Site icon Vistara News

Murugha mutt : ಮುರುಘಾ ಮಠದಲ್ಲಿ ಕಳ್ಳತನ; ದರ್ಬಾರ್‌ ಹಾಲ್‌ನಲ್ಲಿದ್ದ 22 ಕೆಜಿ ತೂಕದ ಬೆಳ್ಳಿ ಮೂರ್ತಿ ಎಗರಿಸಿದ ಕಳ್ಳರು

murugha mutt

ಚಿತ್ರದುರ್ಗ: ಮುರುಘಾ ಮಠದಲ್ಲಿ ಬೆಳ್ಳಿ ಮೂರ್ತಿಯೊಂದು (Murugha mutt ) ಕಳ್ಳತನವಾಗಿದೆ. ಮುಂಜಾನೆ ಪೂಜೆಗೆಂದು ಹೋದಾಗ ಮೂರ್ತಿ ಕಳವು (Theft Case) ಆಗಿರುವುದು ಬೆಳಕಿಗೆ ಬಂದಿದೆ ಎಂದು ಮುರುಘಾ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮಾಹಿತಿ ನೀಡಿದ್ದಾರೆ.

ಕಳೆದ ತಿಂಗಳು ಜೂನ್‌ 26ರಂದೇ ಮಠದಲ್ಲಿ ಸಿಸಿಟಿವಿ ಆಫ್ ಆಗಿದೆ. ಈ ವೇಳೆ ದರ್ಬಾರ್ ಹಾಲ್‌ನಲ್ಲಿದ್ದ 22 ಕೆಜಿ ತೂಕದ ಬೆಳ್ಳಿ‌ಮೂರ್ತಿ ಕಳ್ಳತನವಾಗಿದೆ. ಕಳ್ಳರು ಸಿಸಿಟಿವಿ ಆಫ್ ಮಾಡಿ ಕಳ್ಳತನ‌ ಮಾಡಿರಬಹುದು. ಈ ಕುರಿತು ಮೊದಲು ಮಠದ ಆಂತರಿಕ ಸಭೆ ಕರೆದು ವಿಚಾರಣೆ ಮಾಡಿದ್ದೇವೆ. ಆದರೆ ಕಳ್ಳತನ ಮಾಡಿದ್ದು ಯಾರು ಏನು ಎಂಬುದು ತಿಳಿದುಬಂದಿಲ್ಲ.

ಕಾರ್ಯಕ್ರಮದ ಒತ್ತಡದಿಂದಾಗಿ ಕಳ್ಳತನವಾಗಿರುವುದು ಅರಿವಿಗೆ ಬಂದಿರಲಲ್ಲ. ಮಠದ ಯುವಕರು ಗಮನಿಸಿ ಮಾಹಿತಿ ನೀಡಿದ್ದಾರೆ. ಈ ಹಿಂದೆ ಸ್ವಾಮೀಜಿಗೆ ಸವಿನೆನಪಿಗಾಗಿ ಸಮಾರಂಭವೊಂದರಲ್ಲಿ ಬೆಳ್ಳಿ ಮೂರ್ತಿಯನ್ನು ನೀಡಲಾಗಿತ್ತು. ಈಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಮುಂದಾಗಿದ್ದೇವೆ ಎಂದು ಬಸವಕುಮಾರ ಸ್ವಾಮೀಜಿ ಮಾಹಿತಿ ನೀಡಿದರು. ಬಸವಕುಮಾರ ಸ್ವಾಮೀಜಿ ಜತೆಗೆ ಮಠದ ಆಡಳಿತ ಮಂಡಳಿ ಸದಸ್ಯರು ಸೇರಿ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ತೆರಳಿ ದೂರು ದಾಖಲಿಸಲಿದ್ದಾರೆ.

ಇದನ್ನೂ ಓದಿ: Divya Vasantha: ಗೌರ್ಮೆಂಟ್ ಸ್ಕೂಲ್‌ನಲ್ಲಿ ಓದಿ, ಸೇಲ್ಸ್ ಗರ್ಲ್‌ ಆಗಿದ್ದ ದಿವ್ಯಾ ವಸಂತ ಬಳಿ ಇದೆ ಈ ದುಬಾರಿ ಕಾರು!

ಓಡಿಹೋಗಲು ಯತ್ನಿಸಿದ ಚಡ್ಡಿ ಗ್ಯಾಂಗ್‌ನ ಇಬ್ಬರ ಕಾಲಿಗೆ ಗುಂಡಿಕ್ಕಿದ ಪೊಲೀಸರು!

ಮಂಗಳೂರು: ಖತರ್ನಾಕ್‌ ಚಡ್ಡಿ ಗ್ಯಾಂಗ್‌ (Chaddi gang) ದರೋಡೆಕೋರರ (Robbers) ಗುಂಪಿನ ಇಬ್ಬರ ಕಾಲಿಗೆ ಮಂಗಳೂರು ಪೊಲೀಸರು (Mangalore Police) ಗುಂಡು ಹಾರಿಸಿ (Shoot Out) ಮತ್ತೆ ಬಂಧಿಸಿದ್ದಾರೆ. ಇಂದು ಬೆಳಗ್ಗೆ ಸ್ಥಳ ಮಹಜರು ಮಾಡಲು ಹೋದಾಗ ಇವರು ತಪ್ಪಿಸಿಕೊಳ್ಳಲು ಯತ್ನಿಸಿದ್ದರು.

ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ಘಟನೆ ನಡೆದಿದೆ. ನಿನ್ನೆ ಸಕಲೇಶಪುರದಿಂದ ಬಂಧಿಸಿ ಕರೆತಂದಿದ್ದ ಕಳ್ಳರನ್ನು ಈ ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಉಡುಪಿಯಲ್ಲಿ ಒಬ್ಬರು ವೃದ್ಧ ದಂಪತಿಯ ಮನೆ ದರೋಡೆ ಮಾಡಿದ್ದ ಕಳ್ಳರು, ಆ ಮನೆಯ ಕಾರನ್ನೂ ಕದ್ದು ಅದರಲ್ಲಿ ಪರಾರಿಯಾಗಿದ್ದರು. ಆ ಕಾರನ್ನು ಬಿಟ್ಟು ಬೆಂಗಳೂರಿಗೆ ಬಸ್ಸಿನಲ್ಲಿ ಹೊರಟಿದ್ದರು. ಕಾರು ಇದ್ದ ಸ್ಥಳಕ್ಕೆ ಮಹಜರಿಗೆ ಇವರನ್ನು ಕರೆತಂದಾಗ ಇಬ್ಬರು ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದರು.

ಎಎಸ್‌ಐ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಇವರ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಎಲ್ಲಿ ದರೋಡೆ ನಡೆಸಿದ್ದರು?

ಮಂಗಳೂರಿನ ಕಾಪಿಕಾಡು ಬಳಿಯ ಕೋಟೆಕಣಿ ಎಂಬಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆಡ್ಡಿ, ಬನಿಯನ್ ಗ್ಯಾಂಗ್​ಗೆ ಸೇರಿದ ಮಧ್ಯಪ್ರದೇಶದ ನಾಲ್ಕು ಜನ ದರೋಡೆಕೋರರ ಬಂಧವಾಗಿದೆ. ರಾಜು ಸಿಂಗ್ವಾನಿಯ (24), ಮಯೂರ್ (30), ಬಾಲಿ (22), ವಿಕ್ಕಿ (21) ಬಂಧನಕ್ಕೆ ಒಳಗಾದವರು.

ಮೊನ್ನೆ ರಾತ್ರಿ ವೃದ್ಧ ದಂಪತಿಗಳಿದ್ದ ಮನೆಗೆ ಕನ್ನ ಹಾಕಿದ್ದ ಈ ತಂಡ ದರೋಡೆ ಮಾಡಿತ್ತು. ವೃದ್ಧ ದಂಪತಿಗೆ ಹಲ್ಲೆ ಮಾಡಿ ಲೂಟಿ ಮಾಡಿದ್ದರು. ಹಲ್ಲೆಗೊಳಗಾದ ವಿಕ್ಟರ್ ಮೆಂಡೋನ್ಸಾ(71), ಪ್ಯಾಟ್ರಿಷಾ ಮೆಂಡೋನ್ಸಾ(60) ಆಸ್ಪತ್ರೆಗೆ ದಾಖಲಾಗಿದ್ದರು. ಆರೋಪಿಗಳಿಂದ 12 ಲಕ್ಷ ರೂ ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣ, ಸ್ಯಾಮ್ ಸಂಗ್ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು 1 ಲಕ್ಷ ರೂ. ಮೌಲ್ಯದ 10 ಬ್ರಾಂಡೆಡ್ ವಾಚ್ ಗಳು, ರೂ 3೦00 ರೂಪಾಯಿ ನಗದು ಹಣವನ್ನು ದರೋಡೆ ಮಾಡಿದ್ದರು. ಪ್ರಕರಣ ನಡೆದ ಮಾಹಿತಿ ಬಂದ ಕೂಡಲೇ ಉರ್ವಾ ಠಾಣೆಯ ಪೊಲೀಸ್ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದರು. ಅದರಲ್ಲಿ ಕೆ.ಎಸ್.ಅರ್.ಟಿ.ಸಿ ಬಸ್​​ನಲ್ಲಿ ದರೋಡೆಕೋರರರು ಮಂಗಳೂರು ಕಡೆಗೆ ಪ್ರಯಾಣಿಸಿದ್ದು ಕಂಡು ಬಂದಿತ್ತು. ಬಳಿಕ ಬಸ್ ಫಾಲೋ ಮಾಡಿ ಬಂಧಿಸಿದ್ದರು.

ಉಡುಪಿಯಲ್ಲಿ ಕೆಲ ತಿಂಗಳ ಹಿಂದೆ ʼಬನಿಯನ್‌ ಗ್ಯಾಂಗ್‌ʼ ಸಕ್ರಿಯವಾಗಿತ್ತು. ಬನಿಯನ್‌ ಹಾಗೂ ಚಡ್ಡಿ ಧರಿಸಿ ಬರುವ ಈ ಕಳ್ಳರು ಮೈಗೆ ಎಣ್ಣೆ ಹಚ್ಚಿಕೊಂಡು ಫೀಲ್ಡಿಗಿಳಿಯುತ್ತಾರೆ. ಎಲ್ಲರೂ ಗಾಢ ನಿದ್ರೆ ಜಾರುವ ಸಮಯಕ್ಕೆ ಕಾದುಕುಳಿತು ನಂತರ ಕಳ್ಳತನಕ್ಕೆ ಮುಂದಾಗುತ್ತಾರೆ. ರಾತ್ರೋ ರಾತ್ರಿ ಕಳ್ಳ ಬೆಕ್ಕಿನಂತೆ ನುಗ್ಗುವ ಇವರು ಕ್ಷಣಾರ್ಧದಲ್ಲಿ ಚಿನ್ನಾಭರಣವನ್ನು ಲೂಟಿ ಮಾಡಿ ಪರಾರಿ ಆಗುತ್ತಾರೆ.

ಈ ಕಚ್ಚಾ ಬನಿಯನ್ ಗ್ಯಾಂಗ್ ಪತ್ತೆ ಮಾಡುವುದೇ ಉಡುಪಿ ಪೊಲೀಸರಿಗೆ ಸವಾಲಾಗಿತ್ತು. ಸಂತೆಕಟ್ಟೆಯಲ್ಲಿ ನಡೆದಿದ್ದ ಮನೆ ದರೋಡೆ ಪ್ರಕರಣದಲ್ಲಿ ಈ ತಂಡದ ಕೃತ್ಯ ಬಯಲಾಗಿತ್ತು. ಕೃತ್ಯದ ಬಳಿಕ ಈ ಗ್ಯಾಂಗ್ ಸಿಂಗಲ್ ಚಪ್ಪಲಿಯನ್ನು ಬಿಟ್ಟು ಹೋಗುತ್ತಿತ್ತು. ಸೊಂಟಕ್ಕೆ ಚಪ್ಪಲಿ ಕಟ್ಟಿಕೊಂಡು ಬರುವ ಈ ಗ್ಯಾಂಗ್‌ ಡೆಲ್ಲಿ ಕ್ರೈಮ್-2 ವೆಬ್ ಸೀರೀಸ್‌ ಕಚ್ಚಾ ಬನಿಯನ್ ಗ್ಯಾಂಗ್ ನೆನಪಿಸುವಂತಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version