ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದೆ. ಸರ್ಕಾರಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ 9 ಜನರಿಗೆ ಗಂಭೀರ ಗಾಯಗಳಾಗಿವೆ.
ಚಿಕ್ಕಮಗಳೂರು (chikkamagaluru news) ಜಿಲ್ಲೆಯ ತರೀಕೆರೆ ತಾಲೂಕಿನ ಬೆಲೇನಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಶಿವಮೊಗ್ಗದಿಂದ ತರೀಕೆರೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ತರೀಕೆರೆಯಿಂದ ಭದ್ರಾವತಿಗೆ ತೆರಳುತ್ತಿದ್ದ ಕಾರು ಡಿಕ್ಕಿಯಾಗಿವೆ. ಬಸ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಾರಿನಲ್ಲಿದ್ದ 9 ಜನರು ಭದ್ರಾವತಿ ಮೂಲದವರು ಎಂದು ತಿಳಿದುಬಂದಿದೆ. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಸ್ಸಿಗೆ ಲಾರಿ ಡಿಕ್ಕಿ, ನಾಲ್ವರ ಬಲಿ
ಚಿತ್ರದುರ್ಗ: ನಿನ್ನೆ ಬೆಳ್ಳಂಬೆಳಗ್ಗೆ ಹಿರಿಯೂರು ಬಳಿ ಭೀಕರ ಅಪಘಾತ ಸಂಭವಿಸಿ ನಾಲ್ವರು ಸಾವಿಗೀಡಾಗಿದ್ದಾರೆ. ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಈ ಅಪಘಾತ ನಡೆದಿದೆ. ಚಿತ್ರದುರ್ಗ (chitradurga news) ಜಿಲ್ಲೆಯ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಬಳಿ ರಾಯಚೂರು ಕಡೆಯಿಂದ ಬೆಂಗಳೂರು ಕಡೆಗೆ ಹೊರಟಿದ್ದ KSRTC ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಆಗಿದೆ.
ಡಿಕ್ಕಿಯ ರಭಸಕ್ಕೆ ಬಸ್ನಲ್ಲಿದ್ದ ನಾಲ್ವರು ಪ್ರಯಾಣಿಕರು ಸಾವಿಗೀಡಾಗಿದ್ದಾರೆ. ಮಸ್ಕಿ ಮೂಲದ ರಮೇಶ್ (40), ಬೆಂಗಳೂರು ಮೂಲದ ಪಾರ್ವತಮ್ಮ ಸ್ಥಳದಲ್ಲೇ ಹಾಗೂ ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವಾಗ ಸಾವಿಗೀಡಾದರು. ಘಟನೆ ಬಳಿಕ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ. ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: Road Accident : ಇಬ್ಬರ ಜೀವ ತೆಗೆದ ನಾಯಿ! ಕಾರು ಪಲ್ಟಿಯಾಗಿ ಶಿಕ್ಷಕ ಸಾವು, ಲಾರಿ ಹರಿದು ಮಹಿಳೆ ಮೃತ್ಯು