Murugha mutt : ಮುರುಘಾ ಮಠದಲ್ಲಿ ಕಳುವಾಗಿದ್ದ ಬೆಳ್ಳಿ ಮೂರ್ತಿ ಪತ್ತೆ; ಗೋಣಿ ಚೀಲದಲ್ಲಿ ತಂದಿಟ್ಟು ಕಾಲ್ಕಿತ್ತ ಕಳ್ಳರು! - Vistara News

ಚಿತ್ರದುರ್ಗ

Murugha mutt : ಮುರುಘಾ ಮಠದಲ್ಲಿ ಕಳುವಾಗಿದ್ದ ಬೆಳ್ಳಿ ಮೂರ್ತಿ ಪತ್ತೆ; ಗೋಣಿ ಚೀಲದಲ್ಲಿ ತಂದಿಟ್ಟು ಕಾಲ್ಕಿತ್ತ ಕಳ್ಳರು!

Murugha mutt : ಮುರುಘಾ ಮಠದ ದರ್ಬಾರ್‌ ಹಾಲ್‌ನಲ್ಲಿದ್ದ 22 ಕೆ.ಜಿ ತೂಕದ ಬೆಳ್ಳಿ ಮೂರ್ತಿ ಎಗರಿಸಿದ್ದ ಕಳ್ಳರು, ಪ್ರಕರಣ ದಾಖಲಾಗುತ್ತಿದ್ದಂತೆ ಗೋಣಿ ಚೀಲದಲ್ಲಿ ತಂದಿಟ್ಟು ಕಾಲ್ಕಿತ್ತಿದ್ದಾರೆ. ಇತ್ತ ಚಿಕ್ಕಬಳ್ಳಾಪುರದಲ್ಲಿ ಕಳ್ಳರು ಬೆಲೆ ಬಾಳುವ ಮಾವು ಕದ್ದರೆ ಅತ್ತ ಹಾಸನದಲ್ಲಿ ನಾಲ್ವರು ಕಳ್ಳಿಯರು ಚಿನ್ನಾಭರಣ ಎಗರಿಸಿದ್ದಾರೆ.

VISTARANEWS.COM


on

murugha mutt
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಕಳೆದ ಜು.11ರಂದು ಮುರುಘಾ ಮಠದಲ್ಲಿ ಬೆಳ್ಳಿ ಮೂರ್ತಿಯೊಂದು (Murugha mutt ) ಕಳ್ಳತನವಾಗಿತ್ತು. ಈ ಪ್ರಕರಣ ಸಂಬಂಧ ಮಠದವರು (Theft Case) ಪೊಲೀಸ್‌ ಠಾಣೆ ಮೆಟ್ಟಿಲೇರುತ್ತಿದ್ದಂತೆ, ನಾಪತ್ತೆಯಾಗಿದ್ದ ಬೆಳ್ಳಿ ಮೂರ್ತಿ ಪತ್ತೆಯಾಗಿದೆ. ಗೋಣಿ ಚೀಲದೊಳಗೆ ಮೂರ್ತಿ ತಂದಿಟ್ಟು ಕಳ್ಳರು ಕಾಲ್ಕಿತ್ತಿದ್ದಾರೆ.

ಅಂದಹಾಗೇ ಮುರುಘಾ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಅವರು ಪೂಜೆಗೆಂದು ಹೋದಾಗ ಮೂರ್ತಿ ಕಳವು (Theft Case) ಆಗಿರುವುದು ಬೆಳಕಿಗೆ ಬಂದಿತ್ತು. ಕಳೆದ ತಿಂಗಳು ಜೂನ್‌ 26ರಂದೇ ಮಠದಲ್ಲಿ ಸಿಸಿಟಿವಿ ಆಫ್ ಆಗಿತ್ತು. ಈ ವೇಳೆ ದರ್ಬಾರ್ ಹಾಲ್‌ನಲ್ಲಿದ್ದ 22 ಕೆಜಿ ತೂಕದ 15 ಲಕ್ಷ ರೂ. ಮೌಲ್ಯದ ಬೆಳ್ಳಿ‌ಮೂರ್ತಿ ಕಳ್ಳತನವಾಗಿತ್ತು. ಕಳ್ಳರು ಸಿಸಿಟಿವಿ ಆಫ್ ಮಾಡಿ ಕಳ್ಳತನ‌ ಮಾಡಿದ್ದರು.

ಈ ಕುರಿತು ಮೊದಲು ಮಠದ ಆಂತರಿಕ ಸಭೆ ಕರೆದು ವಿಚಾರಣೆ ಮಾಡಲಾಗಿತ್ತು. ಆದರೆ ಕಳ್ಳತನ ಮಾಡಿದ್ದು ಯಾರು ಏನು ಎಂಬುದು ತಿಳಿದುಬಂದಿರಲಿಲ್ಲ. ಇತ್ತ ಕಾರ್ಯಕ್ರಮದ ಒತ್ತಡದಿಂದಾಗಿ ಕಳ್ಳತನವಾಗಿರುವುದು ಅರಿವಿಗೆ ಬಂದಿರಲಲ್ಲ. ಮಠದ ಯುವಕರು ಗಮನಿಸಿ ಮಾಹಿತಿ ನೀಡಿದ್ದಾರೆ. ಈ ಹಿಂದೆ ಸ್ವಾಮೀಜಿಗೆ ಸವಿನೆನಪಿಗಾಗಿ ಸಮಾರಂಭವೊಂದರಲ್ಲಿ ಬೆಳ್ಳಿ ಮೂರ್ತಿಯನ್ನು ನೀಡಲಾಗಿತ್ತು. ಈಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಮುಂದಾಗಿದ್ದೇವೆ ಎಂದು ಬಸವಕುಮಾರ ಸ್ವಾಮೀಜಿ ಹೇಳಿದ್ದರು. ಬಸವಕುಮಾರ ಸ್ವಾಮೀಜಿ ಜತೆಗೆ ಮಠದ ಆಡಳಿತ ಮಂಡಳಿ ಸದಸ್ಯರು ಸೇರಿ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ತೆರಳಿ ದೂರು ದಾಖಲಿಸಲಿದ್ದರು.

ಪೊಲೀಸರು ತನಿಖೆ ಆರಂಭ ಮಾಡುತ್ತಿದ್ದಂತೆ ಇದೀಗ ಕಳ್ಳರು ಕಳವು ಮಾಡಿದ್ದ ಬೆಳ್ಳಿ ಮೂರ್ತಿಯನ್ನು ಆವರಣದ ಕನ್ನಡ ಮಾಧ್ಯಮ ಶಾಲೆ ಬಳಿ ತಂದು ಇಟ್ಟು ಹೋಗಿದ್ದಾರೆ. ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Karnataka Rain : ರಾಜ್ಯಾದ್ಯಂತ ಅಬ್ಬರದ ಮಳೆಗೆ ತತ್ತರಿಸಿದ ಜನತೆ; ಮನೆ ನೆಲಸಮ, ಉರುಳಿ ಬಿದ್ದ ಮರಗಳು

ಚಿಕ್ಕಬಳ್ಳಾಪುರದಲ್ಲಿ ಬೆಲೆ ಬಾಳುವ ಮಾವು ಕದ್ದ ಕಳ್ಳರು

ಕಳ್ಳರು ಮಾವಿನ ತೋಟದಲ್ಲಿ ಮಾವು ಕದ್ದಿದ್ದಾರೆ. ಸುಮಾರು ಒಂದು ಲಕ್ಷ ರೂಪಾಯಿ ಬೆಲೆ ಬಾಳುವ ಮಾವು ನಾಪತ್ತೆಯಾಗಿರು ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಕೆ ಭತ್ತಲಹಳ್ಳಿ ಗ್ರಾಮದ ತೋಡದಲ್ಲಿ ಕಳವು ಆಗಿದೆ. ವ್ಯಾಪಾರಿ ಅನ್ಸಾಖಾನ್‌ಗೆ ಸೇರಿದ ಮಾವಿನ ಹಣ್ಣು ಕದ್ದು, ಮಾಡಿಕೆರೆ ಬಳಿ ಇರುವ ಮಂಡಿಯಲ್ಲಿ ಮಾರಾಟ ಮಾಡಲಾಗಿದೆ. ಸದ್ಯ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನದಲ್ಲಿ ಚಿನ್ನಾಭರಣ ಎಗರಿಸಿದ ಚಾಲಾಕಿ ಚೋರಿಯರು

ಗ್ರಾಹಕರ ಸೋಗಿನಲ್ಲಿ ಬಂದ ಚಾಲಾಕಿ ಚೋರಿಯರು ಚಿನ್ನಾಭರಣ ಎಗರಿಸಿದ್ದಾರೆ. ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದ ಆರ್ ಆರ್ ಗೋಲ್ಡ್ ಪ್ಯಾಲೇಸ್‌ನಲ್ಲಿ ಘಟನೆ ನಡೆದಿದೆ. ಬುರ್ಖಾ ಧರಿಸಿ ಮಾರುವೇಶದಲ್ಲಿ ಬಂದು ಲಕ್ಷಾಂತರ ಮೌಲ್ಯದ ಚಿನ್ನವನ್ನು ಕಳ್ಳತನ ಮಾಡಿರುವ ಘಟನೆ ಜುಲೈ 11ರ ಗುರುವಾರ ಮಧ್ಯಾಹ್ನ 2-45ಕ್ಕೆ ನಡೆದಿದೆ. ಚಿನ್ನದಂಗಡಿಗೆ ಬಂದಿದ್ದ ನಾಲ್ವರು ಮಹಿಳೆಯರು ಸುಮಾರು 6.91 ಲಕ್ಷ ಮೌಲ್ಯದ 94.715 ಗ್ರಾಂ ತೂಕದ ಚಿನ್ನಾಭರಣಗಳನ್ನು ದೋಚಿ ಪರಾರಿ ಆಗಿದ್ದಾರೆ. ಓಲೆ ಹಾಗೂ ಮಾಂಗಲ್ಯ ಸರ ಬೇಕೆಂದು ಬಂದಿದ್ದ ಖತರ್ನಾಕ್‌ ಕಳ್ಳಿಯರು ಸೇಲ್ಸ್ ಮನ್ ಕಣ್ಣುತಪ್ಪಿಸಿ ಎಗರಿಸಿದ್ದಾರೆ. ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅರಕಲಗೂಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಾವೇರಿಯಲ್ಲಿ ಬೈಕ್‌ ಕಳ್ಳರ ಬಂಧನ

ಹಾವೇರಿ ನಗರ ಪೊಲೀಸರು ಕಾರ್ಯಚರಣೆ ನಡೆಸಿ, ಇಬ್ಬರು ಬೈಕ್ ಕಳ್ಳರನ್ನು ಬಂಧಿಸಿದ್ದಾರೆ. 11 ಬೈಕ್‌ಗಳನ್ನು ವಶಕ್ಕೆ ಪಡೆದು, 2 ಚೆಸ್ಸಿಗಳು, 3 ಇಂಜೀನಗಳನ್ನು ವಶಕ್ಕೆ ಪಡೆಯಲಾಗಿದೆ. ಸುಮಾರು 1,58,515 ರುಪಾಯಿ ಮೌಲ್ಯದ ಬೈಕ್‌ಗಳನ್ನ ವಶಕ್ಕೆ ಪಡೆಯಲಾಗಿದೆ. ಮೈನುದೀನ್ ಮತ್ತು ಮಯುದ್ದೀನ್ ಕೋಳೂರು ಬಂಧಿತ ಆರೋಪಿಗಳಾಗಿದ್ದು, ಇವರು ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡುತ್ತಿದ್ದರು. ನಗರ ಪೊಲೀಸ್ ಠಾಣೆ ಸಿಪಿಐ ಮೋತಿಲಾಲ್ ಪವಾರ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಅಬ್ಬರಿಸುತ್ತಿರುವ ಮುಂಗಾರು; ಕರಾವಳಿ, ಮಲೆನಾಡಿನಲ್ಲಿ ಇಂದು ಸಹ ಜೋರು ಮಳೆ

Karnataka Weather Forecast : ಭಾರಿ ಮಳೆಯಾಗುವ (Heavy Rain alert) ಎಚ್ಚರಿಕೆಯನ್ನೂ ನೀಡಲಾಗಿದ್ದು, ಇಂದು ಕರಾವಳಿ, ಮಲೆನಾಡಿಗೆ ರೆಡ್‌ ಅಲರ್ಟ್‌ ಹಾಗೂ ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಮಂಗಳವಾರದಂದು ಕರ್ನಾಟಕದ ಕರಾವಳಿಯಲ್ಲಿ ಭಾರೀ ಮಳೆಯಾಗುವ (Heavy rain Alert) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಇನ್ನೂ ಮಲೆನಾಡು ಸುತ್ತಮುತ್ತ ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ಒಳನಾಡಿನದಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಮತ್ತು ಬೀದರ್ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಲ್ಲಿ ಗಾಳಿ ಜತೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಜಿಲ್ಲೆಗಳಿಗೆ ಮುಂದುವರಿದ ಎಚ್ಚರಿಕೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Karnataka Rain : ಚಿಕ್ಕಮಗಳೂರಲ್ಲಿ ಮಳೆಗೆ ಕರೆಂಟ್‌ ಕಟ್‌; ಕೊಡಗು, ದಾವಣಗೆರೆಯ‌ಲ್ಲೂ ಅವಾಂತರ

ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯಾದ್ಯಂತ ಮಳೆಯು (Heavy rain alert) ಅಬ್ಬರಿಸುತ್ತಿದ್ದು, ಮುನ್ನೆಚ್ಚರಿಕಾ ದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ಮಂಗಳವಾರವೂ ರಜೆ ಘೋಷಣೆ (Holiday For schools) ಮಾಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಿಗೆ ರೆಡ್‌ ಅಲರ್ಟ್‌ (Karnataka Weather Forecast) ಘೋಷಣೆ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜು.16ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಶಿವಮೊಗ್ಗದ ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ. ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾಗರ ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ರಜೆ ಘೋಷಣೆ ಮಾಡಿದ್ದಾರೆ. ಇತ್ತ ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಮಂಗಳವಾರ ರಜೆ ಘೋಷಣೆ ಮಾಡಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ.

ಹಾಸನ ಜಿಲ್ಲೆಯಲ್ಲೂ ನಿರಂತರ ಮಳೆಯಾಗುತ್ತಿದ್ದು, ಸಕಲೇಶಪುರ, ಆಲೂರು, ಬೇಲೂರು, ಹಾಸನ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಅನುಮತಿ ಪಡೆದು, ರಜೆ ಘೋಷಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪಾಂಡು ಆದೇಶ ಹೊರಡಿಸಿದ್ದಾರೆ. ಸರ್ಕಾರಿ,‌ ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು, ಜುಲೈ 20 ರಂದು ಸರಿದೂಗಿಸುಂತೆ ಆದೇಶಿಸಿದ್ದಾರೆ.

ಕೊಡಗಿನಲ್ಲಿ ಮುಂದುವರೆದ ಭಾರಿ ಗಾಳಿ ಮಳೆ ಹಿನ್ನೆಲೆಯಲ್ಲಿ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿ ರಜೆ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಯಾದ್ಯಂತ ಮಂಗಳವಾರ ಒಂದು ದಿನ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Karnataka Weather Forecast : ಶಿವಮೊಗ್ಗ ಹಾಗೂ ಹಾಸನ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ (Heavy rain alert) ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಶಿವಮೊಗ್ಗ/ಕಾರವಾರ: ರಾಜ್ಯಾದ್ಯಂತ ಮಳೆಯು (Heavy rain alert) ಅಬ್ಬರಿಸುತ್ತಿದ್ದು, ಮುನ್ನೆಚ್ಚರಿಕಾ ದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ (Holiday For schools) ಮಾಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಿಗೆ ರೆಡ್‌ ಅಲರ್ಟ್‌ (Karnataka Weather Forecast) ಘೋಷಣೆ ಮಾಡಲಾಗಿದೆ. ಹೀಗಾಗಿ ಜು.16ಕ್ಕೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಶಿವಮೊಗ್ಗದ ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ. ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾಗರ ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ರಜೆ ಘೋಷಣೆ ಮಾಡಿದ್ದಾರೆ. ಇತ್ತ ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಮಂಗಳವಾರ ರಜೆ ಘೋಷಣೆ ಮಾಡಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ.

ಹಾಸನ ಜಿಲ್ಲೆಯಲ್ಲೂ ನಿರಂತರ ಮಳೆಯಾಗುತ್ತಿದ್ದು, ಸಕಲೇಶಪುರ, ಆಲೂರು, ಬೇಲೂರು, ಹಾಸನ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಅನುಮತಿ ಪಡೆದು, ರಜೆ ಘೋಷಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪಾಂಡು ಆದೇಶ ಹೊರಡಿಸಿದ್ದಾರೆ. ಸರ್ಕಾರಿ,‌ ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು, ಜುಲೈ 20 ರಂದು ಸರಿದೂಗಿಸುಂತೆ ಆದೇಶಿಸಿದ್ದಾರೆ.

ಎಮರ್ಜೆನ್ಸಿ ಆಪರೇಷನ್ ಸೆಂಟರ್ ತೆರೆದ ಜಿಲ್ಲಾಡಳಿತ

ಉತ್ತರಕನ್ನಡ ಜಿಲ್ಲೆಗೆ ಮುಂದಿನ‌ 3 ದಿನ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ತುರ್ತು ಪರಿಸ್ಥಿತಿ ನಿರ್ವಹಣೆಗೆ ಡಿಸ್ಟ್ರಿಕ್ಟ್ ಎಮರ್ಜೆನ್ಸಿ ಆಪರೇಷನ್ ಸೆಂಟರ್ ತೆರೆದಿದೆ. ಈ ಕುರಿತು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ ಮಾಹಿತಿ ನೀಡಿದ್ದಾರೆ. ಡಿಸಿ ಕಚೇರಿಯನ್ನೇ ಕಂಟ್ರೋಲ್ ರೂಮ್‌ ಆಗಿ ಎಮರ್ಜೆನ್ಸಿ ಆಪರೇಷನ್ ಸೆಂಟರ್ ಆಗಿ ಮಾರ್ಪಾಡು ಮಾಡಲಾಗಿದೆ.

ವಿಪತ್ತು ನಿರ್ವಹಣೆ, ಪೊಲೀಸ್, ಅರಣ್ಯ, ಅಗ್ನಿಶಾಮಕ, ಹೆಸ್ಕಾಂ ಇಲಾಖೆಯಿಂದ ಒಬ್ಬೊಬ್ಬ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ತುರ್ತು ಸಂದರ್ಭದಲ್ಲಿ ಎಲ್ಲಾ ಇಲಾಖೆಯೊಂದಿಗೆ ಸಂಪರ್ಕ ಸಾಧಿಸಲು ಎಮರ್ಜೆನ್ಸಿ ಆಪರೇಷನ್ ಸೆಂಟರ್ ಮಾಡಲಾಗಿದೆ. ಎಲ್ಲೇ ಸಹಾಯ ಅಗತ್ಯವಿದ್ದರೂ ತುರ್ತು ಸ್ಪಂದನೆಗೆ ಕ್ರಮವಹಿಸಲಾಗುತ್ತದೆ. ಎಲ್ಲಾ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗೂ ಕೇಂದ್ರಸ್ಥಾನ ಬಿಡದಂತೆ ಸೂಚನೆ ನೀಡಲಾಗಿದೆ. ನೆರೆ ಪರಿಸ್ಥಿತಿಯ ಸ್ಥಳಗಳಲ್ಲಿ ಕಾಳಜಿ ಕೇಂದ್ರ ಸ್ಥಾಪನೆಗೆ ತಹಶೀಲ್ದಾರ್‌ಗಳಿಗೆ ಸೂಚನೆ ನೀಡಲಾಗಿದ್ದು ಜತೆಗೆ ಮನೆ, ಬೆಳೆ ಹಾನಿ ಕುರಿತಾಗಿಯೂ ಶೀಘ್ರದಲ್ಲಿ ಪರಿಶೀಲಿಸಿ ಪರಿಹಾರ ಒದಗಿಸಲು ಪ್ರಯತ್ನಿಸಲಾಗುವುದು ಎಂದರು.

ಇನ್ನೂ ನೌಕಾನೆಲೆ ಕಾಂಪೌಂಡ್‌ನಿಂದ ಕಾರವಾರದ ಚೆಂಡಿಯಾ ಭಾಗದಲ್ಲಿ ನೆರೆ ಪರಿಸ್ಥಿತಿ ನಿರ್ಮಾಣ ವಿಚಾರವಾಗಿಯೂ ಭೇಟಿ ನೀಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಪರಿಶೀಲಿಸಿದರು. ನೌಕಾನೆಲೆಯ ಎರಡು ಕಡೆ ಕಾಮಗಾರಿ ಪ್ರದೇಶದಲ್ಲಿ ನೀರು ಹರಿದುಹೋಗಲು ಅಡ್ಡಿಯಾಗಿದೆ. ನೀರು ಹರಿದುಹೋಗಲು ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದರು.

ಇದನ್ನೂ ಓದಿ: Karnataka Rain : ಚಿಕ್ಕಮಗಳೂರಲ್ಲಿ ಮಳೆಗೆ ಕರೆಂಟ್‌ ಕಟ್‌; ಕೊಡಗು, ದಾವಣಗೆರೆಯ‌ಲ್ಲೂ ಅವಾಂತರ

ಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಗಾಳಿ-ಮಳೆಗೆ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಬೈಕ್ ಸವಾರ ಪಾರಾಗಿದ್ದಾರೆ. ಕೊಪ್ಪ ತಾಲೂಕಿನ ಹೆಗ್ಗಾರು ಕುಡಿಗೆ ಸಮೀಪ ಘಟನೆ ನಡೆದಿದೆ. ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಇದಾಗಿದ್ದು, ಎರಡು ಗಂಟೆಗೂ ಹೆಚ್ಚು ಸಮಯ ಮರ ತೆರವುಗೊಳಿಸಲು ಹರಸಾಹಸ ಪಡೆಬೇಕಾಯಿತು.
ಶೃಂಗೇರಿಯಿಂದ ಹೊರನಾಡಿಗೆ ಹೋಗುವ ಪ್ರವಾಸಿಗರು, ಸ್ಥಳೀಯರು ಪರದಾಟ ಅನುಭವಿಸಿದರು. ಅರಣ್ಯ ಸಿಬ್ಬಂದಿ, ಸ್ಥಳೀಯ ಮೆಸ್ಕಾಂ ಸಿಬ್ಬಂದಿಯಿಂದ ತೆರವು ಕಾರ್ಯಾಚರಣೆ ನಡೆಸಲಾಯಿತು. ಇತ್ತ ಭಾರಿ ಗಾಳಿ ಮಳೆಗೆ ಮಲೆನಾಡಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಡಿತ್ತು.

ಪ್ರವಾಸಿಗರ ಹುಚ್ಚಾಟಕ್ಕೆ ಸ್ಥಳೀಯರು ಬೇಸರ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಹೊಸಳ್ಳಿ ಬೆಟ್ಟದಲ್ಲಿ ಪ್ರವಾಸಿಗರು ಹುಚ್ಚಾಟ ಮೆರೆದಿದ್ದಾರೆ. ಹಸಿರಿನಿಂದ ಕಂಗೊಳಿಸುತ್ತಿರುವ ಬೆಟ್ಟದ ಮೇಲೆ ವಾಹನಗಳ ಪ್ರವೇಶ ನಿಷೇಧವಿದ್ದರೂ ಮನಬಂದಂತೆ ವಾಹನಗಳನ್ನು ಚಲಾಯಿಸಿದ್ದಾರೆ. ಅಕ್ರಮವಾಗಿ ಪ್ರವೇಶ ಮಾಡಿರುವ ಕೆಲ ಯುವಕರು, ಹಸಿರು ಹುಲ್ಲಿನ ಮೇಲೆ ಡರ್ಟ್ ರೈಡ್ ಮಾಡಿ ಕೆಸರು ಗದ್ದೆಯಂತೆ ಮಾಡಿದ್ದಾರೆ. ಹೊಸಳ್ಳಿ ಬೆಟ್ಟ ಹಾಳು ಮಾಡಿರುವವರ ವಿರುದ್ಧ ಸ್ಥಳೀಯರು ಹಾಗೂ ಪರಿಸರವಾದಿಗಳು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ತುಂಗಭದ್ರ ಡ್ಯಾಂ ಹಿನ್ನಿರಿನಲ್ಲಿ ಪ್ರವಾಸಿಗರ ಹುಚ್ಚಾಟ

ವಿಜಯನಗರ ಜಿಲ್ಲೆಯ ಹೊಸಪೇಟೆ ಬಳಿ ಇರುವ ತುಂಗಾಭದ್ರ ಡ್ಯಾಂ ಹಿನ್ನಿರಿಗೆ ಪ್ರವಾಸಿಗರು ಆಗಮಿಸುತ್ತಿದ್ದಾರೆ. ನೀರಿನ ಅಲೆಗಳ ಜತೆ ಫೋಟೊ ಕ್ಲಿಕ್ಕಿಸಿಕೊಳ್ಳುವ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರೇಮಿಗಳು , ಕಾಲೇಜು ವಿಧ್ಯಾರ್ಥಿಗಳು ಡ್ಯಾಂ ಹಿನ್ನಿರಿಗೆ ಇಳಿದು ಹುಚ್ಚಾಟ ಮೆರೆದಿದ್ದಾರೆ. ನೀರಿನ ಅಲೆಗಳ ಜತೆ ಎಂಜಾಯ್ ಮಾಡಲು ಹೋಗಿ ತಮ್ಮ ಪ್ರಾಣಕ್ಕೆ ಸಂಚಕಾರ ತಂದುಕೊಳ್ಳುತ್ತಿದ್ದಾರೆ.

ಕುಡಿದು ಸಮುದ್ರಕ್ಕೆ ಇಳಿದ ಯುವಕರು

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಕುಡ್ಲೇ ಬೀಚ್‌ನಲ್ಲಿ ಮದ್ಯಪಾನ ಮಾಡಿ ಅಪಾಯ ಲೆಕ್ಕಿಸದೇ ಪ್ರವಾಸಿಗರು ಈಜಲು ಸಮುದ್ರಕ್ಕೆ ಇಳಿದ ಘಟನೆ ನಡೆದಿದೆ. ಸಮುದ್ರದಲ್ಲಿ 40-50 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ. ಅಷ್ಟಾದರೂ ಸೂಚನೆಗಳನ್ನು ನಿರ್ಲಕ್ಷ್ಯಿಸಿ ಕಡಲಿಗೆ ಇಳಿಯುತ್ತಿದ್ದಾರೆ.

ಜೋಗ್‌ಫಾಲ್ಸ್‌ಗೆ ಹರಿದು ಬಂದ ಜನಸಾಗರ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ನಿನ್ನೆ ಭಾನುವಾರ ಒಂದೇ ದಿನ 50 ಸಾವಿರ ಪ್ರವಾಸಿಗರು ಭೇಟಿ ನೀಡಿದ್ದಾರೆ. ಶರಾವತಿ ನದಿ ಪಾತ್ರದಲ್ಲಿ ಉತ್ತಮ ಮಳೆಯಾಗಿದ್ದು, ಜೋಗ ಜಲಪಾತದ ರಾಜ, ರಾಣಿ, ರೋರರ್, ರಾಕೇಟ್ ಕವಲುಗಳು ಧುಮ್ಮಿಕ್ಕಿ ಹರಿಯುತ್ತಿದೆ. ಜೋಗ ಜಲಪಾತದ ನಯನ ಮನೋಹರ ದೃಶ್ಯ ಪ್ರವಾಸಿಗರು ಕಣ್ತುಂಬಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಚಿಕ್ಕಮಗಳೂರಲ್ಲಿ ಮಳೆಗೆ ಕರೆಂಟ್‌ ಕಟ್‌; ಕೊಡಗು, ದಾವಣಗೆರೆಯ‌ಲ್ಲೂ ಅವಾಂತರ

Karnataka Rain : ರಾಜ್ಯದ ನಾನಾ ಕಡೆಗಳಲ್ಲಿ ಮಳೆಯು ಅಬ್ಬರಿಸುತ್ತಿದ್ದು, ಅವಾಂತರವನ್ನೇ ಸೃಷ್ಟಿಸಿದೆ. ಚಿಕ್ಕಮಗಳೂರಲ್ಲಿ ಮಳೆಗೆ ಕರೆಂಟ್‌ ಕಟ್‌ ಆಗಿದೆ. ದಾವಣಗೆರೆಯಲ್ಲಿ ಮರದ ಕೊಂಬೆಗಳು ಬಿದ್ದು, ವಿದ್ಯುತ್‌ ಕಂಬಗಳು ಜಖಂಗೊಂಡಿವೆ.

VISTARANEWS.COM


on

By

karnataka Rain
Koo

ಚಿಕ್ಕಮಗಳೂರು/ದಾವಣಗೆರೆ: ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಜನಜೀವನ (Karnataka Rain) ಅಸ್ತವ್ಯಸ್ತವಾಗಿದೆ. ಮೂಡಿಗೆರೆ, ಚಾರ್ಮಾಡಿ ಕೊಟ್ಟಿಗೆಹಾರ, ಚಿಕ್ಕಮಗಳೂರು ನಗರ, ಕೊಪ್ಪ, ಎನ್ಆರ್ ಪುರ ಭಾಗಗಳಲ್ಲಿ ಬೆಳಗ್ಗೆಯಿಂದಲೂ ನಿರಂತರವಾಗಿ ಮಳೆ ಸುರಿಯುತ್ತಿದೆ. ಭಾರಿ- ಗಾಳಿಯಿಂದಾಗಿ ಮೂಡಿಗೆರೆ, ಕೊಪ್ಪ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಮಲೆನಾಡಿನ ಹಲವೆಡೆ ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿದೆ.

ದಾವಣಗೆರೆಯಲ್ಲಿ ಮಳೆಗೆ ಮನೆಗಳ ಮುಂದೆ ನಿಂತ ಕೊಳಚೆ ನೀರು

ದಾವಣಗೆರೆ ಜಿಲ್ಲೆಯಲ್ಲಿ ರಾತ್ರಿ ಇಡೀ ಸುರಿದ ಜಡಿ ಮಳೆಗೆ ಅವಾಂತರವೇ ಸೃಷ್ಟಿಯಾಗಿದೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದ ಮನೆಗಳ ಮುಂದೆ ಕೊಳಚೆ ನೀರು ನಿಂತಿದೆ. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ಇರುವುದೇ ಇದಕ್ಕೆಲ್ಲ ಕಾರಣ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಇತ್ತ ಕೊಳಚೆ ನೀರಿನಿಂದ ಸಾಂಕ್ರಾಮಿಕ ರೋಗದ ಭೀತಿಯು ಹೆಚ್ಚಾಗಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಉಕ್ಕಡಗಾತ್ರಿಯ ಪ್ಲಾಟ್‌ನಲ್ಲಿ ಘಟನೆ ನಡೆದಿದೆ.

ಸತತ ಮಳೆಯಿಂದ ಬೃಹತ್ ಮರದ ಕೊಂಬೆಗಳು ನೆಲಕ್ಕುರುಳಿದೆ. ದಾವಣಗೆರೆಯ ತರಳುಬಾಳು ಬಡಾವಣೆಯಲ್ಲಿ ಘಟನೆ ನಡೆದಿದೆ. ಮರದ ಕೊಂಬೆ ಮುರಿದು, ವಿದ್ಯುತ್ ಕಂಬದ ಮೇಲೆ ಬಿದ್ದಿದ್ದರಿಂದ 3 ವಿದ್ಯುತ್ ಕಂಬ ಜಖಂಗೊಂಡಿತ್ತು. ಜತೆಗೆ ಕಾರಿನ ಮೇಲೂ ಮರದ ಕೊಂಬೆಗಳು ಬಿದ್ದು ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಹಲವು ಬಾರಿ ಅಧಿಕಾರಿಗಳಿಗೆ ಹಳೆ ಮರಗಳನ್ನು ತೆರವುಗೊಳಿಸುವಂತೆ ಮನವಿ ಮಾಡಿದ್ದರೂ, ಸಾಬೂಬು ಹೇಳಿ ವಿಳಂಬ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದರು.

ಇದನ್ನೂ ಓದಿ: Accident News : ದ್ವಾರಬಾಗಿಲಿನ ಕಲ್ಲು ಬಿದ್ದು ಮಹಿಳೆ ಸಾವು; ನೀರಿನಲ್ಲಿ ಕೊಚ್ಚಿ ಹೋದ ಯುವಕ

ಚಿಕ್ಕಮಗಳೂರಿನಲ್ಲಿ ನಿಲ್ಲದ ಪ್ರವಾಸಿಗರ ಹುಚ್ಚಾಟ

ಚಾರ್ಮಾಡಿ ಘಾಟ್, ದೇವರಮನೆಗುಡ್ಡ, ರಾಣಿಝರಿ ಬಳಿ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ರಾಣಿಝರಿ ಬಳಿ ಮಂಗಳೂರು ಬೈಕ್ ಸವಾರರು ಕಿರಿಕ್‌ ಮಾಡಿದ್ದಾರೆ. 5 ಕಿ.ಮೀ‌. ರಸ್ತೆಯಲ್ಲಿ ನೂರಕ್ಕೂ ಹೆಚ್ಚು ಬಾರಿ ಬೈಕಿನ ಎಕ್ಸಲೇಟರ್ ರೈಜ್ ಮಾಡಿಕೊಂಡು ಕರ್ಕಶ ಶದ್ಧದೊಂದಿಗೆ ರಸ್ತೆ ಮಧ್ಯೆ ಹುಚ್ಚಾಟ ಮೆರೆಯುತ್ತಿದ್ದಾರೆ. ಮದ್ಯ ಸೇವಿಸಿ ಒಬ್ಬರಾದ ಮೇಲೊಬ್ಬರು ಮೋಜಿನ ಬೈಕ್ ರೈಡಿಂಗ್‌ ಮಾಡುತ್ತಿದ್ದಾರೆ. ರೀಲ್ಸ್ ಹುಚ್ಚಿಗೆ ರಾಣಿಝರಿ ರಸ್ತೆಯು ಸಂಪೂರ್ಣ ಕೆಸರುಗದ್ದೆಯಂತಾಗಿದೆ.

ಇನ್ನೂ ಪೊಲೀಸರ ಎಚ್ಚರಿಕೆ ನಡುವೆಯೂ ಫಾಲ್ಸ್ ಬಳಿ ಸ್ನಾನ ಮಾಡುತ್ತಿದ್ದ 6 ಪ್ರವಾಸಿಗರ ಮೇಲೆ ಕೇಸ್‌ ದಾಖಲಾಗಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಾಳೂರೂ ಮೈದಾಡಿ ಫಾಲ್ಸ್ ಬಳಿ ಕೂಗಾಡುತ್ತಾ ಹುಚ್ಚಾಟ ಮಾಡುತ್ತಿದ್ದರು. ಪ್ರವಾಸಿಗರನ್ನು ಠಾಣೆಗೆ ಕರೆದೊಯ್ದು ದೂರು ದಾಖಲಿಸಿದ್ದಾರೆ.

ಕೊಡಗಿನಲ್ಲಿ ಕುಸಿದು ಬಿದ್ದ ವಾಸದ ಮನೆ

ಕೊಡಗಿನಲ್ಲಿ ಮುಂದುವರೆದ ಮಳೆ ಆರ್ಭಟಕ್ಕೆ ವಾಸದ ಮನೆಯು ಧರೆಗುರುಳಿದೆ. ಮರಗೋಡು ಸಮೀಪದ ಹೂಗುಚ್ಚ ಪೈಸಾರಿಯಲ್ಲಿ ಅಣ್ಣು ಎಂಬುವವರಿಗೆ ಸೇರಿದ ವಾಸದ ಮನೆಗೆ ಹಾನಿಯಾಗಿದೆ. ನಿನ್ನೆ ರಾತ್ರಿ ಸುರಿದ ಗಾಳಿ ಮಳೆಗೆ ಮನೆಯ ಮುಂಭಾಗ ಕುಸಿದಿದೆ. ಕೊಡಗು ಜಿಲ್ಲೆ ಮಡಿಕೇರಿ ಮರಗೋಡು ಸಮೀಪದ ತಾಲ್ಲೂಕಿನ ಹೂಗುಚ್ಚ ಪೈಸಾರಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ರಾಜ್ಯಾದ್ಯಂತ ಅಬ್ಬರದ ಮಳೆಗೆ ತತ್ತರಿಸಿದ ಜನತೆ; ಮನೆ ನೆಲಸಮ, ಉರುಳಿ ಬಿದ್ದ ಮರಗಳು

Karnataka Rain : ಮುಂಗಾರು ಮಳೆ ಮತ್ತೆ ಸಕ್ರಿಯವಾಗಿದ್ದು, ಹಲವೆಡೆ ಮಳೆಯು ನಾನಾ ಅವಾಂತರವನ್ನೇ (Rain Effect) ಸೃಷ್ಟಿಸಿದೆ. ಹೊನ್ನಾವರ-ಬೆಂಗಳೂರು ಹೆದ್ದಾರಿಯಲ್ಲಿ ಮತ್ತೆ ಗುಡ್ಡ ಕುಸಿದರೆ, ಕೊಡಗುಹಾಗೂ ಚಿಕ್ಕಮಗಳೂರಲ್ಲಿ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿವೆ. ಶಿವಮೊಗ್ಗದಲ್ಲಿ ಮನೆ ನೆಲಸಮವಾದರೆ ಉಡುಪಿಯಲ್ಲಿ ಶಾಲೆ ಗೋಡೆ ಕುಸಿದು ಬಿದ್ದಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು: ರಾಜ್ಯಾದ್ಯಂತ ಮಳೆಯು (karnataka weather Forecast) ಅಬ್ಬರಿಸುತ್ತಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ (Karnataka Rain) ಜನ-ಜೀವನ ಅಸ್ತವ್ಯಸ್ತವಾಗಿದೆ. ಕರಾವಳಿಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಉತ್ತರಕನ್ನಡ ಜಿಲ್ಲೆಯ ಹೊನ್ನಾವರ-ಬೆಂಗಳೂರು ಹೆದ್ದಾರಿಯಲ್ಲಿ ಮತ್ತೆ ಗುಡ್ಡ ಕುಸಿತ ಉಂಟಾಗಿದೆ. ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 69ರ ಖರ್ವಾ ಯಲಗುಪ್ಪಾ ಕ್ರಾಸ್ ಬಳಿ ರಸ್ತೆಗೆ ಗಿಡ-ಮರ ಸಹಿತ ಮಣ್ಣು ಕುಸಿದಿದೆ. ಪರಿಣಾಮ ಹೊನ್ನಾವರ-ಗೇರುಸೊಪ್ಪ-ಸಾಗರ ಮಾರ್ಗದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬ್ಯಾರಿಕೇಡ್ ಅಳವಡಿಸಿ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಆದರೂ ಭಾರೀ ವಾಹನಗಳ ಸಂಚಾರಕ್ಕೆ ಮಣ್ಣು ತೆರವುಗೊಳಿಸಬೇಕಾದ ಅವಶ್ಯಕತೆಯಿದ್ದು, ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿದೆ. ಈ ಹಿನ್ನೆಲೆ ಕೂಡಲೇ ಮಣ್ಣು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲು ತಾಲ್ಲೂಕಾಡಳಿತ ಮುಂದಾಗಿದೆ. ಇತ್ತ ಗುಡ್ಡದಿಂದ ಬಂಡೆಕಲ್ಲು ಜಾರಿ ಬಡಿದು ಮನೆಗೆ ಹಾನಿಯಾಗಿದೆ. ಕಾರವಾರದ ಹಬ್ಬುವಾಡ ಫಿಶರೀಸ್ ಕಾಲೋನಿ ಬಳಿ ಘಟನೆ ನಡೆದಿದೆ. ವಿನೋದ್ ಉಳ್ವೇಕರ್ ಎಂಬುವವರ ಮನೆಗೆ ಬಂಡೆಗಲ್ಲು ಬಡಿದಿದೆ. ಪರಿಣಾಮ ಮನೆಯ ಹಿಂಬದಿ ಗೋಡೆ ಜಖಂಗೊಂಡಿದೆ. ಭಾರೀ ಮಳೆ ಹಿನ್ನಲೆ ಮತ್ತೆ ಗುಡ್ಡ ಕುಸಿತ ಆತಂಕದಲ್ಲಿದ್ದಾರೆ.

karnataka Rain

ಮಹಾರಾಷ್ಟ್ರದಲ್ಲಿ ಮುಂದುವರಿದ ಮಳೆ ಅವಾಂತರಗಳು

ನಿರಂತರ ಮಳೆಗೆ ಮಹಾರಾಷ್ಟ್ರದಲ್ಲಿ ಅವಾಂತರಗಳು ಮುಂದುವರೆದಿದೆ. ನೋಡ ನೋಡುತ್ತಿದ್ದಂತೆ ಗುಡ್ಡ ಕುಸಿದಿದೆ. ಮಹಾರಾಷ್ಟ್ರದ ರತ್ನಾಗಿರಿ ಜಿಲ್ಲೆಯ ಖೇಡ ತಾಲೂಕಿನ‌ ಸಾಖರೋಲಿ‌‌ ಗ್ರಾಮದ‌ ಬಳಿ ಗುಡ್ಡ ಕುಸಿದಿದೆ. ಗುಡ್ಡ ಕುಸಿತದಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಬೃಹತ್ ಪ್ರಮಾಣದ ಗುಡ್ಡ ಜರಿದು ಕುಸಿಯುವ ದೃಶ್ಯವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

ಕೊಡಗಿನಲ್ಲಿ ಧರೆಗುರುಳಿದ ಮರಗಳು, ವಿದ್ಯುತ್‌ ಕಂಬಗಳು

ಕೊಡಗಿನಲ್ಲಿ ಪುನರ್ವಸು ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ಮಳೆ-ಗಾಳಿಗೆ ಜಿಲ್ಲೆಯ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ತಲಕಾವೇರಿ ಭಾಗಮಂಡಲದಲ್ಲೂ ಭಾರಿ ಗಾಳಿ-ಮಳೆಯಾಗುತ್ತಿದೆ. ಅಪಾಯದ ಮಟ್ಟ ಮೀರಿ ಕಾವೇರಿ ನೀರು ಹರಿಯುತ್ತಿದೆ.ಭಾಗಮಂಡಲ ತ್ರೀವೇಣಿ ಸಂಗಮದ ಸ್ನಾನಘಟ ಮುಳುಗಡೆಯಾಗಿದೆ. ಮಡಿಕೇರಿ, ಭಾಗಮಂಡಲ ರಸ್ತೆಯ‌ ಅಲ್ಲಲ್ಲಿ ಮರಗಳು ಧರೆಗುರುಳಿದ್ದು, ಚೆಸ್ಕಾಂ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯಿಂದ ತೆರವು ಕಾರ್ಯಚರಣೆ ನಡೆಯುತ್ತಿದೆ. ಮಡಿಕೇರಿ ಸಮೀಪದ ಗಾಳೀಬಿಡು ಗ್ರಾಮದಲ್ಲಿ ಜಸ್ಟ್‌ 24 ಗಂಟೆ ಅವಧಯಲ್ಲಿ 6 ಇಂಚು ಮಳೆಯಾಗಿದೆ. ವಿದ್ಯುತ್ ತಂತಿ, ಕಂಬಗಳು ತುಂಡಾದ ಹಿನ್ನೆಲೆಯಲ್ಲಿ ಕೊಡಗಿನ ಕೆಲವು ಗ್ರಾಮಗಳು‌ ವಿದ್ಯುತ್ ಸಂಪರ್ಕ ಇಲ್ಲದೆ ಕತ್ತಲಲ್ಲಿ ಮುಳುಗಿದೆ.

ಚಿಕ್ಕಮಗಳೂರಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್‌ ಮರ

ಚಿಕ್ಕಮಗಳೂರಿನಲ್ಲಿ ಭಾರಿ ಗಾಳಿ ಮಳೆಗೆ ರಸ್ತೆಗೆ ಬೃಹತ್ ಗಾತ್ರದ ಮರವೊಂದು ಅಡ್ಡಲಾಗಿ ಬಿದ್ದಿದೆ. ಇದರಿಂದಾಗಿ ಸೋಮವಾರ ಬೆಳ್ಳಂಬೆಳಗ್ಗೆ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ಮೂಡಿಗೆರೆ ತಾಲ್ಲೂಕಿನ ಕೋಗಿಲೆ ದೇವರ ಮನೆ ಗ್ರಾಮದ ರಸ್ತೆಗೆ ಮರ‌ವು ಅಡ್ಡಲಾಗಿ ಬಿದ್ದಿತ್ತು. ಮರ ಬಿದ್ದ ಪರಿಣಾಮ ಶಾಲಾ ಕಾಲೇಜಿಗೆ ತೆರಳು ವಿದ್ಯಾರ್ಥಿಗಳು ಕೆಲಕಾಲ ಪರದಾಡಬೇಕಾಯಿತು. ಹೀಗಾಗಿ ಸ್ಥಳೀಯರಿಂದಲೇ ಮರ ತೆರವು ಕಾರ್ಯಾಚರಣೆ ನಡೆಸಲಾಯಿತು.

ಇದನ್ನೂ ಓದಿ: Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಶಿವಮೊಗ್ಗದಲ್ಲಿ ಮಳೆ ಆರ್ಭಟಕ್ಕೆ ಮನೆ ನೆಲಸಮ

ಶಿವಮೊಗ್ಗ ಜಿಲ್ಲೆಯಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಹಾರನಹಳ್ಳಿಯಲ್ಲಿ ಮಳೆಗೆ ಮನೆಯು ಕುಸಿದಿದೆ. ಮಳೆ ಆರ್ಭಟಕ್ಕೆ ನವೀದ್ ಎಂಬುವರಿಗೆ ಸೇರಿದ ಮನೆ ನೆಲಸಮವಾಗಿದೆ. ಮನೆ ಕಳೆದುಕೊಂಡ ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ. ಮನೆ ಹಾನಿ ಹಿನ್ನೆಲೆ ಸೂಕ್ತ ಪರಿಹಾರ ನೀಡಲು ಕುಟುಂಬಸ್ಥರು ಒತ್ತಾಯಿಸಿದ್ದಾರೆ.

ತುಮಕೂರಲ್ಲಿ ಮಳೆಗೆ ಕೆಸರು ಗದ್ದೆಯಾದ ರಸ್ತೆ

ಮಳೆಗೆ ಗ್ರಾಮದ ರಸ್ತೆ ಕೆಸರು ಗದ್ದೆಯಾಗಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಕೆಸರು ತುಂಬಿದ ರಸ್ತೆಯಲ್ಲಿ ಓಡಾಡುವ ಪರಿಸ್ಥಿತಿ ಇದ್ದು, ವಾಹನ ಸವಾರರು, ಶಾಲಾ ಮಕ್ಕಳು, ವೃದ್ಧರು ಪರದಾಟ ನಡೆಸಿದರು. ರಸ್ತೆಗೆ ಡಾಂಬರು ಹಾಕಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಮುಂಜಾನೆಯಿಂದ ಸತತವಾಗಿ ತುಂತುರು ಮಳೆ ಸುರಿಯುತ್ತಿದ್ದು, ತುಮಕೂರು ಮಲೆನಾಡಿನಂತಾಗಿದೆ.

karnataka Rain

ಉಡುಪಿಯಲ್ಲಿ ಶಾಲೆಯ ಗೋಡೆ ಕುಸಿತ

ನಿನ್ನೆ ಭಾನುವಾರ ರಾತ್ರಿ ಸುರಿದ ಮಳೆಗೆ ಶಾಲೆಯ ಅಡುಗೆ ಕೋಣೆಗೋಡೆ ಕುಸಿದಿದೆ. ಉಡುಪಿ ನಗರದ ದೊಡ್ಡಣ್ಣಗುಡ್ಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ಶಾಲೆಯ ಅಡುಗೆ ಕೋಣೆಯ ಗೋಡೆ ಭಾರಿ ಮಳೆಗೆ ಕುಸಿದ ಪರಿಣಾಮ ವಸ್ತುಗಳಿಗೆ ಹಾನಿಯಾಗಿದೆ. ರಾತ್ರಿ ವೇಳೆ ಕುಸಿದ ಹಿನ್ನೆಲೆಯಲ್ಲಿ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ.

ಕಾಲುವೆ ಬಂದ್‌ ಸೃಷ್ಟಿಯಾದ ನೆರೆ ಪರಿಸ್ಥಿತಿ

ಉತ್ತರಕನ್ನಡ ಜಿಲ್ಲೆಯ ಕಾರವಾರದ ಚೆಂಡಿಯಾ ಐಸ್ ಫ್ಯಾಕ್ಟರಿ ವ್ಯಾಪ್ತಿಯ ನಿವಾಸಿಗಳು ಪ್ರತಿಭಟಿಸಿದರು. ನೌಕಾನೆಲೆ ಅವಾಂತರದಿಂದ ಚೆಂಡಿಯಾ ವ್ಯಾಪ್ತಿಯಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ನೆರೆ ಸಂತ್ರಸ್ತರಿಂದ ನೌಕಾನೆಲೆ ಗೇಟ್ ಎದುರು ಪ್ರತಿಭಟಿಸಿದರು. ನಿನ್ನೆ ಭಾನುವಾರ ಸುರಿದ ಧಾರಾಕಾರ ಮಳೆಗೆ ಚೆಂಡಿಯಾ ಜನವಸತಿ ಪ್ರದೇಶ ಜಲಾವೃತಗೊಂಡಿತ್ತು.

ನೌಕಾನೆಲೆ ಕಾಂಪೌಂಡ್ ಅಳವಡಿಸಿ ನೀರಿನ ಕಾಲುವೆ ಬಂದ್ ಮಾಡಿದ್ದರಿಂದ ನೆರೆ ಪರಿಸ್ಥಿತಿ ಉಂಟಾಗಿದೆ ಎಂಬ ಆರೋಪವಿದೆ. ಮಳೆಯ ನೀರು ಸಮುದ್ರಕ್ಕೆ ಸೇರಲು ನೌಕಾನೆಲೆ ಕಾಂಪೌಂಡ್ ಅಡ್ಡಿಯಾಗಿದೆ. ಮಳೆಯ ನೀರು ಸರಾಗವಾಗಿ ಹರಿದುಹೋಗಲು ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರು. ಇದೇ ವೇಳೆ ಚೆಂಡಿಯಾದ ಸಾಯಿನಗರದಲ್ಲಿರುವ ನೌಕಾನೆಲೆ ಸ್ಕೂಲ್‌ ಗೇಟ್ ಬಳಿ ಪ್ರತಿಭಟಿಸಿದರು.

ಕುಮಾರಧಾರ ಸ್ನಾನಘಟ್ಟ ಮುಳುಗಡೆ

ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಿಂದ ಮತ್ತೆ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ, ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. ಈ ಬಾರಿಯ ಮಳೆಗೆ ಕುಮಾರಧಾರ ಸ್ನಾನ ಘಟ್ಟ ಎರಡನೇ ಬಾರಿ ಮುಳುಗಡೆಯಾಗಿದೆ. ಕುಮಾರಧಾರ ಕಿಂಡಿ ಆಣೆಕಟ್ಟು ಸಂಪೂರ್ಣ ಮುಳುಗಡೆಯಾಗಿದೆ. ಇನ್ನೂ ಕುಮಾರಧಾರ ನದಿಗೆ ಇಳಿಯದಂತೆ ಭಕ್ತಾಧಿಗಳಿಗೆ ಸೂಚನೆ ನೀಡಲಾಗಿದೆ. ಕುಮಾರಧಾರ ನದಿತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿ, ಹೋಮ್‌ಗಾರ್ಡ್‌ ನಿಯೋಜನೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
David Warner
ಕ್ರೀಡೆ1 min ago

David Warner: ​ಚಾಂಪಿಯನ್ಸ್ ಟ್ರೋಫಿಗೆ ವಾರ್ನರ್​ ಆಯ್ಕೆ ಇಲ್ಲ ಎಂದ ಜಾರ್ಜ್​ ಬೈಲಿ

Kannada New Movie
ಸ್ಯಾಂಡಲ್ ವುಡ್6 mins ago

Kannada New Movie: ಸೆಟ್ಟೇರಿತು ‘ಆಕಾಶ್’, ‘ಅರಸು’ ಚಿತ್ರಗಳ ಡೈರೆಕ್ಟರ್ ಹೊಸ ಸಿನಿಮಾ; ಕಿರುತೆರೆಯ ಈ ಪ್ರತಿಭೆ ನಾಯಕ

Kannada In Madrasa
ಕರ್ನಾಟಕ20 mins ago

Kannada In Madrasa: ರಾಜ್ಯದ ಮದರಸಾಗಳಲ್ಲಿ ಇನ್ನು ಕನ್ನಡ ಕಲಿಕೆ ಕಡ್ಡಾಯ; ಶೀಘ್ರವೇ ಆದೇಶ!

murder case set fire bagalakote
ಕ್ರೈಂ29 mins ago

Horrible Murder Case: ಶೆಡ್‌ ಹೊರಗಿನಿಂದ ಲಾಕ್‌ ಮಾಡಿ ಬೆಂಕಿ ಇಟ್ಟ ದುಷ್ಟರು; ಇಬ್ಬರು ಸಜೀವ ದಹನ

Iti Acharya
ಸಿನಿಮಾ39 mins ago

Iti Acharya: ಬಾಲಿವುಡ್‌ಗೆ ಕಾಲಿಟ್ಟ ಮತ್ತೊಬ್ಬ ಕನ್ನಡತಿ; ದಕ್ಷಿಣ ಭಾರತದ ಚಿತ್ರಗಳ ಬಳಿಕ ಹಿಂದಿಯಲ್ಲೂ ಅಭಿನಯ

Karnataka Assembly
ಕ್ರೀಡೆ41 mins ago

Karnataka Assembly: ಬಿಜೆಪಿಯಿಂದಲೇ ರಾಹುಲ್​ಗೆ ಶ್ಲಾಘನೆ; ಸದನದಲ್ಲಿ ಅಭಿನಂದನೆಗೆ ನಿರ್ಣಯ

Anant Radhika Wedding
ವಾಣಿಜ್ಯ43 mins ago

Anant Radhika Wedding: ನಮ್ಮಿಂದ ಏನಾದರು ತಪ್ಪಾಗಿದ್ದರೆ ದಯವಿಟ್ಟು ಕ್ಷಮಿಸಿ; ನೀತಾ ಅಂಬಾನಿ ವಿನಮ್ರ ಮನವಿ!

valmiki corporation scam culprits
ಪ್ರಮುಖ ಸುದ್ದಿ1 hour ago

Valmiki Corporation Scam: ವಾಲ್ಮೀಕಿ ನಿಗಮ ಹಗರಣದಲ್ಲಿ ಮತ್ತೊಬ್ಬನ ಬಂಧನ; ಛತ್ತೀಸ್‌ಗಢದಲ್ಲೂ ವಂಚಿಸಿದ್ದ!

Anant Ambani Wedding
ದೇಶ1 hour ago

Anant Ambani Wedding: ಮಗನ ಮದುವೆಯಲ್ಲಿ ರಿಲಯನ್ಸ್ ಉದ್ಯೋಗಿಗಳಿಗೂ ಭರ್ಜರಿ ಔತಣ ನೀಡಿದ ಮುಖೇಶ್ ಅಂಬಾನಿ

Former MPs
ದೇಶ1 hour ago

Formers MPs: ಚುನಾವಣೆಯಲ್ಲಿ ಸೋತರೂ ಸರ್ಕಾರಿ ಬಂಗಲೆ ಬಿಡದ 200 ಮಾಜಿ ಸಂಸದರು; ನೋಟಿಸ್‌ ಜಾರಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ16 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ23 hours ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ3 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

ಟ್ರೆಂಡಿಂಗ್‌