ಚಿತ್ರದುರ್ಗ: ಮುರುಘಾಶ್ರೀ ವಿರುದ್ಧ ಸುಳ್ಳು ದೂರು ನೀಡಲು ಪಿತೂರಿ ಪ್ರಕರಣದ ಆರೋಪಿ ಸೌಭಾಗ್ಯ ಬಸವರಾಜನ್ ಅವರನ್ನು ದಾವಣಗೆರೆಯಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.
ಸೌಭಾಗ್ಯ, ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಅವರ ಪತ್ನಿ ಹಾಗೂ ಜಿ.ಪಂ ಮಾಜಿ ಅಧ್ಯಕ್ಷೆಯಾಗಿದ್ದಾರೆ. ಸದ್ಯ ಆರೋಪಿಯನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದ್ದು, ಶುಕ್ರವಾರ ಬಂಧಿಸಿ ವಿಚಾರಣೆ ನಡೆಸಲಾಗುತ್ತದೆ.
ಮುರುಘಾಶ್ರೀ ವಿರುದ್ದ ಸುಳ್ಳು ದೂರು ದಾಖಲಿಸಲು ಪಿತೂರಿ ನಡೆದಿದೆ ಎಂದು ಮುರುಘಾಮಠದ ಉಸ್ತುವಾರಿ ಬಸವಪ್ರಭು ಶ್ರೀ ಅವರು, ನವೆಂಬರ್ 9ರಂದು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಸಂತ್ರಸ್ತೆಗೆ ಮಠದ ಶಾಲಾ ಶಿಕ್ಷಕನಾಗಿದ್ದ ಬಸವರಾಜೇಂದ್ರ ಪ್ರಚೋದನೆ ನೀಡಿದ್ದ ಆಡಿಯೊ ಸಾಕ್ಷ್ಯ ಪೊಲೀಸರಿಗೆ ಸಿಕ್ಕಿತ್ತು. ಹೀಗಾಗಿ ನ.10ರಂದು ಬಸವರಾಜೇಂದ್ರ ಹಾಗೂ ಇದಕ್ಕೆ ಬೆಂಬಲ ನೀಡಿದ್ದ ಮಠದ ಮಾಜಿ ಆಡಳಿತಾಧಿಕಾರಿ, ಮಾಜಿ ಶಾಸಕ ಬಸವರಾಜನ್ ಬಂಧನವಾಗಿತ್ತು. ಆದರೆ ಸೌಭಾಗ್ಯ ಬಸವರಾಜನ್ ನಾಪತ್ತೆಯಾಗಿದ್ದರು. ಇದೀಗ ಅವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ | Bus accident | ಮೈಸೂರಿನ ಶಾಲಾ ಪ್ರವಾಸಿ ಬಸ್ ಸಾಗರದಲ್ಲಿ ಪಲ್ಟಿ: 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ