ಚಿತ್ರದುರ್ಗ: ಜಿಲ್ಲೆಯ ಇಸಾಮುದ್ರ ಗೊಲ್ಲರಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ಬಳಿಕ ಅಸ್ವಸ್ಥಗೊಂಡ 40ಕ್ಕೂ ಹೆಚ್ಚು ಮಕ್ಕಳನ್ನು ಗುರುವಾರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಸಿಯೂಟ ಸೇವಿಸಿದ ಬಳಿಕ ವಾಂತಿ, ಭೇದಿಯಿಂದ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಹೀಗಾಗಿ 40ಕ್ಕೂ ಹೆಚ್ಚು ಮಕ್ಕಳನ್ನು ಭರಮಸಾಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇವರಲ್ಲಿ 4 ವಿಧ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದ್ದು, ಅವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಚಿತ್ರದುರ್ಗ ತಹಸೀಲ್ದಾರ್ ಸತ್ಯ ನಾರಾಯಣ್, ಬಿಇಒ ಭೇಟಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ, ಹೀಗಾಗಿ ಊಟದ ಮಾದರಿಯನ್ನು ದಾವಣಗೆರೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಇದನ್ನೂ ಓದಿ | ಕೊಳ್ಳೇಗಾಲದಲ್ಲಿ ತಂಗಳು ಬಿರಿಯಾನಿ ಸೇವಿಸಿ ಕೂಲಿ ಕಾರ್ಮಿಕರು ಅಸ್ವಸ್ಥ; 25 ಮಂದಿ ಆಸ್ಪತ್ರೆಗೆ ದಾಖಲು