್

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

ಮಳೆ ನಡುವೆಯೂ ಈ ಜಿಲ್ಲೆಗಳಿಗೆ ಹೀಟ್‌ ವೇವ್‌

ಒಂದು ಕಡೆ ಮಳೆಯು ಅಬ್ಬರಿಸುತ್ತಿದ್ದರೆ ಇತ್ತ ಹೀಟ್‌ ವೇವ್‌ ಎಚ್ಚರಿಕೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ಏ.7ರಂದು ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ವಿಜಯನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗುವ ಸಾದ್ಯತೆ ಇದೆ.

ಶಾಖ ತರಂಗಕ್ಕೆ ಈ ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಎಚ್ಚರಿಕೆ

ವಿಜಯನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ಯಾದಗಿರಿ, ಕೊಪ್ಪಳ, ಕಲಬುರಗಿ, ಬೀದರ್, ಬಾಗಲಕೋಟೆಯ ಜಿಲ್ಲೆಗಳಲ್ಲಿ ತಾಪಮಾನ ದುಪ್ಪಟ್ಟು ಆಗಲಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
ವೈರಲ್ ನ್ಯೂಸ್12 mins ago

Viral Video: ಅಬ್ಬಾ.. ಎಂಥಾ ಭೀಕರ ದೃಶ್ಯ! ಕರೆಂಟ್‌ ಶಾಕ್‌ ಹೊಡೆದು ವ್ಯಕ್ತಿ ಒದ್ದಾಡಿ ಸಾವು

Double Murder Fakirappa stabs brothers to death for falling behind daughter
ಕ್ರೈಂ15 mins ago

Double Murder: ಮಗಳ ಹಿಂದೆ ಬಿದ್ದಿದ್ದಕ್ಕೆ ಸಹೋದರರನ್ನೇ ಚಾಕುವಿನಿಂದ ಇರಿದು ಕೊಂದ ಫಕೀರಪ್ಪ!

SSLC Exam Result 2024 to be declared tomorrow Here are the details
ಶಿಕ್ಷಣ32 mins ago

SSLC Exam Result 2024: ನಾಳೆ ಎಸ್‌ಎಸ್‌ಎಲ್‌ಸಿ ರಿಸಲ್ಟ್‌ ಪ್ರಕಟ; ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು? ಇಲ್ಲಿದೆ ಡಿಟೇಲ್ಸ್‌

Srinidhi Shetty Attends Daiva Kola Festivities in Mangalore
ಸ್ಯಾಂಡಲ್ ವುಡ್39 mins ago

Srinidhi Shetty: ಕೋಲ ಸೇವೆ ಸಲ್ಲಿಸಿದ ಕೆಜಿಎಫ್‌ ಬೆಡಗಿ; ಶ್ರೀನಿಧಿ ಶೆಟ್ಟಿಗೆ ದೈವ ಅಭಯ ನೀಡಿದ್ದೇನು?

Pepper spray
ಕರ್ನಾಟಕ46 mins ago

Pepper Spray: ಪೆಪ್ಪರ್‌ ಸ್ಪ್ರೇ ಬಹಳ ಡೇಂಜರ್‌..ಅದನ್ನು ರಕ್ಷಣೆಗೆ ಬಳಸುವಂತಿಲ್ಲ- ಹೈಕೋರ್ಟ್‌

Prajwal Revanna Case Will resign says DK Shivakumar and slams HD Kumaraswamy
ರಾಜಕೀಯ49 mins ago

Prajwal Revanna Case: ಒಕ್ಕಲಿಗ ನಾಯಕರ ಪೈಪೋಟಿಯಂತೆ, ರಾಜೀನಾಮೆ ಬೇಕಂತೆ; ಕೊಡ್ತೇನೆ ಅಂದ್ರ ಡಿಕೆಶಿ!

Sam Pitroda
ದೇಶ1 hour ago

Sam Pitroda: “ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ…” ಸ್ಯಾಮ್‌ ಪಿತ್ರೋಡಾ ಮತ್ತೊಂದು ಆತ್ಮಹತ್ಯಾ ಬಾಂಬ್!

World Red Cross Day
Latest1 hour ago

World Red Cross Day: ದಾನ ಮತ್ತು ಸೇವೆಯಿಂದ ಸಂತೋಷ; ಇದು ರೆಡ್ ಕ್ರಾಸ್ ದಿನದ ಸಂದೇಶ

Palthady Rama krishna achar
ಕರ್ನಾಟಕ1 hour ago

Palthady Ramakrishna Achar: ತುಳು ಸಾಹಿತಿ, ವಿದ್ವಾಂಸ ಡಾ|ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Actor Darshan devil starring making video release on may 10
ಸಿನಿಮಾ2 hours ago

Actor Darshan: ಮೇ 10ಕ್ಕೆ ಗುಡ್‌ನ್ಯೂಸ್‌ ಕೊಡ್ತಿದ್ದಾರೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌! ಏನದು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ9 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ17 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ20 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ22 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌