Site icon Vistara News

Road Accident : ಬೈಕ್‌ಗೆ ಕಾರು ಡಿಕ್ಕಿ; ಇಬ್ಬರು ಸವಾರರು ಸ್ಥಳದಲ್ಲೇ ಸಾವು

Chitradurga accident

ಚಿತ್ರದುರ್ಗ: ಬೈಕ್‌ಗೆ ಕಾರು ಡಿಕ್ಕಿ,ಯಾಗಿ (Road accident) ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ (Bike riders dead) ಮೃತಪಟ್ಟ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆ (Chitradurga News) ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿ ಬಳಿ ಬುಧವಾರ ಮುಂಜಾನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 150(ಎ) ರಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟವರನ್ನು ಕೋನಾಪುರ ನಿವಾಸಿ ಮಾರಣ್ಣ(45), ಶಂಕರ್(44) ಎಂದು ಗುರುತಿಸಲಾಗಿದೆ. ಅವರಿಬ್ಬರೂ ಉದ್ಯೋಗ ನಿಮಿತ್ತ ಬೈಕ್‌ ನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

ರಾಡ್‌ನಿಂದ ಹೊಡೆದು ಪತ್ನಿಯನ್ನು ಕೊಂದ ಪಾಪಿ ಗಂಡ

ಮಂಡ್ಯ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ರಾಡ್‌ನಿಂದ ಹೊಡೆದು ಕೊಲೆ ಮಾಡಿದ್ದಾನೆ. ಮಂಡ್ಯದ ಮಳವಳ್ಳಿ ತಾಲೂಕಿನ ದೇಶುವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಧುಶ್ರೀ (32) ಎಂಬವರನ್ನು ಮಹದೇವ ಎಂಬಾತ ಕೊಂದು ಹಾಕಿದ್ದಾನೆ.

ಗಂಡ-ಹೆಂಡತಿ ನಡುವೆ ಆಗಾಗ ಜಗಳ ಸಾಮಾನ್ಯವಾಗಿತ್ತು. ಆದರೆ, ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಮಂಗಳವಾರ ತಡರಾತ್ರಿ ತಾರಕಕ್ಕೇರಿತ್ತು. ಈ ವೇಳೆ ಸಿಟ್ಟಿಗೆದ್ದ ಮಹದೇವ ರಾಡ್‌ನಿಂದ ಪತ್ನಿಯ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ.

ಹೊಡೆತ ತಿಂದ ಹೆಂಡತಿ ಸತ್ತು ಹೋಗಿದ್ದಾಳೆ ಎಂಬುದು ತಿಳಿಯುತ್ತಿದ್ದಂತೆಯೇ ಭಯಗೊಂಡ ಮಹದೇವ ಕೂಡಲೇ ಕಿರುಗಾವಲು ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Self Harm: ಸಮಾಜ ಸೇವಕ, ರಂಗ ಕಲಾವಿದ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ

ಕೌಟುಂಬಿಕ ಕಲಹದಿಂದ ನೊಂದು ಆತ್ಮಹತ್ಯೆ

ವಿಜಯನಗರ: ವ್ಯಕ್ತಿಯೊಬ್ಬರು ಕೌಟುಂಬಿಕ ಕಲಹದಿಂದ ನೊಂದು ನೇಣಿಗೆ ಶರಣಾದ ಘಟನೆ ಹೊಸಪೇಟೆ ತಾಲೂಕಿನ ಧರ್ಮಸಾಗರ ಗ್ರಾಮದಲ್ಲಿ ನಡೆದಿದೆ. ಮಳ್ಳೆರು ಅನಿಲ್ ಕುಮಾರ್ ಮೃತರು.

ತೋರಣಗಲ್ಲ ಬಳಿ ಇರುವ ಜಿಂದಾಲ್ ಕಾರ್ಕಾನೆಯಲ್ಲಿ ಕೆಲಸ ಮಾಡುತ್ತಿದ್ದ ಅನಿಲ್‌ ಕುಮಾರ್‌ ಅವರು, ಕೆಲಸ ಮುಗಿಸಿ ಮನೆಗೆ ಬಂದು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣಿಗೆ ಶರಣಾಗಿದ್ದಾರೆ.

ಅನಿಲ್‌ ಕುಮಾರ್‌ಗೆ ಪತ್ನಿ ಮತ್ತು ಪುತ್ರಿ ಇದ್ದಾಳೆ. ಮನೆಗೆ ಅಧಾರವಾಗಿದ್ದ ಯುವಕ ನೇಣಿಗೆ ಶರಣಾಗಿರುವುದು ಕುಟುಂಬಸ್ಥರಿಗೆ ಆಘಾತವಾಗಿದ್ದು, ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ.

ಗಂಡ ಹೆಂಡತಿ ಮಧ್ಯೆ ಬಹಳ ದಿನಗಳಿಂದ ವಾಗ್ವಾದ ಇತ್ತು ಎನ್ನಲಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಯುವಕ ಮನೆಯಲ್ಲಿಯೇ ನೇಣು ಬಿಗಿದುಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಹೊಸಪೇಟೆ ಗ್ರಾಮೀಣ ಠಾಣೆಯ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version